Homeಫ್ಯಾಕ್ಟ್‌ಚೆಕ್FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ...

FACT CHECK : ಬೆಂಗಳೂರು ಬಳಿ ಗುಹೆಯಲ್ಲಿ 188 ವರ್ಷದ ವ್ಯಕ್ತಿ ಪತ್ತೆ? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

- Advertisement -
- Advertisement -

ಬೆಂಗಳೂರು ಬಳಿ ಗುಹೆಯೊಂದರಿಂದ 188 ವರ್ಷದ ವ್ಯಕ್ತಿಯನ್ನು ರಕ್ಷಣೆ ಮಾಡಲಾಗಿದೆ ಎಂದು ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಮಾಧ್ಯಮಗಳು ಈ ಕುರಿತು ವರದಿ ಮಾಡಿವೆ.

Concerned Citizen (@BGatesIsaPyscho) ಎಂಬ ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡ ಬಳಿಕ ಅದು ಎಲ್ಲೆಡೆ ಹರಿದಾಡಿದೆ. “ಈ ಭಾರತೀಯ ವ್ಯಕ್ತಿ ಈಗಷ್ಟೇ ಗುಹೆಯಲ್ಲಿ ಪತ್ತೆಯಾಗಿದ್ದಾರೆ. ಅವರು 188 ವರ್ಷ ವಯಸ್ಸಿನವರು ಎಂದು ಹೇಳಲಾಗ್ತಿದೆ” ಎಂದು ಅಕ್ಟೋಬರ್ 30ರಂದು ಹಂಚಿಕೊಂಡ ಎಕ್ಸ್‌ ಪೋಸ್ಟ್‌ನಲ್ಲಿ ಬರೆಯಲಾಗಿತ್ತು.

24 ಸೆಕೆಂಡುಗಳ ವೈರಲ್ ಕ್ಲಿಪ್‌ನಲ್ಲಿ, ಇಬ್ಬರು ವ್ಯಕ್ತಿಗಳು ವೃದ್ದರೊಬ್ಬರನ್ನು ಕೈ ಕೈ ಹಿಡಿದು ಕರೆದುಕೊಂಡು ಬರುವುದು. ವೃದ್ದ ವಾಕಿಂಗ್ ಸ್ಟಿಕ್ ಬಳಸಿ ನಡೆಯುತ್ತಿರುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಬೆಂಗಳೂರಿನದ್ದಲ್ಲ. ಅದು ಮಧ್ಯ ಪ್ರದೇಶದ ವಿಡಿಯೋ. ಅದರಲ್ಲಿರುವ ವ್ಯಕ್ತಿಯ ಹೆಸರು ಸಿಯರಾಮ್ ಬಾಬಾ. ಅವರ ವಯಸ್ಸು 180 ಅಲ್ಲ,110.

ಜುಲೈ 2,2024 ರಂದು ನವಭಾರತ್ ಟೈಮ್ಸ್‌ ಪ್ರಕಟಿಸಿದ ವರದಿಯಲ್ಲಿ ವೈರಲ್ ವಿಡಿಯೋ ಕುರಿತು ಉಲ್ಲೇಖಿಸಿ, ಅದರಲ್ಲಿರುವ ವ್ಯಕ್ತಿಯ ಬಗ್ಗೆ ವಿವರಿಸಿದೆ. ವರದಿಯ ಪ್ರಕಾರ, ವಯಸ್ಸಾದ ವ್ಯಕ್ತಿಯ ಹೆಸರು ಸಿಯಾರಾಮ್ ಬಾಬಾ. ಅವರ ವಯಸ್ಸು 109 ವರ್ಷ. ರಾಮ ಭಕ್ತರಾಗಿರುವ ಸಿಯಾರಾಮ್ ಬಾಬಾ ಪ್ರಸ್ತುತ ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಆ ಪ್ರದೇಶದಲ್ಲಿ ಅವರು ಬಹಳ ಪ್ರಸಿದ್ದಿಯನ್ನು ಹೊಂದಿದ್ದಾರೆ.

ಇದೇ ಮಾಹಿತಿಯೊಂದಿಗೆ ಇನ್ನೂ ಅನೇಕ ಇಂಗ್ಲಿಷ್, ಹಿಂದಿ, ಕನ್ನಡ ಮಾಧ್ಯಮಗಳು ಬಾಬಾ ಕುರಿತು ವರದಿ ಮಾಡಿವೆ. ಹಾಗಾಗಿ, 188 ವರ್ಷದ ವ್ಯಕ್ತಿ ಬೆಂಗಳೂರು ಬಳಿ ಗುಹೆಯಲ್ಲಿ ಪತ್ತೆಯಾಗಿದ್ದಾರೆ ಎಂಬ ಸುದ್ದಿ ಸುಳ್ಳು. ಸಾಮಾಜಿಕ ಜಾಲತಾಣ ಪೋಸ್ಟ್‌ನಿಂದ ತಪ್ಪು ಮಾಹಿತಿ ಹರಿದಾಡಿದೆ.

ಇದನ್ನೂ ಓದಿ : FACT CHECK : ಹೆಜ್ಬುಲ್ಲಾ ನಾಯಕನ ಹತ್ಯೆ ಬಳಿಕ ಲೆಬನಾನ್‌ನಲ್ಲಿ ಸುನ್ನೀ-ಶಿಯಾ ಸಂಘರ್ಷ ಶುರುವಾಗಿದೆಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...