ಭಾರತೀಯ ನೌಕಾ ಪಡೆಯ ವಿಧ್ವಂಸಕ ಹಡಗು ಐಎನ್‌ಎಸ್ ರಣವೀರ್‌ನಲ್ಲಿ ಸಂಭವಿಸಿದ ಸ್ಫೋಟದಿಂದ ಉಂಟಾದ ಗಾಯಗಳಿಂದ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
“ಇಂದು ಮುಂಬೈನ ನೌಕಾ ನೌಕಾನೆಲೆಯಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ, ಐಎನ್‌ಎಸ್ ರಣವೀರ್‌ನ ಆಂತರಿಕ ವಿಭಾಗದಲ್ಲಿ ಸ್ಫೋಟದಿಂದ ಉಂಟಾದ ಗಾಯಗಳಿಗೆ ಮೂವರು ನೌಕಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ” ಎಂದು ರಕ್ಷಣಾ ಸಚಿವಾಲಯದ ಪ್ರಕಟಣೆ ತಿಳಿಸಿದೆ. ಜೊತೆಗೆ ಯಾವುದೇ ದೊಡ್ಡ ಹಾನಿ ವರದಿಯಾಗಿಲ್ಲ ಎಂದು ಅದು ಹೇಳಿದೆ.
ಇದನ್ನೂ ಓದಿ:’ಸೂಕ್ಷ್ಮ ವಿಚಾರಗಳಿಗೆ ವಿವಾದದ ಸ್ಪರ್ಶ ನೀಡುವುದು ಬಿಜೆಪಿ, ಸಿಟಿ ರವಿ ಅವರಿಗೆ ಕರತಲಾಮಲಕ’: ಜೆಡಿಎಸ್
ಈ ಸ್ಫೋಟವು ಸಂಜೆ 4:30 ರ ಸುಮಾರಿಗೆ ಸಂಭವಿಸಿದ್ದು, ಸ್ಟೋಟ ಸಂಭವಿಸಲು ಶಸ್ತ್ರಾಸ್ತ್ರಗಳು ಅಥವಾ ಮದ್ದುಗುಂಡುಗಳು ಕಾರಣವಲ್ಲ ಎಂದು ಎನ್‌ಡಿಟಿವಿ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ. ಸ್ಪೋಟಕ್ಕೆ ಕಾರಣವನ್ನು ತನಿಖೆ ಮಾಡಲು ತನಿಖಾ ಸಮಿತಿಗೆ ಆದೇಶಿಸಲಾಗಿದೆ ಅದು ಹೇಳಿದೆ.
“ಘಟನೆ ಸಂಭವಿಸಿದ ಕೂಡಲೆ ಹಡಗಿನ ಸಿಬ್ಬಂದಿ ಪ್ರತಿಕ್ರಿಯಿಸಿ, ತ್ವರಿತವಾಗಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು” ಎಂದು ಎಂದು ನೌಕಾಪಡೆ ಪ್ರಕಟಣೆ ತಿಳಿಸಿದೆ.
INS ರಣವೀರ್ ನವೆಂಬರ್ 2021 ರಿಂದ ಪೂರ್ವ ನೌಕಾ ಕಮಾಂಡ್‌ನಿಂದ ಕರಾವಳಿಯ ಕಾರ್ಯಾಚರಣೆಯ ನಿಯೋಜನೆಯಲ್ಲಿತ್ತು ಮತ್ತು ಶೀಘ್ರದಲ್ಲೇ ಬೇಸ್ ಪೋರ್ಟ್‌ಗೆ ಮರಳಬೇಕಿತ್ತು.
INS ರಣವೀರ್, ರಣವೀರ್ ವರ್ಗದ ವಿಧ್ವಂಸಕಗಳಲ್ಲಿ ಮೊದಲನೆಯದಾಗಿದ್ದು, ಏಪ್ರಿಲ್ 21, 1986 ರಂದು ಭಾರತೀಯ ನೌಕಾಪಡೆಗೆ ಅದನ್ನು ನಿಯೋಜಿಸಲಾಯಿತು. ಹಡಗುಗಳನ್ನು ಹಿಂದಿನ ಸೋವಿಯತ್ ಒಕ್ಕೂಟದಲ್ಲಿ ನಿರ್ಮಿಸಲಾಗಿದೆ.
ಇದನ್ನೂ ಓದಿ:ಮೋದಿ ಭಾಷಣದ ಅಡಚಣೆಗೆ ಟೆಲಿಫ್ರಾಮ್ಟರ್ ಕಾರಣವಲ್ಲ: ಆಲ್ಟ್ ನ್ಯೂಸ್ ಬಿಚ್ಚಿಟ್ಟ ಸತ್ಯ ಇಲ್ಲಿದೆ!


