Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...