Homeಫ್ಯಾಕ್ಟ್‌ಚೆಕ್FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು...

FACT CHECK : ಕಾಂಗ್ರೆಸ್‌ನ ಗ್ಯಾರಂಟಿ ಹಣಕ್ಕಾಗಿ ಮಹಿಳೆಯರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದಾರೆ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಲೋಕಸಭೆ ಚುನಾವಣೆಯ ಫಲಿತಾಂಶ ಘೋಷಣೆಯಾಗಿ ಹೊಸ ಸರ್ಕಾರ ರಚನೆಯಾದ ಬಳಿಕ, ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಮುಸ್ಲಿಂ ಮಹಿಳೆಯರು ಬ್ಯಾಂಕ್, ಅಂಚೆ ಕಚೇರಿಗಳ ಮುಂದೆ ಸರತಿ ಸಾಲಿನಲ್ಲಿ ನಿಂತಿರುವ ವಿಡಿಯೋಗಳನ್ನ ಹಂಚಿಕೊಂಡು, ” ಇವರು ಕಾಂಗ್ರೆಸ್‌ನ ಕಟಾ ಕಟಾ ಹಣಕ್ಕಾಗಿ ಕಾಯುತ್ತಿದ್ದಾರೆ” ಎಂದು ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.

Baba Banaras(@RealBababanaras) ಎಂಬ ಎಕ್ಸ್‌ ಬಳಕೆದಾರ ಬುರ್ಕಾಧಾರಿ ಮಹಿಳೆಯರು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ಕುಳಿತಿದ್ದ ವಿಡಿಯೋವೊಂದನ್ನು ಇತ್ತೀಚೆಗೆ ಹಂಚಿಕೊಂಡು, “ಅಕ್ಬರ್, ಬಾಬರ್ ಮತ್ತು ಔರಂಗಝೇಬ್‌ನ ಕುಟುಂಬ ಸದಸ್ಯರು ರಾಹುಲ್ ಗಾಂಧಿಯವರ “ಕಟಾಕಟ್‌ ಯೋಜನೆ” ಅಡಿಯಲ್ಲಿ ತಿಂಗಳಿಗೆ ಸಿಗುವ 8,500 ರೂಪಾಯಿ ಪಡೆಯಲು ಸರದಿ ಸಾಲಿನಲ್ಲಿ ಕಾಯುತ್ತಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ ಚೆಕ್ : ಎಕ್ಸ್‌ ಬಳಕೆದಾರ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಇದು 2020ರಲ್ಲಿ ಕೇಂದ್ರ ಸರ್ಕಾರದ ಜನ್‌ಧನ್ ಯೋಜನೆಯ ಮಹಿಳಾ ಫಲಾನುಭವಿಗಳು ಉತ್ತರ ಪ್ರದೇಶದ ಮುಝಾಫರ್ ನಗರದ ಬ್ಯಾಂಕ್‌ ಒಂದರ ಹೊರಗೆ ಸಾಲುಗಟ್ಟಿ ನಿಂತಿದ್ದ ದೃಶ್ಯ ಎಂದು ಗೊತ್ತಾಗಿದೆ.

ಆಗಾಗ ಕೋಮು ವೈಷಮ್ಯದ ಸುದ್ದಿಗಳನ್ನು ಹಂಚಿಕೊಳ್ಳುವ ಸುದರ್ಶನ್ ನ್ಯೂಸ್‌ನ ಸಂಪಾದಕ ಸುರೇಶ್ ಚವ್ಹಾಂಕೆ 2021ರಲ್ಲಿ ಇದೇ ವಿಡಿಯೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡು “ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸಿ, ಉಚಿತ ಪಡಿತರ ಸಾಲು ನೋಡಿ ಕಣ್ಣು ತೆರೆಯಿರಿ” ಎಂದು ಹಿಂದಿ ಭಾಷೆಯಲ್ಲಿ ಬರೆದುಕೊಂಡಿದ್ದರು. ಈ ಮೂಲಕ ಪರೋಕ್ಷವಾಗಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿ ದ್ವೇಷ ಹರಡುವ ಪ್ರಯತ್ನ ಮಾಡಿದ್ದರು.

ಸುರೇಶ್ ಚವ್ಹಾಂಕೆ ಹಂಚಿಕೊಂಡಿದ್ದ ವಿಡಿಯೋಗೆ ಕಮೆಂಟ್ ಮಾಡಿದ್ದ ಖ್ಯಾತ ಫ್ಯಾಕ್ಟ್‌ ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್” “ಕಳೆದ ವರ್ಷ ಮುಝಾಫರ್‌ ನಗರದ ಬ್ಯಾಂಕ್‌ನ ಹೊರಗೆ ಮಹಿಳೆಯರು ತಮ್ಮ ಜನ್ ಧನ್ ಖಾತೆಯಿಂದ ಹಣವನ್ನು ಹಿಂಪಡೆಯಲು ಸಾಧ್ಯವಾಗುವುದಿಲ್ಲ ಎಂಬ ಭಯದಿಂದ ಸರತಿ ಸಾಲಿನಲ್ಲಿ ನಿಂತಿದ್ದ ವಿಡಿಯೋವನ್ನು, ಮುಸ್ಲಿಂ ಮಹಿಳೆಯರು ಉಚಿತ ಪಡಿತರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದಾರೆ ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ” ಎಂದು ತಿಳಿಸಿದ್ದರು.

ಏಪ್ರಿಲ್ 20, 2020ರಲ್ಲಿ ನ್ಯೂಸ್‌ 18 ಇಂಡಿಯಾ ಈ ಕುರಿತು ವಿಡಿಯೋ ಸುದ್ದಿ ಪ್ರಕಟಿಸಿತ್ತು. ಸುದ್ದಿಯಲ್ಲಿ “ಜನ್ ಧನ್ ಯೋಜನೆಯ ಫಲಾನುಭವಿಗಳು ತಮ್ಮ ಖಾತೆಯಲ್ಲಿ ಠೇವಣಿ ಇಟ್ಟಿರುವ 500 ರೂ. ಅನ್ನು ಹಿಂತೆಗೆದುಕೊಳ್ಳದಿದ್ದರೆ ಬ್ಯಾಂಕ್‌ಗೆ ವಾಪಸ್ ಹೋಗಲಿದೆ ಎಂಬ ವದಂತಿ ಹಬ್ಬಿದೆ. ಇದರಿಂದ ಮಹಿಳಾ ಖಾತೆದಾರರು ತಮ್ಮ ಖಾತೆಯಿಂದ ಹಣ ವಾಪಸ್ ಪಡೆದುಕೊಳ್ಳಲು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದಾರೆ. ಆದರೆ, ಬ್ಯಾಂಕ್ ಅಧಿಕಾರಿಗಳು ಖಾತೆಯಿಂದ ಹಣ ವಾಪಸ್ ಹೋಗುವುದಿಲ್ಲ. ಖಾತೆಯಲ್ಲೇ ಉಳಿಯಲಿದೆ ಎಂದು ತಿಳಿಸಿದ್ದಾರೆ ಎಂದು ಹೇಳಲಾಗಿತ್ತು.

ಕೋವಿಡ್ -19ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರಿಗೆ ಸಹಾಯವಾಗಲೆಂದು ಜನ್ ಧನ್ ಖಾತೆದಾರರಿಗೆ ಮೂರು ತಿಂಗಳಿಗೊಮ್ಮೆ 500 ರೂ. ಸಹಾಯಧನ ನೀಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಮಹಿಳೆಯರ ಖಾತೆಗೆ 500 ರೂ. ಜಮಾ ಮಾಡಲಾಗಿತ್ತು. ಹೀಗೆ ಜಮೆಯಾದ ಹಣ ಡ್ರಾ ಮಾಡದಿದ್ದರೆ ವಾಪಸ್ ಹೋಗಲಿದೆ ಎಂಬ ವದಂತಿ ಹರಡಿದ್ದರಿಂದ ಮಹಿಳಾ ಖಾತೆದಾರರು ಬ್ಯಾಂಕ್ ಮುಂದೆ ಸಾಲುಗಟ್ಟಿ ನಿಂತಿದ್ದರು. ಆದರ ವಿಡಿಯೋ ಈಗ ಹಂಚಿಕೊಳ್ಳಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ನಾವು ಮೇಲೆ ಉಲ್ಲೇಖಿಸಿದಂತೆ ಎಕ್ಸ್ ಬಳಕೆದಾರ ಹಂಚಿಕೊಂಡಿರುವ ವಿಡಿಯೋ, ರಾಹುಲ್ ಗಾಂಧಿ ಹೇಳಿರುವ ಕಾಂಗ್ರೆಸ್‌ನ ಭರವಸೆಯಾದ ಮಹಾಲಕ್ಷಿ ಯೋಜನೆಯ ಹಣ ಪಡೆಯಲು ಮಹಿಳೆಯರು ಕಾಯುತ್ತಿರುವುದಲ್ಲ. ಬದಲಿಗೆ 2020ರಲ್ಲಿ ಜನ್ ಧನ್ ಖಾತೆಯ ಹಣ ಡ್ರಾ ಮಾಡಲು ಕಾದಿರುವ ವಿಡಿಯೋ ಆಗಿದೆ.

ಇದನ್ನೂ ಓದಿ : FACT CHECK : ರಾಷ್ಟ್ರಪತಿ ಭವನದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...