Homeಫ್ಯಾಕ್ಟ್‌ಚೆಕ್FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್...

FACT CHECK : ಮಿಸ್ಟರ್ ಬೀನ್ ಪಾತ್ರದಾರಿ ರೋವನ್ ಅಟ್ಕಿನ್‌ಸನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಎಡಿಟೆಡ್ ಫೋಟೊ ಹಂಚಿಕೆ

- Advertisement -
- Advertisement -

‘ಮಿಸ್ಟರ್ ಬೀನ್’ ಹಾಸ್ಯ ನಟ ರೋವನ್ ಅಟ್ಕಿನ್‌ಸನ್ ಅವರಿಗೆ ವಯಸ್ಸಾಗಿದ್ದು, ಹಾಸಿಗೆ ಹಿಡಿದ್ದಿದ್ದಾರೆ ಎಂದು ಫೋಟೋವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ಅಟ್ಕಿನ್‌ಸನ್ ಅವರ ಮಿಸ್ಟರ್ ಬೀನ್ ಪಾತ್ರದ ಫೋಟೋ ಮತ್ತು ಅವರು ಹಾಸಿಗೆ ಹಿಡಿದಿದ್ದಾರೆ ಎನ್ನಲಾದ ಫೋಟೋಗಳನ್ನು ಕೊಲಾಜ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದಿದ್ದಾರೆ ಎಂಬ ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 30 ಜನವರಿ 2020ರಂದು ಮಿರರ್ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿಯಲ್ಲಿ ಅದೇ ರೀತಿಯ ಕೊಂಚ ವ್ಯತ್ಯಾಸದ ಫೋಟೋ ಕಂಡು ಬಂದಿದೆ. ನಾವು ಸುದ್ದಿ ಓದಿದಾಗ ಆ ಫೋಟೋ ಅಟ್ಕಿನ್‌ಸನ್ ಅವರದ್ದಲ್ಲ ಎಂದು ಗೊತ್ತಾಗಿದೆ.

ಮಿರರ್‌ನ ಸುದ್ದಿಯಲ್ಲಿ “75 ವರ್ಷ ವಯಸ್ಸಿನ ಬ್ಯಾರಿ ಬಾಲ್ಡರ್ಸ್ಟೋನ್ ಎಂಬ ವ್ಯಕ್ತಿ ಪಾರ್ಕಿನ್ಸನ್ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಮತ್ತು ಅವರ ಪತ್ನಿ ತಾವು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಅವರ ಆರೈಕೆಯ ಬಿಲ್ ಪಾವತಿಸಲು ಖರ್ಚು ಮಾಡಬೇಕಾಯಿತು” ಎಂದು ವಿವರಿಸಲಾಗಿತ್ತು.

ಮಿರರ್ ಪ್ರಕಟಿಸಿದ ಫೋಟೋ ಮತ್ತು ಅಟ್ಕಿನ್‌ಸನ್ ಅವರದ್ದು ಎಂದು ವೈರಲ್ ಆಗುತ್ತಿರುವ ಫೋಟೋವನ್ನು ನಾವು ಹೋಲಿಕೆ ಮಾಡಿ ನೋಡಿದಾಗ ಮುಖವೊಂದು ಬಿಟ್ಟು ಉಳಿದ ಎಲ್ಲದರಲ್ಲೂ ಸಾಮ್ಯತೆ ಕಂಡು ಬಂದಿದೆ. ಹಾಗಾಗಿ, ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋವನ್ನು ತಿರುಚಿ ಅಟ್ಕಿನ್‌ಸನ್ ಅವರದ್ದು ಎಂದು ಹಂಚಿಕೊಳ್ಳಲಾಗ್ತಿದೆ ಎಂಬುವುದು ನಮಗೆ ಗೊತ್ತಾಗಿದೆ.

ವೈರಲ್ ಫೋಟೋ ಬ್ಯಾರಿ ಬಾಲ್ಡರ್ಸ್ಟೋನ್ ಅವರದ್ದು ಎಂದು ಮತ್ತೊಂದು ವರದಿಯ ಮೂಲಕ ನಮಗೆ ಖಚಿತವಾಗಿದೆ. ಫೆಬ್ರವರಿ 5,2020ರಂದು ‘ಮ್ಯಾಂಚೆಸ್ಟರ್ ಈವಿನಿಂಗ್ ನ್ಯೂಸ್‘ ಎಂಬ ಮತ್ತೊಂದು ವೆಬ್‌ಸೈಟ್ ಕೂಡ ಅದೇ ಫೋಟೋ ಬಳಸಿಕೊಂಡು ಸುದ್ದಿ ಪ್ರಕಟಿಸಿತ್ತು.

ಕೃತಕ ಬುದ್ದಿಮತ್ತೆ (ಆರ್ಟಿಪಿಶಿಯಲ್ ಇಂಟಲಿಜೆನ್ಸ್ ) ಆಧರಿತ ಫೇಸ್ ಸ್ಟಾಂಪಿಗ್ ಸಾಧನ ಬಳಸಿ ಬ್ಯಾರಿ ಬಾಲ್ಡರ್ಸ್ಟೋನ್ ಅವರ ಫೋಟೋಗೆ ಅಟ್ಕಿನ್‌ಸನ್ ಮುಖ ಅಂಟಿಸಿರುವುದನ್ನು ಖಚಿತಪಡಿಸಲು ನಾವು ಅದನ್ನು ಪ್ರಯತ್ನಿ ನೋಡಿದ್ದೇವೆ. ಈ ವೇಳೆ ನಮಗೆ ಸರಿಯಾದ ಫಲಿತಾಂಶ ಕಂಡು ಬಂದಿದೆ.

ಮಿಸ್ಟರ್ ಬೀನ್ ನಟ ಅಟ್ಕಿನ್‌ಸನ್ ಜುಲೈ 7,2024 ರಂದು ಫಾರ್ಮುಲಾ ಒನ್ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದರು. ಅವರ ಅನೇಕ ಫೋಟೋಗಳು ಮಾಧ್ಯಮಗಳಲ್ಲಿ ಕಾಣಿಸಿಕೊಂಡಿತ್ತು. ಇದರಿಂದ ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಯಬಹುದು.

ಒಟ್ಟಿನಲ್ಲಿ, ಮಿಸ್ಟರ್ ಬೀನ್ ನಟ ರೋವನ್ ಅಟ್ಕಿನ್‌ಸನ್ ಹಾಸಿಗೆ ಹಿಡಿದ ಸ್ಥಿತಿಯಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾದ ವೈರಲ್ ಫೋಟೋವನ್ನು ಡಿಜಿಟಲ್ ಆಗಿ ತಿರುಚಲಾಗಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಟ್ರಾಯ್ ಉಚಿತ ರೀಚಾರ್ಜ್ ಆಫರ್ ನೀಡಿದೆ ಎಂಬ ವೈರಲ್ ಸಂದೇಶ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...