Homeಮುಖಪುಟಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ...

ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

"ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ" ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

- Advertisement -
- Advertisement -

ಬಿಜೆಪಿ ನಾಯಕರ ದ್ವೇಷಭಾಷಣದ ವಿರುದ್ಧ ಕ್ರಮಕೈಗೊಳ್ಳುವಲ್ಲಿ ಪಕ್ಷಪಾತ ಮಾಡಿದ್ದರು ಎಂಬ ಆರೋಪಗಳನ್ನು ಎದುರಿಸುತ್ತಿರುವ ಫೇಸ್‌ಬುಕ್ ಕಾರ್ಯನಿರ್ವಾಹಕ ಅಧಿಕಾರಿ ಅಂಖಿದಾಸ್ ಮೇಲೆ ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ಮತ್ತೊಂದು ಗಂಭೀರ ಆರೋಪದ ವರದಿ ಮಾಡಿದೆ.

ಅದೆಂದರೆ “ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಇಂದು ಕಂಪನಿಯ ತಟಸ್ಠ ಮನೋಭಾವಕ್ಕೆ ವಿರುದ್ಧವಾದ ಕ್ರಿಯೆ ಎಂದು ಫೇಸ್‌ಬುಕ್‌ನ ಹೆಸರು ಹೇಳಲು ಇಚ್ಚಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.

ಇದನ್ನೂ ಓದಿ: ನಾಜಿ ಜರ್ಮನಿ-IBM, ಫೇಸ್‌ಬುಕ್ ಭಾರತ-BJP: ‘ಸುಮಧುರ ಬಾಂಧವ್ಯ’ದ ಕತೆ

“ಈ ಪೋಸ್ಟ್‌ಗಳನ್ನು 2012 ರಿಂದ 2014ರ ಅವಧಿಯಲ್ಲಿ ಮಾಡಲಾಗಿದ್ದು, ಭಾರತದಲ್ಲಿನ ಉದ್ಯೋಗಿಗಳಿಗಾಗಿ ವಿನ್ಯಾಸಗೊಳಿಸಲಾದ ಫೇಸ್‌ಬುಕ್ ಗ್ರೂಪ್‌ಗೆ ಇವುಗಳನ್ನು ಪೋಸ್ಟ್ ಮಾಡಲಾಗಿದೆ. ಈ ಗುಂಪಿನಲ್ಲಿ ನೂರಾರು ಉದ್ಯೋಗಿಗಳು ಇದ್ದರು ಎನ್ನಲಾಗಿದೆ.

ಹಿಂದಿನ ವರದಿಯಲ್ಲಿ, ಬಿಜೆಪಿ ಕಾರ್ಯಕರ್ತರ ನಿಯಮ ಉಲ್ಲಂಘನೆಗಳಿಗೆ ಶಿಕ್ಷೆ ನೀಡುವುದು ಅಥವಾ ಪ್ರಶ್ನಿಸುವುದು ದೇಶದ ಕಂಪನಿಯ ವ್ಯವಹಾರ ಭವಿಷ್ಯವನ್ನು ಹಾನಿಗೊಳಿಸುತ್ತದೆ ಎಂದು ಅಂಖಿ ದಾಸ್‌ ಹೇಳಿದ್ದಾಗಿ ವಾಲ್‌ಸ್ಟ್ರೀಟ್‌ ಜರ್ನಲ್ ವಿಶೇಷ ವರದಿ ಮಾಡಿತ್ತು.

ಈ ಕುರಿತು ಭಾರತದಲ್ಲಿ ದೊಡ್ಡ ವಿವಾದ ಏರ್ಪಟ್ಟಿತ್ತು. ಸೆಪ್ಟೆಂಬರ್ 2 ರಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಅಧ್ಯಕ್ಷರಾಗಿರುವ ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಲು ಫೇಸ್‌ಬುಕ್ ಇಂಡಿಯಾಗೆ ಕೇಳಲಾಗಿದೆ.

ಕಳೆದ ವಾರ, ಅಂಖಿದಾಸ್ ತನ್ನ ಫೇಸ್‌ಬುಕ್ ಪುಟದಲ್ಲಿ ಮುಸ್ಲಿಂ ವಿರೋದಿ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕಂಪನಿಯ ಮುಸ್ಲಿಂ ಉದ್ಯೋಗಿಗಳಿಗೆ ಕ್ಷಮೆಯಾಚಿಸಿದ್ದಾರೆ ಎಂದು ಬುಜ್‌ಫೀಡ್‌ ವರದಿ ಮಾಡಿದೆ. ಭಾರತದಲ್ಲಿನ ಮುಸ್ಲಿಮರನ್ನು “ಅವನತಿ ಹೊಂದಿದ ಸಮುದಾಯ”ದವರು ಎಂದ ದಾಸ್ ಅವರಿಗೆ “ಧರ್ಮದ ಶುದ್ಧತೆ ಮತ್ತು ಶರಿಯಾ ವಿಷಯದ ಅನುಷ್ಠಾನವನ್ನು ಹೊರತುಪಡಿಸಿ ಏನೂ ಇಲ್ಲ” ಎಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ಈ ಕುರಿತು ಕಂಪನಿಯ 11 ಸಹದ್ಯೋಗಿಗಳು ಫೇಸ್‌ಬುಕ್ ಜಾಗತಿಕ ನಾಯಕತ್ವಕ್ಕೆ ಪತ್ರ ಬರೆದಿದ್ದರು. ಆಗ ನಾಯಕತ್ವವು ಮುಸ್ಲಿಂ ವಿರೋಧಿ ಭಾವನೆ ವ್ಯಕ್ತವಾಗಿರುವುದನ್ನು ಒಪ್ಪಿಕೊಂಡು ಪಾರದರ್ಶಕವಾಗಿ ನೀತಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನಿಡಿತ್ತು ಎಂದು ರಾಯಿಟರ್ಸ್ ವರದಿ ಮಾಡಿತ್ತು.

ಅಂಖಿದಾಸ್‌ರವರ ಪೋಸ್ಟ್‌ಗಳನ್ನು ಆಗಿನ ಸಂದರ್ಭದಿಂದ ತೆಗೆಯಲಾಗಿದೆ. ಅವು ಪಕ್ಷಪಾತದಿಂದ ಕೂಡಿವೆ ಎನಿಸುವುದಿಲ್ಲ. ಅವರ ಹೇಳಿಕೆಗಳು ಇಡೀ ಫೇಸ್‌ಬುಕ್‌ ಅನ್ನು ಪ್ರತಿನಿಧಿಸುವುದಿಲ್ಲ. ನಾವು ರಾಜಕೀಯ ಪಕ್ಷಗಳು ನಮ್ಮ ಪ್ಲಾಟ್‌ಫಾರಂ ಅನ್ನು ಬಳಸುವಂತೆ ಉತ್ತೇಜಿಸುತ್ತೇವೆ ಅಷ್ಟೇ ಎಂದು ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ತಿಳಿಸಿದ್ದಾರೆ.

ತನ್ನ ಸಾಮಾಜಿಕ ಮಾಧ್ಯಮ ವೇದಿಕೆಯು ದ್ವೇಷದ ಮಾತು ಮತ್ತು ಹಿಂಸಾಚಾರವನ್ನು ಪ್ರಚೋದಿಸುವ ವಿಷಯವನ್ನು ನಿಷೇಧಿಸುತ್ತದೆ. ರಾಜಕೀಯ ಸಂಬಂಧಗಳನ್ನು ಪರಿಗಣಿಸದೆ ಈ ನೀತಿಗಳನ್ನು ಜಾಗತಿಕವಾಗಿ ಜಾರಿಗೊಳಿಸುತ್ತದೆ ಎಂದು ನಂತರ ಫೇಸ್‌ಬುಕ್ ಹೇಳಿತ್ತು.


ಇದನ್ನೂ ಓದಿ: ಫೇಸ್‌ಬುಕ್‌ನ “ಹೇಟ್‌ಸ್ಪೀಚ್” ನಿಯಮಗಳು ಮತ್ತು ಭಾರತದ ರಾಜಕೀಯ: ವಾಲ್‌ಸ್ಟ್ರೀಟ್‌ ಜರ್ನಲ್ ಲೇಖನದ ಅನುವಾದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...