Homeಫ್ಯಾಕ್ಟ್‌ಚೆಕ್FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು...

FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

“ಐಆರ್‌ಸಿಟಿಸಿಯ ಹೊಸ ನಿಯಮದ ಪ್ರಕಾರ ವ್ಯಕ್ತಿಯೊಬ್ಬರು ತನ್ನ ವೈಯುಕ್ತಿಕ ಐಡಿ ಬಳಸಿ ರಕ್ತ ಸಂಬಂಧಿಗಳಿಗೆ ಅಥವಾ ಒಂದೇ ರೀತಿಯ ಉಪನಾಮೆ ಇರುವವರಿಗೆ ಮಾತ್ರ ರೈಲು ಟಿಕೆಟ್ ಕಾಯ್ದಿರಿಸಬಹುದು. ಸ್ನೇಹಿತರು ಅಥವಾ ಇತರರಿಗೆ ಟಿಕೆಟ್‌ಗಳನ್ನು ಕಾಯ್ದಿರಿಸಿದರೆ 10 ಸಾವಿರ ರೂಪಾಯಿ ದಂಡ ಮತ್ತು 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದು” ಎಂಬ ಸಂದೇಶವೊಂದು ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಸುದ್ದಿಯ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಸಂಬಂಧಿತ ಕೀ ವರ್ಡ್ ಬಳಸಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಐಆರ್‌ಸಿಟಿಸಿ ವೆಬ್‌ಸೈಟ್‌ನಲ್ಲಿ ನಮಗೆ ಈ ಕುರಿತು ಮಾಹಿತಿ ದೊರೆತಿದೆ. ವೆಬ್‌ಸೈಟ್‌ನ ಬುಕ್‌ಮೈ ಟ್ರೈನ್ ಎಂಬ ವಿಭಾಗದಲ್ಲಿ ಪದೇ ಪದೇ ಕೇಳುವ ಪ್ರಶ್ನೆಗಳ (FAQ) ಪಟ್ಟಿಯ ಕ್ರ.ಸಂ 12ರಲ್ಲಿ “ವಿಮಾನದಂತೆ ನೀವು ಸ್ನೇಹಿತರು ಮತ್ತು ಕುಟುಂಬಸ್ಥರಿಗೆ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ನೆನಪಿಡಿ, ಪ್ರಯಾಣಿಸುವಾಗ ಪ್ರಯಾಣಿಕರು ಮಾನ್ಯವಾದ ಫೋಟೋ ಗುರುತಿನ ಪುರಾವೆಯನ್ನು ಹೊಂದಿರಬೇಕು” ಎಂದು ತಿಳಿಸಲಾಗಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ಜೂನ್ 27ರಂದು ಲೈವ್‌ ಮಿಂಟ್ ಈ ಕುರಿತು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಐಆರ್‌ಸಿಟಿಸಿ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ವ್ಯಕ್ತಿಯೊಬ್ಬರು ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಆನ್‌ಲೈನ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂದು ಸ್ಪಷ್ಟಪಡಿಸಿರುವುದಾಗಿ ಹೇಳಿದೆ” ಎನ್ನಲಾಗಿದೆ.

ಜೂನ್ 25, 2024ರಂದು ಎಕ್ಸ್‌ನಲ್ಲಿ ಪೋಸ್ಟ್ ಹಾಕಿದ್ದ ಐಆರ್‌ಸಿಟಿಸಿ, ವಿವಿಧ ಉಪನಾಮಗಳ ಕಾರಣ ಇ-ಟಿಕೆಟ್‌ಗಳ ಬುಕ್ಕಿಂಗ್‌ಗೆ ನಿರ್ಬಂಧ ವಿಧಿಸಿರುವ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು ಮತ್ತು ತಪ್ಪುದಾರಿಗೆಳೆಯುವಂತಿದೆ. ಸಂಬಂಧಪಟ್ಟವರು ಇಂತಹ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕಿದೆ. ರೈಲ್ವೆ ಮಂಡಳಿಯ ಮಾರ್ಗಸೂಚಿಗಳ ಪ್ರಕಾರ ಐಆರ್‌ಸಿಟಿಸಿ ಸೈಟ್‌ನಲ್ಲಿ ಟಿಕೆಟ್‌ಗಳನ್ನು ಬುಕ್ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದೆ”.

ರೈಲ್ವೆ ಸಚಿವಾಲಯದ ವಕ್ತಾರರು ಕೂಡ ಈ ವಿಷಯವನ್ನು ದೃಢಪಡಿಸಿದ್ದು “ಒಬ್ಬರು ವ್ಯಕ್ತಿ ಸ್ನೇಹಿತರು, ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ವೈಯಕ್ತಿಕ ಐಡಿ ಬಳಸಿ ಟಿಕೆಟ್‌ಗಳನ್ನು ಬುಕ್ ಮಾಡಬಹುದು. ತಿಂಗಳಿಗೆ 12 ಟಿಕೆಟ್‌ಗಳವರೆಗೆ ಬುಕ್ಕಿಂಗ್ ಮಾಡಬಹುದು. ಆಧಾರ್-ದೃಢೀಕೃತ ಬಳಕೆದಾರರಾದರೆ ತಿಂಗಳಿಗೆ 24 ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಟಿಕೆಟ್‌ನಲ್ಲಿರುವ ಪ್ರಯಾಣಿಕರಲ್ಲಿ ಪೈಕಿ ಒಬ್ಬರ ಆಧಾರ್ ದೃಢೀಕರಿಸಿದ್ದರೆ ಸಾಕು” ಎಂದು ತಿಳಿಸಿದ್ದಾರೆ.

“ವೈಯಕ್ತಿಕ ಐಡಿ ಬಳಸಿ ಬುಕ್ ಮಾಡಲಾದ ಟಿಕೆಟ್‌ಗಳು ವಾಣಿಜ್ಯ ಉದ್ದೇಶಕ್ಕೆ ಮಾರಾಟ ಮಾಡುವಂತಿಲ್ಲ. ಅಂತಹ ಕೃತ್ಯವು ರೈಲ್ವೆ ಕಾಯ್ದೆ 1989ರ ಸೆಕ್ಷನ್ 143 ರ ಅಡಿಯಲ್ಲಿ ಅಪರಾಧವಾಗಿದೆ” ಎಕ್ಸ್‌ ಪೋಸ್ಟ್‌ನಲ್ಲಿ ಹೇಳಿದ್ದಾರೆ.

ಆದ್ದರಿಂದ, ಒಬ್ಬರು ವ್ಯಕ್ತಿ ತನ್ನ ವೈಯಕ್ತಿಕ ಐಡಿ ಬಳಸಿಕೊಂಡು ರಕ್ತ ಸಂಬಂಧಗಳಿಗೆ ಅಥವಾ ಅದೇ ಉಪನಾಮ ಹೊಂದಿರುವವರಿಗೆ ಮಾತ್ರ ಟಿಕೆಟ್‌ಗಳನ್ನು ಬುಕ್ ಮಾಡಬಹುದು ಎಂಬ ವೈರಲ್ ಸುದ್ದಿ ಸುಳ್ಳಾಗಿದೆ. ಇ-ಟಿಕೆಟ್ ಬುಕ್ಕಿಂಗ್‌ಗೆ ಅಂತಹ ಯಾವುದೇ ನಿಯಮ ಜಾರಿಗೊಳಿಸಿಲ್ಲ ಎಂದು ಐಆರ್‌ಸಿಟಿಸಿ ಮತ್ತು ರೈಲ್ವೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...