Homeಮುಖಪುಟಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ: ನಿರೀಕ್ಷೆ ಮೂಡಿಸಿದ್ದ ರಶೀದ್-ಆಜಾದ್ ಪಕ್ಷಗಳಿಂದ ಕಳಪೆ ಪ್ರದರ್ಶನ

- Advertisement -
- Advertisement -

ವಿಶೇಷ ಸ್ಥಾನಮಾನ ರದ್ಧತಿಯ ಬಳಿಕ ತನ್ನ ಮೊದಲ ವಿಧಾನಸಭೆ ಚುನಾವಣೆಯನ್ನು ನೋಡುತ್ತಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟವು ಮುಂದಿನ ಸರ್ಕಾರವನ್ನು ರಚಿಸಲು ಸಿದ್ಧವಾಗಿದೆ. ಆದರೆ, ಗೆಲುವಿನ ಪ್ರಮಾಣವು ಸಣ್ಣ ಪಕ್ಷಗಳನ್ನು ಮೀರಿಸಿದೆ.

ಈ ವರ್ಷದ ಚುನಾವಣೆಯಲ್ಲಿ ಜಮಾತ್-ಎ-ಇಸ್ಲಾಮಿ ಚುನಾವಣಾ ಪ್ರಕ್ರಿಯೆಯಲ್ಲಿ ದಶಕಗಳ ನಂತರ ಮರುಪ್ರವೇಶವನ್ನು ಕಂಡಿತು. ಈ ಚುನಾವಣೆಯಲ್ಲಿ ಅದರ ಅಭ್ಯರ್ಥಿಗಳು ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದರ ಮೇಲೆ ಎಲ್ಲರ ಕಣ್ಣುಗಳಿದ್ದವು. ಲೋಕಸಭೆ ಚುನಾವಣೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಉಪಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರನ್ನು ಸೋಲಿಸಿದ ಇಂಜಿನಿಯರ್ ರಶೀದ್ ಅವರ ಅವಾಮಿ ಇತ್ತೆಹಾದ್ ಪಕ್ಷವು ಜಮಾತ್‌ನೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಕುತೂಹಲ ಮತ್ತಷ್ಟು ಹೆಚ್ಚಾಯಿತು.

ನಾಮಪತ್ರ ಸಲ್ಲಿಕೆ ವೇಳೆ ಜಮಾತ್ ಬೆಂಬಲಿತ 10 ಅಭ್ಯರ್ಥಿಗಳು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಆದರೆ, ಕೆಲವರು ಕಣದಿಂದ ಹಿಂದೆ ಸರಿದಿದ್ದರು. ಎಲ್ಲ ಜಮಾತ್ ಬೆಂಬಲಿತ ಅಭ್ಯರ್ಥಿಗಳು ತಮ್ಮತಮ್ಮ ಕ್ಷೇತ್ರಗಳಲ್ಲಿ ಹಿಂದುಳಿದಿದ್ದಾರೆ ಎಂದು ಫಲಿತಾಂಶ ತೋರಿಸಿದೆ.

ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಗೆಲುವಿನ ಹೊರತಾಗಿಯೂ, ಇಂಜಿನಿಯರ್ ರಶೀದ್ ಅವರು ವಿಧಾನಸಭೆ ಚುನಾವಣೆಯಲ್ಲಿ ಛಾಪು ಮೂಡಿಸಲು ಸಾಧ್ಯವಾಗಲಿಲ್ಲ. ಅವರ ಪಕ್ಷದ ಬೆಂಬಲಿತ ಅಭ್ಯರ್ಥಿ, ಅವರ ಸಹೋದರ ಖುರ್ಷೀದ್ ಅಹ್ಮದ್ ಶೇಖ್ ಮುನ್ನಡೆ ಸಾಧಿಸಿದ್ದರು.

ಕಳಪೆ ಪ್ರದರ್ಶನ ಕೊಟ್ಟ ಗುಲಾಂ ನಬಿ ಆಜಾದ್ ಪಕ್ಷದ

ಗುಲಾಂ ನಬಿ ಆಜಾದ್ ಅವರು ಕಾಂಗ್ರೆಸ್‌ನಿಂದ ಬೇರ್ಪಟ್ಟ ನಂತರ 2022 ರಲ್ಲಿ ಸ್ಥಾಪನೆಯಾದ ಡೆಮಾಕ್ರಟಿಕ್ ಪ್ರೋಗ್ರೆಸ್ಸಿವ್ ಆಜಾದ್ ಪಕ್ಷವು ಸಹ ಕಳಪೆ ಪ್ರದರ್ಶನ ನೀಡಿದೆ. ಸ್ಪರ್ಧಿಸಿದ ಎಲ್ಲ ಸ್ಥಾನಗಳಲ್ಲಿ ಹಿಂದುಳಿದಿದೆ. ತನ್ನ ಚುನಾವಣಾ ಚೊಚ್ಚಲವಾದ ಲೋಕಸಭಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಹಾಕಿದ್ದ ಎಲ್ಲ ಮೂರು ಕ್ಷೇತ್ರಗಳನ್ನು ಕಳೆದುಕೊಂಡ ನಂತರ ಪಕ್ಷವು ಈಗಾಗಲೇ ಅಸ್ತವ್ಯಸ್ತವಾಗಿದೆ. ಲೋಕಸಭೆ ಸೋಲಿನ ಬಳಿಕ ಅದರ ಅನೇಕ ನಾಯಕರು ಪಕ್ಷ ತ್ಯಜಿಸಿದ್ದರು.

ಈ ಎಲ್ಲ ವೈಫಲ್ಯಗಳಲ್ಲಿನ ಸಾಮಾನ್ಯ ವಿಷಯವೆಂದರೆ, ನ್ಯಾಷನಲ್ ಕಾನ್ಫರೆನ್ಸ್-ಕಾಂಗ್ರೆಸ್ ಮೈತ್ರಿಕೂಟದ ಮತಗಳನ್ನು ತನ್ನತ್ತ ಸೆಳೆಯಲು ಬಿಜೆಪಿಯು ಈ ರಾಜಕೀಯ ಪಕ್ಷಗಳನ್ನು ಬೆಂಬಲಿಸಿದೆ ಎಂಬ ಮಾತುಗಳು ಕೇಳಿ ಬಂದಿವೆ. ಏಕೆಂದರೆ, ಇಂಜಿನಿಯರ್ ರಶೀದ್ ಅವರು ಚುನಾವಣಾ ಪ್ರಚಾರಕ್ಕಾಗಿ ಜಾಮೀನು ಪಡೆದಾಗ ಈ ಗಾಳಿಸುದ್ದಿಯ ಗ್ರಹಿಕೆಯನ್ನು ಮತ್ತಷ್ಟು ಬಲಪಡಿಸಿತು.

ಕೇವಲ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವ ಮೆಹಬೂಬಾ ಮುಫ್ತಿ ಅವರ ಪಿಡಿಪಿಗೆ ಬಿಜೆಪಿಯ ಆಪ್ತತೆಯ ಕುರಿತ ಊಹಾಪೋಹಗಳು ಕೂಡ ಘಾಸಿಗೊಳಿಸಿವೆ. ಮುಫ್ತಿ ಅವರ ಪುತ್ರಿ ಇಲ್ತಿಜಾ ಕೂಡ ಶ್ರೀಗುಫ್ವಾರಾ-ಬಿಜ್‌ಬೆಹರಾ ಕ್ಷೇತ್ರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ.

2018 ರಲ್ಲಿ ಮೈತ್ರಿ ಕುಸಿಯುವವರೆಗೂ ಮೆಹಬೂಬಾ ಮುಫ್ತಿ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರವನ್ನು ನಡೆಸಿದ್ದರು. ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ನೀಡುವ 370 ನೇ ವಿಧಿಯನ್ನು ಒಂದು ವರ್ಷದ ನಂತರ ತೆಗೆದುಹಾಕಲಾಯಿತು. ಜಮ್ಮು ಮತ್ತು ಕಾಶ್ಮೀರ, ಲಡಾಖ್ ಪ್ರಾಂತ್ಯಗಳನ್ನಾಗಿ ರಾಜ್ಯವನ್ನು ಎರಡು ಒಕ್ಕೂಟಗಳಾಗಿ ವಿಂಗಡಿಸಲಾಯಿತು.

ಇದನ್ನೂ ಓದಿ; ‘ಜಮ್ಮು-ಕಾಶ್ಮೀರ ಮುಂದಿನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ..’; ಫಾರೂಕ್ ಅಬ್ದುಲ್ಲಾ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...