HomeಚಳವಳಿExplainer: ಏನಿದು ಕುಲಾಂತರಿ ಸಾಸಿವೆ ವಿವಾದ? ಅದರ ಬಳಕೆ ಬೇಕೆ - ಬೇಡವೇ?

Explainer: ಏನಿದು ಕುಲಾಂತರಿ ಸಾಸಿವೆ ವಿವಾದ? ಅದರ ಬಳಕೆ ಬೇಕೆ – ಬೇಡವೇ?

- Advertisement -
- Advertisement -

ಕುಲಾಂತರಿ ಬದನೆಕಾಯಿ ವಿರುದ್ಧ ನಡೆದ ಪ್ರತಿಭಟನೆಗಳ ಕಾರಣಕ್ಕೆ ಅದರ ವ್ಯಾವಹಾರಿಕೆ ಬಳಕೆಗೆ ತಡೆಯೊಡ್ಡಲಾಗಿದೆ. ಇಂತಹ ಸಂದರ್ಭದಲ್ಲಿ ಕುಲಾಂತರಿ ಸಾಸಿವೆ ಬಳಕೆ ಸಂಬಂಧಿಸಿದಂತೆ ಮತ್ತೆ ವಿವಾದ ಭುಗಿಲೆದ್ದಿದೆ. ಈ ಹಿಂದೆಯೇ ಕುಲಾಂತರಿಗಳ ಸಮಗ್ರ ಅಧ್ಯಯನ ನಡೆಸದೆ ಅವುಗಳ ವಾಣಿಜ್ಯ ಬಳಕೆ ಬೇಡವೆಂದು 2012ರಲ್ಲಿ ಸಂಸದೀಯ ಸಮಿತಿ ಹಾಗೂ 2013ರಲ್ಲಿ ಸರ್ವೋಚ್ಚ ನ್ಯಾಯಾಲಯದ ತಾಂತ್ರಿಕ ಸಮಿತಿ ಶಿಫಾರಸು ಮಾಡಿದವು. ಆದರೂ ಧಾರಾ ಮಸ್ಟರ್ಡ್ ಹೈಬ್ರಿಡ್ -11 (ಡಿಎಂಎಚ್-11) ಎಂಬ ಕುಲಾಂತರಿ ಸಾಸಿವೆಯನ್ನು ಮುಕ್ತ ಪರಿಸರದಲ್ಲಿ ಪರೀಕ್ಷೆಗೆ ಒಳಪಡಿಸಲು ಕೇಂದ್ರ ಸರ್ಕಾರದ ಕುಲಾಂತರ ತಳಿ ಪರಿಶೀಲನಾ ಸಮಿತಿ (ಜಿಇಎಸಿ) ಅಕ್ಟೋಬರ್ 18ರಂದು ಅನುಮತಿ ನೀಡಿದೆ.

ಆದರೆ ಸಾಮಾಜಿಕ ಕಾರ್ಯಕರ್ತರು ವೈಜ್ಞಾನಿಕ ಪ್ರಯೋಗಳುಗಳು ನಡೆಯದೆ ಅನುಮತಿ ನೀಡಲಾಗಿದೆ ಮತ್ತು ಇದರ ಬಳಕೆಯು ಪರಿಸರ ಮತ್ತು ಮಾನವ ಆರೋಗ್ಯದ ಮೇಲೆ ಬೀರುವ ದುಷ್ಪರಿಣಾಮಗಳನ್ನು ಉಲ್ಲೇಖಿಸಿ ವಾಣಿಜ್ಯ ಬಳಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ದಾವೆ ಸಹ ಹೂಡಿದ್ದಾರೆ. ಆದರೆ ಕೆಲ ವಿಜ್ಞಾನಿಗಳು ಮತ್ತು ಕೇಂದ್ರ ಸರ್ಕಾರ ಸಾಸಿವೆ ಎಣ್ಣೆಯ ಅಗತ್ಯತೆ ಉಲ್ಲೇಖಿಸಿ ವಾಣಿಜ್ಯ ಬಳಕೆಗೆ ಅವಕಾಶ ನೀಡಬೇಕೆಂದು ವಾದಿಸಿದ್ದಾರೆ. ಸುಪ್ರೀಂ ಕೋರ್ಟ್ ಪರಿಸರದ ಪರೀಕ್ಷೆಗೆ ತಡೆಯಾಜ್ಞೆ ನೀಡಿದ್ದು, ನವೆಂಬರ್ 10ರೊಳಗೆ ಕೇಂದ್ರ ಸರ್ಕಾರ ತಮ್ಮ ನಿಲುವನ್ನು ವ್ಯಕ್ತಪಡಿಸಬೇಕು ಎಂದು ಸೂಚಿಸಿದೆ. ಆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ.

ಧಾರಾ ಮಸ್ಟರ್ಡ್ ಹೈಬ್ರಿಡ್ -11 ಕುರಿತು

ದೆಹಲಿ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿಯಾಗಿದ್ದ, ವಿಶ್ವವಿದ್ಯಾಲಯದ ದಿ ಸೆಂಟರ್ ಫಾರ್ ಜೆನೆಟಿಕ್ ಮ್ಯಾನಿಪ್ಯುಲೇಷನ್ ಆಫ್ ಕ್ರಾಪ್ ಪ್ಲಾಂಟ್ಸ್‌ನ ನಿರ್ದೇಶಕರಾಗಿರುವ ದೀಪಕ್ ಪೆಂಟಾಲ್ ಧಾರಾ ಮಸ್ಟರ್ಡ್ ಹೈಬ್ರಿಡ್ -11 ಎಂಬ ಕುಲಾಂತರಿ ಸಾಸಿವೆಯನ್ನು ಅಭಿವೃದ್ದಿಪಡಿಸಿದ್ದಾರೆ. ಬರ್ನೇಸ್ ಮತ್ತು ಬಸ್ತಾರ್ ಎಂಬ ಎರಡು ವಂಶವಾಹಿಗಳನ್ನು ಮಣ್ಣಿನಲ್ಲಿ ಅಡಕವಿರುವ ಬ್ಯಾಕ್ಟಿರಿಯಾ ಆದ ಬಾಸಿಲಸ್ ಅಮೈಲೋ ಲಿಕ್ವಿಫೇಸಿಯನ್ಸ್ ಎಂಬುದರಿಂದ ತೆಗೆದು ಹೈಬ್ರೀಡ್ ಸಾಸಿವೆಯ ಅಂಗಾಂಶದಲ್ಲಿ ಸೇರಿಸುವ ಮೂಲಕ ಈ ತಳಿಯನ್ನು ತಯಾರಿಸಲಾಗಿದೆ.

ಇದನ್ನು ದೇಸಿಯ ಹೈಬ್ರಿಡ್ ಎಂದು ಕೇಂದ್ರ ಸರ್ಕಾರ ಪ್ರಚಾರ ಮಾಡಿದರೆ, ಹೋರಾಟಗಾರರು ಬರ್ನೇಸ್ ಮತ್ತು ಬಸ್ತಾರ್ ಎಂಬ ಎರಡು ವಂಶವಾಹಿಗಳು ಜರ್ಮನ್ ಮೂಲದ ಬಾಯರ್ ಆಗ್ರೋ ಸೈನ್ಸ್ ನವರ ಪೇಟೆಂಟ್ ಆಗಿದೆ ಎಂದು ಆರೋಪಿಸಿದ್ದಾರೆ.

ಕುಲಾಂತರಿ ತಳಿ ಪರ ಇರುವವರ ವಾದ

ಭಾರತದಲ್ಲಿ ಸಾಸಿವೆ ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬೆಳೆಯಲಾಗುತ್ತಿದೆ. ಹೊಸ ಕುಲಾಂತರಿ ತಳಿಯು ಸ್ಥಳೀಯ ತಳಿಗಿಂತ 28% ಹೆಚ್ಚಿನ ಇಳುವರಿಯನ್ನು ಕೊಡುತ್ತದೆ.

ಇದರ ಕಳೆ ನಿರ್ವಹಣೆ ಅತಿ ಸುಲಭವಾಗಿದೆ. ಕಳೆನಾಶಕ ಸಿಂಪಡಿಸಿದರೆ ಕಳೆ ಮಾತ್ರವೇ ನಾಶವಾಗುತ್ತದೆ. ಸಾಸಿವೆ ಗಿಡಕ್ಕೆ ಯಾವುದೇ ಹಾನಿಯಾಗುವುದಿಲ್ಲ.

ಭಾರತವು ಖಾದ್ಯ ತೈಲ ಉತ್ಪಾದನೆಯಲ್ಲಿ ತೀರಾ ಹಿಂದಿದೆ. ಪ್ರತಿ ವರ್ಷ ಬಳಕೆಯ ಮೂರನೇ ಎರಡರಷ್ಟನ್ನು ಆಮದು ಮಾಡಿಕೊಳ್ಳುವ ಪರಿಸ್ಥಿತಿ ಇದೆ. 2020-21ರಲ್ಲಿ ₹1,17,000 ಕೋಟಿ ವೆಚ್ಚದಲ್ಲಿ ಸುಮಾರು 13.3 ಮಿಲಿಯನ್ ಟನ್ ಖಾದ್ಯ ತೈಲವನ್ನು ಆಮದು ಮಾಡಿಕೊಳ್ಳಲಾಗಿದೆ. ಅದನ್ನು ತಪ್ಪಿಸಬೇಕಾದರೆ ಹೆಚ್ಚು ಇಳುವರಿ ಕೊಡುವ ಕುಲಾಂತರಿ ತಳಿ ಬಳಕೆ ಅನಿವಾರ್ಯ.

ಕುಲಾಂತರಿ ತಳಿ ವಿರೋಧಿಗಳ ವಾದ

ಬಾಯರ್‌ನಂತಹ ಬಹುರಾಷ್ಟ್ರೀಯ ಕಂಪನಿಗಳಿಗೆ ಕುಲಾಂತರಿ ತಳಿ ಬೀಜಗಳು ಮತ್ತು ಆಹಾರೋತ್ಪಾದನೆಗಳಿಗೆ ಅವಕಾಶ ನೀಡುವ ಮೂಲಕ ಭಾರತದಲ್ಲಿ ಅದರ ವಸಾಹತು ಸ್ಥಾಪನೆ ಮಾಡಲು ಅವಕಾಶ ಮಾಡಿಕೊಡಬಾರದು.

28% ಹೆಚ್ಚಿನ ಇಳುವರಿ ಕೊಡುತ್ತದೆ ಎಂಬುದಕ್ಕೆ ವೈಜ್ಞಾನಿಕ ದಾಖಲೆಗಳಿಲ್ಲ. ಅದರ ಬದಲಿಗೆ ನಮ್ಮ ರೈತರಿಗೆ ಸಾಕಷ್ಟು ಪ್ರೋತ್ಸಾಹ ನೀಡಿದರೆ ಈಗ ಬೆಳೆಯುತ್ತಿರುವುದರ ಮೂರು ಪಟ್ಟು ಅಧಿಕ ಸಾಸಿವೆ ಬೆಳೆಯುತ್ತಾರೆ.

ಈ ಸಾಸಿವೆ ಬೆಳೆಗೆ ಕಳೆನಾಶಕ ಗ್ಲುಫೊಸಿನೇಟ್ ಬಳಕೆ ಅನಿವಾರ್ಯವಾಗಿದೆ. ಬಾಯರ್ ಬಹರಾಷ್ಟ್ರೀಯ ಕಂಪನಿಯೇ ಆ ಕಳೆನಾಶಕದ ತಯಾರಿಸುತ್ತಿದ್ದು ಅದರ ಲಾಭಕ್ಕಾಗಿಯೇ ಈ ತಳಿ ಪರಿಚಯಿಸಿದ್ದಾರೆ.

ಆ ಕಳೆನಾಶಕದ ಬಳಕೆ ಹೆಚ್ಚಿದರೆ ಈ ಕಳೆನಾಶಕಗಳು ಕ್ಯಾನ್ಸರ್‌ಕಾರಕ ಅಂಶಗಳನ್ನು ಹೊಂದಿದ್ದು, ಮಾನವನ ಮತ್ತು ಪ್ರಾಣಿಗಳ ದೇಹದ ಕೋಶಕ್ಕೆ ಅಪಾಯಕಾರಿಯಾಗಿವೆ. ಭಾರತವೂ ಸೇರಿದಂತೆ ಅನೇಕ ರಾಷ್ಟ್ರಗಳಲ್ಲಿ ಅದರ ಬಳಕೆಯನ್ನು ನಿಷೇಧಿಸಲಾಗಿದೆ.

ಪರಿಸರ ಮತ್ತು ಒಟ್ಟಾರೆ ಜೈವಿಕ ವ್ಯವಸ್ಥೆಯ ಆರೋಗ್ಯಕ್ಕೂ ಇದು ಹಾನಿಕಾರಕವಾಗಿದೆ. ಒಮ್ಮೆ ಇಂತಹ ಕುಲಾಂತರಿ ತಳಿಗಳನ್ನು ಪರಿಸರಕ್ಕೆ ವ್ಯಾಪಿಸಿದರೆ ಅದರಿಂದಾಗುವ ಹಾನಿಯನ್ನು ಮತ್ತೆ ಸರಿಪಡಿಸಲಾಗದು.

ಕುಲಾಂತರಿ ಸಾಸಿವೆ ಎಣ್ಣೆ ಬಳಕೆಯಿಂದ ಆಗುವ ಅಪಾಯಗಳ ಕುರಿತು ಯಾವುದೇ ವೈಜ್ಞಾನಿಕ ಅಧ್ಯಯನ ನಡೆದಿಲ್ಲ.

ಸದ್ಯ ಸಾಸಿವೆ ಗಿಡದ ಕಡುಹಳದಿ ಬಣ್ಣದ ಹೂವುಗಳು ಕೀಟಗಳು ಮತ್ತು ಜೇನುಗಳನ್ನು ಆಕರ್ಷಿಸುವ ಕೆಲಸ ಮಾಡುತ್ತ, ಉಳಿದ ಬೆಳೆಗಳನ್ನು ಪರೋಕ್ಷವಾಗಿ ರಕ್ಷಿಸುತ್ತಿವೆ. ಕುಲಾಂತರಿ ಸಾಸಿವೆಯಿಂದ ಈ ಸರಪಳಿ ಕಳಚುವ ಅಪಾಯವಿದೆ.

ಮುಂದುವರಿದ ದೇಶಗಳ ಕಾನೂನು ಏನು ಹೇಳುತ್ತದೆ?

ಅಮೆರಿಕ, ಚೀನಾ ಸೇರಿದಂತೆ ಹಲವು ಅಭಿವೃದ್ದಿ ಹೊಂದಿದ ದೇಶಗಳು ಕುಲಾಂತರಿ ಬೀಜಗಳನ್ನು ನಿಷೇಧಿಸಿವೆ ಮತ್ತು ಕಟ್ಟುನಿಟ್ಟಿನ ಕಾನೂನುಗಳನ್ನು ಜಾರಿಗೊಳಿಸಿವೆ. ಆದರೆ ಅಲ್ಲಿನ ಬಹುರಾಷ್ಟ್ರೀಯ ಕಂಪನಿಗಳು ಭಾರತದಂತಹ ತೃತೀಯ ಜಗತ್ತಿನ ರಾಷ್ಟ್ರಗಳ ಮೇಲೆ ಈ ರೀತಿಯ ಪ್ರಯೋಗಗಳನ್ನು ನಡೆಸುತ್ತವೆ ಎಂಬ ಆರೋಪವಿದೆ.

ಅಲ್ಲದೆ ಕುಲಾಂತರಿ ಬೀಜಗಳು ದೇಶದ ವೈವಿದ್ಯ ಬೀಜ ಉತ್ಪಾದನೆಗೆ ಮಾರಕವಾಗಿ ಪರಿಣಿಮಿಸಿರುವ ಉದಾಹರಣಗಳಿವೆ. ಭಾರತದಂತಹ ದೇಶದಲ್ಲಿ ಬೀಜ ಸಂರಕ್ಷಣೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಹೈಬ್ರೀಡ್, ಕುಲಾಂತರಿ ಬೀಜಗಳ ಪ್ರಭಾವದಿಂದಾಗಿ ನಮ್ಮ ಬೀಜ ಸ್ವಾತಂತ್ರ್ಯ ನಶಿಸಿ ಬಹುರಾಷ್ಟ್ರೀಯ ಕಂಪನಿಗಳ ಮೊರೆ ಹೋಗಬೇಕಾದ ಅನಿವಾರ್ಯತೆ ಸೃಷ್ಟಿಯಾಗುತ್ತಿದೆ. ಇದು ದೊಡ್ಡ ಅಪಾಯಕಾರಿ ಎಂಬುದು ಪರಿಸರ ತಜ್ಞರ ಅಭಿಮತವಾಗಿದೆ.

ಈ ಎಲ್ಲಾ ಅಂಶಗಳನ್ನು ಗಮನಿಸಿ ಕುಲಾಂತರಿ ಬೀಜಗಳ ಬಳಕೆ ಬೇಕೆ ಬೇಡವೆ ಎಂದದನ್ನು ಭಾರತೀಯರು ನಿರ್ಧರಿಸಬೇಕಿದೆ.

ಇದನ್ನೂ ಓದಿ: ಹಳತು-ವಿವೇಕ; ರೈತ ಚಳವಳಿ ಎದುರಿಸಬೇಕಾಗಿರುವ ಸಮಸ್ಯೆಗಳು; ವಿಶ್ವ ವ್ಯಾಪಾರಿ ಸಂಸ್ಥೆ ಮತ್ತು ಹುನ್ನಾರಗಳು: ಭಾಗ-2

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...