Homeಮುಖಪುಟತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

ತೀವ್ರ ಒತ್ತಡ: ABVP ರಾಷ್ಟ್ರೀಯ ಅಧ್ಯಕ್ಷನ ವಿರುದ್ಧದ ದೂರು ಹಿಂಪಡೆದ ಮಹಿಳೆ!

- Advertisement -
- Advertisement -

ಚನ್ನೈನ ನೆರಮನೆಯ ಮಹಿಳೆಗೆ ತೊಂದರೆ ಕೊಡುವ ದೃಷ್ಟಿಯಿಂದ ಮನೆ ಮುಂದೆ ಕಸ ಬಿಡಾಡುವ, ಮೂತ್ರ ಮಾಡುವ ಮೂಲಕ ಅಸಹ್ಯಕರವಾಗಿ ಕಿರುಕುಳ ನೀಡಿದ್ದ ಪ್ರಕರಣ ಹೊಸ ತಿರುವು ಪಡೆದಿದೆ. ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ವಿರುದ್ಧ ಚನ್ನೈ ಪೊಲೀಸರು ಪ್ರಕರಣ ದಾಖಲಿಸಿದ ಕೆಲವೇ ಗಂಟೆಗಳಲ್ಲಿ ಸಂತ್ರಸ್ತ ಮಹಿಳೆಯು ದೂರು ವಾಪಸ್ ಪಡೆದಿದ್ದಾರೆ. ಇದಕ್ಕಾಗಿ ಸಾಕಷ್ಟು ಜನರು ಒತ್ತಡ ತಂದಿದ್ದಾರೆಂಬ ಆರೋಪ ಕೇಳಿಬಂದಿದೆ.

ಶನಿವಾರ ಸಂಜೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷ ಡಾ.ಎಸ್.ಸುಬ್ಬಯ್ಯ ತನ್ನ ಕೃತ್ಯಕ್ಕಾಗಿ ಕ್ಷಮೆ ಕೇಳಿದ್ದಾರೆ. ಹಾಗಾಗಿ ಕೇಸ್ ವಾಪಸ್ ಪಡೆಯಬೇಕು, ಈ ವಿಚಾರದಲ್ಲಿ ಮುಂದುವರೆಯಬಾರದು ಎಂದು ಅಪಾರ್ಟ್‌ಮೆಂಟ್‌ನ ಹಲವು ಜನರು ಒತ್ತಡ ತಂದಿದ್ದಾರೆ ಎಂದು ಆ ಮಹಿಳೆಯ ಸಂಬಂಧಿಕರು ಆರೋಪಿಸಿದ್ದಾರೆ.

ಪ್ರಕರಣ ವಾಪಸ್ ಪಡೆದಿರುವ ಬಗ್ಗೆ ಚನ್ನೈ ಪೊಲೀಸರು ಸ್ಪಷ್ಟಪಡಿಸಿದ್ದು, ಪ್ರಕರಣ ದಾಖಲಾಗಿದ್ದರಿಂದ ತನಿಖೆ ನಡೆಸುತ್ತಿದ್ದೆವು ಎಂದು ತಿಳಿಸಿದ್ದಾರೆ. ತನ್ನ ಮನೆಯ ಮುಂದೆ ಕಸ ಬಿಸಾಡುವ, ಮೂತ್ರ ಮಾಡುವ ಮೂಲಕ ಕಿರುಕುಳ ನೀಡಿದ್ದ ಆರೋಪಿಯ ವಿರುದ್ಧ ಸಿಸಿಟಿವಿ ದೃಶ್ಯಾವಳಿಗಳ ಸಾಕ್ಷಿ ಸಮೇತ ಜುಲೈ 11 ರಂದು 62 ವರ್ಷದ ಮಹಿಳೆ ದೂರು ನೀಡಿದ್ದರು ಎನ್ನಲಾಗಿದೆ. ಆದರೆ ಪೊಲೀಸರು ಜುಲೈ 25ರಂದು ಪ್ರಕರಣ ದಾಖಲಿಸಿದ್ದರು. ತದನಂತರ ಕೆಲವೇ ಗಂಟೆಗಳಲ್ಲಿ ದೂರು ವಾಪಸ್ ಪಡೆಯಲಾಗಿದೆ.

ಅಪಾರ್ಟ್‌ಮೆಂಟ್‌ನ ಹಲವರು ದೂರು ಹಿಂಪಡೆಯಲು ಒತ್ತಾಯಿಸಿದ್ದರು. ಆತನ ಕುಕೃತ್ಯಗಳ ವಿರುದ್ಧ ಸಾಕ್ಷಿ ಸಂಗ್ರಹಿಸುವಲ್ಲಿ ಸಹಾಯ ಮಾಡಿದ್ದ ಒಬ್ಬರು ಮಾತ್ರ ಕೇಸಿನಲ್ಲಿ ಮುಂದುವರೆಯಿರಿ ಎಂದು ಹೇಳಿದ್ದರು. ಉಳಿದವರು ಸಾಕಷ್ಟು ಒತ್ತಡ ತಂದ ನಂತರ ಮತ್ತು ಆರೋಪಿಯೇ ಕ್ಷಮೆ ಕೇಳಿದ ನಂತರ ಅನಿವಾರ್ಯವಾಗಿ ದೂರನ್ನು ಹಿಂಪಡೆಯಬೇಕಾಯಿತು ಎಂದು ದೂರು ನೀಡುವಲ್ಲಿ ನೆರವಾದ ಮಹಿಳೆಯ ಸೋದರಳಿಯ ಬಾಲಾಜಿ ತಿಳಿಸಿದ್ದಾರೆ.

ಚೆನ್ನೈನ ಕಿಲ್ಪಾಕ್ ವೈದ್ಯಕೀಯ ಕಾಲೇಜಿನಲ್ಲಿ ಶಸ್ತ್ರಚಿಕಿತ್ಸಕ ಮತ್ತು ಶಸ್ತ್ರಚಿಕಿತ್ಸಾ ಆಂಕೊಲಾಜಿ ವಿಭಾಗದ ಮುಖ್ಯಸ್ಥರಾಗಿರುವ ಸುಬ್ಬಯ್ಯ ವಿರುದ್ಧ ಆಡಂಬಕ್ಕಂ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದರು. ಭಾರತೀಯ ದಂಡ ಸಂಹಿತೆ (ಐಪಿಸಿ) ಯ ಸೆಕ್ಷನ್ 271 (ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪ), ಸೆಕ್ಷನ್ 427 (ಐವತ್ತು ರೂಪಾಯಿಗೂ ಹೆಚ್ಚು ಮೊತ್ತದ ಆಸ್ತಿಗೆ ಹಾನಿ ಉಂಟುಮಾಡುವ ಕಿಡಿಗೇಡಿತನ) ಮತ್ತು ತಮಿಳುನಾಡು ಮಹಿಳಾ ಕಿರುಕುಳ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು.

ಮಹಿಳೆಗೆ ಸೇರಿದ್ದ ಕಾರು ಪಾರ್ಕಿಂಗ್ ಜಾಗದಲ್ಲಿ ಸುಬ್ಬಯ್ಯ ತನ್ನ ಕಾರನ್ನು ಪಾರ್ಕ್ ಮಾಡುತ್ತಿದ್ದರು. ಸ್ವಲ್ಪ ತಿಂಗಳುಗಳ ನಂತರ ಆ ಜಾಗಕ್ಕೆ ಮಾಸಿಕ 1500 ರೂ ಬಾಡಿಗೆ ವಿಧಿಸಲು ಆ ಮಹಿಳೆ ಮುಂದಾಗಿದ್ದರು. ಇದರಿಂದ ಕೋಪಗೊಂಡಿದ್ದ ಸುಬ್ಬಯ್ಯ ಆ ಜಾಗ ತನ್ನದು ಎಂದು ವಾದ ಮಾಡಿದ್ದರು ಎನ್ನಲಾಗಿದೆ.

ಜಗಳ ವಿಕೋಪಕ್ಕೆ ತಿರುಗಿದ ನಂತರ ಸುಬ್ಬಯ್ಯ ನಿತ್ಯ ಆ ಮಹಿಳೆಯ ಮನೆ ಮುಂದೆ ಮೂತ್ರ ವಿಸರ್ಜನೆ ಮಾಡುವ, ಕಸ ಎಸೆದಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿತ್ತು. ಆದರೆ ಆರೋಪಿ ABVP ರಾಷ್ಟ್ರೀಯ ಅಧ್ಯಕ್ಷನಾದ ಕಾರಣ ಮತ್ತು ರಾಜಕೀಲ ಬಲ ಹೊಂದಿರುವುದರಿಂದ ಆತನನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ ಎಂದು ಆ ಮಹಿಳೆ ಜುಲೈ 13 ರಂದು ತನ್ನ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಕುರಿತು ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಕಾರ್ಯಕರ್ತರು ಆರೋಪಿಯ ಮೇಲೆ ಕ್ರಮಕ್ಕೆ ಆಗ್ರಹಿಸಿದ್ದರು. ಅಲ್ಲದೇ ಟ್ವಿಟ್ಟರ್‌ನಲ್ಲಿ ಸಿಸಿಟಿವಿ ವಿಡಿಯೋಗಳನ್ನು ಪೋಸ್ಟ್ ಮಾಡಿದ್ದರು. ShameOnABVP ಹ್ಯಾಸ್‌ಟ್ಯಾಗ್‌ ಟ್ರೆಂಡ್‌ ಆಗಿತ್ತು.

abvp ಅಧ್ಯಕ್ಷ ಮಹಿಳೆಗೆ ಕಿರುಕುಳ ನೀಡಿದ್ದಾನೆ. ಈ ಕೊಳಕು ಕೆಲಸವನ್ನು ಮುಚ್ಚಿಹಾಕಲು ಇಡೀ ಬಿಜೆಪಿ ಯಂತ್ರಾಂಗ ಕೆಲಸ ಮಾಡುತ್ತಿದೆ. ಈ ಹಿಂದೆಯು ಅತ್ಯಾಚಾರ ಆರೋಪಿಗಳನ್ನು ಬಿಜೆಪಿ ಸಮರ್ಥಿಸಿಕೊಂಡಿದೆ. ಈ ಕೂಡಲೇ ಅವನನ್ನು ಅಧ್ಯಕ್ಷ ಹುದ್ದೆಯಿಂದ ಕಿತ್ತೊಗೆಯಬೇಕೆಂದು ಎನ್‌ಎಸ್‌ಯುಐ ಆಗ್ರಹಿಸಿತ್ತು.

ಮಹಿಳೆಯರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದ ಬಿಜೆಪಿ ಸರ್ಕಾರ ಮಹಿಳೆಯರಿಗೆ ಕಿರುಕುಳ ಕೊಟ್ಟವರಿಗೆ ರಕ್ಷಣೆ ನೀಡುತ್ತದೆ. ಪಕ್ಷದಲ್ಲಿ ಮೇಲಿನಿಂದ ಕೆಳಗಿನವರೆಗೆ ಇರುವವರೆಲ್ಲಾ ಮಹಿಳಾ ವಿರೋಧಿಗಳೇ ಆಗಿದ್ದಾರೆ. ಬಿಜೆಪಿ ಆಳ್ವಿಕೆಯು ಮಹಿಳಾ ಸುರಕ್ಷತೆ ಎಂಬುದನ್ನು ಅಣಕ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.


ಇದನ್ನೂ ಓದಿ: ABVP ರಾಷ್ಟ್ರೀಯ ಅಧ್ಯಕ್ಷನಿಂದ ಮಹಿಳೆಗೆ ನಿತ್ಯ ಕಿರುಕುಳ ಆರೋಪ: ShameOnABVP ಟ್ವಿಟ್ಟರ್‌ನಲ್ಲಿ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...