Homeಮುಖಪುಟ`ಎಫ್.ಐ.ಆರ್. ದಾಖಲಾಗಿದೆ, ಮನವಿ ಈಡೇರಿದೆ’: ಕುಸ್ತಿಪಟುಗಳ ಅರ್ಜಿ ತೆರವುಗೊಳಿಸಿದ ಸುಪ್ರೀಂಕೋರ್ಟ್

`ಎಫ್.ಐ.ಆರ್. ದಾಖಲಾಗಿದೆ, ಮನವಿ ಈಡೇರಿದೆ’: ಕುಸ್ತಿಪಟುಗಳ ಅರ್ಜಿ ತೆರವುಗೊಳಿಸಿದ ಸುಪ್ರೀಂಕೋರ್ಟ್

- Advertisement -
- Advertisement -

ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತೆರವುಗೊಳಿಸಿರುವುದಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಸುಪ್ರೀಂ ಕೋರ್ಟ್ ಪೀಠವು ಹೇಳಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ನೋಂದಣಿ ಮಾಡಬೇಕೆಂಬುದು ಕುಸ್ತಿಪಟುಗಳ ಮನವಿಯ ಮುಖ್ಯ ಉದ್ದೇಶವಾಗಿತ್ತು.

“ಈ ಪ್ರಕ್ರಿಯೆಗಳ ವ್ಯಾಪ್ತಿಯನ್ನು ಗಮನದಲ್ಲಿಟ್ಟುಕೊಂಡು, ನಾವು ಈ ಹಂತದಲ್ಲಿ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸುತ್ತೇವೆ. ಅರ್ಜಿದಾರರು ಬೇರೇನಾದರೂ ಬಯಸಿದರೆ, ಅವರು ಮ್ಯಾಜಿಸ್ಟ್ರೇಟ್ ಅಥವಾ ಅದರ ಅಧಿಕಾರ ವ್ಯಾಪ್ತಿಯಲ್ಲಿರುವ ಹೈಕೋರ್ಟ್ ಅನ್ನು ಸಂಪರ್ಕಿಸಬಹುದು” ಎಂದು ಸಿಜೆಐ ಡಿವೈ ಚಂದ್ರಚೂಡ್ ಸೂಚಿಸಿದ್ದಾರೆ.

ಅಪ್ರಾಪ್ತ ಸಂತ್ರಸ್ತೆ ಸೇರಿದಂತೆ ಏಳು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರಮುಖ ಕುಸ್ತಿಪಟುಗಳು ಹಲವು ದಿನಗಳಿಂದ ನವದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕೋರ್ಟ್ ನಿರ್ದೇಶನದಂತೆ ದೂರುದಾರರಿಗೆ ಭದ್ರತೆ ಒದಗಿಸಲಾಗಿದೆ ಪೊಲೀಸರು ತಿಳಿಸಿದ್ದಾರೆ.

“ಅಪ್ರಾಪ್ತ ದೂರುದಾರರಿಗೆ ಸೂಕ್ತ ಭದ್ರತೆ ಒದಗಿಸಲಾಗಿದೆ. ಇತರ ದೂರುದಾರರಿಗೆ ಬಂದಿರುವ ಬೆದರಿಕೆಯ ಮೌಲ್ಯಮಾಪನ ನಡೆಸಲಾಗಿದೆ. ಮೌಲ್ಯಮಾಪನದ ಪ್ರಕಾರ ಯಾವುದೇ ಬೆದರಿಕೆ ಇಲ್ಲ. ಆದರೆ ಅವರಿಗೆ ಭದ್ರತೆ ಒದಗಿಸುವುದು ಸಮಂಜಸವೆಂದು ಕಂಡುಬಂದಿದೆ. ಎಲ್ಲಾ ದೂರುದಾರರಿಗೆ ಭದ್ರತೆ ಒದಗಿಸಲಾಗಿದೆ’’ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ತನಿಖೆ ನಡೆಯುತ್ತಿದೆ ಮತ್ತು ದೂರುದಾರರನ್ನು ಪೊಲೀಸರು ಪರಿಶೀಲಿಸಿದ್ದಾರೆ ಎಂದು ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ದೂರುದಾರರ ಪರ ವಕೀಲರಾದ ಹಿರಿಯ ವಕೀಲ ನರೇಂದ್ರ ಹೂಡಾ ಅವರು ಪ್ರತಿಕ್ರಿಯಿಸಿ, “ಎಫ್‌ಐಆರ್ ದಾಖಲಿಸುವಲ್ಲಿ ಮತ್ತು ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ’’ ಎಂದು ಆರೋಪಿಸಿದ್ದಾರೆ.

‘’ಟಿ.ವಿ. ಚಾನೆಲ್ಗಳಲ್ಲಿ ಆರೋಪಿಯು ದೂರುದಾರರ ಹೆಸರು ಬಹಿರಂಗಪಡಿಸಿದ್ದಾನೆ. ಇದು ಕಾನೂನಿಗೆ ವಿರುದ್ಧವಾಗಿದೆ’’ ಎಂದು ಅವರು ವಾದಿಸಿದ್ದಾರೆ.

ದೆಹಲಿ ಪೊಲೀಸರ ನಡವಳಿಕೆಯಿಂದ ಬೇಸತ್ತಿರುವ ದೂರುದಾರರು, ಸುಪ್ರೀಂ ಪೀಠವೇ ತನಿಖೆಯನ್ನು ಮೇಲ್ವಿಚಾರಣೆ ಮಾಡುವಂತೆ ಕೋರಿದರು. ಆದರೆ ಪೀಠವು ಅವರ ಮನವಿಯನ್ನು ತಿರಸ್ಕರಿಸಿತು, ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದಂತೆ ಹೈಕೋರ್ಟ್‌ಗೆ ಹೋಗಬಹುದು ಎಂದು ಸ್ಪಷ್ಟಪಡಿಸಿದೆ.

ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಸ್ತಿಪಟುಗಳು ಸುಪ್ರೀಂ ಕೋರ್ಟ್‌ಗೆ ತೆರಳಿದ ನಂತರ, ದೆಹಲಿ ಪೊಲೀಸರು ಏಪ್ರಿಲ್ 28 ರಂದು ಕುಸ್ತಿಪಟುಗಳ ದೂರಿನ ಆಧಾರದ ಮೇಲೆ ಬ್ರಿಜ್ ಭೂಷಣ್ ವಿರುದ್ಧ ಎಫ್‌ಐಆರ್ ದಾಖಲಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು. ನಂತರ ಪೊಲೀಸರು ಆತನ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದರು ಮತ್ತು ಎಫ್‌ಐಆರ್‌ಗಳ ಒಂದು ಪ್ರತಿಯನ್ನು ಕುಸ್ತಿಪಟುಗಳಿಗೆ ಹಸ್ತಾಂತರಿಸಲಾಯಿತು.

ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪೊಲೀಸ್ ಉಪ ಆಯುಕ್ತ (ನವದೆಹಲಿ) ಪ್ರಣವ್ ತಯಾಲ್, “ಮೊದಲನೆಯದು ಅಪ್ರಾಪ್ತ ಸಂತ್ರಸ್ತೆಯ ಆರೋಪಗಳಿಗೆ ಸಂಬಂಧಿಸಿದೆ, ಇದನ್ನು ಪೋಕ್ಸೊ ಕಾಯ್ದೆಯಡಿಯಲ್ಲಿ ಮತ್ತು ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಜೊತೆಯಲ್ಲಿ ದಾಖಲಿಸಲಾಗಿದೆ’’ ಎಂದಿದ್ದಾರೆ.

ಮುಂದುವರಿದು, “ಎರಡನೇ ಎಫ್‌ಐಆರ್ ಅನ್ನು ಇತರ, ವಯಸ್ಕ ದೂರುದಾರರು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ದಾಖಲಿಸಲಾಗಿದೆ. ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ  ಕ್ರಮ ಜರುಗಿಸಲಾಗಿದೆ’’ ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...