Homeಮುಖಪುಟಮಧ್ಯಪ್ರದೇಶದ ಚೌಹಾಣ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ

ಮಧ್ಯಪ್ರದೇಶದ ಚೌಹಾಣ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಒಂದು ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಯಾದ ಇಬ್ಬರು ಮಾಜಿ ಶಾಸಕರಿಗೆ ಸಂಪುಟದಲ್ಲಿ ಅವಕಾಶ ನೀಡಿದ್ದಾರೆ.

ವಿರೋಧ ಪಕ್ಷ ಮತ್ತು ಆಡಳಿತ ಪಕ್ಷದ ಹಿರಿಯ ಶಾಸಕರಿಂದ ತೀವ್ರ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಚೌಹಾಣ್ ತಮ್ಮ ಸಂಪುಟಕ್ಕೆ ಐವರನ್ನು ಸೇರ್ಪಡೆ ಮಾಡಿಕೊಂಡಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಸಂಸದೀಯ ವ್ಯವಹಾರಗಳ ಮಾಜಿ ಸಚಿವ ನರೋತ್ತಮ್ ಮಿಶ್ರಾ, ಹರ್ದಾ ಜಿಲ್ಲೆಯ ಹಿಂದುಳಿದ ವರ್ಗದ ನಾಯಕ ಮತ್ತು ಮಾಜಿ ಕಂದಾಯ ಸಚಿವ ಕಮಲ್ ಪಟೇಲ್, ಉಮರಿಯಾ ಜಿಲ್ಲೆಯ ಆದಿವಾಸಿ ಬಿಜೆಪಿ ಶಾಸಕ ಮೀನಾ ಸಿಂಗ್ ಸಂಪುಟಕ್ಕೆ ಸೇರ್ಪಡೆಯಾದವರು.

ಬಿಜೆಪಿ ಮುಖಂಡ ಮಾಧವರಾವ್ ಸಿಂದಿಯಾ ಗುಂಪಿನಿಂದ ತುಳಸಿರಾಮ್ ಸಿಲಾವತ್, ಗೋವಿಂದ್ ರಾಜ್ ಪುತ್ ಸಚಿವ ಸಂಪುಟಕ್ಕೆ ಸೇರ್ಪಡೆಗೊಂಡಿದ್ದಾರೆ. ಶಿವರಾಜ್ ಸಿಂಗ್ ಚೌಹಾಣ್ ಮಾರ್ಚ್ 23ರಂದು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಕಾಂಗ್ರೆಸ್ ನ 22 ಮಂದಿ ಶಾಸಕರು ರಾಜಿನಾಮೆ ನೀಡಿದ್ದರಿಂದ ಮುಖ್ಯಮಂತ್ರಿ ಕಮಲ್ ನಾಥ್ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ಶಾಸಕರ ಮನವೊಲಿಸಲು ಮಾಡಿದ ಪ್ರಯತ್ನ ವಿಫಲವಾದ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವ ಮೊದಲೇ ಮುಖ್ಯಮಂತ್ರಿ ಕಮಲ್ ನಾಥ್ ರಾಜಿನಾಮೆ ನೀಡಿದ್ದರು.

ಕಾಂಗ್ರೆಸ್ ಸರ್ಕಾರ ಪತನವಾದ ನಂತರ ಶಿವರಾಜ್ ಸಿಂಗ್ ಚೌಹಾಣ್ ಕೊರೊನ ವೈರಸ್ ಹರಡಿ ದೇಶ ಸಂಕಷ್ಟ ಎದುರಿಸುತ್ತಿರುವ ನಡುವೆಯೇ ಮಾರ್ಚ್ 23ರಂದು ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇದೀಗ ಒಂದು ತಿಂಗಳ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ.


ಇದನ್ನೂ ಓದಿ:  ಬಡವರ ಅಕ್ಕಿಯನ್ನು ಶ್ರೀಮಂತರ ಕೈಗಳ ಸ್ವಚ್ಛತೆಗೆ ಬಳಸಲಾಗುತ್ತಿದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...