HomeಮುಖಪುಟExplainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

Explainer: ಬಿಜೆಪಿಯು ಉತ್ತರಾಖಂಡ ಸಿಎಂ ಬದಲಿಸಿದ್ದು ಮಮತಾ ಬ್ಯಾನರ್ಜಿಯನ್ನು ಕೆಳಗಿಳಿಸಲೇ?

- Advertisement -
- Advertisement -

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನಿಂದಾದ ಮುಖಭಂಗದಿಂದ ಬಿಜೆಪಿ ಇನ್ನೂ ಹೊರ ಬಂದಿಲ್ಲ. ಚುನಾವಣೆ ನಂತರ ಬಂಗಾಳದಲ್ಲಿ ನಡೆದಿದೆ ಎನ್ನಲಾದ ‘ಹಿಂಸಾಚಾರದ’ ಹೆಸರಿನಲ್ಲಿ ರಾಷ್ಟ್ರಪತಿ ಆಡಳಿತ ಹೇರುವುದರ ಬಗ್ಗೆಗಿನ ಚರ್ಚೆಯನ್ನು ಬಿಜೆಪಿ ಮುನ್ನಲೆಗೆ ತಂದಿತ್ತು. ಇಷ್ಟೇ ಅಲ್ಲದೆ ರಾಜ್ಯದ ಮುಖ್ಯ ಕಾರ್ಯದರ್ಶಿಯ ವಿಚಾರದಲ್ಲೂ ಬಿಜೆಪಿ ಮತ್ತು ಟಿಎಂಸಿ ನಡುವೆ ರಾಜಕೀಯ ಸಂಘರ್ಷ ಮುಂದುವರೆಸಿತ್ತು. ಅದರೊಂದಿಗೆ ಬಂಗಾಳದ ಸಚಿವರು, ಶಾಸಕರನ್ನು ತನಿಖಾ ಸಂಸ್ಥೆಗಳು ಬಂಧಿಸಿದ್ದು ಪ್ರಕರಣ ನ್ಯಾಯಾಲಯದ ಮೆಟ್ಟಿಲೇರಿದೆ.

ಇದೆಲ್ಲಾ ಏಕೆ ಹೇಳಬೇಕಾಯಿತು ಎಂದರೆ ಬಿಜೆಪಿಯ ಎಲ್ಲಾ ಪ್ರಯತ್ನಗಳಿಗೆ ಟಿಎಂಸಿ ದೊಡ್ಡ ಪ್ರತಿರೋಧ ಒಡ್ಡುತ್ತಿದೆ. ಕೆಲವೊಮ್ಮೆ ಮಮತಾ ಬ್ಯಾನರ್ಜಿ ಎದುರು ಬಿಜೆಪಿಯ ಘಟಾನುಘಟಿಗಳು ಮಂಡಿಯೂರಿದ ಪರಿಸ್ಥಿತಿ ಬಂದಿದೆ. ಈ ಅವಮಾನದಿಂದ ಹೊರಬರಲು ಬಿಜೆಪಿ ಮತ್ತೆ, ಮತ್ತೆ ಮಮತಾ ಬ್ಯಾನರ್ಜಿಯ ಬೆನ್ನು ಬಿದ್ದಿದೆ. ಇದೀಗ ಉತ್ತರಾಖಂಡದ ಮುಖ್ಯಮಂತ್ರಿಯನ್ನು ಬದಲಿಸುವ ಮೂಲಕ ಒಕ್ಕೂಟ ಸರ್ಕಾರವು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ವಿರುದ್ದ ಮತ್ತೊಂದು ದಾಳ ಉರುಳಿಸಿದೆ.

ಉತ್ತರಾಖಂಡ ಸಿಎಂ ರಾಜೀನಾಮೆ

ಉತ್ತರಾಖಂಡದಲ್ಲಿ ಬಿಜೆಪಿ ಆಡಳಿತವಿದ್ದು, ಕರ್ನಾಟಕದಂತೆ ಅಲ್ಲಿ ಕೂಡಾ 2016 ರಲ್ಲಿ ಕಾಂಗ್ರೆಸ್‌ನಿಂದ ಶಾಸಕರನ್ನು ಆಪರೇಷನ್ ಮೂಲಕ ಬಿಜೆಪಿಗೆ ತರಲಾಗಿತ್ತು. ನಂತರ ನಡೆದ 2017ರ ಚುನಾವಣೆಯಲ್ಲಿ ಅಧಿಕಾರ ಹಿಡಿದ ಬಿಜೆಪಿಯಿಂದ ತ್ರಿವೇಂದ್ರ ಸಿಂಗ್ ರಾವತ್‌ ಅಧಿಕಾರಕ್ಕೆ ಏರಿದ್ದರು. ಆದರೆ ಈ ನಡುವೆ ವಲಸೆ ಬಿಜೆಪಿಗರು ಮತ್ತು ಮೂಲ ಬಿಜೆಪಿಗರ ನಡುವೆ ಕಚ್ಚಾಟಗಳು ಪ್ರಾರಂಭವಾಗಿ, ಭ್ರಷ್ಟಾಚಾರದ ಆರೋಪ ಹೊತ್ತಿದ್ದ ತ್ರಿವೇಂದ್ರ ಸಿಂಗ್ ರಾವತ್‌ ಅಧಿಕಾರ ಹಿಡಿದ ನಾಲ್ಕು ವರ್ಷಗಳ ಒಳಗೆ ರಾಜೀನಾಮೆ ನೀಡುವಂತಾಗಿತ್ತು.

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ಮುಂದಿನ ಒಂದು ವರ್ಷದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಕಾರಣ ಬಿಜೆಪಿಯ ದೆಹಲಿ ನಾಯಕತ್ವ ಎರಡು ಬಣಗಳನ್ನು ಎದುರು ಹಾಕಿಕೊಳ್ಳಲು ತಯಾರಿರಲಿಲ್ಲ. ಹಾಗಾಗಿ ರಾಜ್ಯ ಬಿಜೆಪಿಯ ಎರಡು ಬಣಗಳಿಗೂ ಸೇರದ, ಅಷ್ಟೇನೂ ಪ್ರಭಾವ ಇಲ್ಲದ ತಿರಥ್‌ ಸಿಂಗ್ ರಾವತ್‌ ಅವರನ್ನು ಮುಖ್ಯಮಂತ್ರಿಯಾಗಿ ಕಳೆದ ಮಾರ್ಚ್‌ನಲ್ಲಿ ನೇಮಕ ಮಾಡಿತ್ತು. ಸಂಸದರಾಗಿರುವ ಅವರು ಮುಂದಿನ ಆರು ತಿಂಗಳ ಒಳಗೆ ಶಾಸಕರಾಗಿ ನೇಮಕವಾದರೆ ಮಾತ್ರ ಸಿಎಂ ಆಗಿ ಒಂದು ವರ್ಷದ ತನ್ನ ಅಧಿಕಾರಾವಧಿಯನ್ನು ಮುಗಿಸಬಹುದಾಗಿತ್ತು.

ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ
ತಿರಥ್‌‌ ಸಿಂಗ್ ರಾವತ್‌‌

ಆದರೆ ಅಧಿಕಾರಕ್ಕೆ ಏರಿದ ದಿನದಿಂದಲೂ ತಿರಥ್‌ ಸಿಂಗ್‌ ಸದಾ ವಿವಾದಾತ್ಮಕ ಹೇಳಿಕೆಯನ್ನು ನೀಡುತ್ತಲೆ ಬಂದಿದ್ದಾರೆ. ಹರಿದ ಜೀನ್ಸ್ ಧರಿಸಿದ ಮಹಿಳೆಯರ ಬಗ್ಗೆ ಅವಮಾನಕರವಾಗಿ ಮಾತನಾಡಿದ್ದು, 200 ವರ್ಷಗಳ ಕಾಲ ಭಾರತವನ್ನು ಆಳಿದ್ದು ಬ್ರಿಟನ್ ಅಲ್ಲ, ಅಮೆರಿಕ ಎಂದು ಹೇಳಿಕೆ ನೀಡಿದ್ದು, ತನ್ನ ಈ ಹಿಂದಿನ ಬಿಜೆಪಿ ಸರ್ಕಾರದ ನೀತಿಗಳನ್ನು ಟೀಕಿಸಿದ್ದು, ಬಿಜೆಪಿಯನ್ನು ತೀವ್ರ ಮುಜುಗರಕ್ಕೀಡಾಗಿಸಿತ್ತು. ಇದರ ವಿರುದ್ದ ಉತ್ತರಾಖಂಡದ ಬಿಜೆಪಿ ನಾಯಕರು ದೆಹಲಿ ನಾಯಕತ್ವಕ್ಕೆ ದೂರು ನೀಡಿದ್ದರು.

ಇಷ್ಟೇ ಅಲ್ಲದೆ, ಕೊರೊನಾ ಬಿಕ್ಕಟ್ಟು ಉತ್ತುಂಗದಲ್ಲಿದ್ದಾಗ ಕುಂಭಮೇಳವನ್ನು ಅವರು ನಿಭಾಯಿಸಿದ ರೀತಿ ಹಾಗೂ ಕೊರೊನಾಗೆ ಯಾವುದೇ ಆರ್‌ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿಲ್ಲ ಎಂಬ ಅವರ ಅಭಿಪ್ರಾಯಕ್ಕೆ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಎರಡು ಭಾರಿ ಅವರ ಹೇಳಿಕೆಯನ್ನು ಖಂಡಿಸಿದ್ದರು. ಈ ನಡುವೆ ಜುಲೈ 2 ರಂದು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉತ್ತರಾಖಂಡದ ಹೊಸ ಮುಖ್ಯಮಂತ್ರಿಯಾಗಿ ಸಂಸದರಾಗಿದ್ದ ಪುಷ್ಕರ್‌ ಸಿಂಗ್ ಧಾಮಿ ಅವರು ಆಯ್ಕೆಯಾಗಿದ್ದಾರೆ. ಕಳೆದ ಆರು ತಿಂಗಳಲ್ಲಿ ರಾಜ್ಯವು ಒಟ್ಟು ಮೂರು ಮುಖ್ಯಮಂತ್ರಿಯನ್ನು ಕಂಡಂತಾಗಿದೆ.

ರಾಜೀನಾಮೆಗೆ ಕಾರಣವೇನು? ಚುನಾವಣ ಆಯೋಗದ ಪಾತ್ರವೇನು?

ಚುನಾವಣಾ ಆಯೋಗವು ಒಂದು ಸ್ವತಂತ್ರ ಸಂಸ್ಥೆಯಾದರೂ, ಅದು ಒಕ್ಕೂಟ ಸರ್ಕಾರದ ಅಣತಿಯಂತೆ ನಡೆಯುತ್ತದೆ ಎಂಬ ಆರೋಪವಿದೆ. ಅದನ್ನು ಕಳೆದ ಪಂಚರಾಜ್ಯ ಚುನಾವಣೆಯಲ್ಲಿ ಹಲವಾರು ವಿರೋಧ ಪಕ್ಷಗಳು ಇದನ್ನು ಆರೋಪಿಸಿದ್ದವು.

ಚುನಾವಣಾ ಆಯೋಗವು ಪಂಚರಾಜ್ಯ ಚುನಾವಣೆಗಳನ್ನು ನಿರ್ವಹಣೆ ಮಾಡಿದ್ದ ರೀತಿಗೆ ದೇಶದಾದ್ಯಂತ ಕೊರೊನಾ ಹರಡಲು ಕಾರಣವಾಗಿದೆ ಎಂಬ ಆರೋಪ ಮಾಡಲಾಗಿತ್ತು. ನ್ಯಾಯಾಲಯ ಕೂಡಾ ಆಯೋಗದ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಹೇಳಿತ್ತು. ಹಾಗಾಗಿ ಉಪ ಚುನಾವಣೆಗಳನ್ನು ಘೋಷಿಸಲು ಚುನಾವಣಾ ಆಯೋಗವು ನಿರಾಸಕ್ತಿ ತೋರುತ್ತಿದೆ ಎನ್ನಲಾಗಿದೆ. ಹಾಲಿ ಉತ್ತರಾಖಂಡ ಸಿಎಂ ಸಂಸದರಾಗಿದ್ದು, ಅವರು ಸಿಎಂ ಆಗಿ ಮುಂದುವರೆಯಬೇಕಾದರೆ ಸಂವಿಧಾನದ ಆರ್ಟಿಕಲ್‌ 164(4) ರ ಪ್ರಕಾರ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಬೇಕಿದೆ.

ಉತ್ತರಖಂಡದಲ್ಲಿ ವಿಧಾನ ಪರಿಷತ್ ಅಸ್ತಿತ್ವದಲ್ಲಿಲ್ಲದ ಕಾರಣ ಅವರು ನೇರ ಚುನಾವಣೆ ಎದುರಿಸಬೇಕಾಗಿರುವುದು ಅನಿವಾರ್ಯವಾಗಿದೆ. ಆದರೆ ಚುನಾವಣಾ ಆಯೋಗ ಉಪಚುನಾವಣೆ ನಡೆಸಲು ಹಿಂದೇಟು ಹಾಕುತ್ತಿರುವುದು ಮತ್ತು ಒಂದು ವೇಲೆ ಚುನಾವಣೆ ಘೋಷಣೆಯಾದರೆ ಅವರು ಗೆಲ್ಲುವುದು ಕಷ್ಟ ಹಾಗಾಗಿ ಅವರ ರಾಜೀನಾಮೆ ಪಡೆಯಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿವೆ.

ಬಿಜೆಪಿಯ ರಾಷ್ಟ್ರೀಯ ನಾಯಕತ್ವದ ಸಮ್ಮತಿಯಿದ್ದರೆ ಚುನಾವಣಾ ಆಯೋಗ ಉತ್ತರಾಖಂಡದಲ್ಲಿ ಉಪಚುನಾವಣೆ ನಡೆಸುತ್ತಿತ್ತು. ಆದರೆ ಅವರಿಗೆ ಉತ್ತರಾಖಂಡದ ವಿಷಯಕ್ಕಿಂತ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿಯವರಿಗೆ ಮುಖಭಂಗ ಉಂಟು ಮಾಡುವುದು ಮುಖ್ಯವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ನಿರೀಕ್ಷೆಗಿಂತಲೂ ಭಾರೀ ಗಳಿಸಿದ್ದರೂ ಮಮತಾ ಬ್ಯಾನರ್ಜಿಯವರು ನಂದಿಗ್ರಾಮದಲ್ಲಿ ಕೂದಲೆಳೆ ಅಂತರದಲ್ಲಿ ಸೋಲನ್ನು ಅನುಭವಿಸಿದ್ದರು. ಈಗ ಅವರು ಸಿಎಂ ಆಗಿದ್ದು, ಆ ಸ್ಥಾನದಲ್ಲಿ ಮುಂದುವರೆಯಲು ಆರು ತಿಂಗಳೊಳಗೆ ವಿಧಾನಸಭಾ ಸದಸ್ಯರಾಗಿ ಆಯ್ಕೆಯಾಗಬೇಕಿದೆ. ವಿ‍ಶೇಷವೆಂದರೆ ಬಂಗಾಳದಲ್ಲಿಯೂ ವಿಧಾನ ಪರಿಷತ್ ಅಸ್ತಿತ್ವದಲ್ಲಿಲ್ಲ. ಅಂದರೆ ಅವರು ನೇರ ಚುನಾವಣೆ ಎದುರಿಸಬೇಕಿದೆ.

ಆದರೆ ಇದೀಗ ಚುನಾವಣಾ ಆಯೋಗ ಕೊರೊನಾ ಹೆಸರಲ್ಲಿ ಯಾವುದೆ ಉಪಚುನಾವಣೆ ನಡೆಸಲು ಮುಂದೆ ಬರುತ್ತಿಲ್ಲ. ಹಾಗಾಗಿ ಅವರು ಆರು ತಿಂಗಳೊಳಗೆ ಶಾಸಕಿಯಾಗದಿದ್ದಲ್ಲಿ ಉತ್ತರಖಂಡದ ಮಾದರಿಯಲ್ಲಿ ರಾಜೀನಾಮೆ ನೀಡಬೇಕು ಎಂಬುದು ಬಿಜೆಪಿ ಒತ್ತಾಯ. ಆ ಮೂಲಕ ಅವರಿಗೆ ಮುಖಭಂಗ ಮಾಡಲು ಬಿಜೆಪಿ ಉತ್ತರಖಂಡದಲ್ಲಿ ತಿರತ್ ಸಿಂಗ್‌ ರಾವತ್‌ರನ್ನು ಕೆಳಗಿಳಿಸಲಾಗಿದೆ ಎಂಬ ಮಾತುಗಳು ಹರಿದಾಡುತ್ತಿವೆ.

ಇದಕ್ಕೆ ಸಾಕ್ಷಿಯಾಗಿ “ಉತ್ತರಾಖಂಡದ ಮುಖ್ಯಮಂತ್ರಿ ಸ್ಥಾನಕ್ಕೆ ತಿರಥ್ ಸಿಂಗ್ ರಾಜೀನಾಮೆ ನೀಡಿದ್ದು, ಮಮತಾ ಅವರನ್ನು ಮಣಿಸಲು ಉದ್ದೇಶಪೂರ್ವಕವಾಗಿ ಬಿಜೆಪಿ ಉರುಳಿಸಿದ ನೈತಿಕತೆಯ ದಾಳ” ಎಂದು ಕಾಂಗ್ರೆಸ್‌ನ ಕರಣ್‌ ಮಹರಾ ಹೇಳಿಕೆ ನೀಡಿದ್ದರು.

ಬಂಗಾಳ: ‘ಬಿಜೆಪಿ ಸೆಂಚುರಿ ಹೊಡೆದಿದೆ; ಮಮತಾ ಕ್ಲೀನ್ ಬೌಲ್ಡ್‌’ - ನರೇಂದ್ರ ಮೋದಿ

ಉತ್ತರಾಖಂಡ, ಪಶ್ಚಿಮ ಬಂಗಾಳದಲ್ಲಿ ವಿಧಾನ ಪರಿಷತ್‌ ವ್ಯವಸ್ಥೆಯಿಲ್ಲ. ಈ ವ್ಯವಸ್ಥೆಯಿದ್ದೆರೆ ಅಲ್ಲಿನ ರಾಜ್ಯಪಾಲರ ಮೂಲಕ ವಿಧಾನ ಪರಿಷತ್‌ಗೆ ಆಯ್ಕೆಯಾಗಿ ಮುಖ್ಯಮಂತ್ರಿ ಆಗಿ ಮುಂದುವರೆಯುವ ‌ಅವಕಾಶ ಇರುತ್ತದೆ. ಆಂಧ್ರ ಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ ಮತ್ತು ಉತ್ತರ ಪ್ರದೇಶ ಬಿಟ್ಟರೆ ದೇಶದ ಒಟ್ಟು ಆರು ರಾಜ್ಯಗಳಲ್ಲಿ ಮಾತ್ರ ಈ ವ್ಯವಸ್ಥೆಯಿದೆ. ಉಳಿದ ಕಡೆ ಜನರಿಂದ ನೇರವಾಗಿ ಆಯ್ಕೆಯಾದರೆ ಮಾತ್ರ ಶಾಸಕಾಂಗದಲ್ಲಿ ಸ್ಥಾನ ಪಡೆಯಬಹುದಾಗಿದೆ.

ಇದನ್ನೂ ಓದಿ: ಬೆಲೆ ಕಟ್ಟಲಾಗದ ಗೃಹಿಣಿಯರ ಮನೆ ಕೆಲಸಕ್ಕೆ ಇನ್ನಾದರೂ ಸಿಗಬಹುದೇ ಮನ್ನಣೆ?

1951 ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್‌ 151 ‘ಎ’ ಪ್ರಕಾರ ಖಾಲಿ ಉಳಿದಿರುವ ಸಂಸತ್‌ ಅಥವಾ ವಿಧಾನಸಭೆಗಳ ಸ್ಥಾನಗಳನ್ನು 6 ತಿಂಗಳ ಒಳಗೆ ಉಪಚುನಾವಣೆ ಮಾಡಿ ಭರ್ತಿ ಮಾಡಬೇಕಾಗುತ್ತದೆ. ಆದರೆ ಕೊರೊನಾ ಕಾರಣ ಕೊಟ್ಟು ಚುನಾವಣಾ ಆಯೋಗ ಉಪಚುನಾವಣೆಯನ್ನು ಮುಂದೂಡಿದರೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗುತ್ತದೆ.

ಆದರೆ ಒಕ್ಕೂಟ ಸರ್ಕಾರದ ನಿರಂತರ ಬೆದರಿಕೆಗಳನ್ನು ಎದುರಿಸುತ್ತಲೆ ಬಂದಿರುವ ಟಿಎಂಸಿ ಈ ಸಮಸ್ಯೆಗೂ ದಾರಿಯನ್ನು ಹುಡುಕಿಕೊಂಡಿದೆ. ರಾಜ್ಯದಲ್ಲಿ ಇದೀಗ ಒಟ್ಟು ಏಳು ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಸಬೇಕಿದೆ. “ಒಂದು ವೇಳೆ ಉಪಚುನಾವಣೆ ನಡೆಯದಿದ್ದರೆ ಆರು ತಿಂಗಳ ಅವಧಿ ಮುಕ್ತಾಯಗೊಳ್ಳುವ ಎರಡು ದಿನಗಳ ಮೊದಲು ಮುಖ್ಯಮಂತ್ರಿ ಹುದ್ದೆಗೆ ಮಮತಾ ರಾಜೀನಾಮೆ ನೀಡಲಿದ್ದಾರೆ. ಎರಡು ದಿನಗಳ ಬಳಿಕ ಮತ್ತೆ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ” ಎಂದು ಟಿಎಂಸಿ ಸಂಸದರೊಬ್ಬರು ಹೇಳಿಕೆ ನೀಡಿದ್ದಾರೆ. ಅಲ್ಲಿಂದ ಆರು ತಿಂಗಳೊಳಗೆ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಶಾಸಕರಾಗಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಮುಂದಿನ ವರ್ಷ ಉತ್ತರಾಖಂಡದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಬಿಜೆಪಿಗೆ ತಿಳಿದಿದ್ದರೂ ಕೂಡಾ, ಪಶ್ಚಿಮ ಬಂಗಾಳದಲ್ಲಿ ಆಗಿರುವ ಮುಖಭಂಗಕ್ಕೆ ಪ್ರತ್ಯುತ್ತರ ನೀಡಲು ಉತ್ತರಾಖಂಡದ ಮುಖ್ಯಮಂತ್ರಿಯನ್ನು ಬದಲಾಯಿಸಿದೆ. ಈ ಬದಲಾವಣೆ ಮುಂಬರುವ ಚುನಾವಣೆಯಲ್ಲಿ ಪಕ್ಷಕ್ಕೆ ಹಾನಿಯುಂಟು ಮಾಡಿದರೂ ಬಿಜೆಪಿ ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ಆದರೆ ಅದಕ್ಕೂ ಜಗ್ಗದಿರಲು ಟಿಎಂಸಿ ನಿರ್ಧರಿಸಿದೆ. ಮುಂದೇನಾಗಲಿದೆ ಎಂದು ಕಾಡು ನೋಡಬೇಕಿದೆ.

  • ಬಾಪು ಅಮ್ಮೆಂಬಳ

ಇದನ್ನೂ ಓದಿ: ಅಧಿಕಾರ ವಹಿಸಿದ ಕೆಲವೇ ತಿಂಗಳಲ್ಲಿ ರಾಜೀನಾಮೆಗೆ ಮುಂದಾದ ಉತ್ತರಾಖಂಡ ಸಿಎಂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...