Homeಮುಖಪುಟಪ್ರಧಾನಿಯ ದ್ವೇಷ ಭಾಷಣ ಟೀಕಿಸಿ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಅಲ್ಪಸಂಖ್ಯಾತ ಮೋರ್ಚಾ ನಾಯಕನ ಬಂಧನ: ವರದಿ

ಪ್ರಧಾನಿಯ ದ್ವೇಷ ಭಾಷಣ ಟೀಕಿಸಿ ಬಿಜೆಪಿಯಿಂದ ಉಚ್ಚಾಟನೆಗೊಂಡಿದ್ದ ಅಲ್ಪಸಂಖ್ಯಾತ ಮೋರ್ಚಾ ನಾಯಕನ ಬಂಧನ: ವರದಿ

- Advertisement -
- Advertisement -

ಶಾಂತಿ ಭಂಗ ಆರೋಪದ ಮೇಲೆ ರಾಜಸ್ಥಾನ ಪೊಲೀಸರು ಉಚ್ಚಾಟಿತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಉಸ್ಮಾನ್‌ ಘನಿ ಅವರನ್ನು ಬಂಧಿಸಿದ್ದಾರೆ. ಅವರನ್ನು ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರುಪಡಿಸಲಾಗುವುದು ಎಂದು ತಿಳಿದು ಬಂದಿದೆ.

ಕಳೆದ ಏಪ್ರಿಲ್ 21ರಂದು ರಾಜಸ್ಥಾನದಲ್ಲಿ ಬಿಜೆಪಿ ಆಯೋಜಿಸಿದ್ದ ಸಾರ್ವಜನಿಕ ಸಮಾವೇಶದಲ್ಲಿ ಮುಸಲ್ಮಾನರ ವಿರುದ್ಧ ಖುದ್ದು ದ್ವೇಷ ಭಾಷಣಗೈದಿದ್ದ ಪ್ರಧಾನಿ ನರೇಂದ್ರ ಮೋದಿ, “ದೇಶದ ಸಂಪತ್ತನ್ನು ಒಟ್ಟುಗೂಡಿಸಿ, ಹೆಚ್ಚು ಮಕ್ಕಳಿರುವ ಮುಸ್ಲಿಮರಿಗೆ ನೀಡುವುದೇ ಕಾಂಗ್ರೆಸ್‌ನ ಪ್ರಣಾಳಿಕೆ” ಎಂದಿದ್ದರು. ಇದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುವುದರ ಜೊತೆ ದೊಡ್ಡ ವಿವಾದಕ್ಕೆ ನಾಂದಿ ಹಾಡಿತ್ತು.

ಹಿಂದಿಯ ಖಾಸಗಿ ಸುದ್ದಿ ಸಂಸ್ಥೆ 24 ನ್ಯೂಸ್ ಪತ್ರಕರ್ತ ರಾಜೀವ್ ರಂಜನ್ ಅವರು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ‘ಮಹೋಲ್ ಕ್ಯಾ ಹೇ’ ಎಂಬ ಕಾರ್ಯಕ್ರಮವನ್ನು ನಡೆಸುತ್ತಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾಗಿದ್ದ ಉಸ್ಮಾನ್ ಘನಿ ಅವರನ್ನು ಮಾತನಾಡಿಸಿದ್ದರು.

ಪ್ರಧಾನಿಯ ದ್ವೇಷ ಭಾಷಣದ ಬಗ್ಗೆ ಪತ್ರಕರ್ತ ರಾಜೀವ್ ರಂಜನ್ ಅಭಿಪ್ರಾಯ ಕೇಳಿದಾಗ, “ಪ್ರಧಾನಿ ನರೇಂದ್ರ ಮೋದಿ ಭಾರತದ ಮುಸ್ಲಿಮರನ್ನು ಅವಮಾನಿಸಬಾರದು. ದೇಶದ ಅಭಿವೃದ್ಧಿಯತ್ತ ಗಮನ ಹರಿಸಬೇಕು. ಈ ಬಗ್ಗೆ ಪ್ರಧಾನಿಯವರಿಗೆ ಪತ್ರ ಬರೆಯುವ ಬಗ್ಗೆ ಕೂಡ ಯೋಚನೆ ಮಾಡುತ್ತಿದ್ದೇನೆ’ ಎಂದು ಉಸ್ಮಾನ್ ಘನಿ ಹೇಳಿದ್ದರು.

ಈ ವಿಡಿಯೋ ವೈರಲ್ ಆದ ನಂತರ, ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಸ್ಥಾನದಿಂದ ಉಸ್ಮಾನ್ ಘನಿ ಅವರನ್ನು ಉಚ್ಚಾಟಿಸಲಾಗಿತ್ತು. ಇದೀಗ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...