Homeಕರೋನಾ ತಲ್ಲಣ18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

18 ತಿಂಗಳಲ್ಲಿ ಗರಿಷ್ಟ ಮಟ್ಟಕ್ಕೆ ತಲುಪಿದ ಅಕ್ಕಿ ರಫ್ತು ಬೆಲೆಗಳು!

ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

- Advertisement -
- Advertisement -

ಕೊರೊನಾ ಲಾಕ್ ಡೌನ ನಿಂದಾಗಿ ಕೆಲ ತಿಂಗಳು ಸ್ಥಗಿತಗೊಂಡಿದ್ದ ಅಕ್ಕಿ ರಫ್ತು ಸರಬರಾಜು ಮತ್ತೆ ಚಾಲನೆ ಪಡೆದಿದ್ದು, ಸುಮಾರು 18 ತಿಂಗಳಲ್ಲಿ ಈ ವಾರ ಭಾರತದ ಅಕ್ಕಿ ರಫ್ತು ಬೆಲೆಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ. ಭಾರತದಲ್ಲಿ ಶೇಕಡಾ 5 ರಷ್ಟು ಬ್ರೋಕನ್ ಪಾರ್ಬೋಯಿಲ್ಡ್ ಅಕ್ಕಿ ಬೆಲೆ ಕಳೆದ ವಾರ ಪ್ರತಿ ಟನ್‌ಗೆ $ 384- $ 390 ರಿಂದ  $ 387- $ 394ಕ್ಕೆ ಏರಿಕೆಯಾಗಿದೆ.

ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ದ್ವಿತೀಯ ಸ್ಥಾನದಲ್ಲಿರುವ ಭಾರತದಲ್ಲಿ, ರಫ್ತುದಾರರು ಪೂರ್ವ ಕರಾವಳಿಯ ಅತಿದೊಡ್ಡ ಅಕ್ಕಿ ನಿರ್ವಹಣಾ ಬಂದರು ಕಾಕಿನಾಡದಲ್ಲಿ ಕಂಟೇನರ್ ಗಳು ಮತ್ತು ಸೀಮಿತ ಗಿರಣಿ ಕಾರ್ಮಿಕರ ಲಭ್ಯತೆಯೊಂದಿಗೆ ಕೆಲಸ ಆರಂಭಿಸಿದ್ದಾರೆ.

“ಏಕಾಏಕಿ ಕರೋನವೈರಸ್ ದಾಳಿಯು ಆಂಧ್ರಪ್ರದೇಶದಲ್ಲಿ ಅಕ್ಕಿ ಮಿಲ್ಲಿಂಗ್ ಮತ್ತು ಕಾಕಿನಾಡದಲ್ಲಿ ಲೋಡ್ ಕಾರ್ಯಾಚರಣೆಗಳ ಮೇಲೆ ನಕರಾತ್ಮಕ ಪರಿಣಾಮ ಬೀರಿದೆ. ಬೇಡಿಕೆ ಹೆಚ್ಚಾಗಿದ್ದರೂ ರಫ್ತಿಗೆ ಸೀಮಿತ ಸರಬರಾಜು ಲಭ್ಯವಿದೆ” ಎಂದು ಕಾಕಿನಾಡ ಮೂಲದ ರಫ್ತುದಾರರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸುದರ್ಶನ ಟಿವಿಯ ವಿವಾದಾತ್ಮಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ ಕೇಂದ್ರ ಸರ್ಕಾರ

ನೆರೆಯ ಬಾಂಗ್ಲಾದೇಶದಲ್ಲಿ, ಉತ್ಪಾದನಾ ಕೊರತೆಯ ಭೀತಿಯ ಮಧ್ಯೆ ದೇಶೀಯ ಬೆಲೆಗಳು ಒಂದು ತಿಂಗಳಲ್ಲಿ ಶೇಕಡಾ 20ರಷ್ಟು ಏರಿಕೆಯಾಗಿದೆ. ಇದರ ಜೊತೆಗೆ ನೈಸರ್ಗಿಕ ವಿಪತ್ತುಗಳು ಬೆಳೆಗಳನ್ನು ಹಾನಿಗೊಳಿಸಿದ ನಂತರ ಬಾಂಗ್ಲಾದೇಶವು ಅಕ್ಕಿ ಆಮದು ಮಾಡಿಕೊಳ್ಳಲು ಮುಂದಾಗಿದೆ.

ಮಾರ್ಚ್-ಏಪ್ರಿಲ್‌ನಲ್ಲಿ ಅತಿಯಾದ ಮಳೆ, ಮೇ ತಿಂಗಳಲ್ಲಿ ಆಂಫಾನ್ ಚಂಡಮಾರುತ ಮತ್ತು ಜೂನ್-ಜುಲೈನಲ್ಲಿ ಮೂರು ಮಳೆಯ ಪ್ರವಾಹಗಳು ಹೆಚ್ಚಿನ ಬೆಳೆಗಳನ್ನು ಹಾನಿಗೊಳಿಸಿದವು. ಹಾನಿಗೊಳಗಾದ ಬೆಳೆಗಳಲ್ಲಿ ಶೇಕಡಾ 70 ಪ್ರತಿಶತ ಭತ್ತವಾಗಿದೆ ಎಂದು ಕೃಷಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ  ಬಾಂಗ್ಲಾದೇಶ ಯಾವುದೇ ವಿಳಂಬವಿಲ್ಲದೆ ಅಕ್ಕಿ ಆಮದು ಮಾಡಲು ಪ್ರಾರಂಭಿಸಬೇಕಾಗಿದೆ.

ಇದನ್ನೂ ಓದಿ: ಮುಂದಿನ ವರ್ಷದಿಂದ ‘ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್’ ಕಡ್ಡಾಯ-ಸಚಿವ ಬಿ.ಸಿ.ಪಾಟೀಲ್‌‌

ವಿಯೆಟ್ನಾಂನಲ್ಲಿಯೂ ಸಹ, ದೇಶೀಯ ಸರಬರಾಜುನಲ್ಲಿಯೂ ಶೇಕಡಾ 5 ರಷ್ಟು ಏರಿಕೆ ಕಂಡಿದ್ದು,  ಕಳೆದ ವಾರ $ 490 ರಿಂದ ಟನ್‌ಗೆ $ 495ಗೆ ಏರಿಕೆಯಾಗಿದೆ.

“ದೇಶೀಯ ಸರಬರಾಜು ಈ ಸಮಯದಲ್ಲಿ ತುಂಬಾ ಕಡಿಮೆಯಾಗಿದೆ, ಆದರೆ ಕೆಲವು ರಫ್ತುದಾರರು ಮಲೇಷ್ಯಾ, ಟಿಮೋರ್-ಲೆಸ್ಟೆ ಮತ್ತು ಆಫ್ರಿಕಾದ ಗ್ರಾಹಕರೊಂದಿಗೆ ಈ ಹಿಂದೆ ಸಹಿ ಮಾಡಿದ ಒಪ್ಪಂದಗಳನ್ನು ಪೂರೈಸುತ್ತಲೇ ಇದ್ದಾರೆ” ಎಂದು ಮೆಕಾಂಗ್ ಡೆಲ್ಟಾ ಪ್ರಾಂತ್ಯದ ವ್ಯಾಪಾರಿ ಹೇಳಿದ್ದಾರೆ. ಚಳಿಗಾಲದ ಸುಗ್ಗಿಯ ಮುಂಚಿನ ವಾರಗಳಲ್ಲಿ ಬೆಲೆಗಳು ಇಳಿಯಬಹುದು ಎಂಬ ವಿಶ್ವಾಸದಲ್ಲಿ ವ್ಯಾಪಾರಿಗಳು ಇದ್ದಾರೆ.

ಮತ್ತೊಬ್ಬ ವ್ಯಾಪಾರಿ ಹೇಳುವಂತೆ ಫಿಲಿಪೈನ್ಸ್ ಅಲ್ಲಿ ನಡೆಯುತ್ತಿರುವ ಸುಗ್ಗಿಯ ಹಿನ್ನೆಲೆ ದೇಶೀಯ ಬೆಲೆ ಬೆಂಬಲಿಸಲು ಕನಿಷ್ಠ ನವೆಂಬರ್ ವರೆಗೆ ಫಿಲಿಪೈನ್ಸ್ ಅಕ್ಕಿ ಖರೀದಿಯನ್ನು ಸ್ಥಗಿತಗೊಳಿಸಬಹುದು ಎಂದಿದ್ದಾರೆ.


ಇದನ್ನೂ ಓದಿ: ಕರ್ನಾಟಕದಲ್ಲಿ ಉತ್ತರ ಭಾರತೀಯರ ಹೆಸರುಗಳ ವಿಜೃಂಭಣೆ: ಹೀಗಾದರೆ ಕನ್ನಡದ ಅಸ್ಮಿತೆಯ ಕತೆಯೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...