Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

ಫ್ಯಾಕ್ಟ್‌ಚೆಕ್: ಗ್ರೇಟಾ ಥನ್‌ಬರ್ಗ್‌ಗೆ ಕಳಂಕ ತರಲು ಮತ್ತೆ ಚಾಲ್ತಿಗೆ ಬಂದ ಎಡಿಟೆಡ್ ಫೋಟೊ!

- Advertisement -
- Advertisement -

ಸ್ವೀಡಿಷ್ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್‌ ಇತ್ತೀಚೆಗೆ ಭಾರತದಲ್ಲಿ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯನ್ನು ಬೆಂಬಲಿಸುವ ಮಾರ್ಗಗಳನ್ನು ವಿವರಿಸುವ ಟೂಲ್ಕಿಟ್ ಅನ್ನು ಟ್ವೀಟ್ ಮಾಡಿದ್ದರು. ಆ ಮೂಲಕ ರೈತ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಬೆಂಗಳೂರು ಮೂಲದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ದೆಹಲಿ ಪೊಲೀಸರು ಟೂಲ್ಕಿಟ್ ಅನ್ನು ‘ಎಡಿಟ್’ ಮಾಡಿದ್ದಾರೆ ಎಂದು ಆರೋಪಿಸಿ ಬಂಧಿಸಿದ್ದರು.

ಈ ನಡುವೆ ರೈಲೊಂದರಲ್ಲಿ ಥನ್ಬರ್ಗ್ ಊಟ ಮಾಡುತ್ತಿರುವ ಫೋಟೊವೊಂದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದ್ದು, ಗ್ರೇಟಾ ರೈಲಿನೊಳಗೆ ಆಹಾರವನ್ನು ಸೇವಿಸುತ್ತಿರುವುದನ್ನು ಚಿತ್ರ ತೋರಿಸುತ್ತದೆ. ಹೊರಗಡೆ ಪ್ಲಾಟ್‌ಫಾರಂ ಮೇಲೆ ಹಸಿದ ಆಫ್ರಿಕನ್ ಮಕ್ಕಳು ಥನ್‌ಬರ್ಗ್ ಊಟ ಮಾಡುವುದನ್ನು ನೋಡುತ್ತ ನಿಂತಿವೆ. ಟ್ವಿಟರ್ ಬಳಕೆದಾರ @ಬೆಂಬಡೆಪ್ ಈ ಚಿತ್ರವನ್ನು ಪೋಸ್ಟ್ ಮಾಡಿ, “ಭಾರತದ ಈ ವಿರೋಧಿ ಪಡೆಗಳನ್ನು ಕೇಳಿ #AskGretaWhy” ಎಂದು ಬರೆದಿದ್ದಾರೆ. ಸೋಮವಾರದವರೆಗೆ 700 ಕ್ಕೂ ಹೆಚ್ಚು ರಿಟ್ವೀಟ್‌ಗಳನ್ನು ಟ್ವೀಟ್ ಸಂಗ್ರಹಿಸಿದೆ.

ಟ್ವಿಟರ್ ಬಳಕೆದಾರ ಉಮೇಶ್‌ಸಿಂಗ್ ಎಂಬುವವರು ಇದನ್ನು ಬಹಿರಂಗಪಡಿಸಿದ್ದಕ್ಕಾಗಿ ಝೀ ನ್ಯೂಸ್‌ನ ಮುಖ್ಯ ಸಂಪಾದಕ ಸುಧೀರ್ ಚೌಧರಿಯವರಿಗೆ ಧನ್ಯವಾದ ತಿಳಿಸಿ ಟ್ವೀಟ್ ಮಾಡಿದ್ದಾರೆ.

ಎರಡು ವಿಭಿನ್ನ ಫೋಟೊಗಳ ಕೊಲ್ಯಾಜ್!

ಆಲ್ಟ್ ನ್ಯೂಸ್ ಗೂಗಲ್‌ನಲ್ಲಿ ಸರಳ ರಿವರ್ಸ್ ಇಮೇಜ್ ಹುಡುಕಾಟ ನಡೆಸಿದಾಗ, ಸೆಪ್ಟೆಂಬರ್ 27, 2019 ರಂದು ಬ್ರಿಟಿಷ್ ಪತ್ರಿಕೆ ಮೆಟ್ರೊದಲ್ಲಿ ಲೇಖನವೊಂದರಲ್ಲಿ ಈ ಮೂಲ ಫೋಟೋ ಪ್ರಕಟವಾಗಿದೆ. ವೈರಲ್ ಚಿತ್ರಕ್ಕಿಂತ ಭಿನ್ನವಾಗಿ, ಈ ಫೋಟೋ ಕಿಟಕಿಯ ಹೊರಗೆ ಮರಗಳನ್ನು ತೋರಿಸುತ್ತದೆ ಮತ್ತು ಮಕ್ಕಳ ಗುಂಪನ್ನಲ್ಲ. ಆದ್ದರಿಂದ, ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತಿರುವ ಚಿತ್ರವನ್ನು ಎಡಿಟ್‌ ಮಾಡಲಾಗಿದೆ ಎಂಬುದು ಸ್ಪಷ್ಟ. ಚಿತ್ರವನ್ನು ಡೆನ್ಮಾರ್ಕ್‌ನಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಅದರ ಜೊತೆಗಿನ ಲೇಖನವು ಹೇಳುತ್ತದೆ.
ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಪುತ್ರ ಎಡ್ವರ್ಡೊ ಬೋಲ್ಸನಾರೊ ಅವರು ಕೂಡ ಎಡಿಟೆಡ್ ಚಿತ್ರವನ್ನು ಹಂಚಿಕೊಂಡಿದ್ದಾರೆ ಎಂದು ಅದು ಹೇಳುತ್ತದೆ.

ಥನ್ಬರ್ಗ್ ಸ್ವತಃ ಮೂಲ ಫೋಟೋವನ್ನು ಜನವರಿ 22, 2019 ರಂದು ಪೋಸ್ಟ್ ಮಾಡಿದ್ದರು. ಇನ್ನು ಆ ಬಡ ಮಕ್ಕಳ ಛಾಯಾಚಿತ್ರವು ಆಗಸ್ಟ್ 23, 2007 ರ ರಾಯಿಟರ್ಸ್ ಲೇಖನದಲ್ಲಿ ಕಂಡುಬಂದಿದೆ. ಇದನ್ನು ರಾಯಿಟರ್ಸ್ ಛಾಯಾಗ್ರಾಹಕ ಸ್ಟೆಫನಿ ಹ್ಯಾನ್ಕಾಕ್ ಆಫ್ರಿಕಾದಲ್ಲಿ ಚಿತ್ರೀಕರಿಸಿದ್ದಾರೆ. ಲೇಖನವು ಮಧ್ಯ ಆಫ್ರಿಕಾದಲ್ಲಿ ಆಂತರಿಕ ಯುದ್ಧದ ಸಮಯದಲ್ಲಿ ಹಳ್ಳಿಗಳನ್ನು ಬಿಟ್ಟು ಕಾಡುಗಳಿಗೆ ತೆರಳಿದ ಜನರ ಬಗ್ಗೆ ವಿವರಿಸುತ್ತದೆ.

ಅಲ್ಟ್ ನ್ಯೂಸ್‌ ಫ್ಯಾಕ್ಟ್‌ಚೆಕ್ ಲೇಖನದಲ್ಲಿ ಥನ್‌ಬರ್ಗ್‌ಳ ಫೋಟೋವನ್ನು ವಿವಿಧ ರೀತಿಯಲ್ಲಿ ಎಡಿಟ್ ಮಾಡಿ, 2019 ರಿಂದ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಂಡುಕೊಳ್ಳಲಾಗಿದೆ.

ರೈಲು ಪ್ರಯಾಣದ ಸಮಯದಲ್ಲಿ ಗ್ರೆಟಾ ಥನ್‌ಬರ್ಗ್ ಆಹಾರ ಹೊಂದಿರುವ ಫೋಟೋವನ್ನು ಆನ್‌ಲೈನ್‌ನಲ್ಲಿ ಪ್ರಸಾರ ಮಾಡಲಾಗಿದೆ. ಈ ಚಿತ್ರವನ್ನು 2019 ರಿಂದ ಎಡಿಟ್ ಮಾಡಿ ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗುತ್ತಿದೆ.

ದಿಶಾ ಮತ್ತು 5-7 ಲಕ್ಷ ಲಾಯರ್ ಫೀಸು!

ದಿಶಾ ರವಿಯವರ ಬಗ್ಗೆಯೂ ಇಂತಹ ಸುಳ್ಳು ಪ್ರಚಾರ ನಡೆದಿವೆ. ಅವರು ಕ್ರಿಶ್ಚಿಯನ್ (ಆಕಸ್ಮಾತ್ ಆಗಿದ್ದರೆ ಅದರಲ್ಲೇನು ತಪ್ಪು?) ಎಂದು ಸುಳ್ಳು ಹರಡಲಾಗಿತ್ತು. ವಕೀಲ ಅಖಿಲ್ ಸಿಬಲ್ ಅವರಿಗೆ ಒಮ್ಮೆ ಕೋರ್ಟಿಗೆ ಹಾಜರಾಗಲು ದಿಶಾ 5-7 ಲಕ್ಷ ರೂ ಫೀಸು ಕೊಡುತ್ತಿದ್ದಾರೆ, ಯಾರು ಈ ಫೀಸ್ ತುಂಬುತ್ತಿರುವುದು ಎಂದೆಲ್ಲ ಸುಲ್ಳು ಹರಡಲಾಗಿತ್ತು. ಆದರೆ ಸತ್ಯ ಏನೆಂದರೆ, ಅಖಿಲ್ ಸಿಬಲ್ ದಿಶಾ ವಕೀಲೆ ವೃಂದಾ ಭಂಡಾರಿ ಅವರ ಮನವಿಯ ಮೇರೆಗೆ ಮೀಡಿಯಾ ವರ್ತನೆಗೆ ಸಂಬಂಧಿಸಿದ ಎರಡು ವಿಚಾರಣೆಗಳಿಗೆ ಮಾತ್ರ ಹಾಜರಾಗಿದ್ದು, ಇದಕ್ಕಾಗಿ ಅವರು ಯಾವುದೇ ಫೀಸು ಪಡೆದಿಲ್ಲ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಭಗತ್ ಸಿಂಗ್‌ರನ್ನು ಗಲ್ಲಿಗೇರಿಸಿದ್ದು ಫೆಬ್ರವರಿ 14 ಪ್ರೇಮಿಗಳ ದಿನದಂದು ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...