Homeಮುಖಪುಟಫೇಸ್‌ಬುಕ್ - ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಫೇಸ್‌ಬುಕ್ – ಬಿಜೆಪಿ ನಂಟು: ಸಮಿತಿ ಅಧ್ಯಕ್ಷ ಶಶಿ ತರೂರ್ ವಿರುದ್ಧ ಬಿಜೆಪಿ ಸಂಸದನ ಪತ್ರ

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದ್ದಾರೆ.

- Advertisement -
- Advertisement -

ಫೇಸ್‌ಬುಕ್ – ಬಿಜೆಪಿ ನಂಟು ಕುರಿತು ಅಮೆರಿಕ ಪತ್ರಿಕೆ ವಾಲ್‌ಸ್ಟ್ರೀಟ್‌ ಜರ್ನಲ್ ವರದಿಯಿಂದಾಗಿ ಭುಗಿಲೆದ್ದಿರುವ ವಿವಾದ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ಕುರಿತು ಫೇಸ್‌ಬುಕ್ ಅನ್ನು ಪ್ರಶ್ನಿಸುತ್ತೇವೆ ಎಂದು ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷ ಶಶಿ ತರೂರ್ ಹೇಳಿಕೆ ಹಿನ್ನೆಲೆಯಲ್ಲಿ ತರೂರ್ ವಿರುದ್ಧ ಸ್ಪೀಕರ್ ದೂರು ನೀಡಲು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಮುಂದಾಗಿದ್ದಾರೆ.

ಫೇಸ್‌ಬುಕ್‌ನ ಕಟೆಂಟ್‌ ಪಾಲಿಸಿ ನಿಯಮಗಳು ಆಡಳಿತರೂಢ ಬಿಜೆಪಿ ಪರವಾಗಿವೆ. ಬಿಜೆಪಿ ಮತ್ತು ಹಿಂದೂತ್ವ ನಾಯಕರು ದ್ವೇಷ ಭಾಷಣಗಳು ತನ್ನ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದರೂ ಕೂಡ ಫೇಸ್ ಬುಕ್ ಕ್ರಮ ತೆಗೆದುಕೊಳ್ಳುತ್ತಿಲ್ಲ. ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು “ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ” ಎಂದು ಫೇಸ್‌ಬುಕ್‌ನ ಹಿರಿಯ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಶಶಿ ತರೂರ್‌ರವರ ಫೇಸ್‌ಬುಕ್‌ ಅನ್ನು ಪ್ರಶ್ನಿಸುವ ನಿರ್ಣಯವನ್ನು ಸಂಸದೀಯ ಸ್ಥಾಯಿ ಸಮಿತಿಯ ಭಾಗವಾಗಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮೊಹುವ ಮೊಯಿತ್ರ ಬೆಂಬಲಿಸಿದರೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ತೀವ್ರವಾಗಿ ವಿರೋಧಿಸಿದ್ದಾರೆ. ಹಾಗೆ ಮಾಡಲು ಅವರಿಗೆ ಅಧಿಕಾರವಿಲ್ಲ ಎಂದು ದುಬೆ ವಾದಿಸಿದ್ದಾರೆ.

ಮಾಹಿತಿ ತಂತ್ರಜ್ಞಾನ ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರ ಅಭಿಪ್ರಾಯ ಪಡೆಯದೇ ಏಕಪಕ್ಷಿಯವಾಗಿ ಫೇಸ್‌ಬುಕ್ ಅನ್ನು ಪ್ರಶ್ನಿಸುವ ನಿರ್ಣಯ ಘೋಷಿಸಿದ ಶಶಿ ತರೂರ್ ವಿರುದ್ಧ ಲೋಕಸಭಾ ಸ್ವೀಕರ್ ಓಂ ಬಿರ್ಲಾರವರಿಗೆ ಪತ್ರ ಬರೆಯುವುದಾಗಿ ದುಬೆ ತಿಳಿಸಿದ್ದಾರೆ.

ಕರ್ನಾಟಕದ ಸಂಸದ ಅನಂತ್ ಕುಮಾರ್ ಹೆಗಡೆ ಪ್ರಚೋದನಾಕಾರಿ ಭಾಷಣಗಳಿಗೆ ಹಲವು ಬಾರಿ ವಿವಾದಕ್ಕೆ ಈಡಾಗಿದ್ದಾರೆ. ಅವರ ಮುಸ್ಲಿಂ ವಿರೋಧಿ ಪೋಸ್ಟ್‌ಗಳನ್ನು ತೆಗೆದುಹಾಕಲು ಫೇಸ್‌ಬುಕ್ ಮುಂದಾಗಿರಲಿಲ್ಲ. ಹಾಗೆಯೇ ತೆಲಂಗಾಣದ ಬಿಜೆಪಿ ಶಾಸಕ ಟಿ.ರಾಜಾಸಿಂಗ್ ಹಲವು ದ್ವೇ‍ಷ ಭಾಷಣಗಳನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ. ಆದರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಫೇಸ್‌ಬುಕ್ ಭಾರತದ ಉನ್ನತ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕ ಅಧಿಕಾರಿಣಿ ಅಂಖಿ ದಾಸ್ ನಿರಾಕರಿಸಿದ್ದಾರೆ. ಆಡಳಿತಾರೂಢ ಪಕ್ಷದೊಂದಿಗಿರುವ ಸಂಬಂಧಕ್ಕೆ ಧಕ್ಕೆಯಾದೀತು ಎಂಬ ಹೆದರಿಕೆಯೇ ಇದಕ್ಕೆ ಕಾರಣ ಎಂದು ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದೆ.

ಇದನ್ನೂ ಓದಿ: ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್‌ಗೆ ಜೀವಬೆದರಿಕೆ: ದೂರು ದಾಖಲು

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ. ಅವರು ಪ್ರತಿನಿತ್ಯ ಸುಳ್ಳು ಸುದ್ದಿಗಳು ಮತ್ತು ದ್ವೇಷಭಾಷಣವನ್ನು ಹರಡುವ ಮೂಲಕ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಿದ್ದಾರೆ. ಕೊನೆಗೂ ಅಮೆರಿಕ ಮೂಲದ ಪತ್ರಿಕೆಯೊಂದು ಫೇಸ್‌ಬುಕ್‌ ಬಗೆಗಿನ ಸತ್ಯವನ್ನು ಹೊರತೆಗೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದರು.

ನಾಗರಿಕರ ಹಕ್ಕುಗಳನ್ನು ಕಾಪಾಡುವುದು ಮತ್ತು ಸಾಮಾಜಿಕ / ಆನ್‌ಲೈನ್ ಸುದ್ದಿ ಮಾಧ್ಯಮ ವೇದಿಕೆಗಳ ದುರುಪಯೋಗವನ್ನು ತಡೆಗಟ್ಟುವುದರ ಸಾಕ್ಷಿಯಾಗಿ ಸಮಿತಿಯು ಪರಿಗಣಿಸಲ್ಪಡುತ್ತದೆ ಎಂದು ಶಶಿ ತರೂರ್ ತಿಳಿಸಿದ್ದರು.

ಇದಕ್ಕೆ ಪ್ರತಿಯಾಗಿ “ಸಂಸದೀಯ ಸಮಿತಿಯನ್ನು ತಮ್ಮ ಪಕ್ಷದ ನಾಯಕರ ಅಹಂಕಾರವನ್ನು ಪೂರೈಸಲು ರಾಜಕೀಯ ವೇದಿಕೆಯನ್ನಾಗಿ ಮಾಡಬಾರದು. ಸಮಿತಿ ಸದಸ್ಯರು ಮತ್ತು ಸ್ಪೀಕರ್‌ ರವರ ಅನುಮತಿ ಇಲ್ಲದೇ ಏನನ್ನು ಮಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿಯವರ ಕಾರ್ಯಸೂಚಿಯನ್ನು ಜಾರಿಗೊಳಿಸುವುದನ್ನು ನಿಲ್ಲಿಸಿ” ಎಂದು ಸಮಿತಿ ಸದಸ್ಯ ದುಬೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಮೊಹುವ ಮೊಯಿತ್ರಾ “ನಾನು ಕೂಡ ಸಮಿತಿಯ ಸದಸ್ಯೆ. ಅಜೆಂಡಾವನ್ನು ವರ್ಷದ ಆರಂಭದಲ್ಲಿಯೇ ಚರ್ಚಿಸಿ ಸ್ಪೀಕರ್‌ರವರ ಒಪ್ಪಿಗೆ ಪಡೆಯಲಾಗಿದೆ. ಅದನ್ನು ಯಾವಾಗ ಜಾರಿಗೊಳಿಸಬೇಕು ಎಂಬ ಅಧಿಕಾರ ಸಮಿತಿ ಅಧ್ಯಕ್ಷರಿಗಿರುತ್ತದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಾಯಕರ ದ್ವೇಷ ಭಾಷಣದ ನಿರ್ಲಕ್ಷ್ಯ ಆರೋಪ; ಫೇಸ್‌‌ಬುಕ್ ಸ್ಪಷ್ಟನೆ

ಫೇಸ್‌ಬುಕ್ ಹಿತಾಸಕ್ತಿ ಕಾಪಾಡಲು ಹೇಗೆ ಬಿಜೆಪಿ ಮೇಲಕ್ಕೆ, ಕೆಳಕ್ಕೆ ಜಿಗಿಯುತ್ತದೆ ಅಲ್ಲವೇ ಎಂದು ಮೊಯಿತ್ರಾ ಟೀಕಿಸಿದ್ದಾರೆ.

ಮೊಹುವ ಮೊಯಿತ್ರಾರವರು ಹೇಳಿರುವುದು ಸರಿ ಇದೆ. ಅಧ್ಯಕ್ಷರ ನಿರ್ಧಾರವನ್ನು ವಿರೋಧಿಸುವ ಮೂಲಕ ಸಮಿತಿಯ ಕಾರ್ಯನಿರ್ವಹಣೆಗೆ ದುಬೆ ಅಪಖ್ಯಾತಿ ತಂದಿದ್ದಾರೆ. ಅವರು ಸಾರ್ವಜನಿಕರ ಒಳಿತಿಗಾಗಿ ಸಮಿತಿ ಕೆಲಸ ಮಾಡಬಾರದು ಎಂದು ಹೇಳುತ್ತಿದ್ದಾರೆಯೆ? ಎಂದು ತರೂರ್ ವ್ಯಂಗ್ಯವಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಸಹಿ ಮಾಡಿದ ಆದೇಶದ ಮೂಲಕ ಸಾಕ್ಷಿಯನ್ನು ಕರೆಸಿಕೊಳ್ಳಬಹುದು ಮತ್ತು ಸಮಿತಿಯ ಬಳಕೆಗೆ ಅಗತ್ಯವಾದ ದಾಖಲೆಗಳನ್ನು ತಯಾರಿಸಬೇಕು ಎಂದು ದುಬೆ ಪ್ರತಿ ಉತ್ತರ ನೀಡಿದ್ದಾರೆ.

ಇದಕ್ಕೆ ಶಶಿ ತರೂರ್ ನಿಮ್ಮ ಮಾಹಿತಿಗಾಗಿ ಧನ್ಯವಾದಗಳು. ಸಮಿತಿಯ ಅಧ್ಯಕ್ಷರ ಕಾರ್ಯನಿರ್ವಹಣೆಗೆ ಯಾರು ಚ್ಯುತಿ ತಂದರು ಎಂಬುದನ್ನು ಕಾಲ ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...