Homeಫ್ಯಾಕ್ಟ್‌ಚೆಕ್FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ...

FACT CHECK | ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್ ಎಂದು ಎಐ ರಚಿತ ವಿಡಿಯೋ ಹಂಚಿಕೆ

- Advertisement -
- Advertisement -

ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಲಾಸ್ ಏಂಜಲೀಸ್ ನಗರದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಕಾಡ್ಗಿಚ್ಚಿಗೆ ಸುಮಾರು 35,000 ಎಕರೆಗಿಂತಲೂ ಅಧಿಕ ಪ್ರದೇಶ ಸುಟ್ಟು ಭಸ್ಮವಾಗಿದೆ. ವಿಶೇಷವಾಗಿ ಹಾಲಿವುಡ್ ಸಿನಿಮಾ ತಾರೆಯರ ಮನೆಗಳಿರುವ ಪೆಸಿಫಿಕ್ ಪ್ಯಾಲಿಸೈಡ್ಸ್ ಪ್ರದೇಶದ ಹಾಲಿವುಡ್‌ ಹಿಲ್ಸ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಸುಮಾರು 16,000ಕ್ಕೂ ಎಕರೆ ಪ್ರದೇಶ ಸುಟ್ಟು ಹೋಗಿದೆ. ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿರುವ  ಅಗ್ನಿ ದುರಂತದ ನಡುವೆ ವಿವಿಧ ಪ್ರತಿಪಾದನೆಗಳೊಂದಿಗೆ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪರ್ವತಗಳು ಬೆಂಕಿಯಿಂದ ಉರಿಯುತ್ತಿರುವ ಮತ್ತು ಅಗ್ನಿ ಜ್ವಾಲೆಯಿಂದ ನಗರಗಳು ಮುಳುಗಿರುವ ವಿಡಿಯೋಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಇದು ಕ್ಯಾಲಿಫೋರ್ನಿಯಾದ ಲಾಸ್ ಏಂಜಲೀಸ್‌ನಲ್ಲಿ ಸಂಭವಿಸಿರುವ ಕಾಡ್ಗಿಚ್ಚಿನ ನೈಜ ತುಣುಕುಗಳು ಎನ್ನಲಾಗುತ್ತಿದೆ.

ಫೇಸ್​ಬುಕ್ ಬಳಕೆದಾರರು ವಿಡಿಯೋವೊಂದನ್ನು ಹಂಚಿಕೊಂಡು, ‘‘ಇದು ಹಾಲಿವುಡ್ ಗ್ರಾಫಿಕ್ಸ್ ಅಲ್ಲ, ಬೆಂಕಿಗೆ ಆಹುತಿ ಆಗುತ್ತಿರುವ ಲಾಸ್ ಏಂಜಲೀಸ್’’ ಎಂದು ಬರೆದುಕೊಂಡಿದ್ದರು.

ಇದೇ ರೀತಿಯ ಹೇಳಿಕೆಯೊಂದಿಗೆ ವೈರಲ್ ಆಗುತ್ತಿರುವ ವೀಡಿಯೊವನ್ನು ನೀವು ಇಲ್ಲಿಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ 

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಬಹುತೇಕ ವಿಡಿಯೋಗಳು ಎಐ- ರಚಿತವಾಗಿದೆ ಮತ್ತು ಅದರಲ್ಲಿರುವ ಕಾಡ್ಗಿಚ್ಚಿನ ದೃಶ್ಯಗಳು ನಿಜವಾದದು ಅಲ್ಲ ಎಂದು ಗೊತ್ತಾಗಿದೆ.

ವಿಡಿಯೋಗಳ ನಿಜಾಂಶವನ್ನು ತಿಳಿಯಲು ನಾವು ಅವುಗಳಿಗೆ ಸಂಬಂಧಪಟ್ಟ ವಿಶ್ವಾಸಾರ್ಹ ವರದಿಗಳನ್ನು ಹುಡುಕಿದ್ದೇವೆ. ಆದರೆ, ಈ ವಿಡಿಯೋಗೆ ಹೋಲುವ ಯಾವುದೇ ವರದಿಯೂ ನಮಗೆ ಕಂಡುಬಂದಿಲ್ಲ. ಎಐ ಬಳಸಿಕೊಂಡು ವಿಡಿಯೋಗಳನ್ನು ರಚಿಸಲಾಗಿದೆ ಎಂದು ವೈರಲ್ ಪೋಸ್ಟ್‌ಗೆ ಅನೇಕ ಬಳಕೆದಾರರು ಕಾಮೆಂಟ್‌ಗಳನ್ನು ಮಾಡಿರುವುದನ್ನು ನಾವು ನೋಡಿದ್ದೇವೆ.

ವಿವಿಧ ಸ್ಥಳಗಳಲ್ಲಿ ಬೆಂಕಿ ಆವರಿಸುತ್ತಿರುವುದನ್ನು ತೋರಿಸುವ ಆರು ಕ್ಲಿಪ್‌ಗಳನ್ನು ವಿಲೀನಗೊಳಿಸಿ ವಿಡಿಯೋವನ್ನು ರಚಿಸಲಾಗಿದೆ ಎಂದು ನಾವು ಕಂಡುಕೊಂಡಿದ್ದೇವೆ. ನಾವು ಕೀ ಫ್ರೇಮ್‌ಗಳನ್ನು ಹೊರತೆಗೆಯುವ ಮೂಲಕ ವಿಡಿಯೋವನ್ನು ವಿಶ್ಲೇಷಿಸಿದ್ದೇವೆ ಮತ್ತು ಎಐ ಡಿಟೆಕ್ಟರ್ ಮೂಲಕ ಅದನ್ನು ಪರಿಶೀಲಿಸಿದ್ದೇವೆ.

ಮೊದಲ ಕೀಫ್ರೇಮ್ ಸುಡುವ ಪರ್ವತದ ಕಡೆಗೆ ಹೋಗುವ ತಾಳೆ ಮರಗಳಿಂದ ಕೂಡಿದ ರಸ್ತೆಯನ್ನು ತೋರಿಸುತ್ತದೆ, ಎರಡನೆಯದು ಉರಿಯುತ್ತಿರುವ ಬೆಂಕಿಯ ಮಧ್ಯೆ ಟ್ರಾಫಿಕ್ ಲೈಟ್‌ನಲ್ಲಿ ಕಾರುಗಳನ್ನು ನಿಲ್ಲಿಸಿರುವುದನ್ನು ಕಾಣಬಹುದು. ಮೂರನೆಯದು ರಾತ್ರಿಯಲ್ಲಿ ಜ್ವಾಲೆ ಮತ್ತು ಹೊಗೆಯಲ್ಲಿ ಮುಳುಗಿರುವ ನಗರದ ವೈಮಾನಿಕ ನೋಟವನ್ನು ನೋಡಬಹುದು, ನಾಲ್ಕನೆಯದು ಕಟ್ಟಡಗಳು ಮತ್ತು ರಸ್ತೆಗಳಲ್ಲಿ ವ್ಯಾಪಕ ಬೆಂಕಿ ಹರಡಿದಿರುವುದು ತೋರಿಸುತ್ತದೆ. ಐದನೇಯದರಲ್ಲಿ ಜ್ವಾಲೆಯು ಬೆಟ್ಟದ ತುದಿಯನ್ನು ಆವರಿಸಿದೆ. ಅಂತಿಮ ಕೀಫ್ರೇಮ್​ನಲ್ಲಿ ಕಿತ್ತಳೆ ಬಣ್ಣದ ಆಕಾಶದಲ್ಲಿ ಜ್ವಾಲೆಗಳಿಂದ ಮುಳುಗಿರುವ ನಗರವನ್ನು ಕಾಣಬಹುದು. ಈ ಎಲ್ಲಾ ದೃಶ್ಯಗಳು ಎಐ- ರಚಿತವಾದವು ಎಂದು ಪತ್ತೆಹಚ್ಚಲಾಗಿದೆ. (ಇದನ್ನು ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ , ಇಲ್ಲಿ ಮತ್ತು ಇಲ್ಲಿ ಪರಿಶೀಲಿಸಿ)

ಮತ್ತೊಂದು ಡಿಟೆಕ್ಟರ್, “ವಾಸಿತ್ ಎಐ”, ಕೊನೆಯ ಕೀಫ್ರೇಮ್ ಹೊರತುಪಡಿಸಿ, ಇತರ ಐದು ಎಐ- ರಚಿತವಾಗಿದೆ ಎಂದು ಕಂಡುಹಿಡಿದಿದೆ.

ಹೈವ್ ಮಾಡರೇಶನ್ ಮೂಲಕ ವಿಡಿಯೊವನ್ನು ಪರಿಶೀಲಿಸಿದಾಗ, ಫಲಿತಾಂಶಗಳು 99.8% ರ ಒಟ್ಟು ಸ್ಕೋರ್‌ನೊಂದಿಗೆ ಎಐ- ರಚಿತ ಅಥವಾ ಡೀಪ್‌ಫೇಕ್ ವಿಷಯವನ್ನು ಒಳಗೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.
|

 

ಆದ್ದರಿಂದ, ವೈರಲ್ ವೀಡಿಯೊ ಎಐ- ರಚಿತವಾಗಿದೆ ಎಂದು ನಾವು ತೀರ್ಮಾನಿಸುತ್ತೇವೆ.

(ಈ ಫ್ಯಾಕ್ಟ್‌ಚೆಕ್ ಅನ್ನು ಮೂಲತಃ ನ್ಯೂಸ್ ಮೀಟರ್ ಪ್ರಕಟಿಸಿತ್ತು. ಶಕ್ತಿ ಕಲೆಕ್ಟಿವ್‌ನ ಭಾಗವಾಗಿ ನಾನುಗೌರಿ.ಕಾಂ ಇದನ್ನು ಮರುಪ್ರಕಟಿಸಿದೆ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...