Homeಮುಖಪುಟಮೊಯಿತ್ರಾರನ್ನ ಸಂಸತ್ತಿನಿಂದ ಹೊರಹಾಕುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ: ಪ್ರಗತಿಪರರು

ಮೊಯಿತ್ರಾರನ್ನ ಸಂಸತ್ತಿನಿಂದ ಹೊರಹಾಕುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧ: ಪ್ರಗತಿಪರರು

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಸಂಸದ ಮಹುವಾ ಮೊಯಿತ್ರಾ ಅವರನ್ನು ಸಂಸತ್ತಿನಿಂದ ಉಚ್ಚಾಟಿಸಲು ಲೋಕಸಭೆಯ ನೈತಿಕ ಸಮಿತಿ ಶಿಫಾರಸು ಮಾಡಿರುವುದು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು 123 ಪ್ರಗತಿಪರ ಗುಂಪು ಬುಧವಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಗುಂಪಿನಲ್ಲಿ ನಿವೃತ್ತ ಅಧಿಕಾರಿಗಳು, ಬರಹಗಾರರು, ಕಾರ್ಯಕರ್ತರು ಮತ್ತು ವಕೀಲರಿದ್ದಾರೆ.

ಮಹುವಾ ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿ ದರ್ಶನ್ ಹೀರಾನಂದನಿಯಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರು ಆರೋಪಿಸಿದ್ದಾರೆ.

ಆರೋಪಗಳ ತನಿಖೆ ನಡೆಸಿದ ಲೋಕಸಭೆಯ ನೈತಿಕ ಸಮಿತಿಯು ನವೆಂಬರ್ 8 ರಂದು ತನ್ನ ಕರಡು ವರದಿಯಲ್ಲಿ ಶಿಫಾರಸು ಮಾಡಿದೆ. ಸಮಿತಿಯು ಮಹುವಾ ಅವರ ನಡೆಯು ಅತ್ಯಂತ ಆಕ್ಷೇಪಾರ್ಹ, ಅನೈತಿಕ, ಹೇಯ ಮತ್ತು ಅಪರಾಧ ಎಂದು ಆರೋಪಿಸಿದೆ. ಆರು ಪ್ಯಾನೆಲ್ ಸದಸ್ಯರು ಅದನ್ನು ಬೆಂಬಲಿಸಿದರು ಮತ್ತು ನಾಲ್ವರು ಅಸಮ್ಮತಿ ಟಿಪ್ಪಣಿಗಳನ್ನು ಸಲ್ಲಿಸುವುದರೊಂದಿಗೆ ವರದಿಯನ್ನು ಅಂಗೀಕರಿಸಲಾಯಿತು.

ಮೊಯಿತ್ರಾ ಅವರನ್ನು ಬೆಂಬಲಿಸಿ ಬುಧವಾರದ ಹೇಳಿಕೆಗೆ ಸಹಿ ಮಾಡಿದವರಲ್ಲಿ ಸಾಮಾಜಿಕ ಕಾರ್ಯಕರ್ತೆ ಅಭಾ ಭಯ್ಯಾ, ನಿವೃತ್ತ ನಾಗರಿಕ ಸೇವಕರಾದ ಇಎಎಸ್ ಶರ್ಮಾ, ಅನಿತಾ ಅಗ್ನಿಹೋತ್ರಿ ಮತ್ತು ಅಶೋಕ್ ವಾಜಪೇಯಿ, ಪತ್ರಕರ್ತರಾದ ಪಿ ಸಾಯಿನಾಥ್ ಮತ್ತು ಪಮೇಲಾ ಫಿಲಿಪೋಸ್ ಮತ್ತು ಪ್ರಾಧ್ಯಾಪಕರಾದ ರಾಘವನ್ ರಂಗರಾಜನ್, ಸುರೀಂದರ್ ಕುಮಾರ್ ಮತ್ತು ಜಗಮೋಹನ್ ಸಿಂಗ್ ಸೇರಿದ್ದಾರೆ.

”ನ್ಯಾಯದ ತತ್ವಗಳಿಗೆ ಅನುಗುಣವಾಗಿ ಇನ್ನೂ ಕಟ್ಟುನಿಟ್ಟಾದ ಸಂಸದೀಯ ಮತ್ತು ನ್ಯಾಯಾಂಗ ಪರಿಶೀಲನೆಗೆ ಒಳಪಡಬೇಕಾದ ಆರೋಪಗಳ ಆಧಾರದ ಮೇಲೆ ಮೊಯಿತ್ರಾ ಅವರನ್ನು ಹೊರಹಾಕಬಹುದು” ಎಂದು ಗುಂಪು ತನ್ನ ಹೇಳಿಕೆಯಲ್ಲಿ ಹೇಳಿದೆ.

”ಮೊಯಿತ್ರಾ ಪ್ರಕರಣದಲ್ಲಿ ಉದ್ಭವಿಸುವ ಸಮಸ್ಯೆಗಳನ್ನು ಅಂತರ-ಕಾರ್ಪೊರೇಟ್ ಹಿತಾಸಕ್ತಿ ಸಂಘರ್ಷ ಎಂದು ಸಂಕುಚಿತವಾಗಿ ನೋಡಲಾಗುವುದಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಅದು ಹೇಳಿದೆ.

”ಸಂಪೂರ್ಣವಾಗಿ ಪರಿಶೀಲಿಸದ ಹೊರತು, ಸಂಸತ್ತು ಮೊಯಿತ್ರಾಗೆ ಅನ್ಯಾಯ ಮಾಡುತ್ತದೆ ಎಂದು ನಾವು ಭಾವಿಸುತ್ತೇವೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

”ಕಾನೂನನ್ನು ಅನುಸರಿಸಲು ವಿಫಲವಾದ ಕಾರ್ಪೊರೇಟ್ ಘಟಕದ ಬಗ್ಗೆ ಹಲವಾರು ರಾಜಕೀಯ ಪಕ್ಷಗಳು ಜಂಟಿ ಸಂಸದೀಯ ಸಮಿತಿಯನ್ನು ರಚಿಸಲು ಕೇಳಿಕೊಂಡಾಗ ಕೇಂದ್ರ ಸರ್ಕಾರವು ಏಕೆ ಸಮಿತಿ ರಚಿಸಲಿಲ್ಲ?” ಎಂದು ಗುಂಪು ಕೇಳಿದೆ.

ಅದಾನಿ ಗ್ರೂಪ್ ಕಾರ್ಪೊರೇಟ್ ಇತಿಹಾಸದಲ್ಲಿ ಅತಿ ದೊಡ್ಡ ಹಗರಣ ಮಾಡಿದೆ ಎಂದು ಜನವರಿಯಲ್ಲಿ ಅಮೇರಿಕನ್ ಹೂಡಿಕೆ ಸಂಸ್ಥೆ ಹಿಂಡೆನ್‌ಬರ್ಗ್ ರಿಸರ್ಚ್ ಆರೋಪಿಸಿದೆ. ಲೆಕ್ಕಪತ್ರ ವಂಚನೆ, ತೆರಿಗೆ ಧಾಮಗಳ ಅನುಚಿತ ಬಳಕೆ ಮತ್ತು ಮನಿ ಲಾಂಡರಿಂಗ್‌ನಲ್ಲಿ ತೊಡಗಿದೆ ಎಂದು ಹಿಂಡೆನ್‌ಬರ್ಗ್ ಸಂಸ್ಥೆಯು ಹೇಳಿಕೊಂಡಿದೆ.

ಅದಾನಿ ಗ್ರೂಪ್ ಪ್ರಕರಣದಲ್ಲಿ ಮೋದಿ ಸರ್ಕಾರದ ಪ್ರತಿಕ್ರಿಯೆಯು “ರಾಜಕೀಯ ಕಾರ್ಯನಿರ್ವಾಹಕ ಮತ್ತು ದೊಡ್ಡ ಉದ್ಯಮಗಳು ಮತ್ತು ಸಾರ್ವಜನಿಕ ಹಿತಾಸಕ್ತಿಗಾಗಿ ಅದರ ಹಾನಿಕಾರಕ ಪರಿಣಾಮಗಳ” ನಡುವಿನ ಸಂಬಂಧವನ್ನು ತೋರಿಸುತ್ತದೆ ಎಂದು ಗುಂಪು ಆರೋಪಿಸಿದೆ.

”ಮೊಯಿತ್ರಾ ಅವರು ಸಂಸತ್ತಿನಲ್ಲಿ ಪ್ರಮುಖ ವಿಷಯಗಳನ್ನು ಹೈಲೈಟ್ ಮಾಡಿದ್ದಾರೆ ಮತ್ತು ಅವರನ್ನು ಹೊರಹಾಕಿದರೆ ಅಂತಹ ಪ್ರಶ್ನೆಗಳನ್ನು ಯಾರೂ ಕೇಳುವುದಿಲ್ಲ ಎಂದು ಈ ರೀತಿ ಮಾಡಲಾಗುತ್ತಿದೆ” ಎಂದು ಸಹಿ ಮಾಡಿದವರು ಹೇಳಿದರು.

”ಶಾಸಕಾಂಗದ ಸದಸ್ಯರನ್ನು ಹೊರಹಾಕುವುದು ನಮ್ಮ ಪ್ರಜಾಪ್ರಭುತ್ವದ ಮೇಲೆ ಪರಿಣಾಮ ಮೂಡುತ್ತದೆ, ಇದು ಗಂಭೀರ ವಿಷಯವಾಗಿದೆ. ಅಂತಹ ನಿರ್ಧಾರವನ್ನು ತೆಗೆದುಕೊಳ್ಳುವ ಮೊದಲು ಸಂಸತ್ತು ಮತ್ತು ಇತರ ಶಾಸಕಾಂಗ ಸಂಸ್ಥೆಗಳು ಎಚ್ಚರಿಕೆಯಿಂದ ಪರಿಶೀಲನೆ ಮತ್ತು ಸೂಕ್ಷ್ಮತೆಯಿಮದ ನಡೆದುಕೊಳ್ಳಬೇಕು” ಎಂದು ಹೇಳಲಾಗಿದೆ.

ಇದನ್ನೂ ಓದಿ: ನೈತಿಕ ಸಮಿತಿ ತನಿಖೆ ಮಧ್ಯೆ ಮೊಯಿತ್ರಾಗೆ ಹೊಸ ಜವಾಬ್ದಾರಿ ನೀಡಿದ TMC

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...