Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....