Homeಫ್ಯಾಕ್ಟ್‌ಚೆಕ್FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

“ತಿನ್ನುವ ಬಟ್ಟಲಿಗೆ ವಿಷ ಹಾಕಿದರೂ ತಿರುಗಿ ಅವರಿಗೆ ಅಮೃತ ಬಡಿಸುವ ಧರ್ಮ ಅಂತ ಈ ಭೂಮಿಯ ಮೇಲೆ ಇದ್ದರೆ ಅದು ಸನಾತನ ಹಿಂದೂ ಧರ್ಮ ಮಾತ್ರ. ಯಾವ ಜನರು ಬಾಂಗ್ಲಾದೇಶದಲ್ಲಿ ಇಸ್ಕಾನ್ ಟೆಂಪಲ್ ಧ್ವಂಸ ಮಾಡಿದರೋ ಇಂದು ಅದೇ ಪ್ರವಾಹ ಪೀಡಿತ ಜನರಿಗೆ ಇಸ್ಕಾನ್ ಆಹಾರವನ್ನು ಬಡಿಸುವ ಮೂಲಕ ಅವರ ನೆರವಿಗೆ ಧಾವಿಸಿದೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಬಾಂಗ್ಲಾ ಪ್ರವಾಹದ ಕುರಿತು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಇತ್ತೀಚೆಗಷ್ಟೆ ನಡೆದ ಹಿಂಸಾಚಾರದಲ್ಲಿ ಕಿಡಿಗೇಡಿಗಳು ಬಾಂಗ್ಲಾದ ಖುಲ್ನಾ ವಿಭಾಗದಲ್ಲಿ ನೆಲೆಗೊಂಡಿರುವ ಮೆಹರ್‌ಪುರದಲ್ಲಿರುವ ಇಸ್ಕಾನ್ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಹೀಗಿದ್ದರೂ ಇಸ್ಕಾನ್, ಪ್ರವಾಹದಲ್ಲಿ ಸಿಲುಕಿರುವ ಬಾಂಗ್ಲಾ ಪ್ರಜೆಗಳಿಗೆ ಸಹಾಯ ಮಾಡುತ್ತಿದೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಪ್ರವಾಹ ಪೀಡಿತ ಬಾಂಗ್ಲಾ ಜನರಿಗೆ ಇಸ್ಕಾನ್ ಸಹಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋಗಳನ್ನು  ನೀವು ಇಲ್ಲಿ, ಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ ಇಸ್ಕಾನ್​ ಬಾಂಗ್ಲಾದೇಶ ವೆಬ್​ಸೈಟ್​ನಲ್ಲಿ ಜೂನ್ 22, 2022 ರಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. ಇದಕ್ಕೆ ‘ಇಸ್ಕಾನ್ ಸಿಲ್ಹೆಟ್ ಪ್ರವಾಹ ಸಂತ್ರಸ್ತರ ಪರವಾಗಿ ನಿಂತಿದೆ’ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ಲಗತ್ತಿಸಿದೆ.

ವೆಬ್‌ಸೈಟ್‌ನಲ್ಲಿ ಲಭ್ಯವಾದ ವರದಿಯ ಪ್ರಕಾರ, ‘ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಸಿಲ್ಹೆಟ್ ಮತ್ತು ಸುನಮ್‌ಗಂಜ್‌ನಲ್ಲಿ ಪ್ರವಾಹದಿಂದ  ಪರಿಸ್ಥಿತಿ ಗಂಭೀರವಾಗಿದೆ. ಸರ್ಕಾರ ವಿವಿಧೆಡೆ ಪರಿಹಾರ ವಿತರಣೆ ಮಾಡಿದರೂ ಹಲವರಿಗೆ ಕೈತುಂಬ ಆಹಾರ ಸಿಕ್ಕಿಲ್ಲ. ಪ್ರವಾಹ ಸಂತ್ರಸ್ತರ ಮನೆಗಳಿಗೆ ತೆರಳಿ ಸಾಧ್ಯವಾದಷ್ಟು ಆಹಾರ ನೆರವು ನೀಡುತ್ತಿದ್ದೇವೆ. ಸಿಲ್ಹೆಟ್ ನಗರದ ಹೊರತಾಗಿ, ಸಮೀಪದ ಉಪಜಿಲಾಗಳಲ್ಲಿ ಪ್ರತಿದಿನ 3-4 ಸಾವಿರ ಜನರಿಗೆ ಬೇಯಿಸಿದ ಆಹಾರವನ್ನು ವಿತರಿಸಲಾಗುತ್ತದೆ. ಆಹಾರದ ಜೊತೆಗೆ, ಇಸ್ಕಾನ್ ಬಟ್ಟೆಗಳು, ಅಗತ್ಯ ಔಷಧಗಳು, ನೀರು ಶುದ್ಧೀಕರಣಕ್ಕಾಗಿ ಮಾತ್ರೆಗಳು ಮತ್ತು ವೈದ್ಯಕೀಯ ಆರೈಕೆಯಂತಹ ಇತರ ಅಗತ್ಯ ಸಹಾಯವನ್ನು ವಿತರಿಸುತ್ತದೆ. ಪ್ರವಾಹ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಇಸ್ಕಾನ್ ಪ್ರವಾಹ ಸಂತ್ರಸ್ತರ ಪಕ್ಕದಲ್ಲಿರುತ್ತದೆ’ ಎಂದು ವರದಿಯಲ್ಲಿದೆ.

ಹಾಗೆಯೆ ಜೂನ್ 20, 2022 ರಂದು Iskcon Youth Forum, Sylhet ಫೇಸ್​ಬುಕ್ ಖಾತೆಯಲ್ಲಿ ‘ಇದು ಅನ್ನವಲ್ಲ ಕೋಟ್ಯಾಂತರ ರೂಪಾಯಿಗಳ ಸಂಪತ್ತು. ಸ್ವಲ್ಪ ಆಹಾರಕ್ಕಾಗಿ ಜನರು ಎಷ್ಟು ಚಡಪಡಿಸುತ್ತಾರೆ ನೋಡಿ. ಪ್ರವಾಹ ಸಂತ್ರಸ್ತರ ಪಕ್ಕದಲ್ಲಿ ಇಸ್ಕಾನ್ ಸಿಲ್ಹೆಟ್‌. ನೀವೂ ಮುಂದೆ ಬನ್ನಿ’ ಎಂಬ ಅಡಿಬರಹದೊಂದಿಗೆ ಇದೇ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಸಂಕೀರ್ತನ್ ಫೆಸ್ಟ್ ಎಂಬ ಯೂಟ್ಯೂಬ್ ಚಾನೆಲ್​ನಲ್ಲಿಯೂ ಜೂನ್ 20, 2022 ರಂದು ಇದೇ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ‘ಇಸ್ಕಾನ್ ಸಿಲ್ಹೆಟ್ ಮತ್ತು ಸಂಕೀರ್ತನ್ ಫೆಸ್ಟ್ ಸಿಲ್ಹೆಟ್-ಸುನಮ್‌ಗಂಜ್‌ನಲ್ಲಿನ ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿರುವುದು’ ಎಂಬ ಶೀರ್ಷಿಕೆ ನೀಡಿದೆ.  ಹೀಗಾಗಿ ಬಾಂಗ್ಲಾದೇಶದ ಇತ್ತೀಚಿನ ಗಲಭೆಯಲ್ಲಿ ಕಿಡಿಗೇಡಿಗಳು ಇಸ್ಕಾನ್ ದೇವಾಲಯಕ್ಕೆ ಹಾನಿ ಮಾಡಿದ್ದರೂ, ಇಸ್ಕಾನ್ ಅಲ್ಲಿನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದೆ ಎಂಬುದು ಸುಳ್ಳು ಎಂದು ವಿಡಿಯೋ ಆಧರಿಸಿ ಸೌತ್‌ಚೆಕ್ ವೆಬ್‌ಸೈಟ್ ವರದಿ ಮಾಡಿದೆ.

ಒಟ್ಟಿನಲ್ಲಿ , ಬಾಂಗ್ಲಾದೇಶದಲ್ಲಿ 2022ರಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಅಲ್ಲಿನ ಜನ ತೊಂದರೆ ಅನುಭವಿಸುವಂತಾಗಿತ್ತು. ಆಗ ಸಿಲ್ಹೆಟ್ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸಹಾಯ ಮಾಡುತ್ತಿರುವ ವಿಡಿಯೋವನ್ನು 2024ರದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...