Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...