HomeದಿಟನಾಗರFACT CHECK : 'ಪಿಎಂ ಕನ್ಯಾ ಯೋಜನೆ' ಎಂಬ ಸ್ಕೀಂ ಅನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿಲ್ಲ

FACT CHECK : ‘ಪಿಎಂ ಕನ್ಯಾ ಯೋಜನೆ’ ಎಂಬ ಸ್ಕೀಂ ಅನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿಲ್ಲ

- Advertisement -
- Advertisement -

“ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರಧಾನಿ ಮೋದಿ ಜಾರಿಗೆ ತಂದಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ಯ ಅಡಿಯಲ್ಲಿ ಪತ್ರಿ ತಿಂಗಳು 2000 ರೂ. ಸಿಗುತ್ತದೆ” ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಈ ಸಂದೇಶವು ಹಲವಾರು ವರ್ಷಗಳಿಂದ ಹರಿದಾಡುತ್ತಿದ್ದು, ಯೋಜನೆಗಾಗಿ ಹಲವು ದಾಖಲಾತಿಗಳನ್ನು ‘ಸಿಎಸ್‌ಸಿ’ ಎಂಬ ಪೋರ್ಟಲ್‌ಗೆ ಸಲ್ಲಿಸಬೇಕು ಎಂದು ವೈರಲ್‌ ಸಂದೇಶದಲ್ಲಿ ಹೇಳಲಾಗಿದೆ.

ವಾಟ್ಸಪ್‌ನಲ್ಲಿ ಹರಿದಾಡುತ್ತಿರವ ಸಂದೇಶದಲ್ಲಿ, “ನಿಮ್ಮ ಮನೆಯಲ್ಲಿ ಹೆಣ್ಣು ಮಕ್ಕಳಿದ್ದರೆ ಪ್ರತಿ ತಿಂಗಳು 2000 ರೂಪಾಯಿ ನೇರವಾಗಿ ನಿಮ್ಮ ಖಾತೆಗೆ ಬರುತ್ತದೆ. ಅದು ಹೇಗೆಂದರೆ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಯೋಜನೆ. ಅದು ಯಾವುದೆಂದರೆ ‘ಪಿ ಎಂ ಕನ್ಯಾ ಯೋಜನೆ’. ಪಿ ಎಂ ಕನ್ಯಾ ಯೋಜನೆಗೆ ಅರ್ಜಿ ಸಲ್ಲಿಸಲು; ವಯಸ್ಸಿನ ಮಿತಿ 05 ರಿಂದ 18 ವಷ೯ದೊಳಗಿನವರು, ಆಧಾರ ಕಾರ್ಡ್, ಬ್ಯಾಂಕ್ ಪಾಸಬುಕ್, ಮಗುವಿನ 2 ಭಾವಚಿತ್ರ, ತಂದೆ ತಾಯಿಯ ವಾಷಿ೯ಕ ವರಮಾನ 2 ಲಕ್ಷ ರೂ ದಾಟಿರಬಾರದು ಎಂದು ಹೇಳಲಾಗಿದೆ.

ಅಷ್ಟೇ ಅಲ್ಲದೆ, “ಅರ್ಜಿಯನ್ನು ಸಿಎಸ್‌ಸಿಗೆ ಹೋಗಿ ಸಲ್ಲಿಸಬೇಕು. ನಂತರ ನಿಮಗೆ ಒಂದು ರಶೀದಿ ಕೊಡುತ್ತಾರೆ ಅದನ್ನು ಜೋಪಾನವಾಗಿ ಇಟ್ಟುಕೊಳ್ಳಬೇಕು. ಮತ್ಯಾಕೆ ತಡಾ ಈಗಲೇ ಹೋಗಿ ಪ್ರಧಾನಮಂತ್ರಿ ಕನ್ಯಾ ಆಯುಷ್ ಯೋಜನೆಗೆ ಅಜಿ೯ ಸಲ್ಲಿಸಿ. ನಿಮ್ಮ ಹೆಣ್ಣು ಮಕ್ಕಳ ಭವಿಷ್ಯ ರೂಪಿಸಿಕೊಳ್ಳಬಹುದು” ಎಂದು ಹುರಿದುಂಬಿಸಲಾಗಿದೆ.

ಫ್ಯಾಕ್ಟ್‌ಚೆಕ್ : ‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಹೆಸರಿನ ಯಾವುದೆ ಯೋಜನೆಯನ್ನು ಒಕ್ಕೂಟ ಸರ್ಕಾರ ಇದುವರೆಗೂ ರೂಪಿಸಿಲ್ಲ. ಈ ರೀತಿಯ ಯಾವುದೇ ಯೋಜನೆಯನ್ನು ಜಾರಿಗೆ ತಂದಿಲ್ಲ ಎಂದು ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಪ್ರೆಸ್‌ ಇನ್ಫಾರ್ಮೇಶನ್‌ ಬ್ಯೂರೋ’(ಪಿಐಬಿ) ಸ್ಪಷ್ಟಪಡಿಸಿದೆ.

ಈ ಸಂದೇಶವು ಕಳೆದ ಕೆಲವು ವರ್ಷಗಳಿಂದ ವೈರಲ್ ಆಗುತ್ತಿದೆ. ಇದೀಗ ಕನ್ನಡದಲ್ಲಿ ಭಾಷಾಂತರಗೊಂಡು ಹರಿದಾಡುತ್ತಿದೆ. ಈ ಬಗ್ಗೆ ಪಿಐಬಿ ಫ್ಯಾಕ್ಟ್‌ಚೆಕ್ ಮಾಡಿದ್ದು, “ಈ ಪ್ರತಿಪಾದನೆಗಳು ನಕಲಿಯಾಗಿದ್ದು, ಕೇಂದ್ರ ಸರ್ಕಾರದ ಅಡಿಯಲ್ಲಿ ಅಂತಹ ಯಾವುದೇ ಯೋಜನೆ ಇಲ್ಲ. ದಯವಿಟ್ಟು ಅಂತಹ ನಕಲಿ ಯೋಜನೆಗಳ ಬಗ್ಗೆ ಎಚ್ಚರದಿಂದಿರಿ” ಎಂದು ಅದು ಎಚ್ಚರಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ವಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ‘ಪಿಎಂ ಕನ್ಯಾ ಆಯುಷ್ ಯೋಜನೆ’ ಎಂಬ ಯೋಜನೆ ನಕಲಿಯಾಗಿದೆ. ಹೆಣ್ಣು ಮಕ್ಕಳಿಗೆ ಪ್ರತಿ ತಿಂಗಳು 2000 ರೂ. ಸಿಗುವ ಯಾವುದೇ ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿಲ್ಲ. ಹಾಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಂದೇಶ ನಕಲಿ ಎಂಬುವುದು ಸಷ್ಟವಾಗಿದೆ. ಪಿಎಂ ಕನ್ಯಾ ಯೋಜನೆ ಎಂಬ ಯಾವ ಯೋಜನೆಯನ್ನೂ ಕೇಂದ್ರ ಸರ್ಕಾರ ಜಾರಿಗೊಳಿಸಿಲ್ಲ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...