Homeಅಂತರಾಷ್ಟ್ರೀಯಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ಮ್ಯಾನ್ಮಾರ್ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ: ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪ

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

- Advertisement -
- Advertisement -

2017ರಲ್ಲಿ ನಡೆದ ಮ್ಯಾನ್ಮಾರ್‌ ಹಿಂಸಾಚಾರದಲ್ಲಿ ಪ್ರಮುಖ ಸಾಮಾಜಿಕ ಜಾಲತಾಣ ಫೇಸ್‌ಬುಕ್ ದೊಡ್ಡ ಪಾತ್ರವಹಿಸಿದೆ. ಇದರಿಂದ ಸಾವಿರಾರು ರೋಹಿಂಗ್ಯಾಗಳು ನಿರಾಶ್ರಿತರಾಗಬೇಕಾಯಿತು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆ ಆರೋಪಿಸಿವೆ.

ಆ ರೋಹಿಂಗ್ಯಾ ನಿರಾಶ್ರಿತರಿಗೆ ನ್ಯಾಯ ದೊರಕಿಸಲು ಫೇಸ್‌ಬುಕ್ ಮುಂದಾಗಬೇಕು ಎಂದು ರೋಹಿಂಗ್ಯಾ ಹಕ್ಕುಗಳ ಸಂಘಟನೆಗಳು ಭಾನುವಾರ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿವೆ.

ವಾಯ್ಸ್ ಆಫ್ ರೋಹಿಂಗ್ಯಾ ಪ್ರತಿನಿಧಿಗಳು, ಅರಾಕನ್ ರೋಹಿಂಗ್ಯಾ ಸೊಸೈಟಿ ಫಾರ್ ಪೀಸ್ ಅಂಡ್ ಹ್ಯೂಮನ್ ರೈಟ್ಸ್, ರೋಹಿಂಗ್ಯಾ ಯೂತ್ ಫಾರ್ ಲೀಗಲ್ ಆಕ್ಷನ್ ಮತ್ತು ರೋಹಿಂಗ್ಯಾ ವುಮೆನ್ ಫಾರ್ ಜಸ್ಟೀಸ್ ಅಂಡ್ ಪೀಸ್ ಸಂಘಟನೆಗಳು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಮತ್ತು ಅವರ ಸಹೋದ್ಯೋಗಿ ಅಲೆಕ್ಸ್ ವರೋಫ್ಕಾ ಅವರೊಂದಿಗೆ ದೂರವಾಣಿ ಕರೆ ಮೂಲಕ ಮಾತನಾಡಿ ಒತ್ತಾಯಿಸಿದ್ದಾರೆ.

“ಮ್ಯಾನ್ಮಾರ್‌ನಲ್ಲಿ ನಡೆದ ಹಿಂಸಾಚಾರದ ನಂತರ ನಾವು ಮ್ಯಾನ್ಮಾರ್‌ನಿಂದ ಬಾಂಗ್ಲಾದೇಶದ ಕಾಕ್ಸ್ ಬಜಾರ್‌ಗೆ ವಲಸೆ ಹೋಗಬೇಕಾಯಿತು. ಈ ಹಿಂಸಾಚಾರದಲ್ಲಿ ಫೇಸ್‌ಬುಕ್ ಪಾತ್ರವಿದೆ. ಈಗ, ನಮಗೆ ನ್ಯಾಯ ಪಡೆಯಲು ಸಹಾಯ ಮಾಡುವುದು ಮತ್ತು ನಿರಾಶ್ರಿತರ ಶಿಬಿರದಲ್ಲಿ ನಮ್ಮ ಜೀವನವನ್ನು ಸುಧಾರಿಸುವಂತೆ ಮಾಡುವುದು ಫೇಸ್‌ಬುಕ್‌ನ ಕರ್ತವ್ಯ” ಎಂದು ಅವರು ಒತ್ತಾಯಿಸಿದ್ದಾರೆ.

ಅಂತರರಾಷ್ಟ್ರೀಯ ನ್ಯಾಯ ಕಾರ್ಯವಿಧಾನಗಳು ನಮಗೆ ಸಾಕಷ್ಟು ಸಹಾಯ ಮಾಡಿಲ್ಲ. ಹಾಗಾಗಿ ಫೇಸ್‌ಬುಕ್‌ ತನ್ನಲಿರುವ ಮಾಹಿತಿಯನ್ನು ಅವರೊಂದಿಗೆ ಹಂಚಿಕೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

“ಕಾನೂನು ಪ್ರಕರಣಗಳಲ್ಲಿ ಬಳಸಬಹುದಾದ ಮಾಹಿತಿಗಳ ಕುರಿತು ಮ್ಯಾನ್ಮಾರ್‌ನ ಸ್ವತಂತ್ರ ತನಿಖಾ ಕಾರ್ಯವಿಧಾನದೊಂದಿಗೆ ಫೇಸ್‌ಬುಕ್ ಕಾರ್ಯನಿರ್ವಹಿಸುತ್ತಿದೆ ಎಂದು ಸಿಸ್ಸನ್ಸ್ ನಮಗೆ ಮಾಹಿತಿ ನೀಡಿದ್ದಾರೆ” ಎಂದು ರೋಹಿಂಗ್ಯಾ ಪ್ರತಿನಿಧಿಗಳು ಹೇಳಿದ್ದಾರೆ.

ನಿರಾಶ್ರಿತರ ಶಿಬಿರಗಳಲ್ಲಿನ ಸೇವೆಗಳು ಮತ್ತು ಚಟುವಟಿಕೆಗಳಿಗೆ ಉದಾ ಯುವಜನರು ಮತ್ತು ಹಿರಿಯರಿಗೆ ಶಿಕ್ಷಣ ಮತ್ತು ತರಬೇತಿಯನ್ನು ವ್ಯವಸ್ಥೆಗೊಳಿಸಲು ಫೇಸ್‌ಬುಕ್ ಹಣಕಾಸಿನ ನೆರವು ನೀಡುವಂತೆ ಸಂಘಟನೆಗಳು ಮನವಿ ಮಾಡಿವೆ.

“ಹಿಂಸಾತ್ಮಕ ದ್ವೇಷದ ಮಾತನ್ನು ಎದುರಿಸಲು ಫೇಸ್‌ಬುಕ್ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷವಾಗಿ ನವೆಂಬರ್ 8 ರಂದು ನಡೆಯುವ ಚುನಾವಣೆಗಳ ಸಂದರ್ಭದಲ್ಲಿ ಜಾಗರೂಕರಾಗಿದ್ದೇವೆ ಎಂದು ಫೇಸ್‌ಬುಕ್‌ನ ಮಾನವ ಹಕ್ಕುಗಳ ನಿರ್ದೇಶಕ ಮಿರಾಂಡಾ ಸಿಸ್ಸನ್ಸ್ ಹೇಳಿದ್ದಾರೆ.

ಯುಎನ್ ನಿರಾಶ್ರಿತರ ಸಂಸ್ಥೆ (UNHRC) ಕಳೆದ ವಾರ ಅಂತರರಾಷ್ಟ್ರೀಯ ಸಮುದಾಯವು ನಿರಾಶ್ರಿತ ಮತ್ತು ಸ್ಥಳಾಂತರಗೊಂಡವರಿಗೆ ತನ್ನ ಸಹಾಯ ನೀಡಬೇಕೆಂದು ಮನವಿ ಮಾಡಿದೆ.

UNHRC ವಕ್ತಾರ ಆಂಡ್ರೆಜ್ ಮಹೇಸಿಕ್, ಯುಎನ್ ನಿರಾಶ್ರಿತರ ಸಂಸ್ಥೆ ಮತ್ತು ಬಾಂಗ್ಲಾದೇಶ ಸರ್ಕಾರವು ಪ್ರತ್ಯೇಕವಾಗಿ 860,000 ರೋಹಿಂಗ್ಯಾ ನಿರಾಶ್ರಿತರನ್ನು ಕಾಕ್ಸ್ ಬಜಾರ್ ವಸಾಹತುಗಳಲ್ಲಿ ದಾಖಲಿಸಿಕೊಂಡಿದೆ ಎಂದು ಹೇಳಿದ್ದಾರೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ನೋಂದಾಯಿತ 10 ರೋಹಿಂಗ್ಯಾ ನಿರಾಶ್ರಿತರಲ್ಲಿ ದೇಶವು ಈಗ 9ಜನರ ಆತಿಥ್ಯ ವಹಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ನೀರಿಗೆ ಹಾರಿದ ಮಲೇಷ್ಯಾದ 24 ರೋಹಿಂಗ್ಯಾ ವಲಸಿಗರು! ಬದುಕಿದ್ದ ಒಬ್ಬ ಮಾತ್ರ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...