Homeಫ್ಯಾಕ್ಟ್‌ಚೆಕ್FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

FACT CHECK : ಸ್ಕ್ರಿಪ್ಟೆಡ್ ವಿಡಿಯೋವನ್ನು ನಿಜವೆಂದು ತಪ್ಪಾಗಿ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ವ್ಯಕ್ತಿಯೊಬ್ಬ ಮಹಿಳೆಯರ ಹೊಟ್ಟೆ, ಬೆನ್ನು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಮುಟ್ಟಿ ಚಿಕಿತ್ಸೆ ನೀಡುತ್ತಿರುವಂತೆ ತೋರಿಸುವ ವಿಡಿಯೋವೊಂದು ವೈರಲ್ ಆಗಿದೆ.

ಮಹಿಳೆಯರ ಅಂಗಾಗಳನ್ನು ಮುಟ್ಟುತ್ತಿರುವ ವ್ಯಕ್ತಿ ಮುಸ್ಲಿಂ ಮೌಲ್ವಿಯಂತೆ ವೇಷ ಧರಿಸಿದ್ದು, ಈ ಹಿನ್ನೆಲೆ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು. ‘ಮೌಲಾನ’ ಎಂದು ಉಲ್ಲೇಖಿಸಿ ವಿಡಿಯೋ ಹಂಚಿಕೊಂಡು ಪರೋಕ್ಷವಾಗಿ ಕೋಮು ಬಣ್ಣ ಬಳಿಯುವ ಪ್ರಯತ್ನ ಮಾಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ನೋಡಿದಾಕ್ಷಣ ಯಾರಿಗಾದರೂ ಗೊತ್ತಾಗುತ್ತದೆ ಅದೊಂದು ಸ್ಕ್ರಿಪ್ಟೆಡ್ ಕಂಟೆಂಟ್ ಎಂದು. ಆದರೂ ಕೆಲವೊಂದು ಉದಾಹರಣೆಗಳೊಂದಿಗೆ ನಾವು ವಿಡಿಯೋದ ಸತ್ಯಾಸತ್ಯತೆ ತಿಳಿಸುತ್ತೇವೆ.

ವಿಡಿಯೋದಲ್ಲಿ ಪೀಸ್ ಟಿವಿ ಎಂಬ ಲೋಗೋ ಗಮನಿಸಬಹುದು. ಹಾಗಾಗಿ, ನಾವು ಗೂಗಲ್‌ನಲ್ಲಿ ಪೀಸ್ ಟಿವಿ ಎಂದು ಸರ್ಚ್‌ ಮಾಡಿದ್ದೇವೆ. ಈ ವೇಳೆ ‘ಪೀಸ್ ಟಿವಿ ಬಿಡಿ‘ ಎಂಬ ಫೇಸ್ಬುಕ್ ಖಾತೆ ಲಭ್ಯವಾಗಿದೆ. ಅದನ್ನು ಪರಿಶೀಲಿಸಿದಾಗ ವೈರಲ್ ವಿಡಿಯೋ 30 ಜನವರಿ 2024ರಂದು ಖಾತೆಯಲ್ಲಿ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

ಬಾಂಗ್ಲಾದೇಶದ ಬರಿಸಾಲ್‌ನಿಂದ ನಡೆಸಲ್ಪಡುವ ಈ ಫೇಸ್‌ಬುಕ್ ಖಾತೆ 14 ಲಕ್ಷ ಅನುಯಾಯಿಗಳನ್ನು ಹೊಂದಿದೆ ಮತ್ತು ತನ್ನನ್ನು ‘ಮಾಧ್ಯಮ / ಸುದ್ದಿ ಕಂಪನಿ’ ಹೇಳಿಕೊಂಡಿದೆ.

ವಿಡಿಯೋದ ಕೊನೆಯ ಎರಡು ಫ್ರೇಮ್‌ಗಳು ಕ್ರಮವಾಗಿ ಎಚ್ಚರಿಕೆಯ ಸಂದೇಶ ಮತ್ತು ಶೀರ್ಷಿಕೆ ಕಾರ್ಡ್ ಅನ್ನು ತೋರಿಸುತ್ತವೆ. ಬಂಗಾಳಿಯಲ್ಲಿ ಸಂದೇಶ ಹೀಗಿದೆ: “ಅಂತಹ ‘ಬಾಬಾ’ಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳುವುದು ನಿಮ್ಮ ಜವಾಬ್ದಾರಿ”. ಶೀರ್ಷಿಕೆ ಕಾರ್ಡ್ ಹೀಗಿದೆ: “ಪೀಸ್ ಮಲ್ಟಿಮೀಡಿಯಾದಿಂದ ನಿರ್ದೇಶಿಸಲ್ಪಟ್ಟಿದೆ”.

ಹಾಗಾಗಿ, ನಕಲಿ ಬಾಬಾಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ವಿಡಿಯೋ ತಯಾರಿಸಲಾಗಿದೆ ಎಂಬುವುದು ಗೊತ್ತಾಗುತ್ತದೆ.

ಫೇಸ್‌ಬುಕ್ ಪೇಜ್ ಯೂಟ್ಯೂಬ್ ಚಾನೆಲ್‌ ಲಿಂಕ್ ಕೂಡ ಇದ್ದು, ಅದರಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅಲ್‌ ಅಕ್ಸಾ ಹೆಸರಿನ ಯೂಟ್ಯೂಬ್‌ ಚಾನೆಲ್ ತನ್ನನ್ನು ತಾನು ಬಾಂಗ್ಲಾದೇಶದ ಅತೀ ದೊಡ್ಡ ಇಸ್ಲಾಮಿಕ್ ಕಂಟೆಂಟ್ ಮತ್ತು ವಿಡಿಯೋ ನಿರ್ಮಾಣ ಸಂಸ್ಥೆ ಎಂದು ಹೇಳಿಕೊಂಡಿದೆ. ಈ ಚಾನೆಲ್‌ನಲ್ಲಿ ಇತರ ವಿಷಯಗಳ ಜೊತೆಗೆ, ‘ಶಾರ್ಟ್ ಫಿಲಂ(ಗಳು)’ ಮತ್ತು ‘ಇಸ್ಲಾಮಿಕ್ ನಾಟಕ(ಗಳು)’ ಇವೆ.

ಈ ಚಾನೆಲ್ ಅಪ್ಲೋಡ್ ಮಾಡಿರುವ ಇತರ ವಿಡಿಯೋಗಳು ದಾಂಪತ್ಯ ದ್ರೋಹದಿಂದ ಹಿಡಿದು ಲಿಂಗ ಅನ್ಯಾಯಗಳವರೆಗೆ ಇದೇ ರೀತಿಯ ಸಾಮಾಜಿಕ ಮತ್ತು ಕೌಟುಂಬಿಕ ಸಮಸ್ಯೆಗಳ ಕುರಿತಾಗಿದೆ.

ವೈರಲ್ ವಿಡಿಯೋದಲ್ಲಿ ಮೌಲ್ವಿಯಂತೆ ವೇಷ ತೊಟ್ಟು ಮಹಿಳೆಯರ ಮೈ ಮುಟ್ಟುವ ವ್ಯಕ್ತಿ, ಇತರ ವಿಡಿಯೋಗಳಲ್ಲಿ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಂಡಿರುವುದು ಚಾನೆಲ್‌ನಲ್ಲಿ ಇದೆ.

ಹಾಗಾಗಿ, ವೈರಲ್ ವಿಡಿಯೋ ಸ್ಕ್ರಿಪ್ಟೆಡ್ ಆಗಿದ್ದು, ನೈಜ ಘಟನೆಯದ್ದಲ್ಲ ಎಂದು ಇದು ಸಾಬೀತುಪಡಿಸುತ್ತದೆ.

ಇದನ್ನೂ ಓದಿ : FACT CHECK : ಪಪ್ಪಾಯಿ ಎಲೆಯ ರಸವು ಡೆಂಗ್ಯೂ ಖಾಯಿಲೆ ಗುಣಪಡಿಸುತ್ತದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...