Homeಫ್ಯಾಕ್ಟ್‌ಚೆಕ್FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

- Advertisement -
- Advertisement -

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌ ಮೂಲಕ ವಿಡಂಬನಾತ್ಮಕ ಅಭಿಯಾನವಾಗಿ ಪ್ರಾರಂಭವಾದದ್ದು ಆನ್‌ಲೈನ್ ಆಂದೋಲನವಾಗಿ ದೊಡ್ಡ ಮಟ್ಟದಲ್ಲಿ ಬೆಳೆಯುತ್ತಿರುವಂತೆ ಕಾಣುತ್ತಿದೆ.

ದೇಶದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಈ ಸಿಜೆಪಿಯ ಸ್ಥಾಪಕರ ಅಭಿಜೀತ್ ದಿಪ್ಕೆ ಎಂಬಾತ ಎನ್ನಲಾಗ್ತಿದೆ. 30 ವರ್ಷ ವಯಸ್ಸಿನ ಅಭಿಜೀತ್ ದಿಪ್ಕೆ ಪುಣೆಯಲ್ಲಿ ಪತ್ರಿಕೋದ್ಯಮ ಅಧ್ಯಯನ ಮಾಡಿದ್ದು, ಪ್ರಸ್ತುತ ಬೋಸ್ಟನ್ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಸಂಪರ್ಕದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾರೆ ಎಂದು ಮೇ 22ರಂದು ಎನ್‌ಡಿಟಿವಿ ವರದಿ ಮಾಡಿದೆ.

ಸಿಜೆಪಿಗೆ ಇಂಟರ್‌ನೆಟ್‌ನಲ್ಲಿ ಭಾರೀ ಬೆಂಬಲ ವ್ಯಕ್ತವಾಗಿ, ಅದು ಆಡಳಿತವನ್ನು ಮುಖ್ಯವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲು ಶುರು ಮಾಡುತ್ತಿದ್ದಂತೆ, ಬೆಜೆಪಿ ಬೆಂಬಲಿಗರು ಅಲರ್ಟ್ ಆಗಿದ್ದು, ಸಿಜೆಪಿ ಪಾಕಿಸ್ತಾನ ಮೂಲದ್ದು, ದೇಶದ ಯುವಜನರನ್ನು ಪ್ರಚೋದಿಸಿ ಆಂತರಿಕವಾಗಿ ದಂಗೆಯೆಬ್ಬಿಸುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದಾರೆ.

ಬಿಜೆಪಿ, ಸಂಘಪರಿವಾರವನ್ನು ವಿರೋಧಿಸುವವರು ದೇಶದ್ರೋಹಿಗಳು ಎಂಬ ತಮ್ಮ ಎಂದಿನ ಅಸ್ತ್ರ ಪ್ರಯೋಗಿಸಿರುವ ಬಿಜೆಪಿ ಬೆಂಬಲಿಗರು, ಸಿಜೆಪಿ ಪಾಕಿಸ್ತಾನ ಮೂಲದ್ದು, ಅದನ್ನು ಬೆಂಬಲಿಸುವವರು ದೇಶದ್ರೋಹಿಗಳು ಎಂಬಂತಹ ಒಂದು ಪ್ರಚಾರವನ್ನು ಇಂಟರ್‌ನೆಟ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಕೈಗೊಂಡಿದ್ದಾರೆ.

ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರು ಸಿಜೆಪಿಯ ಫಾಲೋವರ್ಸ್‌ಗಳ ಪೈ ಚಾರ್ಟ್ ಹೊಂದಿರುವ ಗ್ರಾಫಿಕ್ ಅನ್ನು 2026ರ ಮೇ 21ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ಸಿಜೆಪಿ ಫಾಲೋವರ್ಸ್‌ಗಳ ಪೈಕಿ 49% ಮಂದಿ ಪಾಕಿಸ್ತಾನದವರು, 14% ಅಮೆರಿಕದವರು, 14% ಬಾಂಗ್ಲಾದೇಶದವರು ಮತ್ತು ಕೇವಲ 9% ಮಾತ್ರ ಭಾರತದವರು, ಉಳಿದವರು ಯುನೈಟೆಡ್ ಕಿಂಗ್‌ಡಂ (ಯುಕೆ) ಆಸ್ಟ್ರೇಲಿಯಾ, ಸೌದಿ ಅರೇಬಿಯಾ ಮತ್ತು ಯುಎಇಯವರು ಎಂದು ಹೇಳಿಕೊಂಡಿದ್ದಾರೆ. ಬಗ್ಗಾ ಸಿಜೆಪಿಯನ್ನು ‘ಪಾಕಿಸ್ತಾನ ಜನತಾ ಪಕ್ಷ’ ಎಂದು ತಮ್ಮ ಪೋಸ್ಟ್‌ನಲ್ಲಿ ಟೀಕಿಸಿದ್ದಾರೆ.

ಬಲಪಂಥೀಯ ಸಾಮಾಜಿಕ ಜಾಲತಾಣ ಪ್ರಭಾವಿ ರಿಷಿ ಬಾಗ್ರಿ ಕೂಡ 2026ರ ಮೇ 21ರಂದು ಅದೇ ಗ್ರಾಫಿಕ್ ಅನ್ನು ಪೋಸ್ಟ್ ಮಾಡಿ “ಜಿರಳೆ ಜನತಾ ಪಕ್ಷದ ಸತ್ಯ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಮೆರಿಕದ ನಾಗರಿಕರು ಇದರ ಇನ್‌ಸ್ಟಾ ಫಾಲೋವರ್ಸ್‌ಗಳಲ್ಲಿ 77% ರಷ್ಟಿದ್ದಾರೆ. ಭಾರತದವರು ಕೇವಲ 9% ರಷ್ಟನ್ನು ಮಾತ್ರ” ಎಂದು ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್ ಪತ್ರಕರ್ತೆ ಚಿತ್ರಾ ತ್ರಿಪಾಠಿ ಕೂಡ ಫೇಸ್‌ಬುಕ್‌ನಲ್ಲಿ ವೈರಲ್ ಆದ ಹೇಳಿಕೆಯನ್ನು ಪುಷ್ಟೀಕರಿಸಿದ್ದರು. ಬಗ್ಗಾ ಅವರ ಮಾತುಗಳನ್ನು ಉಲ್ಲೇಖಿಸಿ, “ಕಾಕ್ರೋಚ್ ಜನತಾ ಪಕ್ಷದ ಅರ್ಧದಷ್ಟು ಫಾಲೋವರ್ಸ್ ಪಾಕಿಸ್ತಾನಿಗಳು” ಎಂದು ಬರೆದುಕೊಂಡಿದ್ದರು.

ಝೀ-ಮಾಲೀಕತ್ವದ ಸುದ್ದಿ ಸಂಸ್ಥೆ WION ಕೂಡ ಸಿಜೆಪಿಯ ಇನ್‌ಸ್ಟಾಗ್ರಾಮ್ ಪೇಜ್‌ನ “ವಿದೇಶಿ ಅನುಯಾಯಿಗಳ” ಬಗ್ಗೆ ವರದಿಯನ್ನು ಪ್ರಕಟಿಸಿತ್ತು. “ಪಾಕಿಸ್ತಾನ ‘ಜಿರಳೆ ಜನತಾ ಪಕ್ಷ’ದತ್ತ ದೃಷ್ಟಿ ಹಾಯಿಸಿದೆಯೇ? ನೆಟಿಜನ್‌ಗಳು ಹೆಚ್ಚಿನ ಸಂಖ್ಯೆಯ ಪಾಕ್, ಬಾಂಗ್ಲಾದೇಶ ಮತ್ತು ಟರ್ಕಿ ಮೂಲದ ಫಾಲೋವರ್ಸ್‌ಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿತ್ತು.

ಇದೇ ರೀತಿಯ ಪೋಸ್ಟ್‌ಗಳನ್ನು ಹಲವು ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ನಿಜವೇ ಎಂಬ ಕುತೂಹಲದಿಂದ ನಾವು ಈ ಬಗ್ಗೆ ಮಾಹಿತಿಯನ್ನು ಹುಡುಕಿದ್ದೆವು. ಈ ವೇಳೆ ದೇಶದ ಪ್ರಸಿದ್ದ ಫ್ಯಾಕ್ಟ್‌ಚೆಕ್ ಸುದ್ದಿ ಸಂಸ್ಥೆ altnews.in ಈ ಬಗ್ಗೆ ಸತ್ಯಾಸತ್ಯತೆಯ ವರದಿ ಪ್ರಕಟಿಸಿರುವುದು ಗಮನಿಸಿದ್ದೇವೆ.

altnews.in ತನ್ನ ವರದಿಯಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ನಾವು ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರನ್ನು ಸಂಪರ್ಕಿಸಿದ್ದೇವೆ. ಈ ವೇಳೆ ಅವರು ತಮ್ಮ ಇನ್‌ಸ್ಟಾಗ್ರಾಮ್ ಪೇಜ್‌ನ ಫಾಲೋವರ್ಸ್‌ಗಳ ಮಾಹಿತಿಯನ್ನು ಸ್ಕ್ರೀನ್‌ ರೆಕಾರ್ಡ್ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ. ಅದರ ಪ್ರಕಾರ, ಸಿಜೆಪಿ ಇನ್‌ಸ್ಟಾಗ್ರಾಮ್‌ ಪೇಜ್‌ನ ಫಾಲೋವರ್ಸ್‌ಗಳ ಪೈಕಿ ಶೇಕಡ 94.7ರಷ್ಟು ಜನರು ಭಾರತೀಯರು, 1% ಯುಎಸ್‌ದವರು, 0.7% ಯುಕೆ ಮತ್ತು ತಲಾ 0.6% ಜನರು ಕೆನಡಾ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನವರು ಎಂದು ಹೇಳಿದೆ.

altnews.in ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋ ಕೆಳಗೆ ನೋಡಬಹುದು

ಗಮನಾರ್ಹವಾಗಿ, ಅಭೀಜಿತ್ ದೀಪ್ಕೆ ಹಂಚಿಕೊಂಡ ಸ್ಕ್ರೀನ್ ರೆಕಾರ್ಡ್ ವಿಡಿಯೋದಲ್ಲಿ ಸಿಜೆಪಿಯ ಹೆಚ್ಚಿನ ಫಾಲೋವರ್ಸ್‌ಗಳನ್ನು ದೇಶಗಳಾಗಿ ವಿಂಗಡಿಸಿ ನೋಡಿದಾಗ ಅದರಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಎರಡೂ ಕಾಣಿಸುವುದಿಲ್ಲ. ವೈರಲ್ ಹೇಳಿಕೆಗಳನ್ನು ನಿರಾಕರಿಸಲು ದೀಪ್ಕೆ ಸ್ವತಃ ಎಕ್ಸ್‌ನಲ್ಲಿ ಬರೆದುಕೊಂಡಿದ್ದು, ಮೇ 21 ರಂದು ಸಂಜೆ 5:17ಕ್ಕೆ ಅವರು ಅಪ್ಲೋಡ್ ಮಾಡಿದ ಸ್ಕ್ರೀನ್‌ಶಾಟ್‌ನಲ್ಲಿ, ಇದೇ ರೀತಿಯ ಅಂಕಿ ಅಂಶಗಳನ್ನು ಕಾಣಬಹುದು.

ಮೇ 23ರಂದು ಕೇಂದ್ರ ಸಚಿವ ಕಿರಣ್ ರಿಜಿಜು ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸುವ ವೇಳೆಯೂ ಅಭೀಜಿತ್ ಮೇಲಿನ ಸ್ಕ್ರೀನ್ ರೆಕಾರ್ಡ್ ಹಂಚಿಕೊಂಡಿದ್ದರು. “ನಮ್ಮ ಖಾತೆ ಹ್ಯಾಕ್ ಆಗುವ ಮೊದಲು ನಾವು ಮಾಧ್ಯಮಗಳೊಂದಿಗೆ ಹಂಚಿಕೊಂಡ ನಮ್ಮ ಪ್ರೇಕ್ಷಕರ ಜನಸಂಖ್ಯಾಶಾಸ್ತ್ರದ ಸ್ಕ್ರೀನ್ ರೆಕಾರ್ಡಿಂಗ್ ಇದು. ಶೇ. 94ಕ್ಕಿಂತ ಹೆಚ್ಚು ಪ್ರೇಕ್ಷಕರು ಭಾರತದವರು. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಭಾರತೀಯ ಯುವಕರನ್ನು ಪಾಕಿಸ್ತಾನಿ ಎಂದು ಏಕೆ ಹಣೆಪಟ್ಟಿ ಕಟ್ಟುತ್ತಿದ್ದಾರೆ?” ಎಂದು ಪ್ರಶ್ನಿಸಿದ್ದರು.

ಕಿರಣ್ ರಿಜಿಜು ಅವರು, “ಪಾಕಿಸ್ತಾನ ಮತ್ತು ಜಾರ್ಜ್ ಸೊರೊಸ್ ಗ್ಯಾಂಗ್‌ನಿಂದ ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಅನುಯಾಯಿಗಳನ್ನು ಹುಡುಕುತ್ತಿರುವವರ ಬಗ್ಗೆ ನನಗೆ ವಿಷಾದವಿದೆ” ಎಂದು ಯಾರನ್ನೂ ಉಲ್ಲೇಖಿಸದೆ ಮೇ 23ರಂದು ಪೋಸ್ಟ್ ಹಾಕಿದ್ದರು.

ಒಟ್ಟಿನಲ್ಲಿ, ಸಿಜೆಪಿಯ ಫಾಲೋವರ್ಸ್‌ಗಳಲ್ಲಿ ಹೆಚ್ಚಿನವರು ಪಾಕಿಸ್ತಾನಿಗಳು ಎಂಬ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಜಿಂದರ್ ಬಗ್ಗಾ ಅವರ ಹೇಳಿಕೆಯನ್ನು ಇತರ ಅನೇಕ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಬಲವಾಗಿ ಪ್ರತಿಪಾದಿಸಿದ್ದಾರೆ. ಆದರೆ, ಅದು ಸುಳ್ಳು. ಸಿಜೆಪಿಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಹಂಚಿಕೊಂಡ ಅಂಕಿ ಅಂಶಗಳ ಪ್ರಕಾರ, ಸಿಜೆಪಿಯ ಇನ್‌ಸ್ಟಾಗ್ರಾಮ್ ಫಾಲೋವರ್ಸ್‌ಗಳಲ್ಲಿ ಶೇಕಡ 90ರಷ್ಟು ಮಂದಿ ಭಾರತೀಯರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...

SIR ತಂದಿಟ್ಟ ಸಂಕಷ್ಟ : ದಾಖಲೆ ಹೊಂದಿಸಲು ಅಲೆಮಾರಿಗಳ ಅಲೆದಾಟ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಭಾಗವಾಗಿ ಅನ್‌ಮ್ಯಾಪ್ಡ್ ಮತ್ತು ಅನಾಮಲಿಸ್ ಮತದಾರರಿಗೆ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ 23,45,428 ಅನ್‌ ಮ್ಯಾಪ್ಡ್ (ಪ್ರೊಜೆನಿ ಮ್ಯಾಪಿಂಗ್...