ಕೊರೊನಾ ಸಾಂಕ್ರಾಮಿಕ ಎಷ್ಟೋ ಉದ್ಯಮಗಳನ್ನು ನೆಲಕಚ್ಚುವಂತೆ ಮಾಡಿದೆ. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಒಳಗಾದವರೂ ಇನ್ನು ಚೇತರಿಸಿಕೊಳ್ಳುವ ನಿಟ್ಟಿನಲ್ಲಿದ್ದಾರೆ. ಇಂತಹ ಸಮಯದಲ್ಲಿ ತೀವ್ರ ತೊಂದರೆಗೆ ಈಡಾಗಿರುವ ದೇಶದ ಕರಕುಶಲಕರ್ಮಿಗಳು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಉತ್ತಮ ಮಾರುಕಟ್ಟೆಯ ಅಗತ್ಯವಿದೆ.

ಹೀಗಾಗಿ ಈ ನಿಟ್ಟಿನಲ್ಲಿ ಕರ್ನಾಟಕ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಅಕ್ಟೋಬರ್‌ 30ರಿಂದ ಬೆಂಗಳೂರು ಉತ್ಸವ- ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ ಆರಂಭಿಸಲಾಗಿದೆ. 10 ದಿನಗಳ ಕಾಲ ನಡೆಯುವ ಈ ಮೇಳ ನವೆಂಬರ್‌ 8 ಕ್ಕೆ ಮುಕ್ತಾಯವಾಗಲಿದೆ. ಬೆಂಗಳೂರು ಉತ್ಸವ – ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ನಟಿ ಭವ್ಯ ಹಾಗೂ ಶರಣ್ಯ ಶೆಟ್ಟಿ ಚಾಲನೆ ನೀಡಿದ್ದಾರೆ.

ಈ ಮೇಳವು ಕೊರೊನಾ ನಂತರ ಕರಕುಶಲಕರ್ಮಿಗಳ ಆರ್ಥಿಕತೆ ಸುಧಾರಣೆಯ ಉದ್ದೇಶ ಹೊಂದಿದ್ದು, ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳವಡಿಕೆ ಮಾಡಿಕೊಳ್ಳಲಾಗಿದೆ. ಈ ಮೇಳ ಅಕ್ಟೋಬರ್‌ 30 ರಿಂದ ನವೆಂಬರ್‌ 8 ರ ವರೆಗೆ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ತೆರೆದಿರುತ್ತದೆ ಎಂದು ಚಿತ್ರಕಲಾ ಪರಿಷತ್ತಿನ ಅಧ್ಯಕ್ಷರಾದ ಡಾ .ಬಿ.ಎಲ್‌ ಶಂಕರ್‌ ಹೇಳಿದ್ದಾರೆ.

ಇದನ್ನೂ ಓದಿ: ವಲಸೆ ಕಾರ್ಮಿಕ ಮಹಿಳೆಗೆ ಹೋಲುವ ದುರ್ಗಾ ಮಾತೆ ಪ್ರತಿಮೆ: ಕಲಾವಿದನ ಕೈಚಳಕ ವೈರಲ್!

“ಕೋವಿಡ್‌ ಸಂಕಷ್ಟ ಕಾಲದಲ್ಲಿ ಎಲ್ಲಾ ಕ್ಷೇತ್ರಗಳಿಗೂ ಬಹಳ ತೊಂದರೆ ಆಗಿದೆ. ಅದರಲ್ಲೂ ತಮ್ಮ ಕರಕುಶಲ ವಸ್ತುಗಳನ್ನು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದ ಕರಕುಶಲಕರ್ಮಿಗಳಿಗೆ ತೀವ್ರ ತೊಂದರೆ ಉಂಟಾಗಿದೆ. ಇಂತವರಿಗೆ ಉತ್ತಮ ಮಾರುಕಟ್ಟೆಯ ವೇದಿಕೆ ಒದಗಿಸುವುದು ಅವಶ್ಯಕವಾಗಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಚಿತ್ರಕಲಾ ಪರಿಷತ್ತಿನ ಆವರಣದಲ್ಲಿ ಪ್ರಾರಂಭವಾಗಿರುವ ಈ ವಿಶೇಷ ಮಾರಾಟ ಮೇಳ ಯಶಸ್ವಿಯಾಗಲಿದೆ” ಎಂದು ನಟಿ ಭವ್ಯ ಹೇಳಿದ್ದಾರೆ.

 

ಈ ಮೇಳದಲ್ಲಿ ದೇಶದ ವಿವಿಧ ಭಾಗಗಳ ಕರಕುಶಲಕಾರರು ತಯಾರಿಸಿದ ತರಹೇವಾರಿ ಕರಕುಶಲ ವಸ್ತುಗಳು, ಆಟಿಕೆಗಳು, ಉಡುಪುಗಳು ಸೇರಿದಂತೆ ರಾಜಧಾನಿ ಬೆಂಗಳೂರಿನ ಜನತೆಗೆ ಮುದ ನೀಡುವಂತಹ ಉತ್ಪನ್ನಗಳು ಒಂದೇ ಸೂರಿನಡಿ ದೊರೆಯುತ್ತವೆ. ಮನೆಯನ್ನು ಅಲಂಕಾರ ಮಾಡುವ ಉತ್ಪನ್ನಗಳು, ಹ್ಯಾಂಡ್‍ಲೂಂಗಳು, ಕರಕುಶಲ ವಸ್ತುಗಳು, ಬಟ್ಟೆ, ಮರದ ಆಟಿಕೆಗಳು,  ಆಕರ್ಷಣೆಯ ಆಭರಣಗಳು, ಕಲಾಕೃತಿಗಳು, ಪೀಠೋಪಕರಣಗಳು ಸೇರಿದಂತೆ ನೂರಾರು ಬಗೆಯ ಉತ್ಪನ್ನಗಳು ಈ ಪ್ರದರ್ಶನದಲ್ಲಿರಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.


ಇದನ್ನೂ ಓದಿ: ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

LEAVE A REPLY

Please enter your comment!
Please enter your name here