Homeದಿಟನಾಗರಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

- Advertisement -
- Advertisement -

ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರನ್ನು ಪ್ರೇಮಿಗಳ ದಿನವಾದ ಫೆಬ್ರವರಿ 14, 1931 ರಂದು ಗಲ್ಲಿಗೇರಿಸಲಾಯಿತು ಎನ್ನುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿ ವರ್ಷ ಹಂಚಿಕೊಳ್ಳಲಾಗುತ್ತಿದೆ. ಇದು ನಿಜವೇ ಪರಿಶೀಲಿಸೋಣ.

ಪೋಸ್ಟ್‌ನ ಆರ್ಕೈವ್ ಮಾಡಲಾದ ಆವೃತ್ತಿಯನ್ನು ಇಲ್ಲಿ ನೋಡಬಹುದು.

ಪ್ರೇಮಿಗಳ ದಿನಾಚರಣೆಯನ್ನು ಕೆಲ ಹಿಂದೂ ಮತಾಂಧ ಸಂಘಟನೆಗಳು ವಿರೋಧಿಸುತ್ತವೆ. ಹಾಗಾಗಿ ಫೆಬ್ರವರಿ 14ರ ಪ್ರೇಮಿಗಳ ದಿನದಂದೇ ಭಗತ್ ಸಿಂಗ್ ಮತ್ತು ಆತನ ಸಂಗಾತಿಗಳು ದೇಶಕ್ಕಾಗಿ ಹುತಾತ್ಮರಾಗಿದ್ದಾರೆ, ಅವರನ್ನು ಸ್ಮರಿಸುವುದು ಬಿಟ್ಟು ಪ್ರೇಮಿಗಳ ದಿನಾಚರಣೆ ಸಲ್ಲ ಎಂದು ತಪ್ಪು ಹರಡಲಾಗುತ್ತಿದೆ.

ಫ್ಯಾಕ್ಟ್‌ಚೆಕ್

ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರ ತ್ಯಾಗದ ನೆನಪಿಗಾಗಿ ಪ್ರತಿ ವರ್ಷ ಮಾರ್ಚ್ 23 ಅನ್ನು ‘ಶಹೀದ್ ದಿವಸ್/ಹುತಾತ್ಮರ ದಿನ’ ಎಂದು ಆಚರಿಸಲಾಗುತ್ತದೆ. ಹುತಾತ್ಮರ ದಿನದಂದು ಪ್ರಸಾರವಾಗಿರುವ ‘ಡಿಡಿ ನ್ಯೂಸ್’ ವಿಡಿಯೋವನ್ನು ಇಲ್ಲಿ ವೀಕ್ಷಿಸಬಹುದು.

ಅವರ ಮರಣದಂಡನೆಗೆ ಸಂಬಂಧಿಸಿದಂತೆ ಮಾರ್ಚ್ 25, 1931 ರಂದು ‘ದಿ ಟ್ರಿಬ್ಯೂನ್’ ಪ್ರಕಟಿಸಿದ ಲೇಖನವನ್ನು ‘ಪ್ರಸಾರ್ ಭಾರತಿ’ ಟ್ವೀಟ್‌ ಅನ್ನು ಇಲ್ಲಿ ನೋಡಬಹುದು. 24 ಮಾರ್ಚ್ 1931 ರಂದು ಪ್ರಕಟವಾದ ‘ದಿ ಹಿಂದೂ’ ಪತ್ರಿಕೆಯ ಲೇಖನವನ್ನು ಇಲ್ಲಿ ಓದಬಹುದು.

ನ್ಯಾಷನಲ್ ಆರ್ಕೈವ್ಸ್ ಆಫ್ ಇಂಡಿಯಾ ಪೋರ್ಟಲ್‌ನಿಂದ, ಫ್ಯಾಕ್ಟ್ಲಿ ಸಂಸ್ಥೆಯು 1931 ರ ಮಾರ್ಚ್ ತಿಂಗಳಿನಲ್ಲಿ ಭಾರತದ ಆಂತರಿಕ ರಾಜಕೀಯ ಪರಿಸ್ಥಿತಿಯ ಹದಿನೈದು ವರದಿಗಳನ್ನು ಕಂಡುಕೊಂಡಿತು. ಈ ವರದಿಗಳನ್ನು ಬ್ರಿಟಿಷ್ ಸರ್ಕಾರಕ್ಕೆ ಮಾಸಿಕ ಆಧಾರದ ಮೇಲೆ ಕಳುಹಿಸಲಾಗಿದೆ. ಸುಖದೇವ್ ಮತ್ತು ರಾಜ್‌ಗುರು ಅವರೊಂದಿಗೆ ಭಗತ್ ಸಿಂಗ್ ಅವರ ಮರಣದಂಡನೆ ಮಾರ್ಚ್ 23, 1931 ರ ಸಂಜೆ ನಡೆದಿದೆ ಎಂದು ಈ ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖದೇವ್ ಅವರನ್ನು ಮಾರ್ಚ್ 23, 1931 ರಂದು ಗಲ್ಲಿಗೇರಿಸಲಾಗಿತ್ತು. ಆದರೆ ಪ್ರೇಮಿಗಳ ದಿನದಂದು ಅಲ್ಲ ಎಂಬುದು ಈ ಮೂಲಕ ಸ್ಪಷ್ಟವಾಗುತ್ತದೆ.

ಕೃಪೆ: ಫ್ಯಾಕ್ಟ್ಲಿ


ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಸಿಂಘು ಗಡಿಯ ಒಂದು ಭಾಗದಲ್ಲಿ ದಾಂಧಲೆ ಮಾಡಿದ್ದು ಸ್ಥಳೀಯರಲ್ಲ ಬಿಜೆಪಿ ಕಾರ್ಯಕರ್ತರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...