Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು - ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

ಫ್ಯಾಕ್ಟ್‌ಚೆಕ್‌: ಕೇರಳದಲ್ಲಿ ಗರ್ಭಿಣಿ ಆನೆ ಸಾವು – ಎಲ್ಲೆಡೆ ಹರಡಿದ ಎರಡು ದೊಡ್ಡ ಸುಳ್ಳುಗಳು

- Advertisement -
- Advertisement -

ಪಟಾಕಿ ತುಂಬಿದ ಹಣ್ಣು ತಿಂದು ಗರ್ಭಿಣಿ ಆನೆಯೊಂದು ಕೇರಳದಲ್ಲಿ ಸಾವನಪ್ಪಿದ ಘಟನೆಗೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಆದರೆ ಈ ಸಂದರ್ಭದಲ್ಲಿ ಎರಡು ಸುಳ್ಳನ್ನು ವ್ಯವಸ್ಥಿತವಾಗಿ ಹೆಣೆದು ಹರಡಲಾಗಿದೆ. ಅವುಗಳೆಂದರೆ

1. ಘಟನೆ ನಡೆದಿದ್ದು ಮಲ್ಲಪುರಂನಲ್ಲಿ?

ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಬಿಜೆಪಿ ನಾಯಕಿ ಮನೇಕಾ ಗಾಂಧಿ ಸೇರಿದಂತೆ ಹಲವರು ತಮ್ಮ ಟ್ವೀಟ್‌ಗಳಲ್ಲಿ ಬೇಕಂತಲೇ ಘಟನೆ ನಡೆದ ಸ್ಥಳವನ್ನು ಮಲ್ಲಪುರಂ ಎಂದು ಉಲ್ಲೇಖಿಸಿದ್ದರು. ಇದು ಮುಸ್ಲಿಂ ಬಾಹುಳ್ಯ ಪ್ರದೇಶವಾಗಿದ್ದು, ಘಟನೆಗೆ ಮುಸ್ಲಿಮರೆ ಕಾರಣ ಎಂದು ಬಿಂಬಿಸುವುದು ಅವರ ಉದ್ದೇಶವಾಗಿತ್ತು. ಈ ಕೆಳಗಿನ ಪ್ರಕಾಶ್‌ ಜಾವಡೆಕರ್‌ರವರ ಟ್ವೀಟ್‌ ನೋಡಿ. ಮಲ್ಲಪುರಂ ಎಂದೇ ಉಲ್ಲೇಖಿಸಿದ್ದಾರೆ.

ಆದರೆ ನಿಜವಾಗಿಯೂ ಘಟನೆ ನಡೆದಿರುವುದು ಕೇರಳದ ಮಲ್ಲಪುರಂನಲ್ಲಿ ಅಲ್ಲ. ಬದಲಿಗೆ ಪಾಲಕ್ಕಾಡ್ ಜಿಲ್ಲೆಯಲ್ಲಿ ಸಂಭವಿಸಿದೆ.


ಓದಿ:ಆನೆ ಪ್ರಕರಣವನ್ನಿಟ್ಟು ಕೇರಳದ ಬಗ್ಗೆ ದ್ವೇಷ ಹರಡುವವರಿಗೆ ವಿಭಿನ್ನ ಸಂದೇಶ ನೀಡಿದ ಕೇರಳ


2. ಘಟನೆಯಲ್ಲಿ ಬಂಧಿಸಿದ ವ್ಯಕ್ತಿಗಳು ಅಮ್ಜದ್ ಅಲಿ ಮತ್ತು ತಮೀಮ್ ಶೇಖ್?

ಘಟನೆಗೆ ಸಂಬಂಧಿಸಿದಂತೆ ಇದುವರೆಗೂ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಆತನ ಹೆಸರು ಪಿ ವಿಲ್ಸನ್ ಆಗಿದೆ. ಇದನ್ನು ಪಾಲಕ್ಕಾಡ್ ಎಸ್‌ಪಿ, ಡಿಡಿ ನ್ಯೂಸ್ ಮಲೆಯಾಳಂ ಸೇರಿದಂತೆ ಹಲವರು ದೃಢಪಡಿಸಿದ್ದಾರೆ.

ಆದರೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಮಾಧ್ಯಮ ಸಲಹೆಗಾರರಾದ ಅಮರ್ ಪ್ರಸಾದ್ ರೆಡ್ಡಿ, ನ್ಯೂಸ್ ನೇಷನ್ ಟಿವಿಯ ನಿರೂಪಕ ದೀಪಕ್ ಚೌರಾಸಿಯ, ಸುದರ್ಶನ್ ನ್ಯೂಸ್ ಸೇರಿದಂತೆ ಹಲವಾರು ಜನ ಘಟನೆಯ ಆರೋಪಿಗಳಾದ ಅಮ್ಜದ್ ಅಲಿ ಮತ್ತು ತಮೀಮ್ ಶೇಖ್ ಎಂಬುವವರನ್ನು ಬಂಧಿಸಲಾಗಿದೆ ಎಂಬ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದಾರೆ.

ಡಿಡಿ ನ್ಯೂಸ್ ಮಲೆಯಾಳಂನಿಂದ ಸ್ಪಷ್ಟ ವರದಿ.

ಇದನ್ನೂ ಓದಿ: ಗರ್ಭಿಣಿ ಆನೆ ಹತ್ಯೆ: ಪ್ರಕಾಶ್ ಜಾವಡೇಕರ್ ಹೇಳಿಕೆಗೆ ಕಿಡಿಕಾರಿದ ನೆಟ್ಟಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಆದರೆ ಈ ಸುದ್ದಿಯಲ್ಲಿ ಆನೆ ಕೊಂದವರ ಬಗ್ಗೆ ಕನಿಷ್ಠ ಒಂದು ವಿಷಾದ ಕೂಡ ಇಲ್ಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...