Homeಮುಖಪುಟಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ - ಪ್ರಿಯಾಂಕ...

ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್‌ ಅಂಟಿಸಿ, ದಯವಿಟ್ಟು ಬಸ್‌ಗಳಿಗೆ ಅನುಮತಿಸಿ – ಪ್ರಿಯಾಂಕ ಗಾಂಧಿ

- Advertisement -
- Advertisement -

ಕಳೆದ 24 ಗಂಟೆಗಳಿಂದ ಬಸ್‌ಗಳು ಉತ್ತರ ಪ್ರದೇಶದ ಗಡಿಯಲ್ಲಿ ಕಾಯುತ್ತಿವೆ. ಆ ಬಸ್‌ಗಳಲ್ಲಿ ಬೇಕಾದರೆ ಬಿಜೆಪಿ ಪಕ್ಷದ ಧ್ವಜ ಮತ್ತು ಪೋಸ್ಟರ್ ಅಂಟಿಸಿ. ನೀವೆ ಬಸ್‌ ವ್ಯವಸ್ಥೆ ಮಾಡಿರುವುದು ಎಂದು ಪ್ರಚಾರ ಮಾಡಿ. ದಯವಿಟ್ಟು ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿ ಎಂದು ಕಾಂಗ್ರೆಸ್‌ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಯೋಗಿ ಆದಿತ್ಯನಾಥ್‌ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ರಾಜಸ್ಥಾನದ 1000 ಬಸ್‌ಗಳು ಉತ್ತರ ಪ್ರದೇಶದ ವಲಸೆ ಕಾರ್ಮಿಕರನ್ನು ಹೊತ್ತುತಂದಿದ್ದು ಉ.ಪ್ರ ಗಡಿಯಲ್ಲಿ ಸಾಲಾಗಿ ನಿಂತಿವೆ. ಈ ವಿಚಾರಕ್ಕೆ ಪ್ರಿಯಾಂಕ ಗಾಂಧಿ ಮತ್ತು ಯೋಗಿ ಆದಿತ್ಯನಾಥ್‌ ಸರ್ಕಾರದ ನಡುವೆ ತಿಕ್ಕಾಟ ಆರಂಭವಾಗಿದೆ.

ಮೊದಲಿಗೆ ಪ್ರಿಯಾಂಕ ಗಾಂಧಿಯವರು ಗೌರವಾನ್ವಿತ ಮುಖ್ಯಮಂತ್ರಿಗಳೆ, ನಾನು ನಿಮ್ಮಲ್ಲಿ ವಿನಂತಿಸುತ್ತಿದ್ದೇನೆ, ಇದು ರಾಜಕೀಯದ ಸಮಯವಲ್ಲ. ನಮ್ಮ ಬಸ್ಸುಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ಕಾರ್ಮಿಕರು ಮತ್ತು ವಲಸಿಗರು ಆಹಾರ ಅಥವಾ ನೀರಿಲ್ಲದೆ ತಮ್ಮ ಮನೆಗಳ ಕಡೆಗೆ ನಡೆಯುತ್ತಿದ್ದಾರೆ. ನಾವು ಅವರಿಗೆ ಸಹಾಯ ಮಾಡೋಣ ನಮ್ಮ ಬಸ್ಸುಗಳಿಗೆ ಅನುಮತಿ ನೀಡಿ” ಎಂದು ಅವರು ಹೇಳಿದ್ದರು.

ಮತ್ತೊಂದು ಟ್ವೀಟ್‌ನಲ್ಲಿ, “ನಮ್ಮ ಬಸ್‌ಗಳು ಗಡಿಯಲ್ಲಿ ನಿಂತಿವೆ. ಸಾವಿರಾರು ರಾಷ್ಟ್ರ ನಿರ್ಮಾಣಕಾರ ಕಾರ್ಮಿಕರು ಮತ್ತು ವಲಸಿಗರು ಬಿಸಿಲಿನಲ್ಲಿ ನಡೆಯುತ್ತಿದ್ದಾರೆ. ಯೋಗಿ ಆದಿತ್ಯನಾಥ್ ಜಿ ಅವರಿಗೆ ಅನುಮತಿ ನೀಡಿ. ನಮ್ಮ ಸಹೋದರ ಸಹೋದರಿಯರಿಗೆ ಸಹಾಯ ಮಾಡೋಣ” ಎಂದು ಅವರು ಹೇಳಿದ್ದಾರೆ.

ಆನಂತರ ಉತ್ತರ ಪ್ರದೇಶ ಸರ್ಕಾರವು ಸಾವಿರ ಬಸ್‌ಗಳು ಉತ್ತರ ಪ್ರದೇಶ ಪ್ರವೇಶಿಸಲು ಅನುಮತಿ ನೀಡಿತ್ತು. ಆದರೆ ನಿನ್ನೆ ಸಂಜೆಯಿಂದ ಉತ್ತರ ಪ್ರದೇಶದ ಗಡಿ ಪ್ರವೇಶಿಸಲು ಸರ್ಕಾರ ಮೀನಾಮೇಷ ಎಣಿಸುತ್ತಿದ್ದು ಬಸ್‌ಗಳಿಗೆ ಅವಕಾಶ ಕೊಟ್ಟಿಲ್ಲ. ಈ ನಡುವೆ ಕಾಂಗ್ರೆಸ್‌ ಪಕ್ಷ ನೀಡಿದ್ದ ಬಸ್‌ಗಳ ಸಂಪೂರ್ಣ ವಿವರದಲ್ಲಿ 879 ಬಸ್‌ಗಳು ಮಾತ್ರ ಇದ್ದು ಉಳಿದವರು ಬೈಕ್‌, ಆಟೋಗಳಾಗಿವೆ. ಸುಳ್ಳು ಮಾಹಿತಿ ನೀಡಿ ಕಾಂಗ್ರೆಸ್‌ ರಾಜಕೀಯ ಮಾಡುತ್ತಿದೆ ಎಂದು ಯೋಗಿ ಸರ್ಕಾರ ಆರೋಪಿಸಿದೆ.

ಇದರಿಂದ ಕುಪಿತಗೊಂಡಿರುವ ಪ್ರಿಯಾಂಕ ಗಾಂಧಿಯವರು “ಯುಪಿ ಸರ್ಕಾರ ಎಲ್ಲ ಮಿತಿಗಳನ್ನು ಮೀರಿದೆ. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಹೋಗಲಾಡಿಸಲು ಮತ್ತು ಅಸಹಾಯಕ ವಲಸೆ ಕಾರ್ಮಿಕರಿಗೆ ಸೇವೆ ಸಲ್ಲಿಸಲು ಅವಕಾಶವಿದ್ದಾಗ ಅದು ಎಲ್ಲ ಅಡೆತಡೆಗಳನ್ನು ಉಂಟುಮಾಡಿದೆ. ಯೋಗಿ ಆದಿತ್ಯನಾಥ್ ಜಿ ನೀವು ಈ ಬಸ್‌ಗಳಲ್ಲಿ ಬಿಜೆಪಿ ಧ್ವಜಗಳು ಮತ್ತು ನಿಮ್ಮ ಪೋಸ್ಟರ್ ‌ಗಳನ್ನು ಬಳಸಬಹುದು, ಆದರೆ ನಮ್ಮ ಸೇವೆಯ ಭಾವನೆಗಳನ್ನು ತಿರಸ್ಕರಿಸಬೇಡಿ ”ಎಂದು ಅವರು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ನಾವು ನಮ್ಮ ಜವಾಬ್ದಾರಿಗಳನ್ನು ಅರ್ಥಮಾಡಿಕೊಳ್ಳಬೇಕಾಗಿದೆ. ವಲಸೆ ಕಾರ್ಮಿಕರು ತಮ್ಮ ಸ್ಥಳೀಯ ರಾಜ್ಯಗಳಿಗೆ ಮರಳಲು ಕಾಯುತ್ತಿದ್ದಾರೆ. ಅವರು ಕೇವಲ ಭಾರತೀಯರಲ್ಲ, ನಮ್ಮ ಭಾರತದ ಬೆನ್ನೆಲುಬು. ದೇಶವು ಅವರ ರಕ್ತ ಮತ್ತು ಬೆವರಿನ ಮೇಲೆ ನಡೆಯುತ್ತದೆ. ಇದು ಎಲ್ಲರ ಜವಾಬ್ದಾರಿ. ಇದು ರಾಜಕೀಯದ ಸಮಯವಲ್ಲ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ.

अजय बिष्ट सरकार की घटिया राजनीति पर खरी बात

अजय बिष्ट सरकार की घटिया राजनीति पर खरी बात

Posted by Indian National Congress on Wednesday, May 20, 2020

ಅಲ್ಲದೇ ಕಾಂಗ್ರೆಸ್‌ ಪಕ್ಷವು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ಬಸ್‌ಗಳಲ್ಲಿರುವ ವಲಸೆ ಕಾರ್ಮಿಕರು “ಇಲ್ಲಿರುವವೆಲ್ಲ ಬಸ್‌ಗಳೆ ಹೊರತು, ಬೈಕ್‌ ಆಟೋಗಳಲ್ಲ. ಒಂದು ದಿನದಿಂದ ಬಸ್‌ನಲ್ಲಿ ಕೂಗು ಕಾಯುತ್ತಿದ್ದೇವೆ. ದಯವಿಟ್ಟು ಅನುಮತಿ ಕೊಟ್ಟು ನಾವು ನಮ್ಮ ಊರುಗಳನ್ನು ಸೇರಿಕೊಳ್ಳಲು ಅವಕಾಶ ಮಾಡಿಕೊಡಿ” ಎಂದು ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಲಸೆ ಕಾರ್ಮಿಕರಿಗಾಗಿ 500 ಬಸ್‌ ವ್ಯವಸ್ಥೆ ಮಾಡಿದ ಪ್ರಿಯಾಂಕಾ ಗಾಂಧಿ : 1000 ಬಸ್ ಸಂಚಾರಕ್ಕೆ ಒಪ್ಪಿಗೆ ಕೊಟ್ಟ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...