HomeಮುಖಪುಟExplainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?

Explainer: ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ?

ಪೂರ್ಣಾವಧಿ ಸೈನಿಕರಾಗಿ ಕೆಲಸ ಮಾಡಲು ಬಯಸುತ್ತಿದ್ದ ಯುವಜನರಿಗೆ ಕೇವಲ ನಾಲ್ಕು ವರ್ಷಗಳ ಕಾಲ ಗುತ್ತಿಗೆ ಉದ್ಯೋಗ ನೀಡಿದರೆ ಮುಂದಿನ ಗತಿಯೇನು ಎಂಬುದು ಅವರ ಆತಂಕವಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರವು ‘ಅಗ್ನಿಪಥ್’ ಎಂಬ ಸೈನಿಕ ನೇಮಕಾತಿಗೆ ಸಂಬಂಧಿಸಿದ ಹೊಸ ಯೋಜನೆಯೊಂದನ್ನು ಮಂಗಳವಾರ ಘೋಷಿಸಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೂವರು ಸೇನಾ ಮುಖ್ಯಸ್ಥರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಈ ಅಲ್ಪಾವಧಿಯ ರಕ್ಷಣಾ ನೇಮಕಾತಿ ಕುರಿತು ಮಾಹಿತಿ ನೀಡಿದ್ದಾರೆ. ಇದು ಸರ್ಕಾರದ ವತಿಯಿಂದ ಕೈಗೊಂಡ ಐತಿಹಾಸಿಕ ಕ್ರಮ ಎಂದು ಮಾಧ್ಯಮಗಳು ಬಣ್ಣಿಸುವ ವೇಳೆಗಾಗಲೇ ಈ ಯೋಜನೆಯನ್ನು ವಿರೋಧಿಸಿ ಲಕ್ಷಾಂತರ ಯುವಜನರು ಬೀದಿಗಿಳಿದಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಸೇರಿದಂತೆ ಇತರೆ ರಾಜ್ಯಗಳಲ್ಲಿ ಪ್ರತಿಭಟನೆಗಳನ್ನು ಹಿಂಸಾಚಾರಕ್ಕೆ ತಿರುಗಿವೆ. ಅಷ್ಟರಮಟ್ಟಿಗೆ ಯುವಜನರು ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಹಾಗಿದ್ದರೆ ಏನಿದು ಅಗ್ನಿಪಥ್ ಯೋಜನೆ? ಯಾಕಿಷ್ಟು ವಿರೋಧ ಎಂಬುದನ್ನು ವಿವರವಾಗಿ ತಿಳಿಯೋಣ.

ಭಾರತೀಯ ಯುವಕರು ಮತ್ತು ಯುವತಿಯರಿಗೆ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅನುವು ಮಾಡಿಕೊಡಲು ನೂತನ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ನೂತನ ಅಗ್ನಿಪಥ್ ಯೋಜನೆಯಡಿಯಲ್ಲಿ ನಾಲ್ಕು ವರ್ಷಗಳ ಅವಧಿಗೆ ಸೈನಿಕರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಿದ್ದು, ಅವರನ್ನು ‘ಅಗ್ನಿವೀರ್ ಎಂದು ಕರೆಯಲಾಗಿದೆ.

“ಹೊಸ ತಂತ್ರಜ್ಞಾನಗಳ ಬಗ್ಗೆ ತರಬೇತಿ ನೀಡಲು ಮತ್ತು ಯುವಜನರ ಆರೋಗ್ಯ ಮಟ್ಟವನ್ನು ಸುಧಾರಿಸಲು ಈ ಯೋಜನೆಯು ಸಹಾಯ ಮಾಡುತ್ತದೆ. ಇದು ವಿವಿಧ ಕ್ಷೇತ್ರಗಳಲ್ಲಿ ಹೊಸ ಕೌಶಲ್ಯಗಳೊಂದಿಗೆ ಉದ್ಯೋಗಾವಕಾಶಗಳನ್ನು ಹೆಚ್ಚಿಸುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಸಶಸ್ತ್ರ ಪಡೆ ನೇಮಕಾತಿ ಪ್ರಕಾರ 10 ಮತ್ತು 12ನೇ ತರಗತಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ನೇಮಕಾತಿಗೆ ಅರ್ಹರು ಎಂದು ಪರಿಗಣಿಸಲಾಗುತ್ತದೆ. 17 ವರ್ಷ ಐದು ತಿಂಗಳಿಂದ ಹಿಡಿದು 21 ವರ್ಷದ ವಯೋಮಾನದ ಮಿತಿಯಲ್ಲಿರುವ 45,000 ಯುವಕ ಮತ್ತು ಯುವತಿಯರನ್ನು ಮೂರು ತಿಂಗಳ ಒಳಗೆ ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.

ಆಯ್ಕೆಯಾದ ಅಗ್ನಿವೀರರಿಗೆ ಆರು ತಿಂಗಳ ತರಬೇತಿ ನೀಡಲಾಗುತ್ತದೆ. ಸುಮಾರು 30 ಸಾವಿರದಿಂದ 40 ಸಾವಿರದವರೆಗೆ ವೇತನ ಮತ್ತು ಭತ್ಯೆಗಳನ್ನು ನೀಡಲಾಗುವುದರ ಜತೆಗೆ ವಿಮೆ ಮತ್ತು ವೈದ್ಯಕೀಯ ಸೇವೆಗಳಿಗೆ ಅರ್ಹರಾಗಿತ್ತಾರೆ. ಮುಂದಿನ 90 ದಿನಗಳಲ್ಲಿ ನೇಮಕಾತಿ ಆರಂಭಗೊಳ್ಳಲಿದ್ದು ಜುಲೈ 2023ಕ್ಕೆ ಮೊದಲ ಅಗ್ನಿವೀ‌ರರ ತಂಡ ಕಾರ್ಯನಿರ್ವಹಿಸಲಿದೆ ಎಂದು ಸರ್ಕಾರ ಹೇಳಿದೆ.

ಪರಿಹಾರ ಪ್ಯಾಕೇಜ್‌ನ್ನು ಸೇರಿಸಿ ಅಗ್ನಿವೀರರಿಗೆ ಮೊದಲ ವರ್ಷದಲ್ಲಿ ವಾರ್ಷಿಕ 4.76 ಲಕ್ಷಗಳನ್ನು ಪಾವತಿಸಲಿದ್ದು ಸೇವೆಯ ನಾಲ್ಕನೇ ವರ್ಷದ ಅವಧಿಗೆ ಮೊತ್ತವನ್ನು 6.92 ಲಕ್ಷಕ್ಕೆ ಹೆಚ್ಚಿಸಲಾಗುತ್ತದೆ. ಸೇವಾ ನಿಧಿ ಪ್ಯಾಕೇಜ್ ತೆರಿಗೆಯಿಂದ ವಿನಾಯಿತಿ ಪಡೆಯುತ್ತದೆ.

ನಾಲ್ಕು ವರ್ಷದ ಬಳಿಕ ಅಗ್ನಿವೀರರು ಸೇವೆ ಮುಗಿಯುತ್ತದೆ. ನಂತರ ಅವರು ಸಾಮಾನ್ಯ ಕೇಡರ್‌ಗೆ ಸ್ವಯಂ ಪ್ರೇರಿತವಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಹತೆ ಮತ್ತು ಸಂಸ್ಥೆಯ ಅವಶ್ಯಕತೆ ಆಧರಿಸಿ ಶೇಕಡ 25ರಷ್ಟು ಅಗ್ನಿವೀರರನ್ನು ಸಾಮಾನ್ಯ ಕೇಡರ್‌ಗೆ ಆಯ್ಕೆ ಮಾಡಲಾಗುತ್ತದೆ. ಕರ್ತವ್ಯದ ಸಮಯದಲ್ಲಿ ಜೀವಹಾನಿ, ಅಂಗವೈಕಲ್ಯವಾದರೆ ಪರಿಹಾರವನ್ನು ಸರ್ಕಾರ ಒದಗಿಸುತ್ತದೆ. ಸೇವೆಯ ಅವಧಿಯಲ್ಲಿ ಹುತಾತ್ಮರಾದರೆ ಅಂತಹ ಅಗ್ನಿವೀರರಿಗೆ ಒಂದು ಕೋಟಿಗೂ ಹೆಚ್ಚಿನ ಮೌಲ್ಯದ ವಿಮೆ ಮತ್ತು ಸೇವೆ ಸಲ್ಲಿಸದ ಅವಧಿಗೆ ಪೂರ್ಣ ವೇತನ ನೀಡಲಾಗುತ್ತದೆ ಎಂದು ಸರ್ಕಾರ ಘೋಷಿಸಿದೆ.

ಈ ಯೋಜನೆಯಿಂದ ಸರ್ಕಾರಕ್ಕೇನು ಲಾಭ?

ಸರ್ಕಾರವು ಸದ್ಯ ತನ್ನ ವಾರ್ಷಿಕ ರಕ್ಷಣಾ ಬಜೆಟ್‌ನ ಅರ್ಧದಷ್ಟನ್ನು ಸೈನಿಕರ ವೇತನ ಮತ್ತು ಪಿಂಚಣಿಯ ಮೇಲೆ ಖರ್ಚು ಮಾಡುತ್ತಿದೆ. ಈ ಮೊತ್ತವನ್ನು ಗಣನೀಯವಾಗಿ ತಗ್ಗಿಸುವ ಗುರಿಯೊಂದಿಗೆ ಈ ಯೋಜನೆ ಘೋಷಿಸಿದೆ. ಪೂರ್ಣಕಾಲಿಕ ಸೈನಿಕರನ್ನು ನೇಮಿಸಿಕೊಂಡರೆ ಸಂಬಳ, ಭತ್ಯೆ, ಪಿಂಚಣಿಯ ಹೊರ ತಪ್ಪಿಸಿಕೊಳ್ಳಲು ಸರ್ಕಾರ ಯೋಚಿಸುತ್ತಿದೆ.

ಯುವಜನರು ವಿರೋಧಿಸುತ್ತಿರುವುದೇಕೆ?

ಭಾರತೀಯ ರೈಲ್ವೆಯ ನಂತರ ಅತಿ ದೊಡ್ಡ ಸರ್ಕಾರಿ ಉದ್ಯೋಗದಾತ ಸಂಸ್ಥೆಯಾಗಿದೆ ಭಾರತೀಯ ಸೇನೆ. ಸೇನಾ ನೇಮಕಾತಿಗಾಗಿಯೇ ಪ್ರತಿ ವರ್ಷ ಲಕ್ಷಾಂತರ ಆಕಾಂಕ್ಷಿಗಳು ಕಾದಿರುತ್ತಾರೆ. ಅಂತವರಿಗೆ ಈ ಯೋಜನೆ ಘೋಷಿಸಿರುವುದು ತೀವ್ರ ಆಘಾತ ತಂದಿದೆ. ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ನೇಮಕಾತಿ ಕೂಡ ನಡೆದಿಲ್ಲ. ಇಂತಹ ಸಂದರ್ಭದಲ್ಲಿ ಪೂರ್ಣಾವಧಿ ಸೈನಿಕರಾಗಿ ಕೆಲಸ ಮಾಡಲು ಬಯಸುತ್ತಿದ್ದ ಯುವಜನರಿಗೆ ಕೇವಲ ನಾಲ್ಕು ವರ್ಷಗಳ ಕಾಲ ಗುತ್ತಿಗೆ ಉದ್ಯೋಗ ನೀಡಿದರೆ ಆನಂತರದ ಪರಿಸ್ಥಿತಿಯೇನು ಎಂಬುದು ಅವರ ಆತಂಕವಾಗಿದೆ.

“ನಾವು ಸೈನಿಕರ ನೇಮಕಾತಿ ಮಾಡಿಕೊಳ್ಳುತ್ತಾರೆ ಎಂದು ಸತತ ಎರಡು ವರ್ಷಗಳಿಂದ ಕಾದಿದ್ದೇವೆ. ಆದರೆ ಕೊರೊನಾ ನೆಪ ಹೇಳಿ ನೇಮಕಾತಿ ನಡೆದಿಲ್ಲ. ಈಗ ಸರ್ಕಾರವು ಗುತ್ತಿಗೆ ಆಧಾರದಲ್ಲಿ ಕೇವಲ 4 ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಆದಾದ ನಂತರ ನಮ್ಮನ್ನು ಬೀದಿಗೆ ತಳ್ಳುತ್ತಾರೆ, ಇದುನ್ನು ಯಾವುದೇ ಕಾರಣಕ್ಕೂ ಒಪ್ಪಲು ಸಾಧ್ಯವಿಲ್ಲ” ಎಂದು ಪ್ರತಿಭಟನಾಕಾರರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ಉದ್ಯೋಗ ನೀಡಿ, ಇಲ್ಲದಿದ್ದರೆ ಕೊಂದುಬಿಡಿ’ ಎಂಬ ಘೋಷಣೆಗಳೊಂದಿಗೆ ಉತ್ತರ ಪ್ರದೇಶ ಮತ್ತು ಬಿಹಾರದ ಹಲವೆಡೆ ಯುವಜನರು ಪ್ರತಿಭಟನೆ ನಡೆಸಿದ್ದಾರೆ. ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಹಾರದಲ್ಲಿ ರೈಲು ತಡೆ ಹೋರಾಟ ನಡೆಸಲಾಗಿದೆ. ಪ್ರತಿಭಟನೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಪೊಲೀಸರು ಲಾಠೀ ಚಾರ್ಜ್, ಟಿಯರ್ ಗ್ಯಾಸ್ ಸಿಡಿಸಿದ್ದಾರೆ.

ಹಿಂದಿನ ನೇಮಕಾತಿ ನಿಮಯಗಳ ಪ್ರಕಾರವೇ ಪೂರ್ಣಾವಧಿ ನೇಮಕಾತಿ ಮಾಡಿಕೊಳ್ಳಬೇಕು ಎಂಬುದು ಯುವಜನರ ಒತ್ತಾಯವಾಗಿದೆ.

ಪ್ರತಿಪಕ್ಷಗಳ ವಿರೋಧ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಆರ್‌ಜೆಡಿ ನಾಯಕ ತೇಜಸ್ವಿಯಾದವ್, ಬಿಎಸ್‌ಪಿ ಮುಖಸ್ಥೆ ಮಾಯಾವತಿ, ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಸೇರಿದಂತೆ ಹಲವರು ಸರ್ಕಾರದ ಅಗ್ನಿಪಥ್ ಯೋಜನೆಯನ್ನು ವಿರೋಧಿಸಿದ್ದಾರೆ.

ಈ ಯೋಜನೆಯಲ್ಲಿ ಶ್ರೇಣಿ ಇಲ್ಲ, ಪಿಂಚಣಿ ಇಲ್ಲ, 2 ವರ್ಷಗಳಿಂದ ನೇರ ನೇಮಕಾತಿ ಇಲ್ಲ, 4 ವರ್ಷಗಳ ನಂತರ ಸ್ಥಿರ ಭವಿಷ್ಯವಿಲ್ಲ, ಸೇನೆಗೆ ಗೌರವವಿಲ್ಲ ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ. ಪ್ರಧಾನಿಗಳೆ ದೇಶದ ನಿರುದ್ಯೋಗಿ ಯುವಕರ ದನಿಯನ್ನು ಆಲಿಸಿ, ಅವರನ್ನು ಅಗ್ನಿಪಥದಲ್ಲಿ ಓಡಿಸುವ ಮೂಲಕ ಅವರ ಸಂಯಮದ ಅಗ್ನಿ ಪರೀಕ್ಷೆ ಮಾಡಬೇಡಿ ಎಂದು ಅವರು ಹೇಳಿದ್ದಾರೆ.

ಭಾರತವು ಎರಡು ಕಡೆಗಳಿಂದ ಬೆದರಿಕೆಗಳನ್ನು ಎದುರಿಸುತ್ತಿರುವಾಗ, ಸುಭದ್ರ ಸೇನಾ ನೇಮಕಾತಿ ಮಾಡಿಕೊಳ್ಳದಿರುವುದು ನಮ್ಮ ಸಶಸ್ತ್ರ ಪಡೆಗಳ ಕಾರ್ಯಾಚರಣೆಯ ಶಕ್ತಿಯನ್ನು ಕುಂದಿಸುತ್ತದೆ. ಬಿಜೆಪಿ ಸರ್ಕಾರವು ನಮ್ಮ ಪಡೆಗಳ ಘನತೆ, ಸಂಪ್ರದಾಯಗಳು, ಶೌರ್ಯ ಮತ್ತು ಶಿಸ್ತಿನ ಮೇಲೆ ರಾಜಿ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಮುಂದಿನ 18 ತಿಂಗಳಲ್ಲಿ 10 ಲಕ್ಷ ನೇಮಕಾತಿ ಮಾಡಿಕೊಳ್ಳುವುದು ಬಿಜೆಪಿಯ ಚುನಾವಣಾ ಗಿಮಿಕ್ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಟೀಕಿಸಿದ್ದಾರೆ.

“2022 ರ ವೇಳೆಗೆ 80 ಕೋಟಿ ಜನರಿಗೆ ಉದ್ಯೋಗ ನೀಡುವುದಾಗಿ ಮೋದಿ ಹೇಳಿದ್ದರು. ಆದರೆ ಈಗ ಅಗ್ನಿಪಥ್ ಹೆಸರಿನಲ್ಲಿ ವಿದ್ಯಾವಂತ ಯುವಜನರಿಗಾಗಿ ಸೇನೆಯಲ್ಲಿ ‘ನರೇಗಾ’ ಯೋಜನೆ ಜಾರಿಗೊಳಿಸಲಾಗಿದೆ. ಸಂವಿಧಾನ ನೀಡಿರುವ ಮೀಸಲಾತಿಯನ್ನು ಗುತ್ತಿಗೆ ಪದ್ಧತಿಯಡಿ ರದ್ದುಪಡಿಸಲಾಗುತ್ತಿದೆ. ರೈಲ್ವೆ ಮತ್ತು ಸೇನೆಯ ಲ್ಯಾಟರಲ್ ಎಂಟ್ರಿಯಲ್ಲೂ ಅದೇ ಆಗುತ್ತಿದೆ” ಎಂದು ಆರ್‌ಜೆಡಿ ಮುಖಂಡ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ಬಿಜೆಪಿ ಮತ್ತು ಸಂಘಪರಿವಾರವು ಈಗಾಗಲೇ ಹಲವು ಯುವಜನರಿಗೆ ತಮ್ಮ ಅಂಗಸಂಸ್ಥೆಗಳ ಮೂಲಕ ದ್ವೇಷವನ್ನು ತುಂಬಿವೆ. ಅಂತಹ ಫ್ರಿಂಜ್ ಜನರಿಗೆ ಈಗ ಅಗ್ನಿಪಥ್ ಹೆಸರಿನಲ್ಲಿ ಸರ್ಕಾರಿ ವೆಚ್ಚದಲ್ಲಿ ತರಬೇತಿ ನೀಡಲು ಉತ್ಸುಕವಾಗಿದೆ. ಶಶ್ತ್ರಾಸ್ತ್ರಗಳನ್ನು ಹೊಂದಿರುವ ಅವರು ಸಮಾಜದಲ್ಲಿ ಏನು ಬೇಕಾದರೂ ಮಾಡಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಅಗ್ನಿಪಥ್ ಯೋಜನೆಯಡಿ, ಶಸ್ತ್ರಾಸ್ತ್ರಗಳನ್ನು ನಿರ್ವಹಿಸಲು ತರಬೇತಿ ಪಡೆದವರು ಅಲ್ಪಾವಧಿಯ ತಾತ್ಕಾಲಿಕ ಸೇವೆಯೊಂದಿಗೆ 22 ನೇ ವಯಸ್ಸಿನಲ್ಲಿ ನಿರುದ್ಯೋಗಿಗಳಾಗುತ್ತಾರೆ. ಇದರಿಂದ ದೇಶದಲ್ಲಿ ಕಾನೂನು ಸುವ್ಯವಸ್ಥೆ ಸಮಸ್ಯೆ ಉಂಟಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸಮರ್ಥನೆಗಳಿದ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಯುವಜನರ ಆಕ್ರೋಶ ಹೆಚ್ಚಾದಂತೆ ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಸಮರ್ಥನೆಗೆ ಇಳಿದಿದ್ದಾರೆ. 4 ವರ್ಷಗಳ ನಂತರ ನಿವೃತ್ತಿಯಾಗುವವರಿಗೆ ಪೊಲೀಸ್ ಮತ್ತು ಇತರ ಇಲಾಖೆಗಳಲ್ಲಿ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಬಿಹಾರ, ಯುಪಿಯಲ್ಲಿ ‘ಅಗ್ನಿಪಥ್‌ ಯೋಜನೆ’ ವಿರೋಧಿಸಿ ತೀವ್ರ ಪತ್ರಿಭಟನೆ: ಗುಂಡು ಹಾರಿಸಿದ ಪೊಲೀಸರು

ಈ ಕುರಿತು ಟ್ವೀಟ್ ಮಾಡಿರುವ ಅವರು, “ತಾಯಿ ಭಾರತಿಯ ಸೇವೆ ಮಾಡಲು ನಿರ್ಧರಿಸಿರುವ ನಮ್ಮ ‘ಅಗ್ನಿವೀರರು’ ರಾಷ್ಟ್ರದ ಅಮೂಲ್ಯ ನಿಧಿಯಾಗಲಿದ್ದಾರೆ. ಪೊಲೀಸ್ ಮತ್ತು ಇತರ ಸೇವೆಗಳಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು ಎಂದಿದ್ದಾರೆ.

ಆದರೆ ಈಗಾಗಲೇ ತಾಳ್ಮೆ ಕಳೆದುಕೊಂಡಿರುವ ಯುವಜನರು ಮತ್ತೊಮ್ಮೆ ಬಿಜೆಪಿ ನಾಯಕರ ಮಾತು ಕೇಳಲಿದ್ದಾರೆಯೇ? ಮೋದಿಯವರು ತಾವು ಅಧಿಕಾರಕ್ಕೆ ಬಂದರೆ ಪ್ರತಿ ವರ್ಷ 1 ಕೋಟಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರ. ಒಂದಲ್ಲ, ಎರಡು ಭಾರಿ ಅಧಿಕಾರಕ್ಕೆ ಬಂದರೂ ಸಹ ಉದ್ಯೋಗ ಸೃಷ್ಟಿಯಾಗಿಲ್ಲ ಬದಲಿಗೆ ಸರ್ಕಾರದ ನೀತಿಗಳ ಪರಿಣಾಮವಾಗಿ ಉದ್ಯೋಗ ನಷ್ಟವಾಗಿದೆ ಎಂದು ವರದಿಗಳು ಹೇಳುತ್ತಿವೆ. ಇಂತಹ ಸಂದರ್ಭದಲ್ಲಿ ಯುವಜನರ ಹೋರಾಟ ಮಹತ್ವ ಪಡೆದುಕೊಂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಸ್ವಯಂಗೋಶಿತ ಮಹಾನ್‌ ದೇಶಪ್ರೇಮಿಗಳು, ಈಗ ನಮ್ಮ ದೇಶವನ್ನು ರಕ್ಶಿಸಬೇಕಾಗಿರುವ ಸೈನಿಕರನ್ನೂ ಸಹ ಗುತ್ತಿಗೆಯ ಆದಾರದ ಮೇಲೆ ನೇಮಿಸಿಕೊಳ್ಳಲು ಸಿದ್ದರಾಗಿದ್ದಾರೆ. ಇದೆಂತಹ ದೇಶಪ್ರೇಮ? ನಾಲ್ಕು ವರ್ಷಗಳ ಸೇವೆಯ ನಂತರ ಈ ಸೈನಿಕನ ಬವಿಶ್ಯದ ಗತಿ ಏನು?

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...