HomeದಿಟನಾಗರFACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

FACT CHECK : ಕಾಂಗ್ರೆಸ್ ಪ್ರಣಾಳಿಕೆ ಕುರಿತು ಬಿಜೆಪಿ ಹಾಕಿರುವ ಪೋಸ್ಟ್ ಸುಳ್ಳು

- Advertisement -
- Advertisement -

“ಕಾಂಗ್ರೆಸ್ ಪ್ರಾಣಾಳಿಕೆಯಾ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯಾ?”

“ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ ಮತ್ತು ಇನ್ನೂ ಅನೇಕ ವಿಭಜಿಸುವ ಕಾರ್ಯಸೂಚಿಗಳು”

“ಕಾಂಗ್ರೆಸ್‌ನ ಕೆಟ್ಟ ಉದ್ದೇಶ ಸ್ಪಷ್ಟವಾಗಿದೆ: ಭಾರತೀಯರು ಕಷ್ಟಪಟ್ಟು ದುಡಿದ ಹಣವನ್ನು ತೆಗೆದುಕೊಂಡು ಅದನ್ನು ಮುಸ್ಲಿಮರಿಗೆ ಉಡುಗೊರೆಯಾಗಿ ನೀಡುವುದು. ಅವರು ನಮ್ಮ ಭೂಮಿ, ಸಂಪತ್ತು ಮತ್ತು ಹಕ್ಕುಗಳನ್ನು ವಶಪಡಿಸಿಕೊಳ್ಳುತ್ತಾರೆ, ಅವುಗಳನ್ನು ‘ಶಾಂತಿಯುತರಿಗೆ’ ಉಡುಗೊರೆಯಾಗಿ ನೀಡುತ್ತಾರೆ”

“ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಈ ರೀತಿ ಪೋಸ್ಟ್ ಒಂದನ್ನು ಬಿಜೆಪಿ ಕರ್ನಾಟಕ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಹಾಕಿದೆ. ಜೊತೆಗೆ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯ ಕೆಲ ಸ್ಕ್ರೀನ್ ಶಾಟ್‌ಗಳನ್ನು ಹಂಚಿಕೊಂಡಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಬಿಜೆಪಿ ಹೇಳಿರುವಂತೆ ಕಾಂಗ್ರೆಸ್ ಪ್ರಾಣಾಳಿಕೆಯಲ್ಲಿ ಮುಸ್ಲಿಂ ಪರ ಭರವಸೆಗಳನ್ನು ನೀಡಲಾಗಿದೆಯಾ? ಎಂಬುವುದರ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದೆ.

ಇದಕ್ಕಾಗಿ ನಾವು, ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಲೋಕಸಭೆ ಚುನಾವಣೆಯ ಪ್ರಣಾಳಿಕೆಯನ್ನು ಪರಿಶೀಲಿಸಿದ್ದೇವೆ. ಕಾಂಗ್ರೆಸ್‌ ಅಧಿಕೃತ ವೆಬ್‌ಸೈಟ್‌ನಲ್ಲಿರುವ ಪ್ರಣಾಳಿಕೆಯ 7 ಮತ್ತು 8ನೇ ಪುಟಗಳಲ್ಲಿ ‘ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ’ ಸಂಬಂಧಪಟ್ಟಂತೆ ಭರವಸೆಗಳನ್ನು ನೀಡಲಾಗಿದೆ. ಅವುಗಳು ಹೀಗಿವೆ..

1. ಸಂವಿಧಾನದ 15, 16, 25, 26, 28, 29 ಮತ್ತು 30ನೇ ವಿಧಿಗಳ ಅಡಿಯಲ್ಲಿ ಒಬ್ಬರ ನಂಬಿಕೆಯನ್ನು ಆಚರಿಸುವ ಮೂಲಭೂತ ಹಕ್ಕು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಖಾತರಿಪಡಿಸಿದ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

2. ಸಂವಿಧಾನದ 15, 16, 29 ಮತ್ತು 30 ನೇ ವಿಧಿಗಳ ಅಡಿಯಲ್ಲಿ ಖಾತರಿಪಡಿಸಿದ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ನಾವು ಗೌರವಿಸುತ್ತೇವೆ ಮತ್ತು ಎತ್ತಿ ಹಿಡಿಯುತ್ತೇವೆ.

3. ಶಿಕ್ಷಣ, ಉದ್ಯೋಗ, ವ್ಯವಹಾರ, ಸೇವೆಗಳು, ಕ್ರೀಡೆ, ಕಲೆ ಮತ್ತು ಇತರ ಕ್ಷೇತ್ರಗಳಲ್ಲಿ ಹೆಚ್ಚುತ್ತಿರುವ ಅವಕಾಶಗಳ ಸಂಪೂರ್ಣ ಲಾಭವನ್ನು ಪಡೆಯಲು ಅಲ್ಪಸಂಖ್ಯಾತರಿಗೆ ಸೇರಿದ ವಿದ್ಯಾರ್ಥಿಗಳು ಮತ್ತು ಯುವಕರನ್ನು ನಾವು ಪ್ರೋತ್ಸಾಹಿಸುತ್ತೇವೆ ಮತ್ತು ಸಹಾಯ ಮಾಡುತ್ತೇವೆ.

4. ನಾವು ವಿದೇಶದಲ್ಲಿ ಅಧ್ಯಯನಕ್ಕಾಗಿ ಮೌಲಾನಾ ಆಜಾದ್ ವಿದ್ಯಾರ್ಥಿವೇತನವನ್ನು ಪುನಃ ಸ್ಥಾಪಿಸುತ್ತೇವೆ ಮತ್ತು ವಿದ್ಯಾರ್ಥಿವೇತನದ ಸಂಖ್ಯೆಯನ್ನು ಹೆಚ್ಚಿಸುತ್ತೇವೆ.

5. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

6. ಅಲ್ಪಸಂಖ್ಯಾತರು ಶಿಕ್ಷಣ, ಆರೋಗ್ಯ, ಸಾರ್ವಜನಿಕ ಉದ್ಯೋಗ, ಲೋಕೋಪಯೋಗಿ ಒಪ್ಪಂದಗಳು, ಕೌಶಲ್ಯ ಅಭಿವೃದ್ಧಿ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತಾರತಮ್ಯವಿಲ್ಲದೆ ತಮ್ಮ ನ್ಯಾಯಯುತ ಪಾಲನ್ನು ಪಡೆಯುವುದನ್ನು ನಾವು ಖಚಿತಪಡಿಸುತ್ತೇವೆ.

7. ಪ್ರತಿಯೊಬ್ಬ ನಾಗರಿಕನಂತೆ, ಅಲ್ಪಸಂಖ್ಯಾತರಿಗೂ ಉಡುಗೆ, ಆಹಾರ, ಭಾಷೆ ಮತ್ತು ವೈಯಕ್ತಿಕ ಕಾನೂನುಗಳ ಆಯ್ಕೆಯ ಸ್ವಾತಂತ್ರ್ಯವಿದೆ ಎಂದು ಕಾಂಗ್ರೆಸ್ ಖಚಿತಪಡಿಸುತ್ತೇವೆ.

8. ನಾವು ವೈಯಕ್ತಿಕ ಕಾನೂನುಗಳ ಸುಧಾರಣೆಯನ್ನು ಪ್ರೋತ್ಸಾಹಿಸುತ್ತೇವೆ. ಅಂತಹ ಸುಧಾರಣೆಯನ್ನು ಸಂಬಂಧಪಟ್ಟ ಸಮುದಾಯಗಳ ಭಾಗವಹಿಸುವಿಕೆ ಮತ್ತು ಒಪ್ಪಿಗೆಯೊಂದಿಗೆ ಕೈಗೊಳ್ಳಬೇಕು.

9. ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಹೆಚ್ಚಿನ ಭಾಷೆಗಳನ್ನು ಸೇರಿಸುವ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ.

‘ನ್ಯಾಯಪತ್ರ’ ಎಂಬ ಹೆಸರಿನ 48 ಪುಟಗಳ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎಲ್ಲೂ ಬಿಜೆಪಿ ಹೇಳಿದಂತೆ “ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಜಾರಿ, ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ, ಮುಸ್ಲಿಮರಿಗೆ ವಿಶೇಷ ಮೀಸಲಾತಿ, ವೈಯಕ್ತಿಕ ಕಾನೂನುಗಳನ್ನು ಅಭ್ಯಾಸ ಮಾಡುವ ಸ್ವಾತಂತ್ರ್ಯ, ಮುಸ್ಲಿಮರನ್ನು ನೇರವಾಗಿ ನ್ಯಾಯಾಧೀಶರಾಗಿ ನೇಮಿಸಬೇಕು, ಮುಸ್ಲಿಮರನ್ನು ನೇಮಿಸಿಕೊಳ್ಳಲು ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಆದೇಶ” ಎಂಬ ಭರವಸೆಗಳನ್ನು ನೀಡಿಲ್ಲ.

ಬಿಜೆಪಿ ತನ್ನ ಎಕ್ಸ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ 5 ಸ್ಕ್ರೀನ್‌ ಶಾಟ್‌ಗಳನ್ನು ಹಂಚಿಕೊಂಡಿದೆ. ಅದರಲ್ಲೂ ಬಿಜೆಪಿ ಉಲ್ಲೇಖಿಸಿದ ಅಂಶಗಳು ಇಲ್ಲ.

1. ಬಿಜೆಪಿ ಹಂಚಿಕೊಂಡ ಸ್ಕ್ರೀನ್ ಶಾಟ್‌ಗಳಲ್ಲಿ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ ನಡೆಸುತ್ತೇವೆ. ಅದರ ಆಧಾರದ ಮೇಲೆ ಯೋಜನೆಗಳನ್ನು ರೂಪಿಸುತ್ತೇವೆ.

2. ಸಂವಿಧಾನಕ್ಕೆ ತಿದ್ದುಪಡಿ ತಂದು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯ 50 ಶೇ. ಮಿತಿಯನ್ನು ತೆಗೆಯುತ್ತೇವೆ.

3. ಅಲ್ಪಸಂಖ್ಯಾತರ ಆರ್ಥಿಕ ಸಬಲೀಕರಣವು ಭಾರತವು ತನ್ನ ಸಂಪೂರ್ಣ ಸಾಮರ್ಥ್ಯವನ್ನು ಅರಿತುಕೊಳ್ಳಲು ಅಗತ್ಯವಾದ ಹೆಜ್ಜೆಯಾಗಿದೆ. ಬ್ಯಾಂಕ್‌ಗಳು ಅಲ್ಪಸಂಖ್ಯಾತರಿಗೆ ಯಾವುದೇ ತಾರತಮ್ಯವಿಲ್ಲದೆ ಸಾಂಸ್ಥಿಕ ಸಾಲವನ್ನು ಒದಗಿಸುತ್ತವೆ ಎಂದು ನಾವು ಖಚಿತಪಡಿಸುತ್ತೇವೆ.

4. ಕಾಂಗ್ರೆಸ್ ವೈವಿಧ್ಯ ಆಯೋಗ ಸ್ಥಾಪಿಸಲಿದೆ, ಮಹಿಳೆಯರು ಮತ್ತು ಎಸ್‌ಸಿ ,ಎಸ್‌ಟಿ ಮತ್ತು ಒಬಿಸಿ ಮತ್ತು ಅಲ್ಪ ಸಂಖ್ಯಾತ ವರ್ಗದ ಹೆಚ್ಚು ಜನರನ್ನು ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನಾಗಿ ನೇಮಿಸುತ್ತೇವೆ ಎಂದು ಭರವಸೆ ನೀಡುತ್ತೇವೆ ಎಂದು ಹೇಳಿದೆ.

ಪ್ರಮುಖ ವಿಷಯವೆಂದರೆ, ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಾಷೆ ಮತ್ತು ಧಾರ್ಮಿಕ ಅಲ್ಪ ಸಂಖ್ಯಾತರಿಗೆ ನೀಡಿದ ಭರವಸೆಗಳಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಇತರ ಅಲ್ಪ ಸಂಖ್ಯಾತರು ಎಂದು ಉಲ್ಲೇಖಿಸಿದೆಯೇ ಹೊರತು, ಎಲ್ಲೂ ಮುಸ್ಲಿಮರಿಗೆ ಎಂದು ಹೇಳಿಲ್ಲ. ಭಾರತದಲ್ಲಿ ಅಲ್ಪ ಸಂಖ್ಯಾತರು ಎಂದರೆ ಕೇವಲ ಮುಸ್ಲಿಮರಲ್ಲ. ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಪಾರ್ಸಿಗಳು ಈ ದೇಶದ ಅಲ್ಪ ಸಂಖ್ಯಾತರು. ಹಾಗಾಗಿ, ಪ್ರಣಾಳಿಕೆಯಲ್ಲಿ ಅಲ್ಪ ಸಂಖ್ಯಾತರು ಎಂದರೂ, ಅದು ಕೇವಲ ಮುಸ್ಲಿಮರು ಎಂದು ಆಗುವುದಿಲ್ಲ.

ಹಾಗಾಗಿ, ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಕುರಿತು ಹಾಕಿರುವ ಪೋಸ್ಟ್ ಸಂಪೂರ್ಣ ಸುಳ್ಳು. ಇದೇ ರೀತಿಯ ಸುಳ್ಳು ಪೋಸ್ಟ್ ಅನ್ನು ಕೆಲ ದಿನಗಳ ಹಿಂದೆ ಸ್ಟಾರ್ ಬಾಯ್ ತರುಣ್ ಎಂಬ ಎಕ್ಸ್ ಬಳಕೆದಾರನೊಬ್ಬ ಹಾಕಿದ್ದ. “ಕಾಂಗ್ರೆಸ್ ಪ್ರಣಾಳಿಕೆ ಭಯಾನಕವಾಗಿದೆ. ನನ್ನ ಜೀವನದಲ್ಲಿ ಇಂತಹ ಅಪಾಯಕಾರಿ ಪ್ರಣಾಳಿಕೆಯನ್ನು ನೋಡಿಲ್ಲ” ಎಂದಿದ್ದ. ಆಗ ನಾನುಗೌರಿ. ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

Fact Check: ಕಾಂಗ್ರೆಸ್‌ ಪ್ರಣಾಳಿಕೆ ದೇಶಕ್ಕೆ ಅಪಾಯಕಾರಿ ಎಂದು ಸುಳ್ಳು ಸುದ್ದಿ ಹಂಚಿಕೆ

ಬಿಜೆಪಿ ತನ್ನ ಪೋಸ್ಟ್‌ನಲ್ಲಿ “ವಾಸ್ತವವಾಗಿ, ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಎಸ್‌ಸಿ/ಎಸ್‌ಟಿ ನಿಧಿಯನ್ನು ಕಸಿದುಕೊಂಡು ಮುಸ್ಲಿಮರಿಗೆ ‘ಸಂಪತ್ತು ವಿತರಣೆ’ ಆರಂಭಿಸಿದ್ದಾರೆ” ಎಂದು ಹೇಳಿದೆ. ಈ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ.

ಆದರೆ, “ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಟಿವಿ9 ಸುದ್ದಿ ವಾಹಿನಿಯ ಹಳೆಯ ವಿಡಿಯೋವೊಂದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಹಂಚಿಕೊಂಡಿದ್ದರು. ಈ ಬಗ್ಗೆಯೂ ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಅದರ ಲಿಂಕ್ ಕೆಳಗಿದೆ.

FACT CHECK : ‘ದೇಶದ ಸಂಪತ್ತನ್ನು ಮುಸಲ್ಮಾನರಿಗೆ ಹಂಚುತ್ತೇನೆ’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರಾ?  

ಇದನ್ನೂ ಓದಿ : FACT CHECK: ದೇವೇಗೌಡರ ಕುರಿತು ಸಚಿವ ರಾಜಣ್ಣ ಕೀಳು ಮಟ್ಟದ ಹೇಳಿಕೆ ನೀಡಿದ್ದಾರೆಂದು ಹಳೆಯ ವಿಡಿಯೋ ಹಂಚಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...