Homeಮುಖಪುಟಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ; ಇಡಿ-ಸಿಬಿಐ ಪ್ರತಿಕ್ರಿಯೆ ಕೇಳಿದ ನ್ಯಾಯಾಲಯ

ಅಬಕಾರಿ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ; ಇಡಿ-ಸಿಬಿಐ ಪ್ರತಿಕ್ರಿಯೆ ಕೇಳಿದ ನ್ಯಾಯಾಲಯ

- Advertisement -
- Advertisement -

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮನೀಶ್ ಸಿಸೋಡಿಯಾ ಅವರ ಮಧ್ಯಂತರ ಜಾಮೀನು ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ದೆಹಲಿ ನ್ಯಾಯಾಲಯವು ಶುಕ್ರವಾರ ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಕಳುಹಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಸೋಡಿಯಾ ಜೈಲು ಪಾಲಾಗಿದ್ದು, ಮುಂಬರುವ ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ಕೋರಿದ್ದಾರೆ.

ಸಿಬಿಐ ಮತ್ತು ಇಡಿ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಏಪ್ರಿಲ್ 20 ರೊಳಗೆ ತಮ್ಮ ಉತ್ತರಗಳನ್ನು ಸಲ್ಲಿಸುವಂತೆ ಕೇಂದ್ರ ತನಿಖಾ ಸಂಸ್ಥೆಗಳಿಗೆ ಸೂಚಿಸಿದರು. ನ್ಯಾಯಾಲಯವು ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ದೆಹಲಿ ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳು ನಡೆದಿವೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿವೆ. ಮದ್ಯದ ಪರವಾನಗಿದಾರರಿಗೆ ಅನಪೇಕ್ಷಿತ ಅನುಕೂಲಗಳನ್ನು ವಿಸ್ತರಿಸಲಾಗಿದೆ, ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಅಥವಾ ಕಡಿಮೆ ಮಾಡಲಾಗಿದೆ, ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಪರವಾನಗಿಗಳನ್ನು ವಿಸ್ತರಿಸಲಾಗಿದೆ ಎಂದು ಆರೋಪಿಸಿವೆ.

ಎರಡು ತನಿಖಾ ಸಂಸ್ಥೆಗಳು ಪ್ರಕರಣದ ಫಲಾನುಭವಿಗಳು ಆರೋಪಿತ ಅಧಿಕಾರಿಗಳಿಗೆ “ಅಕ್ರಮ” ಲಾಭವನ್ನು ಮಾಡಿಕೊಟ್ಟಿದ್ದು, ಪ್ರಕರಣದಿಂದ ತಪ್ಪಿಸಿಕೊಳ್ಳಲು ತಮ್ಮ ಖಾತೆಯ ಪುಸ್ತಕಗಳಲ್ಲಿ ಸುಳ್ಳು ನಮೂದುಗಳನ್ನು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಫೆಬ್ರವರಿ 26, 2023 ರಂದು “ಹಗರಣ”ದಲ್ಲಿ ಅವರ ಪಾತ್ರಕ್ಕಾಗಿ ಬಂಧಿಸಿತು. ಮಾರ್ಚ್ 9, 2023 ರಂದು ಸಿಬಿಐ ಎಫ್‌ಐಆರ್‌ನಿಂದ ಉಂಟಾದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಸೋಡಿಯಾ ಅವರನ್ನು ಬಂಧಿಸಿತು.

ಸಿಬಿಐನಿಂದ ಬಂಧನಕ್ಕೊಳಗಾದ ನಂತರ, ಸಿಸೋಡಿಯಾ ಅವರು ದೆಹಲಿ ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದರು. ರಾಷ್ಟ್ರ ರಾಜಧಾನಿಯಲ್ಲಿದ್ದ ಎಲ್ಲ ಕ್ಯಾಬಿನೆಟ್ ಸ್ಥಾನಗಳಿಗೆ ರಾಜೀನಾಮೆ ಕೊಟ್ಟರು.

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅರವಿಂದ್ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 15 ರವರೆಗೆ ವಿಸ್ತರಿಸಲಾಗಿದೆ. ಅವರ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದ ನಂತರ, ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ನ ಮೊರೆ ಹೋಗಿದ್ದರು.

ತಮ್ಮ ಆರೋಪಪಟ್ಟಿಯಲ್ಲಿ ಇಡಿ ತನ್ನ ವಿರುದ್ಧ ಯಾವುದೇ ದೃಢವಾದ ಪುರಾವೆ ಅಥವಾ ಆರೋಪವನ್ನು ಹೊಂದಿಲ್ಲ. ಆದ್ದರಿಂದ ಬಂಧನವನ್ನು “ಕಾನೂನುಬಾಹಿರ” ಎಂದು ಪರಿಗಣಿಸಬೇಕು ಎಂದು ಕೇಜ್ರಿವಾಲ್ ತಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದಾರೆ. ಆದರೆ, ಅವರು ಹಣದ ಹಾದಿಯನ್ನು ಸ್ಥಾಪಿಸಿದ್ದಾರೆ ಎಂದು ತನಿಖಾ ಸಂಸ್ಥೆ ಹೇಳಿದೆ.

ಇದನ್ನೂ ಓದಿ; ದೆಹಲಿ ಅಬಕಾರಿ ನೀತಿ ಪ್ರಕರಣ: 3 ದಿನಗಳ ಸಿಬಿಐ ವಶಕ್ಕೆ ಬಿಆರ್‌ಎಸ್‌ ನಾಯಕಿ ಕವಿತಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...