HomeದಿಟನಾಗರFACT CHECK : ಬಿಜೆಪಿ ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ ಶಿವಕುಮಾರ್‌ರದ್ದು ಎಂದು ತಪ್ಪಾಗಿ ಹಂಚಿಕೊಂಡ...

FACT CHECK : ಬಿಜೆಪಿ ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ ಶಿವಕುಮಾರ್‌ರದ್ದು ಎಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್ ಯುವ ಘಟಕ ಹೆಸರಿನ ಫೇಸ್‌ಬುಕ್ ಪೇಜ್‌

- Advertisement -
- Advertisement -

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಓರ್ವ ಪುರುಷ ಮತ್ತು ಮಹಿಳೆ ಅರೆನಗ್ನ ಸ್ಥಿತಿಯಲ್ಲಿರುವ ಬ್ಲರ್ ಫೋಟೋವೊಂದನ್ನು ಹಂಚಿಕೊಳ್ಳಲಾಗಿದ್ದು, “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಬರೆದುಕೊಳ್ಳಲಾಗಿದೆ.

ಫೋಟೋದಲ್ಲಿ ಮಹಿಳೆ ಜೊತೆ ಇರುವ ಪುರುಷ ಡಿಸಿಎಂ ಡಿಕೆ ಶಿವಕುಮಾರ್ ಎಂಬರ್ಥದಲ್ಲಿ ಪೋಸ್ಟ್ ಹಾಕಲಾಗಿದೆ ಎಂಬುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿರುವ ಫೋಟೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದ್ದೇವೆ. ಈ ವೇಳೆ ನವೆಂಬರ್ 3, 2019ರಂದು democraticaccent.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಟಕಗೊಂಡ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ಅವರು ಮಹಿಳೆಯೊಬ್ಬರೊಂದಿಗೆ ಇರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ” ಎಂದು ಹೇಳಲಾಗಿದೆ.

ನವೆಂಬರ್ 20, 2019ರಂದು ‘ದಿ ವೀಕ್’ ಈ ಕುರಿತು ಪ್ರಕಟಿಸಿದ ಸುದ್ದಿಯಲ್ಲಿ” ಮಹಿಳೆಯೊಂದಿಗೆ ಇರುವ ಫೋಟೋ ವೈರಲ್ ಆದ ಬಳಿಕ ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಮಿತ್ ಶಾ ಅವರು ಸ್ವೀಕರಿಸಿದ್ದಾರೆ ಎಂದು ಹೇಳಿದೆ.

ಹಾಗಾಗಿ, ಜೆಡಿಎಸ್ ಯುವಘಟಕದ ಹೆಸರಿನಲ್ಲಿರುವ ಫೇಸ್‌ಬುಕ್ ಪೇಜ್ ಪರೋಕ್ಷವಾಗಿ ಹೇಳಿದಂತೆ, ಅವರು ಹಂಚಿಕೊಂಡಿರುವ ಫೋಟೋದಲ್ಲಿರುವ ವ್ಯಕ್ತಿ ಡಿಸಿಎಂ ಡಿ.ಕೆ ಶಿವಕುಮಾರ್ ಅಲ್ಲ. ಬದಲಾಗಿ, ಅದು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ಆಗಿದ್ದಾರೆ.

ಇದನ್ನೂ ಓದಿ : FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...