Homeಕರೋನಾ ತಲ್ಲಣಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಕರೊನಾ ವೈರಸ್‌ನ ಡೆಲ್ಟಾ ಪ್ಲಸ್‌ ರೂಪಾಂತರಿಯು ದೇಶದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದ್ದು ಕರೊನಾ ಮೂರನೇ ಅಲೆಯ ಸಾಧ್ಯತೆಯ ಕುರಿತು ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರ ನಾಲ್ಕು ಕೊರೊನಾ ರೂಪಾಂತರಿಗಳಿವೆ ಎಂದು ತಜ್ಞರು ತಿಳಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನಯಾನವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಮೊದಲು ಜಗತ್ತನ್ನು ಕಾಡುತ್ತಿರುವ ಇತರ ನಾಲ್ಕು ರೂಪಾಂತರಿ ವೈರಸ್‌ಗಳು ದೇಶವನ್ನು ಪ್ರವೇಶಿಸದಂತೆ ವಿಮಾನ ನಿಲ್ಧಾಣಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ತಜ್ಞರು ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದ್ದಾರೆ. ಹೊಸದಾಗಿ ಕಾಣಿಸಿಕೊಂಡಿರುವ  B.1.617.3, B.1.1.318 ವೇರಿಯಂಟ್‌ಗಳು ಮತ್ತು ಲಾಂಬ್ಡಾ ಮತ್ತು ಕಾಪ್ಪಾ ರೂಪಾಂತರಿಗಳು ಯುರೋಪಿಯನ್ ದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿವೆ ಈ ಕುರಿತು ದೇಶ ಮೊದಲೇ ಎಚ್ಚರಿಕೆಯನ್ನು ವಹಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರೂಪಾಂತರಿ ತಳಿಗಳು ವೈರಸ್‌ನ ಹರಡುವಿಕೆಯ ಸಾಮರ್ಥ್ಯವನ್ನು ಅಗಾಧಗೊಳಿಸಿವೆ. ಮೂಲ ವೈರಸ್‌ಗಿಂತ ರೂಪಾಂತರಿಗಳು ಹಲವು ಪಟ್ಟು ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯಗಳನ್ನು ಪಡೆದುಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಡಾ. ನಾಯ್ಡು ಎಚ್ಚರಿಕೆ ನೀಡಿದ್ದಾರೆ.

ಭಾರತ ಸೇರಿದಂತೆ 16 ದೇಶಗಳಲ್ಲಿನ 25% ಕರೋನಾ ಪ್ರಕರಣಗಳು ಡೆಲ್ಟಾ ಪ್ಲಸ್‌ಗೆ ಸಂಬಂಧಿಸಿದ್ದಾಗಿದೆ. ಆಸ್ಟ್ರೇಲಿಯಾ, ಬಹರಿನ್, ಬಾಂಗ್ಲಾದೇಶ್, ಭಾರತ, ಇಂಡೊನೇಷಿಯಾ, ಇಸ್ರೇಲ್, ಜಪಾನ್, ಕೀನ್ಯಾ, ಮಯನ್ಮಾರ್, ಪೆರು, ರಷ್ಯಾ, ಪೋರ್ಚುಗಲ್, ಬ್ರಿಟನ್ , ಸಿಂಗಪೋರ್, ಅಮೆರಿಕ ದೇಶಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿಯು ತೀವ್ರವಾಗಿ ಹರಡುತ್ತಿರುವುದು ಪತ್ತೆಯಾಗಿದೆ. ಕೋವಾಕ್ಸಿನ್ ಮತ್ತು ಕೋವಿಶೋಲ್ಡ್‌ ಲಸಿಕೆಗಳು ಅಲ್ಪಾ, ಬೀಟಾ, ಗಾಮಾ ಮತ್ತು ಡೆಲ್ಟಾ ರೂಪಾಂತರಿಗಳ ವಿರುದ್ಧ ಪರಿಣಾಮಕಾರಿಯಾಗಿ ಕೆಲಸಮಾಡುತ್ತವೆ. ಆದರೆ ಡೆಲ್ಟಾ ಪ್ಲಸ್‌ ವೇರಿಯಂಟ್ ವಿರುದ್ಧ ಲಸಿಕೆಗಳ ಪ್ರಭಾವ ಕಡಿಮೆಯಾಗಿರುವುದು ಸಂಶೊಧನೆಯಿಂದ ಬಹಿರಂಗಗೊಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಸಂಸ್ಥೆ ( ICMR)ಯ ಮುಖ್ಯ ನಿರ್ದೇಶಕರಾದ ಡಾ. ಬಲರಾಮ್ ಭಾರ್ಗವ್‌ ತಿಳಿಸಿದ್ದಾರೆ.

ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಡಾ. ಬಲರಾಮ್ ಭಾರ್ಗವ್ ಅವರು ಅಲ್ಪಾ, ಬೀಟಾ, ಗಾಮಾ, ಗಾಮಾ ಮತ್ತು ಡೆಲ್ಟಾ ರೂಪಾಂತರಿಗಳು ಹೆಚ್ಚು ಅಪಾಯಕಾರಿಯಾಗಿವೆ. ಡೆಲ್ಟಾ ರೂಪಾಂತರಿಯ ಉಪ ವೈರಸ್‌ ಡೆಲ್ಟಾ ಪ್ಲಸ್ ಈ ಸಂದರ್ಭದಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...