Homeಮುಖಪುಟಅಂಬಾನಿ ಮನೆ ಬಳಿ ಸ್ಫೋಟಕ - ಕಾರಿನ ಮಾಲೀಕ ಶವವಾಗಿ ಪತ್ತೆ!

ಅಂಬಾನಿ ಮನೆ ಬಳಿ ಸ್ಫೋಟಕ – ಕಾರಿನ ಮಾಲೀಕ ಶವವಾಗಿ ಪತ್ತೆ!

- Advertisement -
- Advertisement -

ಫೆಬ್ರವರಿ 25 ರ ಗುರುವಾರದಂದು ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿಯ ಮುಂಬೈ ಮನೆಯ ಬಳಿ ಸ್ಫೋಟಕ ಸಾಮಗ್ರಿಗಳೊಂದಿಗೆ ನಿಲ್ಲಿಸಲಾಗಿದ್ದ ವಾಹನದ ಮಾಲಿಕ ಶವವಾಗಿ ಪತ್ತೆಯಾಗಿದ್ದಾರೆ ಎಂದು ಶುಕ್ರವಾರ ವರದಿಯಾಗಿದೆ. ಕಲ್ವಾ ಕ್ರೀಕ್‌ನಲ್ಲಿ ಅವರ ಶವ ಪತ್ತೆಯಾಗಿದ್ದು, ಆಕಸ್ಮಿಕ ಸಾವಿನ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಥಾಣೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಮುಖೇಶ್ ಅಂಬಾನಿಯ ಮನೆ ಬಳಿ ಪತ್ತೆಯಾಗಿದ್ದ ಜಿಲೆಟಿನ್‌ ಕಡ್ಡಿಗಳು ತುಂಬಿದ್ದ ಸ್ಕಾರ್ಪಿಯೋ ಕಾರಿನ ಬಗ್ಗೆ ತನಿಖೆ ನಡೆಸಬೇಕೆಂದು ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಒತ್ತಾಯಿಸಿದ್ದರು. ಕಾರಿನ ಮಾಲಿಕನನ್ನು ಹಿರೀನ್‌ ಮನ್ಸುಖ್ ಎಂದು ಗುರುತಿಸಲಾಗಿದೆ. ಮುಂಬೈ ಪೊಲೀಸರ ಪ್ರಕಾರ ಈ ಕಾರನ್ನು ಮನ್‌ಕುರ್ದ್‌ನಿಂದ ಕಳವು ಮಾಡಿ, ಅಂಬಾನಿಯ ಮನೆಯಾದ ಅಂಟಿಲಿಯಾದಲ್ಲಿ ಉಪೇಕ್ಷಿಸಿ ಹೋಗಲಾಗಿತ್ತು.

ರಾಜ್ಯದ ಕಾನೂನು ಸುವ್ಯವಸ್ಥೆ ಕುರಿತು ರಾಜ್ಯ ವಿಧಾನಸಭೆಯಲ್ಲಿ ಮಾತನಾಡುತ್ತಾ, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಬೇಕೆಂದು ಫಡ್ನವೀಸ್ ಒತ್ತಾಯಿಸಿದ್ದರು.

ಇದನ್ನೂ ಓದಿ: ಲಾಕ್‌ಡೌನ್ ಸಮಯದಲ್ಲಿ ಅಂಬಾನಿ 1 ಗಂಟೆಯಲ್ಲಿ ಗಳಿಸಿದ ಆದಾಯವನ್ನು ಸಾಮಾನ್ಯ ವ್ಯಕ್ತಿ ಗಳಿಸಲು ಎಷ್ಟು ವರ್ಷ ಬೇಕು ಗೊತ್ತೇ?

ಕುತೂಹಲಕಾರಿಯೆಂದರೆ, ವಾಹನದ ನೋಂದಣಿ ಸಂಖ್ಯೆ ಅಂಬಾನಿಯ ಭದ್ರತಾ ವ್ಯವಸ್ಥೆಯ ವಾಹನದ ನೋಂದಣಿ ಸಂಖ್ಯೆಗೆ ಹೊಂದಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದರು. ಸ್ಪೋಟಕ ತುಂಬಿದ ವಾಹನ ಪತ್ತೆಯಾದ ನಂತರ ಪ್ರದೇಶದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು.

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷರಾದ ಅಂಬಾನಿ, ದಕ್ಷಿಣ ಮುಂಬೈನ ಐಷಾರಾಮಿ ಕುಂಬಲ್ಲಾ ಹಿಲ್ ಪ್ರದೇಶದಲ್ಲಿ ಆಂಟಿಲಿಯಾ ಎಂಬ ಐಷಾರಾಮಿ, 27 ಅಂತಸ್ತಿನ, 400,000 ಚದರ ಅಡಿ ವಿಶಾಲವಾದ ಕಟ್ಟಡದಲ್ಲಿ ವಾಸಿಸುತ್ತಿದ್ದಾರೆ. ಅವರ ಕುಟುಂಬವು 2012 ರಲ್ಲಿ ಈ ಮನೆಗೆ ಸ್ಥಳಾಂತರಗೊಂಡಿತು.

ಚಿಕಾಗೊ ಮೂಲದ ಸಂಸ್ಥೆ ಪರ್ಕಿನ್ಸ್ ಮತ್ತು ವಿಲ್ ವಿನ್ಯಾಸಗೊಳಿಸಿದ ಇದು ಮೂರು ಹೆಲಿಪ್ಯಾಡ್‌ಗಳು, 168 ಕಾರುಗಳ ಗ್ಯಾರೇಜ್, ಬಾಲ್ ರೂಂ, ಒಂಬತ್ತು ಹೈಸ್ಪೀಡ್ ಎಲಿವೇಟರ್‌ಗಳು, 50 ಆಸನಗಳ ಥಿಯೇಟರ್, ಟೆರೇಸ್ ಗಾರ್ಡನ್ಸ್, ಈಜುಕೊಳ, ಸ್ಪಾ, ಹೆಲ್ತ್‌ಸೆಂಟರ್, ದೇವಾಲಯ ಮತ್ತು ಹಿಮ ಕೋಣೆಯನ್ನು ಹೊಂದಿದೆ.

ಇದನ್ನೂ ಓದಿ: ಅಂಬಾನಿ ಮನೆ ಹತ್ತಿರ ಇದ್ದ ವಾಹನದಲ್ಲಿ ಜಿಲೆಟಿನ್ ಸ್ಫೋಟಕ ಪತ್ತೆ: ಮಹಾರಾಷ್ಟ್ರ ಗೃಹ ಸಚಿವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು ಚಲೋ: ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸಚಿವ ಮಹದೇವಪ್ಪ: ಸಿಎಂ ಜೊತೆ ಚರ್ಚಿಸುವ ಭರವಸೆ 

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ‘ಬೆಂಗಳೂರು ಚಲೋ’...

ಛತ್ತೀಸ್‌ಗಢ : ಬಿಜಾಪುರದಲ್ಲಿ 41 ಮಾವೋವಾದಿಗಳು ಶರಣಾಗತಿ

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 26) 41 ಮಂದಿ ನಕ್ಸಲರು ಶರಣಾಗಿದ್ದು, ಈ ಪೈಕಿ 32 ಮಂದಿಯ ತಲೆಗೆ ಒಟ್ಟು 1.19 ಕೋಟಿ ರೂಪಾಯಿ ಬಹುಮಾನ ಘೋಷಣೆಯಾಗಿತ್ತು ಎಂದು ವರದಿಯಾಗಿದೆ. ಸರ್ಕಾರದ ಹೊಸ...

ಬೆಂಗಳೂರು ಚಲೋ: ಧರಣಿ ಸ್ಥಳಕ್ಕೆ ಬಾರದ ಸಚಿವರು, ಕೋಪಗೊಂಡು ರಸ್ತೆಗಿಳಿದ ಪ್ರತಿಭಟನಾಕಾರರು

ಕೇಂದ್ರ ಸರ್ಕಾರದ ರೈತ, ಕಾರ್ಮಿಕ, ಜನವಿರೋಧಿ ನೀತಿಗಳು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ, ನಿರ್ಲಜ್ಜ ಧೋರಣೆಯ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕದ ನೇತೃತ್ವದಲ್ಲಿ ಬೃಹತ್ 'ಬೆಂಗಳೂರು ಚಲೋ' ಬುಧವಾರ (ನವೆಂಬರ್ 26) ಫ್ರೀಡಂ...

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ: ವಿಐಟಿ ಭೋಪಾಲ್ ವಿವಿ ಕ್ಯಾಂಪಸ್ ಧ್ವಂಸ, ವಾಹನಗಳಿಗೆ ಬೆಂಕಿ

ಇಂದೋರ್-ಭೋಪಾಲ್ ಹೆದ್ದಾರಿಯಲ್ಲಿರುವ ಸೆಹೋರ್ ಜಿಲ್ಲೆಯ ವಿಐಟಿ ವಿಶ್ವವಿದ್ಯಾಲಯದಲ್ಲಿ ಮಂಗಳವಾರ ತಡರಾತ್ರಿ ನಡೆದ ಪ್ರತಿಭಟನೆ ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ತಿರುಗಿದ್ದು, ಕೋಪಗೊಂಡ ವಿದ್ಯಾರ್ಥಿಗಳು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿ ಕ್ಯಾಂಪಸ್ ಆಸ್ತಿಗೆ ಹಾನಿ ಮಾಡಿದ್ದಾರೆ...

ಮ್ಯಾನ್‌ಹೋಲ್‌ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವು : ತಲಾ 30 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಫೆಬ್ರವರಿ 2021ರಲ್ಲಿ ಕೋಲ್ಕತ್ತಾದಲ್ಲಿ ಒಳಚರಂಡಿ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆಗೆ ಕೋಲ್ಕತ್ತಾ ಮಹಾನಗರ ಪಾಲಿಕೆ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಕಲ್ಕತ್ತಾ ಹೈಕೋರ್ಟ್ ಹೊಣೆಗಾರರನ್ನಾಗಿ ಮಾಡಿದೆ...

ಪೋಕ್ಸೊ ಪ್ರಕರಣದಲ್ಲಿ ಮುರುಘಾ ಶ್ರೀ ಖುಲಾಸೆ

ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣ ಸೇರಿದಂತೆ ಐವರನ್ನು ಖುಲಾಸೆಗೊಳಿಸಿ ಚಿತ್ರದುರ್ಗದ ಜಿಲ್ಲಾ ನ್ಯಾಯಾಲಯ ಬುಧವಾರ (ನವೆಂಬರ್ 26) ತೀರ್ಪು ನೀಡಿದೆ ಎಂದು ಬಾರ್ & ಬೆಂಚ್ ವರದಿ...

ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ: ಸಿಎಂ‌ ಸಿದ್ದರಾಮಯ್ಯ ಕರೆ  

ಬೆಂಗಳೂರು.ನ. 26: ದೇಶದಲ್ಲಿರುವ ಸಂವಿಧಾನ ವಿರೋಧಿ ಮನುವಾದಿಗಳನ್ನು ಗುರುತಿಸಿ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ.  ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಸಂತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ "ಸಂವಿಧಾನ ದಿನಾಚರಣೆ -...

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿದರೆ ಪಂಚಾಯತ್‌ಗಳಿಗೆ ತಲಾ 10 ಲಕ್ಷ ರೂ. : ಕೇಂದ್ರ ಸಚಿವ ಬಂಡಿ ಸಂಜಯ್ ಆಮಿಷ

ತೆಲಂಗಾಣದ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಿದರೆ, ತಮ್ಮ ಕರೀಂನಗರ ಲೋಕಸಭಾ ಕ್ಷೇತ್ರದ ಗ್ರಾಮಗಳಿಗೆ ತಲಾ 10 ಲಕ್ಷ ರೂ.ಗಳ ಹಣಕಾಸು ನೆರವು ನೀಡುವುದಾಗಿ ಕೇಂದ್ರ ಸಚಿವ ಬಂಡಿ...

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಮೋದಿ ಪತ್ರ

ಸಂವಿಧಾನ ದಿನದಂದು ದೇಶದ ನಾಗರಿಕರಿಗೆ ಪತ್ರ ಬರೆದಿರುವ ಪ್ರಧಾನಿ ಮೋದಿ, ಮತದಾನದ ಹಕ್ಕನ್ನು ಸಕ್ರಿಯವಾಗಿ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸುವ ಸಾಮೂಹಿಕ ಜವಾಬ್ದಾರಿಯನ್ನು ಒತ್ತಿ ಹೇಳಿದ್ದಾರೆ. 18 ವರ್ಷ ತುಂಬಿದ ಮೊದಲ ಬಾರಿಗೆ...

ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಿರುವ 6 ಮಂದಿಯನ್ನು ವಾಪಸ್ ಕರೆತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಆದೇಶ

ವಿದೇಶಿಯರೆಂದು ಶಂಕಿಸಿ ಬಾಂಗ್ಲಾದೇಶಕ್ಕೆ ಗಡಿಪಾರು ಮಾಡಲಾಗಿರುವ ಪಶ್ಚಿಮ ಬಂಗಾಳದ ಆರು ನಿವಾಸಿಗಳನ್ನು ತಾತ್ಕಾಲಿಕ ಕ್ರಮವಾಗಿ ವಾಪಸ್ ಕರೆತರುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ನವೆಂಬರ್ 25) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಗಡಿಪಾರು ಮಾಡುವಾಗ ತುಂಬು ಗರ್ಭಿಣಿಯಾಗಿದ್ದ...