HomeಮುಖಪುಟBJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ಅಂತಾರಾಷ್ಟ್ರೀಯ ಕಂಪನಿಯೊಂದು ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ಯಾರು ಸಹಿಸುವುದಿಲ್ಲ. ಈ ಕುರಿತು ತಕ್ಷಣ ತನಿಖೆಯಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ರಾಹುಲ್ ಒತ್ತಾಯಿಸಿದ್ದಾರೆ.

- Advertisement -
- Advertisement -

ಭಾರತೀಯ ಜನತಾ ಪಾರ್ಟಿ ಚುನಾವಣೆಯಲ್ಲಿ ಗೆಲ್ಲಲ್ಲು ಫೇಸ್‌ಬುಕ್ ಇಂಡಿಯಾ ಕಾರ್ಯನಿರ್ವಾಹಕ ಅಧಿಕಾರಿ ಅಂಖಿದಾಸ್ ಹೇಗೆ ಸಹಾಯ ಮಾಡಿದರು ಎಂಬುದನ್ನು ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ಬಯಲು ಮಾಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ವಾಲ್ ಸ್ಟ್ರೀಟ್ ಜರ್ನಲ್ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದು ಪ್ರಜಾಪ್ರಭುತ್ವದ ಮತ್ತು ಸಾಮಾಜಿಕ ಸೌಹಾರ್ದದ ಮೇಲೆ ಫೇಸ್‌ಬುಕ್- ವಾಟ್ಸಾಪ್ ನಡೆಸುತ್ತಿರುವ ದಾಳಿ. ಇದನ್ನು ಅಂತಾರಾಷ್ಟ್ರೀಯ ಮಾಧ್ಯಮವೊಂದು ಬಯಲಿಗೆಳೆದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಕಂಪನಿಯೊಂದು ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ಯಾರು ಸಹಿಸುವುದಿಲ್ಲ. ಈ ಕುರಿತು ತಕ್ಷಣ ತನಿಖೆಯಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಅಂಖಿದಾಸ್ ಹೇಗೆ ಹಲವಾರು ವರ್ಷಗಳಿಂದ ಬೆಜೆಪಿಯನ್ನು ಬೆಂಬಲಿಸಿ ಪೋಸ್ಟ್‌ಗಳನ್ನು ಹಂಚಿದ್ದರು, 2014ರ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲ್ಲಲ್ಲು ಸಹಾಯ ಮಾಡುವ ಪ್ರಯತ್ನಗಳು ಹೇಗಿದ್ದವು ಎಂಬುದನ್ನು ವಿವರಿಸಿದ ನಂತರ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ.

“ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.

ಇನ್ನು ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಕಾರ್ಪೋರೇಟ್ ಕಂಪನಿಗಳಿಗಿಂತ ಬಿಜೆಪಿಯ ಪಾಲು ಶೇ.70ರಷ್ಟು ಎಂಬುದನ್ನು ಡೇಟಾ ಟ್ರ್ಯಾಕಿಂಗ್ ಮಾಹಿತಿ ನೀಡಿತ್ತು.


ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...