Homeಮುಖಪುಟಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

- Advertisement -
- Advertisement -

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ.

ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರನ್ನು ಶೀಘ್ರದಲ್ಲೇ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಹೇಳಿದ್ದಾರೆ.

ಪ್ರಸ್ತುತ ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಪತ್ತನಂತಿಟ್ಟದ ಮಹಿಳೆಯೊಬ್ಬರು ಮಾಂಕೂಟತ್ತಿಲ್ ವಿರುದ್ಧ ಮೂರನೇ ಅತ್ಯಾಚಾರ ದೂರು ದಾಖಲಿಸಿದ ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ.

ದೂರಿನಲ್ಲಿ, ಮಹಿಳೆ ಮಾಂಕೂಟತ್ತಿಲ್ ವಿರುದ್ಧ ಕ್ರೂರ ಲೈಂಗಿಕ ದೌರ್ಜನ್ಯ, ಬಲವಂತದ ಗರ್ಭಪಾತ ಮತ್ತು ಆರ್ಥಿಕ ಶೋಷಣೆ ಸೇರಿದಂತೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಈ ದೂರು ದಾಖಲಾದ ನಂತರ ಪೊಲೀಸರು ಮಾಂಕೂಟತ್ತಿಲ್‌ನನ್ನು ವಶಕ್ಕೆ ಪಡೆಯಲು ತ್ವರಿತವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಮಹಿಳೆ ತಾನು ಗರ್ಭಿಣಿಯಾಗಿರುವುದಾಗಿ ಮತ್ತು ಭ್ರೂಣದ ಡಿಎನ್ಎ ಪರೀಕ್ಷೆಗೆ ತಯಾರಿ ನಡೆಸುತ್ತಿರುವುದಾಗಿ ಹೇಳಿದ್ದಾರೆ. ಪ್ರಯೋಗಾಲಯವು ಮಾಂಕೂಟತ್ತಿಲ್‌ಗೆ ಮಾದರಿಯನ್ನು ನೀಡುವಂತೆ ಕೇಳಿದೆ, ಆದರೆ ಅವರು ಡಿಎನ್ಎ ಪರೀಕ್ಷಾ ಪ್ರಕ್ರಿಯೆಗೆ ಸಹಕರಿಸಿಲ್ಲ ಎಂದು ಮಹಿಳೆ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ. ಮಹಿಳೆ ತನ್ನ ಆರೋಪವನ್ನು ಬೆಂಬಲಿಸಲು ತನ್ನ ಬಳಿ ಪುರಾವೆಗಳಿವೆ ಎಂದು ಹೇಳಿಕೊಂಡು ಅದನ್ನು ತನಿಖಾ ತಂಡಕ್ಕೆ ಸಲ್ಲಿಸಿದ್ದಾರೆ ಎಂದು ಎನ್‌ಡಿವಿ ವರದಿ ಉಲ್ಲೇಖಿಸಿದೆ.

ತನ್ನ ದಾಂಪತ್ಯದಲ್ಲಿ ಸಮಸ್ಯೆಗಳನ್ನು ಎದುರಿಸುತ್ತಿದ್ದ ಸಮಯದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭೇಟಿಯಾದೆ. ನಂತರ ಅವರು ತನ್ನೊಂದಿಗೆ ಸಂಬಂಧ ಬೆಳೆಸಿಕೊಂಡು ಪತಿಗೆ ವಿಚ್ಚೇದನ ನೀಡುವಂತೆ ಒತ್ತಡ ಹೇರಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ರಾಹುಲ್ ಮಾಂಕೂಟತ್ತಿಲ್ ತನ್ನನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದಾರೆ, ಮಗು ಬೇಕು ಎಂದು ಒತ್ತಾಯಿಸಿದ್ದಾರೆ. ಮಗುವಾದರೆ ತನ್ನ ಕುಟುಂಬದಿಂದ ಮದುವೆಗೆ ತ್ವರಿತ ಅನುಮೋದನೆ ದೊರೆಯುತ್ತದೆ ಎಂದು ಹೇಳಿದ್ದಾರೆ ಎಂಬುವುದಾಗಿ ಮಹಿಳೆ ತಿಳಿಸಿದ್ದಾರೆ.

ರಾಹುಲ್ ಪದೇ ಪದೇ ತನ್ನನ್ನು ಭೇಟಿಯಾಗುವ ಭಯಕೆ ವ್ಯಕ್ತಪಡಿಸುತ್ತಿದ್ದರು. ನಾನು ರೆಸ್ಟೋರೆಂಟ್ ಒಂದರಲ್ಲಿ ಭೇಟಿಯಾಗೋಣ ಎಂದಾಗ ಅವರು ಅದಕ್ಕೆ ನಿರಾಕರಿಸಿದ್ದರು. ತಾನು ಸಾರ್ವಜನಿಕ ವ್ಯಕ್ತಿಯಾಗಿರುವುದರಿಂದ ಅದು ಸಾಧ್ಯವಿಲ್ಲ ಎಂದಿದ್ದರು. ರೆಸ್ಟೋರೆಂಟ್ ಬದಲಾಗಿ ಪಾಲಕ್ಕಾಡ್‌ನಲ್ಲಿರುವ ಹೋಟೆಲ್‌ನಲ್ಲಿ ಭೇಟಿಯಾಗುವಂತೆ ಅವರು ಸೂಚಿಸಿದ್ದರು. ಅದಕ್ಕಾಗಿ ಅವರು ಕೊಠಡಿ ಕಾಯ್ದಿರಿಸಿದ್ದರು. ತಾನು ಹೋಟೆಲ್‌ಗೆ ಹೋದಾಗ, ನಾನು ಮಾತನಾಡುವ ಮೊದಲೇ ಅವರು ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಸಾಕ್ಷ್ಯಾಧಾರಗಳು ಮತ್ತು ಹೇಳಿಕೆಗಳ ಆಧಾರದ ಮೇಲೆ ತನಿಖೆ ಮುಂದುವರೆದಿದ್ದು, ಮುಂದಿನ ಕಾನೂನು ಕ್ರಮಗಳು ಅನುಸರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾಹುಲ್ ಮಾಂಕೂಟತ್ತಿಲ್ ವಿರುದ್ದ ಈಗ ದಾಖಲಾಗಿರುವುದು ಮೂರನೇ ಅತ್ಯಾಚಾರ ಪ್ರಕರಣವಾಗಿದೆ.

ಮೊದಲ ಪ್ರಕರಣದಲ್ಲಿ ತನ್ನ ಮದುವೆಯಾಗುವುದಾಗಿ ಭರವಸೆ ನೀಡಿ, ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಗರ್ಭಪಾತ ಮಾಡಿಸುವಂತೆ ಒತ್ತಾಯಿಸಿದ್ದಾರೆ ಎಂದು ರಾಹುಲ್ ವಿರುದ್ಧ ಮಹಿಳೆಯೊಬ್ಬರು ಆರೋಪಿಸಿದ್ದರು. ಈ ಪ್ರಕರಣದಲ್ಲಿ ರಾಹುಲ್‌ಗೆ ಕೇರಳ ಹೈಕೋರ್ಟ್ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಿತ್ತು.

ಮತ್ತೊಂದು ಪ್ರಕರಣದಲ್ಲಿ ಮದುವೆಯಾಗುವ ಭರವಸೆ ನೀಡಿ, ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಬೆಂಗಳೂರಿನ ಮಹಿಳೆಯೊಬ್ಬರು ಆರೋಪಿಸಿದ್ದರು. ಇದರಲ್ಲೂ ತಿರುವನಂತಪುರದ ಸೆಷನ್ಸ್ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿತ್ತು.

ಮೂರನೇ ಪ್ರಕರಣವನ್ನು ಪ್ರಸ್ತುತ ಕೆನಡಾದಲ್ಲಿ ಕೆಲಸ ಮಾಡುತ್ತಿರುವ ಪತ್ತನಂತಿಟ್ಟ ಮೂಲದ ಮಹಿಳೆ ನೀಡಿದ ದೂರು ಆಧರಿಸಿ ದಾಖಲಿಸಲಾಗಿದೆ. ಈ ಪ್ರಕರಣ ದಾಖಲಾದ ಕೂಡಲೇ ರಾಹುಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...