HomeದಿಟನಾಗರFact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

Fact Check: ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಸಾರ್ವತ್ರಿಕ ಚುನಾವಣೆ 2024ರ ದಿನಾಂಕವನ್ನು ಪ್ರಕಟಿಸಲಾಗಿದೆ ಎಂಬ ಸುತ್ತೋಲೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕೆಲ ಮಾಧ್ಯಮಗಳು ಮತ್ತು ಅನೇಕ ಮಂದಿ ಸಾಮಾಜಿಕ ಜಾಲತಾಣ ಬಳಕೆದಾರರು ಈ ಸುತ್ತೋಲೆಯನ್ನು ಹಂಚಿಕೊಂಡಿದ್ದಾರೆ.

ವೈರಲ್ ಸುತ್ತೋಲೆಯಲ್ಲಿ “ಮಾರ್ಚ್ 12, 2024ರಂದು ಚುನಾವಣಾ ದಿನಾಂಕ ಘೋಷಣೆಯಾಗಲಿದ್ದು, ಅಂದಿನಿಂದ ನೀತಿ ಸಂಹಿತೆ ಜಾರಿಯಾಗಲಿದೆ. ಮಾರ್ಚ್ 28, 2024ರಂದು ನಾಮಪತ್ರಿಕೆ ಸಲ್ಲಿಕೆ ಪ್ರಾರಂಭವಾಗಲಿದೆ. ಏಪ್ರಿಲ್ 19, 2024ರಂದು ಮತದಾನ ನಡೆಯಲಿದ್ದು, ಮೇ 22,2024ರಂದು ಮತ ಎಣಿಕೆ ನಡೆಯಲಿದೆ. ಮೇ 30, 2024ರಂದು ಹೊಸ ಸರ್ಕಾರ ರಚನೆಯಾಗಲಿದೆ” ಎಂದು ಹೇಳಲಾಗಿದೆ.

ಫ್ಯಾಕ್ಟ್‌ಚೆಕ್: ವೈರಲ್ ಸುತ್ತೋಲೆಯ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ನಮ್ಮ ಪರಿಶೀಲನೆಯಲ್ಲಿ ಭಾರತೀಯ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆಯ ಕುರಿತು ಇನ್ನೂ ದಿನಾಂಕ ಘೋಷಣೆ ಮಾಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಸುಳ್ಳು ಸುತ್ತೋಲೆ ಎಂಬುವುದು ಖಚಿತವಾಗಿದೆ.

ಮುಂಬರುವ ಸಾರ್ವತ್ರಿಕ ಚುನಾವಣೆ ಅತ್ಯಂತ ಮಹತ್ವದ್ದಾಗಿರುವುದರಿಂದ, ಚುನಾವಣಾ ದಿನಾಂಕ ಘೋಷಣೆಯಾಗಿದ್ದರೆ ಭಾರತ ಮಾತ್ರವಲ್ಲದೆ ಜಾಗತಿಕ ಮಟ್ಟದ ಮಾಧ್ಯಮಗಳು ಆ ಬಗ್ಗೆ ಸುದ್ದಿ ಪ್ರಕಟಿಸುತ್ತಿತ್ತು. ಆದರೆ, ಯಾವುದೇ ಮಾಧ್ಯಮಗಳು ಇದುವರೆಗೆ ಸುದ್ದಿ ಪ್ರಕಟಿಸಿಲ್ಲ.

ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣೆಯ ದಿನಾಂಕದ ಸುತ್ತೋಲೆ ವೈರಲ್ ಆಗುತ್ತಿದ್ದಂತೆ ಭಾರತೀಯ ಚುನಾವಣಾ ಆಯೋಗ ತನ್ನ ಎಕ್ಸ್‌ ಖಾತೆಯಲ್ಲಿ ಈ ಕುರಿತು ಸ್ಪಷ್ಟನೆ ಕೊಟ್ಟಿದೆ. “ವಾಟ್ಸಾಪ್ ಮೂಲಕ ಲೋಕಸಭೆ ಚುನಾವಣಾ ದಿನಾಂಕದ ಕುರಿತು ಹರಿದಾಡುತ್ತಿರುವ ಸುದ್ದಿ ಸುಳ್ಳು. ಭಾರತೀಯ ಚುನಾವಣಾ ಆಯೋಗ ಇದುವರೆಗೆ ಚುನಾವಣೆಯ ದಿನಾಂಕ ಪ್ರಕಟಿಸಿಲ್ಲ. ಚುನಾವಣಾ ದಿನಾಂಕವನ್ನು ಪತ್ರಿಕಾಗೋಷ್ಠಿಯ ಮೂಲಕ ಘೋಷಣೆ ಮಾಡಲಾಗುವುದು” ಎಂದು ತಿಳಿಸಿದೆ.

ಇದನ್ನೂ ಓದಿ : Fact Check: ಅಡುಗೆ ಪಾತ್ರೆಗೆ ಗುಂಡು ತಗುಲಿರುವ ಫೋಟೋ ದೆಹಲಿಯ ರೈತ ಹೋರಾಟದ್ದಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್‌ ವೇಮುಲಾ ಪ್ರಕರಣ ಮರುತನಿಖೆ ನಡೆಸುವಂತೆ ತೆಲಂಗಾಣ ಸಿಎಂಗೆ ಭೇಟಿ ಮಾಡಿದ ರಾಧಿಕಾ ವೇಮುಲಾ

0
ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲಾ ಸಾವಿನ ಪ್ರಕರಣದಲ್ಲಿ ತೆಲಂಗಾಣ ಪೊಲೀಸರು ಪ್ರಕರಣದ ಮುಕ್ತಾಯದ ವರದಿಯನ್ನು ಕೋರ್ಟ್‌ಗೆ ಸಲ್ಲಿಸಿದ್ದರು, ಇದೀಗ ಪ್ರಕರಣದ ಮರು ತನಿಖೆ ನಡೆಸುವಂತೆ ರೋಹಿತ್ ವೇಮುಲಾ ತಾಯಿ ರಾಧಿಕಾ...