Homeಫ್ಯಾಕ್ಟ್‌ಚೆಕ್Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ...

Fact Check: ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ ಎಂದು ನಕಲಿ ಆನೆಯ ವಿಡಿಯೋ ಹಂಚಿಕೆ

- Advertisement -
- Advertisement -

ಆನೆಯೊಂದು ಖುಷಿಯಿಂದ ಡ್ಯಾನ್ಸ್ ಮಾಡಿದೆ ಎನ್ನಲಾದ ವಿಡಿಯೋವೊಂದು ಭಾರೀ ವೈರಲ್ ಆಗಿದೆ. ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು ಈ ವಿಡಿಯೋ ಹಂಚಿಕೊಂಡಿದ್ದು, “ಕೇವಲ ಸನಾತನ ಧರ್ಮದಿಂದ ಮಾತ್ರ ಪ್ರಾಣಿಗಳನ್ನು ಖುಷಿಯಾಗಿಡಲು ಸಾಧ್ಯ” ಎಂದು ಬರೆದುಕೊಂಡಿದ್ದಾರೆ.

ಎಬಿಪಿ ನ್ಯೂಸ್, ನ್ಯೂಸ್‌ 25 ಹಿಂದಿ, ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ ಗಢ, ಟಿವಿ9 ಹಿಂದಿ ಸೇರಿದಂತೆ ಹಲವು ಮುಖ್ಯವಾಹಿನಿ ಮಾಧ್ಯಮಗಳು ಕೂಡ ಈ ವಿಡಿಯೋ ಹಂಚಿಕೊಂಡು ಆನೆ ಡ್ಯಾನ್ಸ್ ಮಾಡಿದ್ದಾಗಿ ಹೇಳಿವೆ.

ನ್ಯೂಸ್‌ 24 ಹಿಂದಿಯಲ್ಲಿ ಪ್ರಕಟಗೊಂಡ ಸುದ್ದಿ-ಲಿಂಕ್ ಇಲ್ಲಿದೆ

ಝೀ ನ್ಯೂಸ್ ಮಧ್ಯಪ್ರದೇಶ-ಛತ್ತೀಸ್‌ಗಢ ಸುದ್ದಿ ಪ್ರಕಟಿಸಿರುವುದು-ಲಿಂಕ್ ಇಲ್ಲಿದೆ

ಎಬಿಪಿ ನ್ಯೂಸ್‌ ಹಿಂದಿಯಲ್ಲಿ ಸುದ್ದಿ ಪ್ರಕಟಗೊಂಡಿರುವುದು-ಲಿಂಕ್ ಇಲ್ಲಿದೆ

ಫ್ಯಾಕ್ಟ್‌ಚೆಕ್‌ : ವೈರಲ್‌ ವಿಡಿಯೋದಲ್ಲಿ ನೋಡಲು ನಿಜವಾದ ಆನೆ ಡ್ಯಾನ್ಸ್ ಮಾಡಿದಂತೆ ಕಾಣುತ್ತಿದ್ದರೂ, ವಿಡಿಯೋ ಬಗ್ಗೆ ಸಂಶಯ ವ್ಯಕ್ತವಾದ ಹಿನ್ನೆಲೆ ನಾವು ಇದರ ಸತ್ಯಾಸತ್ಯತೆ ತಿಳಿಯುವ ಪ್ರಯತ್ನ ಮಾಡಿದ್ದೇವೆ.

ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ನಾವು ಈ ವಿಡಿಯೋ ಕುರಿತು ಹುಡುಕಾಡಿದಾಗ, ಇದೇ ರೀತಿಯಾದ ಹಲವು ಚಿತ್ರಗಳು ಮತ್ತು ವರದಿಗಳು ಕಂಡು ಬಂದಿವೆ. ಅನಿಲ್‌ ಆರ್ಟ್‌ ಎಂಬ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ವಿಡಿಯೋ ಕಾಣಿಸಿಕೊಂಡಿದ್ದು, ಅದನ್ನು ಪರಿಶೀಲಿಸಿದಾಗ ವಿಡಿಯೋದ ಅಸಲಿಯತ್ತು ಬಯಲಾಗಿದೆ.

ಅನಿಲ್‌ ಆರ್ಟ್‌ ಎಂಬ ಕೇರಳದ ಕಲಾವಿದರ ತಂಡ ಆನೆಗಳ ವೇಷವನ್ನು ಧರಿಸಿ ವಿವಿದಡೆಗಳಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಿದೆ. ಈ ತಂಡದಲ್ಲಿ ಆನೆಯ ವೇಷಧಾರಿಗಳೇ ಪ್ರಮುಖ ಆಕರ್ಷಣೆ. ಇಬ್ಬರು ಆನೆಯ ವೇಷಧಾರಿಗಳು ಚಂಡೆ, ವಾದ್ಯಕ್ಕೆ ಕುಣಿಯುತ್ತಾರೆ. ಈ ರೀತಿ ಕುಣಿದ ವಿಡಿಯೋವೊಂದು ವೈರಲ್ ಆಗಿದೆ. ಅದನ್ನು ಮಾಧ್ಯಗಳು ನಿಜವಾದ ಆನೆ ಡ್ಯಾನ್ಸ್ ಮಾಡಿದೆ ಎಂಬುವುದಾಗಿ ಸುಳ್ಳು ವರದಿ ಮಾಡಿವೆ.


ಅನಿಲ್ ಆರ್ಟ್‌ ಇನ್‌ಸ್ಟಾಗ್ರಾಂ ಖಾತೆಯನ್ನು ಪರಿಶೀಲಿಸಿದರೆ ಈ ವಿಡಿಯೋವನ್ನು ನೋಡಬಹುದು. ಲಿಂಕ್ ಇಲ್ಲಿದೆ

ಕೇರಳದ ತ್ರಿಶ್ಶೂರ್ ಜಿಲ್ಲೆಯ ಸ್ಥಳೀಯ ದೇವಸ್ಥಾನವೊಂದರಲ್ಲಿ ಪೂರಂ ಆಚರಣೆಯ ಭಾಗವಾಗಿ ಅಲ್ಲಿನ ಸೋಶಿಯಲ್ ಕ್ಲಬ್ ಎಲೆವೆನ್ಝ್ ಕಡವಲ್ಲೂರ್ (Elevenz Kadavallur) ಪ್ರಾಯೋಜಕತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಲ್ಲಿ ಅನಿಲ್ ಆರ್ಟ್‌ನ ಕಲಾವಿದರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿದ್ದಾರೆ. ಹಾಗಾಗಿ ಇದು ನಿಜವಾದ ಆನೆ ಡ್ಯಾನ್ಸ್ ಮಾಡಿರುವುದು. ಸನಾತನ ಧರ್ಮದ ಪವಾಡ ಎಂಬ ಸಾಮಾಜಿಕ ಜಾಲತಾಣ ಸುದ್ದಿಗಳು ಸುಳ್ಳು.

ಕಳೆದ ನಾಲ್ಕು ದಿನಗಳ ಹಿಂದೆ, ಅಂದರೆ ಜನವರಿ 4, 2024ರಂದು ನಾವು ಮೇಲೆ ತಿಳಿಸಿದ Eminent Woke (Wokepandamic) ಎಂಬ ಎಕ್ಸ್‌ ಖಾತೆಯಲ್ಲಿ ಈ ವಿಡಿಯೋ ಪೋಸ್ಟ್‌ ಆಗಿತ್ತು. ಆಗ ಅದಕ್ಕೆ ಆಲ್ಟ್‌ ನ್ಯೂಸ್‌ ಸಹ ಸಂಸ್ಥಾಪಕ ಹಾಗೂ ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಝುಬೈರ್ ತಮಾಷೆಯ ಪ್ರತಿಕ್ರಿಯೆ ಕೊಟ್ಟಿದ್ದರು. “ವಿರೋಧಿಗಳು ಇದನ್ನು ಮನುಷ್ಯರು ಆನೆಯ ವೇಷ ಧರಿಸಿ ಡ್ಯಾನ್ಸ್ ಮಾಡಿರುವುದು ಎಂದು ಹೇಳಬಹುದು” ಎಂದಿದ್ದರು. ಈ ಮೂಲಕ ಆನೆ ಡ್ಯಾನ್ಸ್ ಮಾಡಿದೆ ಎಂಬುವುದು ಸುಳ್ಳು ಎಂದಿದ್ದರು.

ಝುಬೈರ್ ಅವರ ಈ ಪ್ರತಿಕ್ರಿಯೆಯನ್ನು Elevenz Kadavallur ಮತ್ತು anil arts ಜಂಟಿಯಾಗಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು, “ಪೂರಂ ಹಬ್ಬಕ್ಕೆ Elevenz Kadavallur ಆಯೋಜಿಸಿದ್ದ ಕಲರ್‌ಫುಲ್ ವ್ಯವಸ್ಥೆಯ ವಿಡಿಯೋ 1.7 ಮಿಲಿಯನ್ ವೀಕ್ಷಣೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗ್ತಿದೆ” ಎಂದು ಬರೆದುಕೊಂಡಿತ್ತು.

 

ಒಟ್ಟಿನಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮುಖ್ಯವಾಹಿನಿ ಮಾಧ್ಯಮಗಳಲ್ಲಿ ನಿಜವಾದ ಆನೆ ಡ್ಯಾನ್ಸ್ ಮಾಡಿರುವ ವಿಡಿಯೋ ಎಂಬ ಸುದ್ದಿಯು ಸುಳ್ಳು. ಡ್ಯಾನ್ಸ್ ಮಾಡಿರುವುದು ನಿಜವಾದ ಆನೆಯಲ್ಲ ಬದಲಾಗಿ, ಆನೆಯ ವೇಷ ಧರಿಸಿದ್ದ ಕಲಾವಿದರು ಎಂದು ಖಚಿತವಾಗಿದೆ.

ಇಲ್ಲಿ ಗಮನಾರ್ಹ ವಿಷಯವೆಂದರೆ, ರಾಷ್ಟ್ರೀಯ ಮಟ್ಟದ ಪ್ರಮುಖ ಮಾಧ್ಯಮಗಳು ಒಂದು ವೈರಲ್ ವಿಡಿಯೋವನ್ನು ಸರಿಯಾಗಿ ಪರಿಶೀಲನೆ ನಡೆಸದೆ ಜನರಿಗೆ ತಪ್ಪು ಮಾಹಿತಿ ನೀಡಿವೆ. ಇಂತಹ ಬೆಳವಣಿಗೆ ಅಪಾಯಕಾರಿ. ಆನೆಯ ವಿಡಿಯೋ ಸಮಾಜದಲ್ಲಿ ದೊಡ್ಡ ಮಟ್ಟದ ಪರಿಣಾಮ ಬೀರದಿದ್ದರೂ, ಇತರ ಗಂಭೀರ ವಿಷಯಗಳಲ್ಲಿ ಮಾಧ್ಯಮಗಳು ಹರಡುವ ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಕೆಡಿಸುವ ಸಾಧ್ಯತೆಯಿದೆ.

Fact Check: ಮುಸ್ಲಿಮರಿಂದ ಹಿಂದೂ ಕುಟುಂಬದ ಹತ್ಯೆಯೆಂದು ಸುಳ್ಳು ಸುದ್ದಿ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...