Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ...

FACT CHECK : ಮುಸ್ಲಿಮರು ರೈಲು ಹಳಿ ತಪ್ಪಿಸುವ ಪ್ರಯತ್ನ ಮಾಡಿದ್ರಾ? ವೈರಲ್ ಫೋಟೋದ ನಿಜಾಂಶ ಏನು?

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಪ್ರೇಮಪುರ ರೈಲು ನಿಲ್ದಾಣದ ಬಳಿ ರೈಲು ಹಳಿ ಮೇಲೆ 5 ಕೆ.ಜಿಯ ಖಾಲಿ ಎಲ್‌ಪಿಜಿ ಸಿಲಿಂಡರ್ ಪತ್ತೆಯಾಗಿತ್ತು. ಈ ಪ್ರಕರಣ ದೇಶದಾದ್ಯಂತ ಸುದ್ದಿಯಾಗಿತ್ತು. ಇದಕ್ಕೂ ಮುನ್ನ, ಕಳೆದ ಒಂದೆರಡು ವರ್ಷಗಳಿಂದ ದೇಶದ ಹಲವೆಡೆ ರೈಲು ಹಳಿಗಳ ಮೇಲೆ ವಿವಿಧ ವಸ್ತುಗಳನ್ನು ಇಟ್ಟ ಪ್ರಕರಣಗಳು ವರದಿಯಾಗುತ್ತಿವೆ.

ಈ ನಡುವೆ ಉತ್ತರ ಪ್ರದೇಶದ ರಾಂಪುರ ಬಳಿ ರೈಲು ಹಳಿ ಮೇಲೆ ಕಬ್ಬಿಣದ ಕಂಬವನ್ನು ಇಟ್ಟು ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿದೆ ಎಂದು ಫೋಟೋವೊಂದು ವೈರಲ್ ಆಗುತ್ತಿದೆ.

ಸೆಪ್ಟೆಂಬರ್ 21ರಂದು ಫೇಸ್‌ಬುಕ್‌ನಲ್ಲಿ ಫೋಟೋ ಹಂಚಿಕೊಂಡಿರುವ ‘ಆನಂದಗಿರಿ ರಾಮೇಗೌಡ‘ ಎಂಬವರು ” ಉತ್ತರ ಪ್ರದೇಶದ ರಾಂಪುರದಲ್ಲಿ ರೈಲ್ವೇ ಪಲ್ಟಿ ಮಾಡಬೇಕು ಅಂತ ಜೀ ಹಾದಿಗಳು ರೈಲ್ವೆ ಹಳಿ ಮೇಲೆ ಸುಮಾರು 8 ರಿಂದ 9 ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟಿದ್ದಾರೆ. ಆದರೆ, ಡೆಹ್ರಾಡೂನ್ ಎಕ್ಸ್‌ಪ್ರೆಸ್ ರೈಲಿನ ಲೋಕೋ ಪೈಲಟ್‌ನ ಜಾಣತನದಿಂದ ಅನಾಹುತ ತಪ್ಪಿದೆ. ಲೊಕೊ ಪೈಲಟ್ ಕಬ್ಬಿಣದ ಕಂಬವನ್ನು ನೋಡಿದ ತಕ್ಷಣ ತುರ್ತು ಬ್ರೇಕ್ ಹಾಕುವ ಮೂಲಕ ರೈಲನ್ನು ನಿಲ್ಲಿಸಿದರು. ಆದರೆ ಎಷ್ಟು ಕಾಲ? ಎಲ್ಲಿಯವರೆಗೆ, ಎಲ್ಲಿ ಮತ್ತು ಹೇಗೆ ನಾವು ಉಳಿಸಲ್ಪಡುತ್ತೇವೆ ಏಕೆಂದರೆ ಅವರು ನಮ್ಮನ್ನು ಎಲ್ಲಾ ಕಡೆಯಿಂದ ಸುತ್ತುವರೆದಿದ್ದಾರೆ!” ಎಂದು ಬರೆದುಕೊಂಡಿದ್ದರು.

ಸೆಪ್ಟೆಂಬರ್ 19ರಂದು ಅದೇ ಪೋಟೋವನ್ನು ಜೈ ಶ್ರೀರಾಮ್ ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು “ಮುಖ ಮುಚ್ಚಿಕೊಂಡು ಪ್ರೀತಿಯ ಬಗ್ಗೆ ಮಾತನಾಡುವ ಮುಲ್ಲಾಗಳು ಎಲ್ಲಿದ್ದಾರೆ? ಇಂದು ಸಾವಿರಾರು ಹಿಂದೂಗಳ ಜೀವ ಉಳಿದಿದೆ. ರೈಲನ್ನು ಉರುಳಿಸುವ ಉದ್ದೇಶದಿಂದ ರಾಂಪುರದ ಮುಸ್ಲಿಂ ಕಾಲೋನಿಯ ಹಿಂದೆ ಹಾದು ಹೋಗುವ ರೈಲು ಮಾರ್ಗದ ಮೇಲೆ ಉಗ್ರರು ಕಬ್ಬಿಣದ ಕಂಬವನ್ನು ಹಾಕಿದ್ದರು. ಆದರೆ, ಡೆಹ್ರಡೂನ್‌ ಎಕ್ಸ್‌ಪ್ರೆಸ್ ಲೋಕೋ ಪೈಲಟ್ ಸರಿಯಾದ ಸಮಯಕ್ಕೆ ತುರ್ತು ಬ್ರೇಕ್ ಹಾಕುವ ಮೂಲಕ ಸಾವಿರಾರು ಹಿಂದೂಗಳ ಪ್ರಾಣ ಉಳಿಸಿದ್ದಾರೆ. ರೈಲ್ವೆ ಸಚಿವಾಲಯ ಕಣ್ಣು ತೆರೆಯುವುದು ಯಾವಾಗ?” ಎಂದು ಬರೆಯಲಾಗಿತ್ತು.

ಇನ್ನೂ ಕೆಲ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಇದೇ ಫೋಟೋ ಹಂಚಿಕೊಂಡು ಮುಸ್ಲಿಮರು ರೈಲನ್ನು ಹಳಿ ತಪ್ಪಿಸುವ ಉದ್ದೇಶದಿಂದ ಹಳಿ ಮೇಲೆ ಕಬ್ಬಿಣದ ಕಂಬ ಇಟ್ಟಿದ್ದಾರೆ ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಫೋಟೋ ಕುರಿತು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಹಲವು ವರದಿಗಳು ಲಭ್ಯವಾಗಿದೆ.

ಸೆಪ್ಟೆಂಬರ್ 22, 2024ರಂದು ಎಬಿಪಿ ನ್ಯೂಸ್ ಪ್ರಕಟಿಸಿದ ವರದಿಯ ಪ್ರಕಾರ, “ಸೆಪ್ಟೆಂಬರ್ 18ರಂದು ಬಿಲಾಸ್‌ಪುರ ರಸ್ತೆ ಮತ್ತು ರುದ್ರಾಪುರ ರೈಲು ನಿಲ್ದಾಣಗಳ ನಡುವೆ ಹಳಿಯಲ್ಲಿ ಆರು ಮೀಟರ್ ಉದ್ದದ ಕಬ್ಬಿಣದ ಕಂಬವನ್ನು ಇಟ್ಟು ನೈನಿ ಜನ ಶತಾಬ್ದಿ ಎಕ್ಸ್‌ಪ್ರೆಸ್ ರೈಲನ್ನು ಹಳಿ ತಪ್ಪಿಸುವ ಪ್ರಯತ್ನ ಮಾಡಲಾಗಿತ್ತು. ಈ ಘಟನೆ ಸಂಬಂಧಿಸಿದಂತೆ ರಾಂಪುರ ಜಿಲ್ಲೆಯ ನಿವಾಸಿಗಳಾದ ಸನ್ನಿ ಅಲಿಯಾಸ್ ಸಾನಿಯಾ ಅಲಿಯಾಸ್ ಸಂದೀಪ್ ಚೌಹಾಣ್ ಮತ್ತು ಬಿಜೇಂದ್ರ ಅಲಿಯಾಸ್ ಟಿಂಕು ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ”

“ಆರೋಪಿಗಳು ಕಬ್ಬಿಣದ ಕಂಬವನ್ನು ಕಳ್ಳತನ ಮಾಡಿ ಕೊಂಡೊಯ್ಯುತ್ತಿದ್ದರು. ಆಗ ರೈಲಿನ ಹಾರ್ನ್ ಕೇಳಿದೆ. ಆದ್ದರಿಂದ ಕಂಬವನ್ನು ಹಳಿ ಮೇಲೆ ಬಿಟ್ಟು ಓಡಿ ಹೋಗಿದ್ದಾರೆ. ರೈಲು ಅಧಿಕಾರಿಗಳ ಪ್ರಕಾರ, ಉತ್ತರ ಪ್ರದೇಶದ ರಾಂಪುರದಿಂದ ಸುಮಾರಿ 43 ಕಿ.ಮೀ ದೂರದಲ್ಲಿರುವ ರುದ್ರಪುರ ಸಿಟಿ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ” ಎಂದು ವರದಿಯಲ್ಲಿ ಹೇಳಲಾಗಿದೆ.

ಸೆಪ್ಟೆಂಬರ್ 22, 2024ರಂದು ಈಟಿವಿ ಭಾರತ್ ಉತ್ತರ ಪ್ರದೇಶ ಪ್ರಕಟಿಸಿದ ಮತ್ತೊಂದು ವರದಿ ನಮಗೆ ಲಭ್ಯವಾಗಿದೆ ” ಅದರಲ್ಲೂ ಆರೋಪಿಗಳು ಕಬ್ಬಿಣದ ಕಂಬವನ್ನು ಕದ್ದೊಯ್ಯುವಾಗ ರೈಲು ಬಂದ ಹಿನ್ನೆಲೆ, ಅದನ್ನು ಹಳಿಯಲ್ಲಿ ಬಿಟ್ಟು ಹೋಗಿದ್ದಾರೆ” ಎಂದು ತಿಳಿಸಲಾಗಿದೆ.

“ಘಟನೆಯಲ್ಲಿ ಆರೋಪಿಗಳಿಗೆ ಯಾವುದೇ ದುರುದ್ದೇಶ ಇರಲಿಲ್ಲ. ಆರೋಪಿ ಸಂದೀಪ್ ವಿರುದ್ದ ಬಿಲಾಸ್‌ಪುರ ಪೊಲೀಸ್ ಠಾಣೆಯಲ್ಲಿ ಈಗಾಗಲೇ 14 ಪ್ರಕರಣಗಳು ದಾಖಲಾಗಿದ್ದು, ಆತ ಕ್ರಿಮಿನಲ್ ಸ್ವಭಾವದ ವ್ಯಕ್ತಿ. ಎರಡನೇ ಆರೋಪಿ ವಿಜಯೇಂದ್ರ ವಿರುದ್ದ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಮ್ಮ ಮಾದಕ ವ್ಯಸನವನ್ನು ಪೂರೈಸಲು ಕಬ್ಬಿಣದ ಕಂಬವನ್ನು ಕದಿದ್ದರು. ಅದನ್ನು ತೆಗೆದುಕೊಂಡು ಹೋಗುವಾಗ ರೈಲು ಬಂದಿದ್ದು, ಹಾಗಾಗಿ, ಅದನ್ನು ಅಲ್ಲೇ ಬಿಟ್ಟು ಓಡಿ ಹೋಗಿದ್ದಾರೆ” ಎಂದು ಮೊರಾದಾಬಾದ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕುಮಾರ್ ವರ್ಮಾ ಹೇಳಿರುವುದಾಗಿ ವರದಿಯಲ್ಲಿದೆ.

ಇನ್ನೂ ಕೆಲ ಮಾಧ್ಯಮ ವರದಿಗಳಿಂದ ಆರೋಪಿಗಳು ಮುಸ್ಲಿಮರಲ್ಲ ಮತ್ತು ಅವರಿಗೆ ರೈಲು ಹಳಿ ತಪ್ಪಿಸುವ ಉದ್ದೇಶ ಇರಲಿಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಟೋಲ್‌ ಪ್ಲಾಝಾದಲ್ಲಿ ಗಲಾಟೆ ನಡೆಸಿದ ಮುಸ್ಲಿಮರು? ವೈರಲ್ ವಿಡಿಯೋದ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...