Homeಫ್ಯಾಕ್ಟ್‌ಚೆಕ್FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

FACT CHECK : ಸಾವಿರಾರು ಬಾಂಗ್ಲಾ ಮುಸ್ಲಿಮರು ಭಾರತಕ್ಕೆ ಬಂದಿದ್ದಾರೆ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೆ

- Advertisement -
- Advertisement -

ರೈಲಿನ ತುಂಬಾ ಕಿಕ್ಕಿರಿದು ಜನರು ಪ್ರಯಾಣಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ರೈಲು ಬಾಂಗ್ಲಾದೇಶದಿಂದ ಭಾರತದ ಕಡೆಗೆ ಬರುತ್ತಿದೆ ಎಂದು ಹೇಳಲಾಗಿದೆ.

“ಮುಂದಿನ ದಿನಗಳಲ್ಲಿ ನಿಮ್ಮ ಆಸ್ತಿಯನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ, ಈ ಗುಂಪಿನ ಮುಂದೆ ನಿಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳನ್ನು ರಕ್ಷಿಸಲು ಸಾಧ್ಯವಿಲ್ಲ. ಅಸ್ಸಾಂ ಮತ್ತು ಕೋಲ್ಕತ್ತಾ ಮೂಲಕ ಬಾಂಗ್ಲಾದೇಶ ಈ ಮುಸ್ಲಿಮರನ್ನು ವಿರೋಧಿಸಲು ಇನ್ನೂ ಸಮಯವಿದೆ. ಇಲ್ಲದಿದ್ದರೆ ನಿಮಗೆ ಅಳಲು ಕಣ್ಣೀರು ಕೂಡ ಇರುವುದಿಲ್ಲ” ಎಂಬ ಸಂದೇಶದೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ವೈರಲ್ ವಿಡಿಯೋ ಮೂಲತಃ ಬಾಂಗ್ಲಾ ದೇಶದ್ದಾಗಿದೆ ಎಂದು ತಿಳಿದು ಬಂದಿದೆ.

ಗೆಟ್ಟಿ ಇಮೇಜಸ್‌‘ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಪೋಟೋ ಲಭ್ಯವಾಗಿದ್ದು, ಅದರ ಜೊತೆಗೆ “ಅಂತಿಮ ಪ್ರಾರ್ಥನೆಯೊಂದಿಗೆ ಬಿಶ್ವಾ ಇಜ್ತೆಮಾದ ಮೊದಲ ಹಂತ ಮುಕ್ತಾಯ. ಬಿಸ್ವಾ ಇಜ್ತೆಮಾ ಎಂದು ಕರೆಯಲ್ಪಡುವ ಮುಸ್ಲಿಮರ ವಾರ್ಷಿಕ ಸಭೆ 2020ರ ಜನವರಿ 12 ರಂದು ಬಾಂಗ್ಲಾದೇಶದ ಢಾಕಾ ಬಳಿಯ ಟೋಂಗಿಯಲ್ಲಿ ಕೊನೆಗೊಳ್ಳುವುದರಿಂದ ಬಾಂಗ್ಲಾದೇಶದ ಮುಸ್ಲಿಂ ಭಕ್ತರು ಅಖೇರಿ ಮುನಾಜತ್ ಅಥವಾ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ. ಟೋಂಗಿಯ ತುರಾಗ್ ನದಿಯ ದಡದಲ್ಲಿ ಅಖೇರಿ ಮುನಾಜತ್ ನೊಂದಿಗೆ ವಾರ್ಷಿಕ ಮುಸ್ಲಿಮರ ಸಭೆ ಕೊನೆಗೊಳ್ಳುತ್ತಿದ್ದಂತೆ ಸಾವಿರಾರು ಮುಸ್ಲಿಮರು ಮಾನವಕುಲದ ಆಶೀರ್ವಾದಕ್ಕಾಗಿ ಕೈ ಎತ್ತಿದರು” ಎಂದು ಬರೆದುಕೊಳ್ಳಲಾಗಿದೆ.

ಶಟರ್‌ ಸ್ಟಾಕ್‘ ಎಂಬ ಇನ್ನೊಂದು ಪೋಟೋ ವೆಬ್‌ಸೈಟ್‌ನಲ್ಲಿ ವೈರಲ್ ವಿಡಿಯೋಗೆ ಸಂಬಂಧಿಸಿದ ಫೋಟೋ ದೊರೆತಿದ್ದು, “ಫೆಬ್ರವರಿ 11, 2024 ರಂದು ಬಾಂಗ್ಲಾದೇಶದ ಢಾಕಾದಲ್ಲಿರುವ ಟೋಂಗಿಯಲ್ಲಿರುವ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಅಥವಾ ಎರಡನೇ ಹಂತದ ಅಂತಿಮ ಪ್ರಾರ್ಥನೆಯಲ್ಲಿ ಭಾಗವಹಿಸಿದ ನಂತರ ಮುಸ್ಲಿಂ ಭಕ್ತರು ಕಿಕ್ಕಿರಿದ ರೈಲಿನಲ್ಲಿ ಹೊರಡುತ್ತಾರೆ” ಎಂದು ಬರೆಯಲಾಗಿದೆ.

ಇಲ್ಲಿ ಎಲ್ಲಿಯೂ ಬಾಂಗ್ಲಾದೇಶದಿಂದ ಕೋಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ಉಲ್ಲೇಖಿಸಿಲ್ಲ. ಈ ಫೋಟೋಗಳ ಮೂಲಕ ಪ್ರತೀ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ ಮತ್ತು ಅಲ್ಲಿಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಕಿಕ್ಕಿರಿದ ರೈಲಿನಲ್ಲಿ ಆಗಮಿಸುತ್ತಾರೆ ಎಂದು ತಿಳಿಸಲಾಗಿದೆ.

ಒಟ್ಟಿನಲ್ಲಿ ಪ್ರತಿ ವರ್ಷ ಬಾಂಗ್ಲಾದೇಶದಲ್ಲಿ ಬಿಸ್ವಾ ಇಜ್ತೆಮಾದಲ್ಲಿ ಅಖೇರಿ ಮುನಾಜತ್ ಎಂಬಲ್ಲಿ ವಾರ್ಷಿಕ ಪ್ರಾರ್ಥನೆ ನಡೆಯುತ್ತದೆ. ಈ ಪ್ರಾರ್ಥನೆಗೆ ಸಾವಿರಾರು ಜನ ಮುಸ್ಲಿಂ ಭಕ್ತಾದಿಗಳು ಸೇರುತ್ತಾರೆ ಈ ವಿಡಿಯೋವನ್ನು ಸುಳ್ಳು ಪ್ರತಿಪಾದನೆಯೊಂದಿಗೆ ಬಾಂಗ್ಲಾದೇಶದಿಂದ ಕೊಲ್ಕತ್ತಾ ಅಥವಾ ಭಾರತಕ್ಕೆ ಬರುತ್ತಿರುವ ರೈಲು ಎಂದು ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಹಿಂದೂಗಳ ಮದುವೆಯಲ್ಲಿ ಮುಸ್ಲಿಂ ಯುವಕ ಸಿಹಿ ತಿಂಡಿಗೆ ಮೂತ್ರ ಮಾಡಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...