Homeಮುಖಪುಟಎಕ್ಸಿಟ್ ಪೋಲ್‌ಗಳನ್ನು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ ಬ್ಯಾನರ್ಜಿ

ಎಕ್ಸಿಟ್ ಪೋಲ್‌ಗಳನ್ನು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲಾಗಿದೆ: ಮಮತಾ ಬ್ಯಾನರ್ಜಿ

- Advertisement -
- Advertisement -

ಎಕ್ಸಿಟ್ ಪೋಲ್‌ಗಳು ಎರಡು ತಿಂಗಳ ಹಿಂದೆ ಮನೆಯಲ್ಲೇ ಕುಳಿತು ತಯಾರಿಸಲ್ಪಟ್ಟಿರುವುದರಿಂದ ಅದು ಯಾವುದೇ ವಾಸ್ತವತೆಯನ್ನು ಹೊಂದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಎಕ್ಸಿಟ್ ಪೋಲ್‌ಗಳಲ್ಲಿ ಬಿಜೆಪಿಗೆ ಬಹುಮತ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಾಧ್ಯಮ ಸಂಸ್ಥೆಗಳು ಪ್ರಸಾರ ಮಾಡಿದ ಎಕ್ಸಿಟ್ ಪೋಲ್‌ಗಳು ಎರಡು ತಿಂಗಳ ಹಿಂದೆ ಮನೆಯಲ್ಲಿ ಕುಳಿತು ತಯಾರಿಸಲ್ಪಟ್ಟವು. 2016, 2019 ಮತ್ತು 2021ರಲ್ಲಿ ಎಕ್ಸಿಟ್ ಪೋಲ್‌ಗಳನ್ನು ಹೇಗೆ ನಡೆಸಲಾಯಿತು ಎಂಬುದನ್ನು ನಾವು ನೋಡಿದ್ದೇವೆ. ಯಾವುದೇ ಎಕ್ಸಿಟ್ ಪೋಲ್‌ಗಳು ನಿಜವಾಗಲಿಲ್ಲ ಎಂದು ಹೇಳಿದ್ದಾರೆ.

ಈ ಎಕ್ಸಿಟ್ ಪೋಲ್‌ಗಳನ್ನು ಕೆಲವು ಜನರು ಎರಡು ತಿಂಗಳ ಹಿಂದೆ ಮಾಧ್ಯಮ ಬಳಕೆಗಾಗಿ ಮನೆಯಲ್ಲಿ ಕುಳಿತು ತಯಾರಿಸಿದ್ದಾರೆ. ಅವುಗಳಿಗೆ ಯಾವುದೇ ಮೌಲ್ಯವಿಲ್ಲ. ತಮ್ಮ ರ್ಯಾಲಿಗಳಲ್ಲಿನ ಜನರ ಪ್ರತಿಕ್ರಿಯೆಯು ಉತ್ತಮವಾಗಿತ್ತು. ಆದ್ದರಿಂದ ಮಾಧ್ಯಮ ಸಂಸ್ಥೆಗಳ ಎಕ್ಸಿಟ್ ಪೋಲ್ ಫಲಿತಾಂಶಗಳ ಅಂದಾಜುಗಳು ಹೊಂದಾಣಿಕೆಯಾಗುತ್ತಿಲ್ಲ ಎಂದು ಹೇಳಿದ್ದಾರೆ.

ಎಸ್ಸಿ, ಎಸ್ಟಿ ಮತ್ತು ಒಬಿಸಿಗಳ ಕೋಟಾಗಳನ್ನು ಮುಸ್ಲಿಮರು ಕಸಿದುಕೊಳ್ಳುತ್ತಿದ್ದಾರೆ ಎಂಬ ಸುಳ್ಳು ಮಾಹಿತಿಯನ್ನು ಬಿಜೆಪಿ ಧ್ರುವೀಕರಿಸಲು ಮತ್ತು ಹರಡಲು ಪ್ರಯತ್ನಿಸಿದ ರೀತಿ ನೋಡಿದರೆ ಮುಸ್ಲಿಮರು ಬಿಜೆಪಿಗೆ ಮತ ಹಾಕುತ್ತಾರೆ ಎಂದು ನಾನು ಭಾವಿಸುವುದಿಲ್ಲ ಮತ್ತು ಸಿಪಿಐ(ಎಂ) ಮತ್ತು ಕಾಂಗ್ರೆಸ್ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸಹಾಯ ಮಾಡಿದೆ ಎಂದು ನಾನು ಭಾವಿಸುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳು ಉತ್ತಮ ಸಾಧನೆ ಮಾಡಲಿವೆ. ಅಖಿಲೇಶ್ ಯಾದವ್, ತೇಜಸ್ವಿ ಯಾದವ್, ಎಂ ಕೆ ಸ್ಟಾಲಿನ್ ಮತ್ತು ಉದ್ಧವ್ ಠಾಕ್ರೆ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಮಧ್ಯೆ ಭಾರತೀಯ ಜನತಾ ಪಕ್ಷದ ಪ.ಬಂಗಾಳ ರಾಜ್ಯಾಧ್ಯಕ್ಷ ಸುಕಾಂತ ಮಜುಂದಾರ್, ಪಶ್ಚಿಮ ಬಂಗಾಳದಲ್ಲಿ ಕನಿಷ್ಠ 25 ಸ್ಥಾನಗಳನ್ನು ಬಿಜೆಪಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎರಡೂವರೆ ವರ್ಷಗಳ ಹಿಂದೆ ನಾನು ರಾಜ್ಯಾಧ್ಯಕ್ಷನಾಗಿ ಅಧಿಕಾರ ವಹಿಸಿಕೊಂಡಾಗ ಪಶ್ಚಿಮ ಬಂಗಾಳದಲ್ಲಿ ಲೋಕಸಭೆ ಚುನಾವಣೆಯಲ್ಲಿ 25ರ ಗಡಿ ದಾಟುತ್ತೇವೆ ಎಂದು ಹೇಳಿದ್ದೆ, ಆದರೆ ನನ್ನ ಪಕ್ಷದ ಹಲವರು ನನ್ನ ಮಾತನ್ನು ನಂಬಲಿಲ್ಲ. ಈಗ ನನ್ನ ಪಕ್ಷ, ಮಾದ್ಯಮಗಳು ಮತ್ತು ರಾಜ್ಯದ ಜನರು ನಾವು 25ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದು ನಂಬಿದ್ದಾರೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಉತ್ತರಪ್ರದೇಶ: 7ನೇ ಹಂತದ ಮತದಾನದ ದಿನ ಉಷ್ಣಾಘಾತದಿಂದ 33 ಚುನಾವಣಾ ಸಿಬ್ಬಂದಿ ಸಾವು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...