Homeಮುಖಪುಟದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ದೆಹಲಿ ಅಲ್ಪಸಂಖ್ಯಾತರ ಆಯೋಗ ರಚಿಸಿದ್ದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರ ಭಾಷಣವನ್ನು ಮುಸ್ಲಿಂ ವಿರೋಧಿ, ಹಿಂಸಾಚಾರಕ್ಕೆ ಪ್ರಚೋದನಕಾರಿ ಎಂದು ಗುರುತಿಸಿದೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿಯಾಗಬೇಕು ಎಂದು ಶಾಂತಿ ಮತ್ತು ಸಾಮರಸ್ಯದ ಸಭೆಯಲ್ಲಿ ದೆಹಲಿ ಶಾಸಕಾಂಗ ಸಮಿತಿಯ ವರದಿ ತಿಳಿಸಿದೆ.

ದೆಹಲಿ ಗಲಭೆಗಳ ಕುರಿತು ಸತ್ಯಾಸತ್ಯತೆಗಳನ್ನು ಕಂಡುಹಿಡಿಯಲು ದೆಹಲಿ ಅಲ್ಪಸಂಖ್ಯಾತರ ಆಯೋಗ ರಚಿಸಿದ್ದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಷಣವನ್ನು ಮುಸ್ಲಿಂ ವಿರೋಧಿ, ಹಿಂಸಾಚಾರಕ್ಕೆ ಪ್ರಚೋದನಕಾರಿ ಎಂದು ಗುರುತಿಸಿದೆ.

ಫೆಬ್ರವರಿ 24-25ರಂದು ಅಮೆರಿಕಾ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ “ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು.

ಇದನ್ನೂ ಓದಿ; ದೆಹಲಿ ಹಿಂಸಾಚಾರಕ್ಕೆ ಪ್ರಚೋದನೆ: BJPಯ ಕಪಿಲ್‌ ಮಿಶ್ರಾ ವಿರುದ್ಧ ದೂರು ದಾಖಲು

ವಾಲ್ ಸ್ಟ್ರೀಟ್ ಜರ್ನಲ್ ವರದಿಯಂತೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಫೇಸ್‌ಬುಕ್‌ನಲ್ಲಿ ಕಾರ್ಯನಿರ್ವಹಿಸಿದ್ದ ಅಂಖಿದಾಸ್ ದ್ವೇಷ ಭಾಷಣಗಳನ್ನು ಮಾಡುವ ಕನಿಷ್ಟ ಮೂವರು ಬಿಜೆಪಿ ನಾಯಕರನ್ನು ರಕ್ಷಿಸಿದ್ದು, ಅವರಲ್ಲಿ ಕಪಿಲ್ ಮಿಶ್ರಾ ಕೂಡ ಒಬ್ಬರಾಗಿದ್ದಾರೆ.

ಹಿಂಸಾಚಾರ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮಾರ್ಚ್ ತಿಂಗಳಲ್ಲಿ ಶಾಂತಿ ಮತ್ತು ಸಾಮರಸ್ಯ ಸಮಿತಿ ರಚಿಸಿತ್ತು. ಈ ಸಮಿತಿಯು ಸೌರಭ್ ಭಾರದ್ವಾಜ್, ಅತಿಶಿ, ರಾಘವ್ ಚಾಡ್ಡಾ, ಅಬ್ದುಲ್ ರೆಹಮಾನ್, ಅಜಯ್ ಕುಮಾರ್ ಮಹಾವರ್, ಬಿ.ಎಸ್.ಜೋನ್, ದಿಲೀಪ್ ಪಾಂಡೆ, ಜಮೈಲ್ ಸಿಂಗ್ ಮತ್ತು ಕುಲದೀಪ್ ಕುಮಾರ್‌ರನ್ನು ಒಳಗೊಂಡಿತ್ತು. ಇದರಲ್ಲಿ ಬಹಳಷ್ಟು ಜನ ಆಪ್‌ ಶಾಸಕರಾಗಿದ್ದಾರೆ.

ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಬಳಿಕ ಎಚ್ಚೆತ್ತ ಶಾಂತಿ ಮತ್ತು ಸಾಮರಸ್ಯ ಸಮಿತಿ, ಅಂಖಿದಾಸ್ ಸೇರಿದಂತೆ ಫೇಸ್‌ಬುಕ್ ಅಧಿಕಾರಿಗಳನ್ನು ಕರೆಸಿ ಭಾರತದಲ್ಲಿ ದ್ವೇಷದ ವಿಷಯಗಳನ್ನು ಹರಡುವ ಬಗ್ಗೆ ವಿಚಾರಣೆ ನಡೆಸುವುದಾಗಿ ಘೋಷಿಸಿತ್ತು.

ದೆಹಲಿ ಹಿಂಸಾಚಾರದ ಬಗ್ಗೆ ಪರಿಶೀಲಿಸಲು ಸಮಿತಿಯ ಇಬ್ಬರು ಸದಸ್ಯರು  ಆಗಸ್ಟ್ 25 ರಂದು ಪರ್ತಕರ್ತರ ಜೊತೆಗೆ ಮಾತನಾಡಿದ್ದಾರೆ.  ಅವರಲ್ಲಿ “ದಿ ರಿಯಲ್ ಫೇಸ್ ಆಫ್ ಫೇಸ್‌ಬುಕ್‌ ಇನ್ ಇಂಡಿಯಾ” ದ ಸಹ ಲೇಖಕ ಪರಂಜೋಯ್ ಠಾಕುರ್ತಾ ಕಳೆದ 6-7 ವರ್ಷಗಳಲ್ಲಿ ನಡೆದ ಹತ್ಯೆಗಳ ಹಿಂದೆ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಸೆಜ್‌ಗಳ ಕೈವಾಡವಿದೆ ಎಂದಿದ್ದಾರೆ. ಆದರೆ ಮುಖಪುಟದಲ್ಲಿ ಪೋಸ್ಟ್ ಹಾಕಿದವರ ಮೂಲವನ್ನು ಬಿಟ್ಟುಕೊಡುವುದಿಲ್ಲ ಎಂದು ಸಮಿತಿ ಬಳಿ ಹೇಳಿದ್ದಾರೆ.

ಇನ್ನು ಫೇಸ್‌ಬುಕ್ ಮಾನ್ಯತೆ ಹೊಂದಿಲ್ಲದ ನ್ಯೂಸ್ ಚಾನೆಲ್‌ಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಇವುಗಳ ಕೆಲಸ ಬರೀ ದ್ವೇಷ ಬಿತ್ತುವ, ಸುಳ್ಳನ್ನು ಆಳವಾಗಿಸಿ ಬೇರೂರಿಸುವುದೇ ಆಗಿದೆ. ಸಾಮರಸ್ಯ ಮತ್ತು ಭ್ರಾತೃತ್ವ ಬೆಳೆಸುವ ವಿಚಾರಗಳನ್ನು ತೆಗೆದುಹಾಕಿ ಕೋಮುಗಲಭೆಗೆ ಕಾರಣವಾಗುವಂತಹದನ್ನು ಪ್ರಚಾರ ಮಾಡುತ್ತದೆ ಎಂದು ಶಾಸಕಾಂಗ ಸಮಿತಿ ತಿಳಿಸಿದೆ.

ಈ ಎಲ್ಲಾ ಅಂಶಗಳನ್ನು ಇಟ್ಟುಕೊಂಡು ಪತ್ರಿಕಾಗೋಷ್ಟಿ ನಡೆಸಿದ ಸಮಿತಿಯ ರಾಘವ್ ಚಾಡ್ಡಾ ಫೇಸ್‌ಬುಕ್‌ಅನ್ನು ಸಹ ಆರೋಪಿಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.  ಫೇಸ್‌ಬುಕ್ ಇಂತಹ ಸಂದೇಶಗಳ ವಿರುದ್ಧದ ದೂರುಗಳನ್ನು ಸ್ವೀಕರಿಸುವ ಬದಲು ದೋಷಾರೋಪಣೆ ಮಾಡುವ ವಸ್ತು ಎಂದು ತಿಳಿಸುತ್ತದೆ ಎಂದು ಶಾಸಕ ರಾಘವ್ ಚಾಡ್ಡಾ ತಿಳಿಸಿದ್ದಾರೆ.


ಇದನ್ನೂ ಓದಿ:BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...