Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿದ ನಡೆದ ಪ್ರತಿಭಟನೆ ಎಂದು ಡ್ರೋನ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಿನ್ನೆಲೆಯಲ್ಲಿ ದ್ವಿಜೇಂದ್ರಲಾಲ್ ರಾಯ್ ಬರೆದ ದೇಶ ಭಕ್ತಿಯ ಬಂಗಾಳಿ ಹಾಡು “ಧನ ಧನ್ಯೋ ಪುಷ್ಪೇ ಭೋರಾ” ಹಾಕಿರುವುದು ಕೇಳಿಸುತ್ತದೆ. ಅಲ್ಲದೆ, ಸಾವಿರಾರು ಜನರು ಮೇಣದ ದೀಪ ಹಿಡಿದು ನಿಂತಿರುವುದು ಇದೆ.

ಬಿಜೆಪಿ ಯುವಮೋರ್ಚಾ, ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಹಿಂದುತ್ವವಾದಿ ದೇಬಜಿತ್ ಸರ್ಕಾರ್ (@debajits3110) ಸೆಪ್ಟೆಂಬರ್ 5ರಂದು ವೈರಲ್ ವಿಡಿಯೋ ಹಂಚಿಕೊಂಡು, “ಇತಿಹಾಸ ಸೃಷ್ಟಿಯಾಗಿದೆ! ಇಡೀ ಕೋಲ್ಕತ್ತಾದ ಜನರು ಇಂದು ಬೀದಿಗಿಳಿದಿದ್ದಾರೆ. ತಿಲೋತ್ತಮನಿಗೆ ನ್ಯಾಯ ಸಿಗುವವರೆಗೂ ಈ ಚಳವಳಿಯನ್ನು ನಿಲ್ಲಿಸುವುದು ಅಸಾಧ್ಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶ ಭಕ್ತಿಯ ಕ್ಲಾಸಿಕ್ ಹಾಡು ‘ಧನ್ ಧನ್ಯ ಪುಷ್ಪೇ ವ್ರಾ’ದೊಂದಿಗೆ ಆರ್‌ಜಿ ಕರ್‌ ಘಟನೆಯ ನ್ಯಾಯಕ್ಕಾಗಿ ಪ್ರತಿಭಟನೆ ಸ್ಪೋಟಗೊಂಡಿತು” ಎಂದು ಬರೆದುಕೊಂಡಿದ್ದರು.

ಬಿಜೆಪಿ ವಕ್ತಾರ ಪ್ರತ್ಯೂಷ್ ಕಾಂತ್ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ, ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶಭಕ್ತಿಯ ಕ್ಲಾಸಿಕ್, ‘ಧನ್ ಧನ್ಯ ಪುಷ್ಪೇ ವ್ರಾ’ ನೊಂದಿಗೆ #JUSTCAforrogkar ಪ್ರತಿಭಟನೆ ಸ್ಫೋಟಿಸಿತು” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ವೈರಲ್ ವಿಡಿಯೋ ಹಂಚಿಕೊಂಡು “ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆದಿದೆ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ ‘ANICUR ROHOMAN M‘ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 11ರಂದು ವಿಡಿಯೋ ಅಪ್ಲೋಡ್‌ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ ಕೊಟ್ಟಿದ್ದ ಬೆಂಗಾಲಿ ಭಾಷೆಯ ಕ್ಯಾಪ್ಶನ್ ಅನ್ನು ಭಾಷಾಂತರಿಸಿ ನೋಡಿದಾಗ “24ರ ಹುತಾತ್ಮರ ಸ್ಮರಣಾರ್ಥ ಇಂದು ಉತ್ತರದಲ್ಲಿ ಮೇಣದ ಬತ್ತಿ ಬೆಳಗಳಾಯಿತು. ನಾವು ನಿಮ್ಮನ್ನು ಮರೆಯುವುದಿಲ್ಲ” ಎಂದು ಬರೆದಿರುವುದು ಗೊತ್ತಾಗಿದೆ. ಉತ್ತರ ಎಂಬುವುದು ಎಲ್ಲಿ ಎಂದು ನೋಡಿದಾಗ, ಅದು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸಮೀಪದ ಪ್ರದೇಶದ ಎಂದು ತಿಳಿದು ಬಂದಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಆಗಸ್ಟ್ 9ರಂದು ಫೇಸ್‌ಬುಕ್ ಖಾತೆಯೊಂದರಲ್ಲಿ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ “ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಆಗಸ್ಟ್ 9, 2024ರಂದು ಉತ್ತರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಿತು” ಎಂದು ಕ್ಯಾಪ್ಶನ್ ಕೊಡಲಾಗಿದೆ.

faiyaz (@catstits) ಎಂಬ ಎಕ್ಸ್‌ ಖಾತೆಯಲ್ಲಿ ಆಗಸ್ಟ್ 9, 2024ರಂದು ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, “ಇಂದು ಉತ್ತರ ಫ್ರೆಂಡ್ಸ್‌ ಕ್ಲಬ್‌ನಲ್ಲಿ ಹುತಾತ್ಮರನ್ನು ಸ್ಮರಿಸಲು ಇಡೀ ದೇಶ ಒಗ್ಗೂಡಿ, ಕ್ಯಾಂಡಲ್ ಲೈಟ್‌ ಹಚ್ಚಲಾಯಿತು” ಎಂದು ಬರೆದುಕೊಂಡಿದ್ದರು.

ಬಾಂಗ್ಲಾದೇಶದ ಉತ್ತರದಲ್ಲಿ ಕ್ಯಾಂಡಲ್ ಮಾರ್ಚ್ ನಡೆದಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಈ ಕುರಿತು ಬಂಗಾಳಿ ಭಾಷೆಯ ಸುದ್ದಿ ವಾಹಿನಿ ಎನ್‌ಟಿವಿ ಮಾಡಿರುವ ವರದಿಯ ಲಿಂಕ್ ಇಲ್ಲಿದೆ.

‘Rajuk College Photography Club – RCPC’ ಫೇಸ್‌ಬುಕ್ ಖಾತೆಯಲ್ಲಿ ಆಗಸ್ಟ್ 7ರಂದು ಕ್ಯಾಂಡಲ್ ಮಾರ್ಚ್ ಕುರಿತು ಪೋಸ್ಟರ್ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಪ್ರತಿಭಟನಾ ಸ್ಥಳ ಫ್ರೆಂಡ್ಸ್ ಕ್ಲಬ್ ಫೀಲ್ಡ್ ಸೆಕ್ಟರ್ 3, ಉತ್ತರ, ಢಾಕಾ ಎಂದು ಬರೆಯಲಾಗಿತ್ತು.

ಒಟ್ಟಿನಲ್ಲಿ ಬಾಂಗ್ಲಾದೇಶದ ಢಾಕಾ ಸಮೀಪದ ಉತ್ತರ ಎಂಬ ಸ್ಥಳದಲ್ಲಿ ಹುತಾತ್ಮರನ್ನು ಸ್ಮರಿಸಿ ಕ್ಯಾಂಡಲ್ ಲೈಟ್ ಮಾರ್ಚ್ ಮಾಡಿರುವುದನ್ನು ಕೋಲ್ಕತ್ತಾದ ಪ್ರತಿಭಟನೆಯ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...