Homeಫ್ಯಾಕ್ಟ್‌ಚೆಕ್Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

Fact Check: ಕಸಬ್‌ನ ಮರಣದಂಡನೆಯನ್ನು ರದ್ದುಗೊಳಿಸಲು ಕೋರಿ ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಹಾಕಿರಲಿಲ್ಲ!

- Advertisement -
- Advertisement -

2008 ರ ಮುಂಬೈ ದಾಳಿಯ ಅಪರಾಧಿ ಮೊಹಮ್ಮದ್ ಅಜ್ಮಲ್ ಅಮೀರ್ ಕಸಬ್‌ಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ತಡೆಯಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಹಿ ಮಾಡಿದ 302 ಜನರಲ್ಲಿ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹ ಒಬ್ಬರು ಎಂದು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹೇಳಿದ್ದಾರೆ.

[ವೈರಲ್ ಹೇಳಿಕೆ: ಕಸಬ್ ನನ್ನು ನೇಣಿಗೇರಿಸುವುದನ್ನು ತಡೆಯುವಂತೆ ಮನವಿ ಮಾಡಿದ್ದ ಅರ್ಜಿಗೆ ಸಹಿ ಹಾಕಿದ 302 ಜನರಲ್ಲಿ ಅಖಿಲೇಶ್ ಯಾದವ್ ಒಬ್ಬರು, ಇದನ್ನು ಸಹೋದರರ ಮತ್ತು ಸಹೋದರಿಯರು ನೆನಪಿಸಿಕೊಂಡಿದ್ದಾರೆಯೇ ಅಥವಾ ಮರೆತಿದ್ದಾರೆಯೇ]

ಹರಿಯಾಣ ಬಿಜೆಪಿ ಸಾಮಾಜಿಕ ಮಾಧ್ಯಮ ಮುಖ್ಯಸ್ಥ ಅರುಣ್ ಯಾದವ್ ಈ ಹೇಳಿಕೆಯನ್ನು ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ಅನ್ನು 23,000 ಕ್ಕೂ ಹೆಚ್ಚು ಬಾರಿ ಹಂಚಿಕೊಳ್ಳಲಾಗಿದೆ.

ಹಿಂದೂ ಯುವ ವಾಹಿನಿ ಗುಜರಾತ್-ಉಸ್ತುವಾರಿ ಯೋಗಿ ದೇವನಾಥ್ ಕೂಡ ಈ ಹೇಳಿಕೆನ್ನು ಟ್ವೀಟ್ ಮಾಡಿದ್ದಾರೆ ಮತ್ತು 3,000 ಕ್ಕೂ ಹೆಚ್ಚು ರಿಟ್ವೀಟ್‌ಗಳು (ಆರ್‌ಟಿ) ಆದ ನಂತರ ಅದನ್ನು ಅಳಿಸಿದ್ದಾರೆ.

ಇದೇ ಹೇಳಿಕೆಯನ್ನು ಹಲವಾರು ಫೇಸ್‌ಬುಕ್‌ ಪೇಜ್‌ಗಳಲ್ಲಿ ಪೋಸ್ಟ್‌ ಮಾಡಲಾಗಿದೆ. ಅವುಗಳೆಂದರೆ – ಮಹಾನ್ ಹಿಂದೂಸ್ತಾನ್ (2,000 ಶೇರ್‌ಗಳು), ಯುಪಿ ಸಿಎಂ ರಿಪೋರ್ಟ್ ಕಾರ್ಡ್ (7,500 ಇಷ್ಟಗಳು), ಪ್ರೊ ಮೋದಿ ನ್ಯೂಸ್ (4,500 ಇಷ್ಟಗಳು), ಸರ್ಚ್ ಇಂಡಿಯಾ (2,800 ಲೈಕ್‌ಗಳು) ಅಬ್ ಮೋದಿ ಹೈ ಟು ಮಮ್ಕಿನ್ ಹೈ (1000 ಲೈಕ್‌ಗಳು) ) ), ಏಕ್ ಬಿಹಾರಿ 100 ಪೆ ಭಾರಿ (2,300 ಇಷ್ಟಗಳು).

ಸತ್ಯ:

25 ವರ್ಷದ ಕಸಬ್‌ನನ್ನು ನವೆಂಬರ್ 21, 2012 ರಂದು ಗಲ್ಲಿಗೇರಿಸಲಾಯಿತು. ಕ್ರಿಮಿನಲ್ ಪಿತೂರಿ, ರಾಷ್ಟ್ರದ ವಿರುದ್ಧ ಭಯೋತ್ಪಾದನೆ ನಡೆಸುವುದು ಮತ್ತು ಭಾರತೀಯ ದಂಡ ಸಂಹಿತೆ ಮತ್ತು ಭಯೋತ್ಪಾದನಾ-ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯಿದೆಯ ವಿವಿಧ ನಿಬಂಧನೆಗಳ ಆರೋಪದ ಮೇಲೆ ಮರಣದಂಡನೆಯನ್ನು ಎತ್ತಿಹಿಡಿಯಲಾಯಿತು.

ಮರಣದಂಡನೆಗೆ ಕೆಲವು ವಾರಗಳ ಮೊದಲು ಕಸಬ್‌ ಸಲ್ಲಿಸಿದ್ದ ಕ್ಷಮಾದಾನದ ಮನವಿಯನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ನವೆಂಬರ್ 5, 2012 ರಂದು ತಿರಸ್ಕರಿಸಿದರುಇಂಡಿಯನ್ ಎಕ್ಸ್‌ಪ್ರೆಸ್‌ನ 2012ರ ವರದಿಯ ಪ್ರಕಾರ, ಮರಣದಂಡನೆ ಶಿಕ್ಷೆಯನ್ನು ಬದಲಿಸುವಂತೆ 203 ಕ್ಕೂ ಹೆಚ್ಚು ಜನರು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಸಲ್ಲಿಸಿದ್ದ ಮನವಿಗೆ ಸಹಿ ಹಾಕಿದ್ದರು.

ಮುಂಬೈ ಮೂಲದ ವಕೀಲ ಯುಗ್ ಚೌಧರಿ ಅವರು ಅಕ್ಟೋಬರ್ 28, 2012 ರಂದು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದರು. ರಾಷ್ಟ್ರಪತಿಗಳಿಗೆ ಕಳುಹಿಸಿದ ಮೊದಲ ಬ್ಯಾಚ್‌ನಲ್ಲಿ 203 ಜನರು ಅರ್ಜಿಗೆ ಸಹಿ ಹಾಕಿದ್ದರು. ಎರಡನೇ ಬ್ಯಾಚ್‌ನಲ್ಲಿ ಸುಮಾರು 15-20 ಸಹಿಗಳನ್ನು ಪಡೆಯಲಾಗಿದೆ, ಅದನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ” ಎಂದು ಚೌಧರಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಅಖಿಲೇಶ್‌ ಯಾದವ್ ಕೂಡ ಅರ್ಜಿಗೆ ಸಹಿ ಹಾಕಿದ್ದಾರೆ ಎಂಬ ಹೇಳಿಕೆಗಳು ವೈರಲ್‌ ಆಗುತ್ತಿದ್ದ ಹಿನ್ನೆಲೆಯಲ್ಲಿ ಆಲ್ಟ್‌ ನ್ಯೂಸ್‌ ಕೂಡ ಚೌಧರಿ ಅವರನ್ನು ಸಂಪರ್ಕಿಸಿದಾಗ, ಅವರು ಅಖಿಲೇಶ್ ಯಾದವ್ ಅರ್ಜಿಗೆ ಸಹಿ ಮಾಡಿದವರಲ್ಲಿ ಒಬ್ಬರಲ್ಲ ಎಂದು ಅವರು ದೃಢಪಡಿಸಿದ್ದಾರೆ. “ಸಹಿ ಮಾಡಿದವರಿಗೆ ಸಾಕಷ್ಟು ಕಿರುಕುಳ ನೀಡಲಾಗಿರುವುದರಿಂದ ವಿಷಯದ ಕುರಿತು ಯಾವುದೇ ಹೆಚ್ಚಿನ ಪ್ರಶ್ನೆಗಳಿಗೆ ಉತ್ತರಿಸಲು ನಾನು ಸಿದ್ಧನಿಲ್ಲ” ಎಂದೂ ಅವರು ಹೇಳಿದ್ದಾರೆ.

ಆದ್ದರಿಂದ, ಬಿಜೆಪಿ ನಾಯಕ ಅರುಣ್ ಯಾದವ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಕಸಬ್‌ನ ಮರಣದಂಡನೆಗೆ ಕ್ಷಮಾದಾನ ಕೋರುವ ಅರ್ಜಿಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಸಹಿ ಮಾಡಿದ್ದಾರೆ ಎಂದು ಸುಳ್ಳು ಹೇಳಿಕೆಯನ್ನು ಹಂಚಿಕೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ 2022ರ ಆರಂಭದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪ್ರಭಲ ನಾಯಕರಲ್ಲಿ ಒಬ್ಬರಾದ ಅಖಿಲೇಶ್ ಯಾದವ್ ಅವರ ವಿರುದ್ದ ಅಪಪ್ರಚಾರ ಮಾಡಲಾಗುತ್ತಿದ್ದು, ಅಂತದ್ದೇ ಉದ್ದೇಶದಿಂದ ಈ ಪೋಸ್ಟ್‌ ವೈರಲ್ ಆಗಿದೆ.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ: ಗೋವಾ ಬಿಜೆಪಿ ಸಚಿವ ಮಿಲಿಂದ್ ನಾಯಕ್ ರಾಜೀನಾಮೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...