Homeಕರ್ನಾಟಕಎಕ್ಸಿಟ್ ಪೋಲ್: ರಾಜಕೀಯ ನಾಯಕರು ಏನಂದರು?

ಎಕ್ಸಿಟ್ ಪೋಲ್: ರಾಜಕೀಯ ನಾಯಕರು ಏನಂದರು?

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತದಾನ ಮುಗಿದಿದೆ. ಹಲವಾರು ಚಾನೆಲ್‌ಗಳು ಮತ್ತು ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆ ನಡೆಸಿದ್ದು, ಅವುಗಳೂ ಹೊರಬಿದ್ದಿವೆ. ಅವುಗಳಲ್ಲಿ ಇಂಡಿಯಾ ಟುಡೇ, ನವ ಭಾರತ್, TimesNow-ETG, India TV-CNX ಮತ್ತು ಝೀ ಮ್ಯಾಟ್ರಿಕ್ ಎಕ್ಸಿಟ್‌ ಪೋಲ್‌ಗಳು ಕಾಂಗ್ರೆಸ್‌ ಸ್ಪಷ್ಟ ಬಹುಮತ ಸಾಧಿಸುತ್ತದೆ ಎಂದಿವೆ.

ಎಕ್ಸಿಟ್ ಪೋಲ್ ಪ್ರಕಟವಾದ ಬೆನ್ನಲ್ಲೇ ರಾಜ್ಯದ ರಾಜಕಾರಣಿಗಳು ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಾತನಾಡಿ, “ಚುನಾವಣೋತ್ತರ ಸಮೀಕ್ಷೆಗಳು ಶೇಕಡ 100ರಷ್ಟು ಸರಿಯಾಗಿ ಇರುವುದಿಲ್ಲ. ನೈಜ ಫಲಿತಾಂಶ ಬರುವಾಗ ಪ್ಲಸ್‌-ಮೈನಸ್‌ ಆಗುತ್ತವೆ. ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಎಕ್ಸಿಟ್ ಪೋಲ್ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಎಕ್ಸಿಟ್ ಪೋಲ್ ಒಂದೊಂದು ರೀತಿ ತೋರಿಸುತ್ತಿವೆ. ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ. 5 ರಿಂದ 10% ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಇದೆ. ಸಂಪೂರ್ಣ ಬಹುಮತ ಸಿಗುತ್ತದೆ” ಎಂದು ಹೇಳಿದ್ದಾರೆ.

“ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್‌ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ” ಎಂದು ತಿಳಿಸಿದ್ದಾರೆ.

ಮತದಾನೋತ್ತರ ಸಮೀಕ್ಷೆಗಳನ್ನು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, “ನನಗೆ ಜನರ ನಾಡಿಮಿಡಿತ ತಿಳಿದಿದೆ, ನಾವು ಸಂಪೂರ್ಣ ಬಹುಮತದೊಂದಿಗೆ 115 ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸುತ್ತೇವೆ. ನಾವು ಸರ್ಕಾರವನ್ನು ರಚಿಸುತ್ತೇವೆ. ಅತಂತ್ರ ಸರ್ಕಾರದ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾವು ಜೆಡಿಎಸ್‌ನೊಂದಿಗೆ ಕೈಜೋಡಿಸಬೇಕಾದರೂ ಬಿಜೆಪಿಯ ರಾಷ್ಟ್ರೀಯ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಚುನಾವಣೋತ್ತರದ ಹಲವು ಸಮೀಕ್ಷೆಗಳಲ್ಲಿ ಕಾಂಗ್ರೆಸ್‌ಗೆ ಬಹುಮತ ಸಿಗುವುದು ಬಹುತೇಕ ಪಕ್ಕ. 130 ಸೀಟ್‌ಗಳೊಂದಿಗೆ ನಾವು ಸರ್ಕಾರ ರಚಿಸುತ್ತೇವೆ” ಎಂದು ಭವಿಷ್ಯ ನುಡಿದಿದ್ದಾರೆ.

“ಸರ್ಕಾರದ ವಿರುದ್ಧ ಜನಮತವಿದೆ. ನಾನು ಜನರ ನಾಡಿಮಿಡಿತ ಅರ್ಥಮಾಡಿಕೊಂಡಿರುವುದು ಸರಿಯಿದೆ. ನಾವು ಏನು ಫಲಿತಾಂಶದ ನಿರೀಕ್ಷೆ ಮಾಡಿದ್ದೆವೋ ಅದೇ ಫಲಿತಾಂಶ ಬರಲಿದೆ” ಎಂದು ಆಶಾಭಾವನೆ ವ್ಯಕ್ತಪಡಿಸಿದ್ದಾರೆ.

ಚುನಾವಣೋತ್ತರ ಸಮೀಕ್ಷೆಗಳ ನಂತರವೂ ಮಾತನಾಡಿರುವ ಅವರು, “ಈ ಬಾರಿ ಕರಾವಳಿ ಭಾಗದಲ್ಲೂ ನಮ್ಮ ಸೀಟು ಹೆಚ್ಚಾಗಲಿದೆ. ಬಜರಂಗದಳ ವಿಚಾರ ಒಂದು ವಿವಾದದ ವಿಚಾರವೇ ಅಲ್ಲ. ನಾವು ನಮ್ಮ ಪ್ರಣಾಳಿಕೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ಬಿಜೆಪಿಯವರು ಅಪಪ್ರಚಾರ ಮಾಡಿದ್ದಾರೆ. ಲಿಂಗಾಯತ ನಾಯಕರೆಲ್ಲಾ ಭ್ರಷ್ಟಾಚಾರಿಗಳು ಅಂತ ನಾನೆಲ್ಲಿ ಹೇಳಿದ್ದೆ? ನಾನು ಬಸವರಾಜ ಬೊಮ್ಮಾಯಿ ಭ್ರಷ್ಟಾಚಾರಿ ಅಂತ ಹೇಳಿದ್ದೆ. ನನ್ನ ಮಾತನ್ನು ತಿರುಚಿ ಅಪಪ್ರಚಾರ ಮಾಡಿದರು” ಎಂದು ಟೀಕಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, “ನಾನು ಈ ಸಂಖ್ಯೆಗಳನ್ನು (ಎಕ್ಸಿಟ್ ಪೋಲ್‌ಗಳು) ನಂಬುವುದಿಲ್ಲ. ನಾವು 146 ಸ್ಥಾನಗಳನ್ನು ದಾಟುತ್ತೇವೆ ಎಂಬ ನನ್ನ ನಿಲುವಿಗೆ ಬದ್ಧನಾಗಿದ್ದೇನೆ. ಕರ್ನಾಟಕದಲ್ಲಿ ಡಬಲ್ ಇಂಜಿನ್ ವಿಫಲವಾಗಿದೆ. ಜನರು ಉನ್ನತ ಶಿಕ್ಷಣ ಪಡೆದಿದ್ದಾರೆ. ದೊಡ್ಡ ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪರಿಸ್ಥಿತಿ ಬರುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿರಿ: 2018ರಲ್ಲಿ ನಿಜವಾಗಿದ್ದ ಎಕ್ಸಿಟ್ ಪೋಲ್; 8 ಸಮೀಕ್ಷೆಗಳು ಏನು ಹೇಳಿದ್ದವು?

“ಕರ್ನಾಟಕದ ಜನರು ಹೊಸತನವನ್ನು ಬಯಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಡಬಲ್ ಇಂಜಿನ್ ಸರ್ಕಾರ ಫೇಲ್ ಆಗಿದೆ. ಭ್ರಷ್ಟ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಕಳಂಕ ಬಂದಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು, ಹೊಸ ಕರ್ನಾಟಕಕ್ಕೆ ಹೊಸ ಸರ್ಕಾರ ಬರಲಿದೆ” ಎಂದಿದ್ದಾರೆ.

ಎಕ್ಸಿಟ್ ಪೋಲ್‌ ಹೊರಬೀಳುವ ಮುನ್ನವೇ ಪ್ರತಿಕ್ರಿಯಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು, “ಈ ಚುನಾವಣೆಯಲ್ಲಿ ಬಿಜೆಪಿ–ಕಾಂಗ್ರೆಸ್ ಹಣದ ಹೊಳೆಯನ್ನೇ ಹರಿಸಿದ್ದು, ನಾವು ನಮ್ಮ ಅಭ್ಯರ್ಥಿಗಳಿಗೆ ಹಣದ ಸಹಾಯ ಮಾಡಲು ಆಗದ್ದಕ್ಕೆ ನೋವಿದೆ. ಆದರೆ ಜೆಡಿಎಸ್‌ ಪಕ್ಷವು ರಾಜ್ಯದಲ್ಲಿ ಬಹುಮತ ಪಡೆಯಲಿದೆ” ಎಂದು ತಿಳಿಸಿದ್ದಾರೆ.

“ಉತ್ತರ ಕರ್ನಾಟಕದ ಹಲವು ಕಡೆಗಳಲ್ಲೂ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಿದ್ದರು. ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಗೌರಿಬಿದನೂರು, ಅಫ್ಜಲ್‌ಪುರ, ಸೇಡಂ, ನವಲಗುಂದ, ರಾಯಭಾಗ, ಕುಡಚಿ, ರಾಯಚೂರು ಗ್ರಾಮೀಣ, ಕೊಪ್ಪಳ, ಸಿಂದಗಿ ಸೇರಿದಂತೆ ಕನಿಷ್ಠ 25 ಕ್ಷೇತ್ರಗಳಲ್ಲಿ ಹಣದ ಕೊರತೆಯಿಂದಾಗಿ ನಮಗೆ ಹಿನ್ನಡೆ ಆಗಿದೆ. ಇದರಿಂದಾಗಿ ಗೆಲ್ಲುವ ಕ್ಷೇತ್ರಗಳಲ್ಲಿಯೂ ಪೆಟ್ಟು ತಿಂದಿದ್ದೇವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...