Homeಫ್ಯಾಕ್ಟ್‌ಚೆಕ್FACT CHECK : ಎಲ್‌ಐಸಿ ತನ್ನ ಎಲ್ಲಾ ವಿಮಾ ಯೋಜನೆಗಳನ್ನು ಸ್ಥಗಿತಗೊಳಿಸಲಿದೆ ಎಂಬುವುದು ನಿಜವೇ?

FACT CHECK : ಎಲ್‌ಐಸಿ ತನ್ನ ಎಲ್ಲಾ ವಿಮಾ ಯೋಜನೆಗಳನ್ನು ಸ್ಥಗಿತಗೊಳಿಸಲಿದೆ ಎಂಬುವುದು ನಿಜವೇ?

- Advertisement -
- Advertisement -

ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ತನ್ನ ಎಲ್ಲಾ ವಿಮಾ ಉತ್ಪನ್ನಗಳನ್ನು ಮತ್ತು ಪರಿಷ್ಕರಣೆಯ ಯೋಜನೆಗಳನ್ನು ಸೆಪ್ಟೆಂಬರ್ 30ರೊಳಗೆ ಹಿಂಪಡೆಯಲಿದೆ ಎಂದು ಹೇಳುವ ಸೂಚನಾ ಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. 

30 ಸೆಪ್ಟೆಂಬರ್ 2024 ರೊಳಗೆ LICಯು ತನ್ನ ಎಲ್ಲಾ ಯೋಜನೆಗಳನ್ನು ಸ್ಥಗಿತಗೊಳಿಸಲಿದೆ ಎಂದು ಹೇಳಿಕೊಂಡು ವೈರಲ್ ಆಗುತ್ತಿರುವ ಸೂಚನಾ ಪತ್ರದಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಪ್ರತಿಪಾದಿಸಿದಂತೆ LIC ವಿಮಾ ಯೋಜನೆಗಳನ್ನು ಹಿಂತೆಗೆದುಕೊಳ್ಳಲಿದೆ ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾದ ಪತ್ರದ ಸತ್ಯಾಸತ್ಯತೆಯನ್ನು ಪರಿಶೀಲಿಸಲು LIC ವೆಬ್‌ಸೈಟ್‌ಅನ್ನು ಸರ್ಚ್ ಮಾಡಿದಾಗ, LIC ತನ್ನ ಎಲ್ಲಾ ವಿಮಾ ಯೋಜನೆಗಳನ್ನು ಹಿಂತೆಗೆದುಕೊಳ್ಳುವ ಕುರಿತು ಯಾವುದೇ ಪತ್ರಿಕಾ ಪ್ರಕಟಣೆ ಅಥವಾ ಅಧಿಸೂಚನೆಯನ್ನು ಹೊರಡಿಸಿದ ಮಾಹಿತಿ ಲಭ್ಯವಾಗಿಲ್ಲ.

ಆದರೂ, LIC ಪ್ರತಿ ವರ್ಷ ಕೆಲವು ವಿಮಾ ಯೋಜನೆಗಳನ್ನು ವಾಡಿಕೆಯಂತೆ ಹಿಂತೆಗೆದುಕೊಳ್ಳುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಇದು ತನ್ನ ಮಾರ್ಗಸೂಚಿಗಳನ್ನು ಅನುಸರಿಸುವ ಕ್ರಮವಾಗಿದ್ದು, ಮಾರುಕಟ್ಟೆ ಪರಿಸ್ಥಿತಿಗಳಿಗೆ ಅನುಗುಣವಾಗಿ ಮತ್ತು ಗ್ರಾಹಕರ ಅಗತ್ಯಗಳನ್ನು ಉತ್ತಮವಾಗಿ ಪೂರೈಸುವ ಹೊಸ ಉತ್ಪನ್ನಗಳನ್ನು ಪರಿಚಯಿಸುತ್ತದೆ. 2024-25ರ ಹಣಕಾಸು ವರ್ಷಕ್ಕೆ LIC ಯು ಹಿಂತೆಗೆದುಕೊಂಡ ಯೋಜನೆಗಳ ಕುರಿತು ನೀವು (ಇಲ್ಲಿ) ನೋಡಬಹುದು.

ಹೆಚ್ಚಿನ ಮಾಹಿತಿಗಾಗಿ X ಖಾತೆಯಲ್ಲಿ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ನೀಡಿರುವ ಸ್ಪಷ್ಟೀಕರಣ ಲಭ್ಯವಾಗಿದೆ. ವೈರಲ್ ಪೋಸ್ಟ್ ನಕಲಿ ಎಂದು ಪಿಐಬಿ ಹೇಳಿದೆ, “ಎಲ್ಲಾ ವಿಮಾ ಉತ್ಪನ್ನಗಳು/ಯೋಜನೆಗಳನ್ನು ಪರಿಷ್ಕರಣೆಗಾಗಿ 30 ಸೆಪ್ಟೆಂಬರ್ 2024 ರಂದು ಹಿಂತೆಗೆದುಕೊಳ್ಳುತ್ತದೆ ಎಂದು ಎಲ್‌ಐಸಿ ಹೊರಡಿಸಿದೆ ಎನ್ನಲಾದ ಸೂಚನಾ ಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದು,  ಇದು ಸುಳ್ಳು ಮತ್ತು ದಾರಿತಪ್ಪಿಸುವಂತದ್ದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ಇಸ್ರೇಲ್ ಅನ್ನು ಅಂತಾರಾಷ್ಟ್ರೀಯ ನ್ಯಾಯಾಲಯ ‘ಅಕ್ರಮ ರಾಷ್ಟ್ರ’ವೆಂದು ಘೋಷಿಸಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...