- Advertisement -
- Advertisement -
ತಮಿಳುನಾಡಿನ ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಶನಿವಾರ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿ ಸುಮಾರು ಮೂವರು ಸಾವನ್ನಪ್ಪಿದ್ದಾರೆ.
ವಿರುದುನಗರ ಜಿಲ್ಲೆಯ ಸತ್ತೂರು ಪ್ರದೇಶದಲ್ಲಿ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆ ಅಧಿಕಾರಿಗಳು ತಿಳಿಸಿರುವುದಾಗಿ ಎಎನ್‌ಐ ವರದಿ ಮಾಡಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ವಿರುದುನಗರದ ಸತ್ತೂರಿನ ಪಟಾಕಿ ಕಾರ್ಖಾನೆಯಲ್ಲಿ ಕಾರ್ಮಿಕರು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏತನ್ಮಧ್ಯೆ, ಮೃತ ವ್ಯಕ್ತಿಗಳ ಗುರುತನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ.


