Homeಫ್ಯಾಕ್ಟ್‌ಚೆಕ್FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

FACT CHECK : ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ಧ ದ್ವೇಷ ಭಾಷಣ ಮಾಡಿದ್ರಾ?

- Advertisement -
- Advertisement -

ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ ಜಾರ್ಜ್ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲ ಪಂಥೀಯ ಎಕ್ಸ್ ಬಳಕೆದಾರ ‘ಜಿತೇಂದ್ರ ಪ್ರತಾಪ್ ಸಿಂಗ್’ ವಿಡಿಯೋ ಹಂಚಿಕೊಂಡಿದ್ದು, ” ಮುಸ್ಲಿಂ ಉದ್ಯಮಿಗಳು ವಿವಿಧ ಬಗೆಯ ಔಷಧಗಳನ್ನು ಬೆರೆಸಿ ಹಿಂದೂ ಮತ್ತು ಕ್ರಿಶ್ಚಿಯನ್ನರನ್ನು ಬಲಹೀನರನ್ನಾಗಿಸಿ ಈ ದೇಶದ ಅಧಿಕಾರ ಹಿಡಿಯಲು ಯತ್ನಿಸುತ್ತಿರುವ ಕಾರಣ, ಕ್ರೈಸ್ತರು ಮತ್ತು ಹಿಂದೂಗಳು ಮುಸ್ಲಿಂ ರೆಸ್ಟೋರೆಂಟ್‌ಗಳಿಗೆ ಹೋಗಬಾರದು ಎಂದು ಕೇರಳ ಕಾಂಗ್ರೆಸ್ ಮುಖಂಡ ಪಿ.ಸಿ.ಜಾರ್ಜ್ ಹೇಳಿದ್ದಾರೆ. ಅವರು ಶ್ರೀಲಂಕಾದ ವೈದ್ಯರ ಹೆಸರನ್ನು ಸಹ ಹೇಳಿಕೆಗೆ ಉದಾಹರಣೆಯಾಗಿ ಉಲ್ಲೇಖಿಸಿದ್ದಾರೆ. ಅವರು ಹೇಳಿದ್ದರ ಬಗ್ಗೆ ಚರ್ಚೆಗೆ ಹೋಗದೆ, ಈ ವ್ಯಕ್ತಿ ಸಾಮಾನ್ಯ ವ್ಯಕ್ತಿಯಲ್ಲ, ಅವರು ಕೇರಳ ಸರ್ಕಾರದಲ್ಲಿ ಮಾಜಿ ಸಚಿವರಾಗಿದ್ದಾರೆ ಎಂಬುವುದನ್ನು ನೀವು ಯೋಚಿಸಬೇಕು” ಎಂದು ಹಿಂದಿಯಲ್ಲಿ ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಅನೇಕ ಎಕ್ಸ್‌ ಬಳಕೆದಾರರು ಇದೇ ರೀತಿಯ ಪೋಸ್ಟ್‌ಗಳನ್ನು ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ಕೀ ವರ್ಡ್‌ಗಳನ್ನು ಬಳಸಿ ನಾವು ವಿಡಿಯೋ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ ಮೇ 1, 2022ರಂದು “PC George arrested for controversial remarks against muslims” ಎಂಬ ಶೀರ್ಷಿಕೆಯಲ್ಲಿ ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿ ಲಭ್ಯವಾಗಿದೆ.

ಈ ವರದಿಯಲ್ಲಿ, ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಕೇರಳದ ಹಿರಿಯ ರಾಜಕಾರಣಿ ಪಿ.ಸಿ ಜಾರ್ಜ್ ಅವರನ್ನು ಕೊಟ್ಟಾಯಂ ಜಿಲ್ಲೆಯ ಇರಟ್ಟುಪೆಟ್ಟದ ನಿವಾಸದಿಂದ ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಲಾಗಿತ್ತು.

ವರದಿಯ ಕೊನೆಯಲ್ಲಿ, “ಮುಸ್ಲಿಮರು ನಡೆಸುವ ರೆಸ್ಟೋರೆಂಟ್‌ಗಳಿಗೆ ಮುಸ್ಲಿಮೇತರರು ತೆರಳದಂತೆ ಹೇಳಿಕೆ ನೀಡುವ ಮೂಲಕ ಕೇರಳ ಕಾಂಗ್ರೆಸ್‌ನ ಮಾಜಿ ನಾಯಕ ಪಿ.ಸಿ ಜಾರ್ಜ್ ವಿವಾದ ಸೃಷ್ಟಿಸಿದ್ದಾರೆ. ಅನಂತಪುರಿ ಹಿಂದೂ ಮಹಾ ಸಮ್ಮೇಳನದ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಜಾರ್ಜ್ ಮುಸ್ಲಿಮರು ನಡೆಸುವ ರೆಸ್ಟೋರೆಂಟ್‌ಗಳ ಆಹಾರದಲ್ಲಿ ಔಷಧ ಹಾಕಿ ಮುಸ್ಲಿಮೇತರರನ್ನು ಬಲ ಹೀನರನ್ನಾಗಿ ಮಾಡುತ್ತಿದ್ದಾರೆ. ಈ ಮೂಲಕ ದೇಶವನ್ನು ತಮ್ಮ ವಶಕ್ಕೆ ಪಡೆಯಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಜಾರ್ಜ್ ಹೇಳಿದ್ದರು” ತಿಳಿಸಲಾಗಿತ್ತು.

ವರದಿ ಲಿಂಕ್ ಇಲ್ಲಿದೆ 

ಮೇ 1, 2022ರಂದು ‘ದಿ ಹಿಂದೂ’ “P.C. George arrested for hate speech, gets bail” ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಸುದ್ದಿಯಲ್ಲಿ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದ ಹಿರಿಯ ರಾಜಕಾರಣಿ ಪಿ.ಸಿ ಜಾರ್ಜ್ ಅವರಿಗೆ ತಿರುವನಂತಪುರದ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಿದೆ ಎಂದು ತಿಳಿಸಿತ್ತು.

ಲಭ್ಯವಾದ ವರದಿಗಳ ಪ್ರಕಾರ ಮುಸ್ಲಿಮರ ವಿರುದ್ದ ಪಿ.ಸಿ ಜಾರ್ಜ್ ದ್ವೇಷ ಭಾಷಣ ಮಾಡಿರುವುದು ಹೌದು. ಅವರನ್ನು ಪೊಲೀಸರು ಬಂಧಿಸಿರುವುದು ಹೌದು. ಆದರೆ, ಇದು 2022ರಲ್ಲಿ ನಡೆದ ಘಟನೆಯಾಗಿದೆ.

ವರದಿ ಲಿಂಕ್ ಇಲ್ಲಿದೆ 

ಪಿ.ಸಿ ಜಾರ್ಜ್ ಕಾಂಗ್ರೆಸ್‌ ನಾಯಕರ?

ಪಿಸಿ ಜಾರ್ಜ್ ಅವರು 1982-87 ಮತ್ತು 1996-2021 ರವರೆಗೆ ಕೇರಳ ರಾಜ್ಯದ ಕೊಟ್ಟಾಯಂ ಜಿಲ್ಲೆಯ ಪೂಂಜಾರ್ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಕೊನೆಯದಾಗಿ 2016-2021 ರ ನಡುವೆ ಶಾಸಕರಾಗಿ ಅವರು ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಶಾಸಕರಾಗಿ ಸೇವೆ ಸಲ್ಲಿಸಿದ ಆರು ಅವಧಿಗಳಲ್ಲಿ, ಜಾರ್ಜ್ ಅವರು ಕೇರಳ ಕಾಂಗ್ರೆಸ್‌ನ ವಿವಿಧ ಬಣಗಳಿಂದ ಆಯ್ಕೆಯಾಗಿದ್ದರು.

2016ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಪಿ.ಸಿ ಜಾರ್ಜ್ ಎಲ್‌ಡಿಎಫ್ ಮತ್ತು ಯುಡಿಎಫ್ ಅಭ್ಯರ್ಥಿಗಳನ್ನು 27,000 ಮತಗಳ ಅಂತರದಿಂದ ಸೋಲಿಸಿದ್ದರು. ಆದರೆ, 2021ರ ವಿಧಾನಸಭೆ ಚುನಾವಣೆಯಲ್ಲಿ ಎಲ್‌ಡಿಎಫ್‌ ಅಭ್ಯರ್ಥಿ ಸೆಬಾಸ್ಟಿಯನ್‌ ಕುಳತುಂಕಲ್‌ ವಿರುದ್ಧ 16,000 ಮತಗಳ ಅಂತರದಿಂದ ಸೋತಿದ್ದರು. ಕೇರಳ ಕಾಂಗ್ರೆಸ್ (ಎಂ) ಸದಸ್ಯರಾಗಿ 2011 ರಿಂದ 2015 ರವರೆಗೆ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಸರ್ಕಾರದ ಮುಖ್ಯ ಸಚೇತಕರಾಗಿಯೂ ಸೇವೆ ಸಲ್ಲಿಸಿದ್ದರು.

ಫೆಬ್ರವರಿ 2017ರಲ್ಲಿ, ರಾಜ್ಯ ವಿಧಾನಸಭೆಯ ಏಕೈಕ ಸ್ವತಂತ್ರ ಶಾಸಕರಾಗಿದ್ದ ಪಿಸಿ ಜಾರ್ಜ್, ಕೇರಳ ಜನಪಕ್ಷಂ ಎಂಬ ಹೊಸ ಪಕ್ಷವನ್ನು ಕಟ್ಟಿದ್ದರು. ಏಪ್ರಿಲ್ 2019ರಲ್ಲಿ ಕೇರಳ ಜನಪಕ್ಷಂ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಬೆಂಬಲಿಸಿತ್ತು. ಜಾರ್ಜ್ ಕಾಂಗ್ರೆಸ್ ಅಥವಾ ಸಿಪಿಎಂ ಜೊತೆ ಮೈತ್ರಿ ಮಾಡಿಕೊಂಡಿರಲಿಲ್ಲ.

ಜನವರಿ 2024 ರಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಪಿ.ಸಿ ಜಾರ್ಜ್‌ ತಮ್ಮ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸಿದ್ದರು. ಜನವರಿ 31ರಂದು ನವದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷ ವಿಲೀನಗೊಳಿಸಿ ಜಾರ್ಜ್ ಬಿಜೆಪಿ ಸೇರಿದ್ದರು.

ಇಲ್ಲಿ ಗಮನಾರ್ಹ ಸಂಗತಿಯೆಂದರೆ, ಕೇರಳದ ಕಾಂಗ್ರೆಸ್ ನಾಯಕ ಪಿ.ಸಿ ಜಾರ್ಜ್ ಎಂದು ಸುದ್ದಿ ಹರಡುತ್ತಿದೆ. ಆದರೆ, ಜಾರ್ಜ್ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದು 2022ರಲ್ಲಿ. ಆಗ ಅವರು ಕಾಂಗ್ರೆಸ್ ಪಕ್ಷದಲ್ಲಿ ಇರಲ್ಲಿ. ಕಾಂಗ್ರೆಸ್ ಮಾತ್ರವಲ್ಲ ಯುಡಿಎಫ್‌ ಮತ್ತು ಎಲ್‌ಡಿಎಫ್‌ ಒಕ್ಕೂಟಗಳಲ್ಲೇ ಇರಲಿಲ್ಲ. ಅವರ ಕೇರಳ ಜನಪಕ್ಷಂ 2019ರಲ್ಲೇ ಬಿಜೆಪಿ ನೇತೃತ್ವ ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದೆ. ಹಾಗಾಗಿ, ಕೇರಳದ ಕಾಂಗ್ರೆಸ್ ನಾಯಕ ಮುಸ್ಲಿಮರ ವಿರುದ್ದ ದ್ವೇಷ ಭಾಷಣ ಮಾಡಿದ್ದಾರೆ ಎಂಬುವುದು ತಪ್ಪು ಮಾಹಿತಿ.

ಇದನ್ನೂ ಓದಿ : FACT CHECK : ರಾಯಚೂರಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...